ರಾಜ್ಯಸಭೆ ಅಡ್ಡ ಮತದಾನದ ಭೀತಿ: ಒಡಿಶಾ ಶಾಸಕರು ಬಿಡದಿ ರೆಸಾರ್ಟ್‌ನಿಂದ ಮೈಸೂರಿಗೆ
ರಾಮನಗರ: ಒಡಿಶಾ ರಾಜ್ಯದ ಕಾಂಗ್ರೆಸ್ ಶಾಸಕರು ರಾಮನಗರದ ಬಿಡದಿಯಲ್ಲಿರುವ ರೆಸಾರ್ಟ್‌ನಲ್ಲಿ ಮೈಸೂರಿನ ಪ್ರವಾಸ ಕೈಗೊಂಡಿದ್ದಾರೆ. ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಡ್ಡ ಮತದಾನದ ಭೀತಿ ಇದ್ದು, ಅವರನ್ನು ಕರ್ನಾಟಕಕ್ಕೆ ಕರೆತರಲಾಗಿದೆ ಎಂದು ತಿಳಿದುಬಂದಿದೆ.
ಟ್ರಬಲ್ ಶೂಟರ್ ಎಂದೇ ಪರಿಚಯ ಪಡೆದ ಡಿ.ಕೆ. ಶಿವಕುಮಾರ್ ಸೂಚನೆಯಂತೆ, ಸುಮಾರು 8 ಶಾಸಕರು ಸೇರಿದಂತೆ ಪಿಸಿಸಿ ಅಧ್ಯಕ್ಷ ಮತ್ತು ಪ್ರಧಾನ ಕಾರ್ಯದರ್ಶಿ ಸೇರಿ 15ಕ್ಕೂ ಹೆಚ್ಚು ಮಂದಿ ಮೈಸೂರಿಗೆ ತೆರಳಿದ್ದಾರೆ. ಸ್ಥಳೀಯ ಕಾಂಗ್ರೆಸ್ ಮುಖಂಡರ ನೇತೃತ್ವದಲ್ಲಿ ಅವರು ಸಂಜೆವರೆಗೂ ಮೈಸೂರಿನ ಪ್ರವಾಸಿ ತಾಣಗಳನ್ನು ವೀಕ್ಷಿಸಲಿದ್ದಾರೆ.
ಮಾರ್ಚ್ 16ರಂದು ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. 10 ರಾಜ್ಯಗಳ ಶಾಸಕರು ಮತದಾನ ಮಾಡುವ ಮೂಲಕ ಸದಸ್ಯರನ್ನು ಆಯ್ಕೆ ಮಾಡಲಿದ್ದಾರೆ. ಈ ಸಂದರ್ಭದಲ್ಲಿ, ಒಡಿಶಾದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಶಾಸಕರನ್ನು ಆಯ್ಕೆ ಮಾಡಬೇಕಿದೆ. ಅಡ್ಡ ಮತದಾನ ತಡೆಯಲು ಒಡಿಶಾದ ಶಾಸಕರನ್ನು Wonderla Resort ಗೆ ಕರೆತರಲಾಗಿದೆ.
ನಾಲ್ಕನೇ ಸ್ಥಾನಕ್ಕಾಗಿ ಯಾವುದೇ ಪಕ್ಷದ ಬಳಿ ಸ್ಪಷ್ಟ ಸಂಖ್ಯಾಬಲ ಇಲ್ಲದಿರುವ ಹಿನ್ನೆಲೆಯಲ್ಲಿ ಒಡಿಶಾದ ರಾಜಕೀಯದಲ್ಲಿ ಅಡ್ಡ ಮತದಾನದ ಭೀತಿ ಹೆಚ್ಚಾಗಿದೆ. ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ‘ಆಪರೇಷನ್ ಕಮಲ’ ಮೂಲಕ ಅಡ್ಡ ಮತದಾನಕ್ಕೆ ಯತ್ನಿಸಬಹುದು ಎಂಬ ಚರ್ಚೆಗಳು ನಡೆಯುತ್ತಿವೆ.
ರಾಜ್ಯಸಭೆಯ ನಾಲ್ಕನೇ ಸ್ಥಾನಕ್ಕಾಗಿ ಬಿಜು ಜನತಾ ದಳ ಮತ್ತು ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದ್ದು, ಖ್ಯಾತ ಮೂತ್ರಪಿಂಡ ತಜ್ಞ ದತ್ತೇಶ್ವರ ಹೋಟಾ ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿವೆ. ಮತ್ತೊಂದೆಡೆ, ಪ್ರಸಿದ್ಧ ಹೋಟೆಲ್ ಉದ್ಯಮಿ ಮತ್ತು ಮಾಜಿ ಕೇಂದ್ರ ಸಚಿವ ದಿಲೀಪ್ ರೇ ಬಿಜೆಪಿ ಬೆಂಬಲದೊಂದಿಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ.
