600/600 ಅಂಕ, ನೋವಿನ ನಡುವೆಯೂ ಶಿಖರ: ತಾಯಿಯನ್ನು ಕಳೆದುಕೊಂಡರೂ ರಾಜ್ಯ ಪ್ರಥಮ ಸ್ಥಾನ ಪಡೆದ ದಿಶಾ

ಮಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ವಾಣಿಜ್ಯ ವಿಭಾಗದಲ್ಲಿ ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ಎಲ್ಲರ ಗಮನ ಸೆಳೆದಿದ್ದಾಳೆ. 600ಕ್ಕೆ 600 ಅಂಕಗಳನ್ನು ಗಳಿಸಿರುವ ಈ ಸಾಧನೆಯ ಹಿಂದೆ ಹೃದಯ ಕಲುಕುವ ನೋವಿನ ಕಥೆ ಇದೆ. ಪರೀಕ್ಷೆ ನಡೆಯುತ್ತಿದ್ದ ಸಮಯದಲ್ಲೇ ದಿಶಾ ತನ್ನ ತಾಯಿ ಸವಿತಾ ಅವರನ್ನು ಕಳೆದುಕೊಂಡಿದ್ದಾಳೆ. ದಿನೇಶ್–ಸವಿತಾ ದಂಪತಿಯ ಹಿರಿಯ ಮಗಳಾದ ದಿಶಾ, ಗಣಿತ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದ ವೇಳೆ ತಾಯಿ ಆಕಸ್ಮಿಕವಾಗಿ ಜಾರಿ ಬಿದ್ದಿದ್ದರು. ಮೊದಲಿಗೆ ಸಾಮಾನ್ಯವಾಗಿ ಕಂಡ ಈ ಘಟನೆ, ನಂತರ ಗಂಭೀರ ಸ್ಥಿತಿಗೆ ತಲುಪಿದ್ದು, ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಯಿತು. ಬಳಿಕ ಮೂಡಬಿದಿರೆಯ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು.

 

ವೈದ್ಯರು ತಾಯಿಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿಸಿದ್ದರೂ, ಅದೇ ದಿನ ದಿಶಾಳಿಗೆ ಎಕನಾಮಿಕ್ಸ್ ಪರೀಕ್ಷೆ ಇತ್ತು. ಮನಸ್ಸಿನ ನೋವನ್ನು ಮರೆತು ಧೈರ್ಯದಿಂದ ಪರೀಕ್ಷೆ ಬರೆದು ಆಸ್ಪತ್ರೆಗೆ ಬಂದ ದಿಶಾಳಿಗೆ, ಅದೇ ರಾತ್ರಿ ತಾಯಿ ನಿಧನರಾದ ಸುದ್ದಿ ದೊಡ್ಡ ಆಘಾತ ನೀಡಿತು. ತಾಯಿಯ ನಿಧನದ ದುಃಖದಲ್ಲಿದ್ದರೂ ದಿಶಾ ಉಳಿದ ಎಲ್ಲಾ ಪರೀಕ್ಷೆಗಳನ್ನು ಧೈರ್ಯದಿಂದ ಬರೆದಳು. “ನೀನು ಕಷ್ಟಪಟ್ಟಿದ್ದೀಯ, ಹೆದರಬೇಡ” ಎಂಬ ತಾಯಿಯ ಮಾತುಗಳು ಆಕೆಗೆ ಪ್ರೇರಣೆಯಾದವು. ತಾಯಿಯ ಕನಸನ್ನು ನನಸಾಗಿಸಬೇಕು ಎಂಬ ಸಂಕಲ್ಪದಿಂದಲೇ ಈ ಸಾಧನೆ ಸಾಧ್ಯವಾಯಿತು ಎಂದು ದಿಶಾ ಹೇಳಿದ್ದಾಳೆ. ಈ ಸಂದರ್ಭದಲ್ಲಿ ಆಳ್ವಾಸ್ ಕಾಲೇಜಿನ ಆಡಳಿತ ಮಂಡಳಿ ಮತ್ತು ಉಪನ್ಯಾಸಕರು ದಿಶಾಳಿಗೆ ಸಂಪೂರ್ಣ ಬೆಂಬಲ ನೀಡಿದರು. ಪ್ರಸ್ತುತ ದಿಶಾ ಮತ್ತು ಆಕೆಯ ತಂಗಿ ಶಿಕ್ಷಕಿ ವೀಣಾ ಅವರ ಮನೆಯಲ್ಲಿ ವಾಸಿಸುತ್ತಿದ್ದಾರೆ. 

