"ಅಧಿಕಾರ ಹಂಚಿಕೆ ಒಪ್ಪಂದವಾಗಿದೆ – ಡಿಕೆಶಿ ಹೇಳಿದರೆ ಪ್ರಾಣ ಕೊಡೋದಕ್ಕೂ ಸಿದ್ದ: ಶಾಸಕ ಶಿವಗಂಗಾ ಬಸವರಾಜ್

ದಾವಣಗೆರೆ: ರಾಜ್ಯ ಕಾಂಗ್ರೆಸ್ ರಾಜಕೀಯದಲ್ಲಿ ಅಧಿಕಾರ ಹಂಚಿಕೆ ವಿಚಾರ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಚನ್ನಗಿರಿ ಕಾಂಗ್ರೆಸ್ ಶಾಸಕ ಬಸವರಾಜ್ ವಿ. ಶಿವಗಂಗಾ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ಸಂಬಂಧಿಸಿದಂತೆ ಸ್ಫೋಟಕ ಹೇಳಿಕೆ ನೀಡಿದ್ದು, ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ದಾವಣಗೆರೆಯ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, “ಎರಡೂವರೆ ವರ್ಷ ಅಧಿಕಾರ ಹಂಚಿಕೆ ಕುರಿತು ಈಗಾಗಲೇ ಒಪ್ಪಂದ ಆಗಿದೆ. ಇದು ನನಗೆ ಇರುವ ಖಚಿತ ಮಾಹಿತಿ” ಎಂದು ತಿಳಿಸಿದ್ದಾರೆ.

 

ಶಿವಗಂಗಾ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ 139 ಶಾಸಕರ ಬೆಂಬಲವಿದೆ ಎಂದು ಸ್ಪಷ್ಟಪಡಿಸಿದ್ದು, “40–50 ಯುವ ಶಾಸಕರು ಡಿಕೆಶಿ ಏನೇ ಹೇಳಿದ್ರೂ ಮಾಡಲು ಸಿದ್ಧರಾಗಿದ್ದಾರೆ. ಅವರು ಪ್ರಾಣ ಕೇಳಿದ್ರೂ ಕೊಡೋಕೆ ಸಿದ್ಧ” ಎಂದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಐದು ವರ್ಷ ಪೂರ್ತಿ ಮುಖ್ಯಮಂತ್ರಿಯಾಗಿರುತ್ತಾರೆ ಎಂಬ ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಶಿವಗಂಗಾ, “ಯತೀಂದ್ರ ಪದೇ ಪದೇ ಈ ರೀತಿಯ ಹೇಳಿಕೆ ನೀಡುತ್ತಿದ್ದು, ಪಕ್ಷಕ್ಕೆ ಡ್ಯಾಮೇಜ್ ಆಗುತ್ತಿದೆ” ಎಂದು ಹೇಳಿದ್ದಾರೆ.

 

ಅವರು, ಪಕ್ಷದ ಹೈಕಮಾಂಡ್ — ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರಿಯಾಂಕಾ ಗಾಂಧಿ — ಈ ವಿಚಾರವನ್ನು ಗಮನಿಸಬೇಕು. ಅಧಿಕಾರ ಹಂಚಿಕೆ ಆಗಿದೆಯೋ ಇಲ್ಲವೋ ಎಂಬುದನ್ನು ಸ್ಪಷ್ಟಪಡಿಸಬೇಕು, ಇಲ್ಲವೇ ಸಿದ್ದರಾಮಯ್ಯ “ನಾನು ಯಾವುದೇ ಒಪ್ಪಂದ ಮಾಡಿಲ್ಲ” ಎಂದು ಹೇಳಲಿ, ಆಗ ನಾವು ಪ್ರಶ್ನೆ ಎತ್ತುವುದಿಲ್ಲ ಎಂದಿದ್ದಾರೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