ದಿಲೀಪ್ ರೇ ಕಣದಲ್ಲಿರುವುದು ಕಾಂಗ್ರೆಸ್ ಪಾಳಯದಲ್ಲಿ ಆತಂಕ ಸೃಷ್ಟಿಸಿದೆ. 2002ರ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳ ಕೆಲವು ಶಾಸಕರು ಅಡ್ಡ ಮತದಾನ ಮಾಡಿದ್ದನ್ನು ನೆನಪಿಸಿಕೊಳ್ಳಲಾಗಿದೆ. ದಿಲೀಪ್ ರೇ ಗೆಲುವಿಗೆ ಕನಿಷ್ಠ 8 ಮತಗಳ ಅಗತ್ಯವಿರುವುದಾಗಿ ರಾಜಕೀಯ ವಲಯದಲ್ಲಿ ಚರ್ಚೆ ನಡೆಯುತ್ತಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಮಂಗಳೂರು
ಕಮರ್ಷಿಯಲ್ ಸಿಲಿಂಡರ್ ತಂದುಕೊಟ್ಟವರಿಗೆ ₹5,500 ಮೌಲ್ಯದ ಉಚಿತ ಆಹಾರ
ಮಂಗಳೂರು: ಗಲ್ಫ್ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ... ಓದನ್ನು ಮುಂದುವರಿಸಿ
ಜಿಲ್ಲಾಧಿಕಾರಿ ಡಿಜಿಟಲ್ ಸಹಿ ದುರುಪಯೋಗ ಪ್ರಕರಣದಲ್ಲಿ 6 ಆರೋಪಿಗಳು
ಚಿತ್ರದುರ್ಗ, ಮಾ.14: ಜಿಲ್ಲಾಧಿಕಾರಿ ಮತ್ತು ಎಡಿಸಿ ಅವರ ಡಿಜಿಟಲ್... ಓದನ್ನು ಮುಂದುವರಿಸಿ
ಸಿಲಿಂಡರ್ ಕೊರತೆಗೆ ಪರಿಹಾರ: ಬೆಂಗಳೂರಿನಲ್ಲಿ ಬಯೋಗ್ಯಾಸ್ ಉತ್ಪಾದನೆಗೆ GBA ಮುಂದಾಗಿದೆ
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅಡುಗೆ ಅನಿಲ ಸಿಲಿಂಡ... ಓದನ್ನು ಮುಂದುವರಿಸಿ
ಮಹಿಳಾ ಉದ್ಯಮಿಗಳ ಹೋಟೆಲ್‌ಗಳಿಗೆ ವಾಣಿಜ್ಯ ಎಲ್‌ಪಿಜಿ ಕೊರತೆ: ಪ್ರಧಾನಿ ಮೋದಿಗೆ ಪತ್ರ
ಬೆಂಗಳೂರು: ರಾಜ್ಯದಲ್ಲಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಕೊರತೆ ಹೆಚ್... ಓದನ್ನು ಮುಂದುವರಿಸಿ
ದೇಶದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಕಾಂಗ್ರೆಸ್ ಜನರನ್ನು ತಪ್ಪು ದಾರಿಗೆ ಎಳೆಯುತ್ತಿದೆ – ಪ್ರಹ್ಲಾದ್ ಜೋಶಿ
ಬೆಂಗಳೂರು: ಅಡುಗೆ ಹಾಗೂ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳಿಗೆ ದೇ... ಓದನ್ನು ಮುಂದುವರಿಸಿ
10–12 ಹಡಗುಗಳ ಮೂಲಕ ಭಾರತಕ್ಕೆ ಗ್ಯಾಸ್ ಸರಬರಾಜು: ಸಚಿವರ ಮಾಹಿತಿ
ದೇವನಹಳ್ಳಿ: ವಾಣಿಜ್ಯ ಗ್ಯಾಸ್ ಸಿಲಿಂಡರ್ ಕೊರತೆಯ ಸಮಸ್ಯೆ ಇನ್ನೂ... ಓದನ್ನು ಮುಂದುವರಿಸಿ
ಪಾಕಿಸ್ತಾನ–ಬಾಂಗ್ಲಾ ಪ್ರಜೆಗಳು ಮತದಾರರ ಪಟ್ಟಿಗೆ ಸೇರ್ಪಡೆ ಅಪಾಯಕಾರಿ: ಆರ್. ಅಶೋಕ್
ಬೆಂಗಳೂರು: ಪಾಕಿಸ್ತಾನ ಹಾಗೂ ಬಾಂಗ್ಲಾದೇಶ ಮೂಲದವರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾದ... ಓದನ್ನು ಮುಂದುವರಿಸಿ
ಯುದ್ಧದ ಪರಿಣಾಮ: ಅಡುಗೆ ಎಣ್ಣೆ ದರ ಏರಿಕೆ, ಮಾರುಕಟ್ಟೆಯಲ್ಲಿ ಕೊರತೆ
ಬೆಂಗಳೂರು:ಇರಾನ್-ಇಸ್ರೇಲ್ ಸಂಘರ್ಷ ಹಿನ್ನೆಲೆ ಗ್ಯಾಸ್ ಸಿಲ... ಓದನ್ನು ಮುಂದುವರಿಸಿ
ಬೆಂಗಳೂರು ನಗರ
ನೆಲಮಂಗಲ ಹೆದ್ದಾರಿಯಲ್ಲಿ ಎಲ್‌ಪಿಜಿ ಟ್ಯಾಂಕರ್ ಪಲ್ಟಿ ತಪ್ಪಿತು ದೊಡ್ಡ ಅನಾಹುತ
ಬೆಂಗಳೂರು: ಎಲ್‌ಪಿಜಿ ಗ್ಯಾಸ್ ತುಂಬಿದ್ದ ಟ್ಯಾಂಕರ್ ಪಲ್ಟಿಯಾದ ಘಟ... ಓದನ್ನು ಮುಂದುವರಿಸಿ
ಒಂದು ರೂಪಾಯಿಗೆ ಒಂದು ಲೀಟರ್ ಹಾಲು: ಫ್ಲಿಪ್‌ಕಾರ್ಟ್ ವಿರುದ್ಧ ದೂರು, ಪ್ರಧಾನಿಗೆ ಪತ್ರ – ಡಿ.ಕೆ. ಸುರೇಶ್
ಬೆಂಗಳೂರು: “ಒಂದು ರೂಪಾಯಿಗೆ ಒಂದು ಲೀಟರ್ ಹಾಲು ಮಾರಾಟ ಮಾಡುವ ಯೋ... ಓದನ್ನು ಮುಂದುವರಿಸಿ