 

ಮುಂದಿನ ವಿದ್ಯಾಭ್ಯಾಸವನ್ನು ಹಾಸ್ಟೆಲ್ ಅಥವಾ ಪಿಜಿಯಲ್ಲಿ ಮುಂದುವರಿಸುವ ಬಗ್ಗೆ ಅವರು ಚಿಂತನೆ ನಡೆಸುತ್ತಿದ್ದಾರೆ. ದಿಶಾ ಸಿಎ ಆಗುವ ಗುರಿ ಹೊಂದಿದ್ದು, ಸಿಎ ಫೌಂಡೇಷನ್ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದಾಳೆ. ಆಳ್ವಾಸ್ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಡಾ. ಮೋಹನ್ ಆಳ್ವ ಅವರು ದಿಶಾಳ ಮುಂದಿನ ವಿದ್ಯಾಭ್ಯಾಸವನ್ನು ಉಚಿತವಾಗಿ ನೀಡುವುದಾಗಿ ಘೋಷಿಸಿದ್ದು, ಜೊತೆಗೆ ಮೂರು ಲಕ್ಷ ರೂಪಾಯಿ ನಗದು ಬಹುಮಾನ ನೀಡುವುದಾಗಿ ತಿಳಿಸಿದ್ದಾರೆ. ಒಟ್ಟಿನಲ್ಲಿ, ಸಂಕಷ್ಟಗಳ ನಡುವೆಯೂ ದಿಶಾ ಸಾಧಿಸಿರುವ ಈ ಅಪೂರ್ವ ಯಶಸ್ಸು ಅನೇಕ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

2 months ago

   
Image 1
Image 1
ಬೆಂಗಳೂರು ನಗರ

ಈ ವರ್ಷ ಪಿಯುಸಿ ಫಲಿತಾಂಶದಲ್ಲಿ ಭಾರೀ ಏರಿಕೆ – ಶಿಕ್ಷಣ ಸಚಿವರ ಸಂತಸ

ಬೆಂಗಳೂರು: 2026ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಮಧ್ಯ... ಓದನ್ನು ಮುಂದುವರಿಸಿ


Edited by: ಬಾನು

2 months ago

   
Image 1
ಬೆಂಗಳೂರು ನಗರ

2nd PUC ಫಲಿತಾಂಶ ಪ್ರಕಟ – ಫೇಲ್ ಆದವರಿಗೆ ಮತ್ತೊಂದು ಚಾನ್ಸ್, ಪರೀಕ್ಷೆ-2 ದಿನಾಂಕ ಘೋಷಣೆ!

ಬೆಂಗಳೂರು: 2025-26ನೇ ಸಾಲಿನ ಕರ್ನಾಟಕದ ದ್ವಿತೀಯ ಪಿಯುಸಿ ಮೊದಲ... ಓದನ್ನು ಮುಂದುವರಿಸಿ


Edited by: ಬಾನು

2 months ago

   
Image 1
ದಕ್ಷಿಣಕನ್ನಡ

ಮಂಗಳೂರು

2nd PUC ಟಾಪರ್ ದಿಶಾ : 600ಕ್ಕೆ 600 ಅಂಕ: ದಕ್ಷಿಣ ಕನ್ನಡದ ದಿಶಾ ರಾಜ್ಯ ಟಾಪರ್

ಮಂಗಳೂರು: ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾದ ಬೆನ್ನಲ... ಓದನ್ನು ಮುಂದುವರಿಸಿ


Edited by: ಬಾನು

2 months ago

   
Image 1
ಬೆಂಗಳೂರು ನಗರ

ಕರ್ನಾಟಕ 2nd PUC ಫಲಿತಾಂಶ ಪ್ರಕಟ: 7 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರ

ಬೆಂಗಳೂರು: ಕರ್ನಾಟಕ ದ್ವಿತೀಯ ಪಿಯುಸಿ (2nd PUC) ಪರೀಕ್ಷೆಯ ಫಲಿ... ಓದನ್ನು ಮುಂದುವರಿಸಿ


Edited by: ಬಾನು

2 months ago

   
Image 1
ಬೆಂಗಳೂರು ನಗರ

ಪಿಯುಸಿ ಫಲಿತಾಂಶ ವಿಳಂಬ – ವಿದ್ಯಾರ್ಥಿಗಳಿಗೆ ನಿರಾಸೆ, ಏಪ್ರಿಲ್ 9ಕ್ಕೆ ಸಾಧ್ಯತೆ

ಬೆಂಗಳೂರು: 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ... ಓದನ್ನು ಮುಂದುವರಿಸಿ


Edited by: ಬಾನು

2 months ago

   
Image 1
ಬೆಂಗಳೂರು ನಗರ

ಇಂದು ದ್ವಿತೀಯ ಪಿಯುಸಿ ಫಲಿತಾಂಶ? ಲಕ್ಷಾಂತರ ವಿದ್ಯಾರ್ಥಿಗಳಲ್ಲಿ ಕುತೂಹಲ

ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್... ಓದನ್ನು ಮುಂದುವರಿಸಿ


Edited by: ಬಾನು

2 months ago

   
Image 1
ಬೆಂಗಳೂರು ನಗರ

2ನೇ ಪಿಯುಸಿ ಫಲಿತಾಂಶ ಮುಂದೂಡಿಕೆ – ನಾಳೆ ಪ್ರಕಟವಾಗುವುದಿಲ್ಲ!

ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾಯುತ್ತಿದ್ದ ದ್ವ... ಓದನ್ನು ಮುಂದುವರಿಸಿ


Edited by: ಬಾನು

2 months ago

   
Image 1
ಬೆಂಗಳೂರು ನಗರ

ಹೊಸ ಖಾಸಗಿ ಶಾಲೆಗಳಿಗೆ ಕಟ್ಟುನಿಟ್ಟಿನ ನಿಯಮ: ಸ್ವಂತ ಜಾಗ ಅಥವಾ 15 ವರ್ಷ ಲೀಸ್ ಕಡ್ಡಾಯ

ಬೆಂಗಳೂರು: ರಾಜ್ಯದಲ್ಲಿ ಹೊಸ ಖಾಸಗಿ ಶಾಲೆಗಳ ಆರಂಭ, ಮಾನ್ಯತೆ ಮತ್... ಓದನ್ನು ಮುಂದುವರಿಸಿ


Edited by: ಬಾನು

2 months ago

   
Image 1
ಬೆಂಗಳೂರು ನಗರ

ಎಸ್‌ಎಸ್‌ಎಲ್‌ಸಿ ಅಂಕಪದ್ದತಿಯಲ್ಲಿ ದೊಡ್ಡ ಬದಲಾವಣೆ: ಈ ವರ್ಷದಿಂದ SSLC ಪರೀಕ್ಷೆ ಅಂಕ 625 ಅಲ್ಲ 525 ಮಾತ್ರ! ಹಿಂದಿ ಅಂಕಕ್ಕೆ ಕೋಕ್

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಭಾಷೆಯನ್ನು ಕ... ಓದನ್ನು ಮುಂದುವರಿಸಿ


Edited by: ಬಾನು

2 months ago

   
Image 1
ಬೆಂಗಳೂರು ನಗರ

ಪೋಷಕರಿಗೆ ಗುಡ್ ನ್ಯೂಸ್: ಒಂದನೇ ತರಗತಿಯ ದಾಖಲೆಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ

ಬೆಂಗಳೂರು: ರಾಜ್ಯ ಸರ್ಕಾರವು 2026-27ನೇ ಶೈಕ್ಷಣಿಕ ವರ್ಷದಲ್ಲಿ ಒ... ಓದನ್ನು ಮುಂದುವರಿಸಿ


Edited by: ಬಾನು

2 months ago

   
Image 1