12 hours ago

   
Image 1
Image 1
ಚಿಕ್ಕಬಳ್ಳಾಪುರ

ಗೌರಿಬಿದನೂರು: ಖಾಸಗಿ ಶಾಲೆಯಲ್ಲಿ ವಿದ್ಯಾರ್ಥಿ ಮೇಲೆ ಶಿಕ್ಷಕರ ಹಲ್ಲೆ ಎಂಟನೇ ತರಗತಿಯ ವಿದ್ಯಾರ್ಥಿ ಪ್ರಜ್ಞೆ ಕಳೆದುಕೊಂಡು ಖಾಸಗಿ ಆಸ್ಪತ್ರೆಗೆ ದಾಖಲು

ಚಿಕ್ಕಬಳ್ಳಾಪುರ : ಗೌರಿಬಿದನೂರು ನಗರದ ಖಾಸಗಿ ವಿದ್ಯಾನಿಧಿ ಶಾಲೆಯ... ಓದನ್ನು ಮುಂದುವರಿಸಿ


Edited by: ಬಾನು

12 hours ago

   
Image 1
ಚಿಕ್ಕಮಗಳೂರು

ಜಾತ್ರೆಗೆ ಕಡಿಯಲು ತಂದ ಆಡು ರೈತನ ಪಾಲಿಗೆ ವರ: ಒಂದೇ ಬಾರಿ 6 ಮರಿಗೆ ಜನ್ಮ

ಚಿಕ್ಕಮಗಳೂರು: ಚಂದ್ರಕಟ್ಟೆ ಪ್ರದೇಶದಲ್ಲಿ ಅಪರೂಪದ ಘಟನೆ ನಡೆದಿದೆ... ಓದನ್ನು ಮುಂದುವರಿಸಿ


Edited by: ಬಾನು

13 hours ago

   
Image 1
ಬೆಂಗಳೂರು ನಗರ

ಪ್ರೇಯಸಿಯ ಖಾಸಗಿ ಕ್ಷಣಗಳ ಸೆರೆ: “ಇದು ಪ್ರೇಮವಲ್ಲ, ಅಪರಾಧ” ಎಂದ ಹೈಕೋರ್ಟ್

ಬೆಂಗಳೂರು: ಪ್ರೇಮ ಸಂಬಂಧದ ನೆಪದಲ್ಲಿ ಪ್ರೇಯಸಿಯ ಖಾಸಗಿ ಕ್ಷಣಗಳನ್... ಓದನ್ನು ಮುಂದುವರಿಸಿ


Edited by: ಬಾನು

13 hours ago

   
Image 1
ಬೆಂಗಳೂರು ನಗರ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಭರ್ಜರಿ ದಾಳಿ ₹2.97 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂ... ಓದನ್ನು ಮುಂದುವರಿಸಿ


Edited by: ಬಾನು

13 hours ago

   
Image 1
ಬೆಂಗಳೂರು ನಗರ

ಜಿಬಿಎ–ಬಿಬಿಎಂಪಿ ಚುನಾವಣೆ ಪೂರ್ವ ತಯಾರಿ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ವಿಶೇಷ ಸಭೆ

ಬೆಂಗಳೂರು: ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಗ್ರೇಟರ್... ಓದನ್ನು ಮುಂದುವರಿಸಿ


Edited by: ಬಾನು

13 hours ago

   
Image 1
ಬೆಂಗಳೂರು ನಗರ

ಮೆಟ್ರೋ ದರ ಏರಿಕೆ ವಿಚಾರ ರಾಜ್ಯ ಸರ್ಕಾರದ ವಿರುದ್ಧ ಎಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

ಬೆಂಗಳೂರು: ಮೆಟ್ರೋ ದರ ಏರಿಕೆ ವಿಷಯದಲ್ಲಿ ರಾಜ್ಯ ಸರ್ಕಾರದ ವಿರುದ... ಓದನ್ನು ಮುಂದುವರಿಸಿ


Edited by: ಬಾನು

13 hours ago

   
Image 1
ಬೆಂಗಳೂರು ನಗರ

ಬೆಂಗಳೂರು ಐಟಿ ಉದ್ಯೋಗಿಯ ಅಳಲು: ₹50,000 ಬಾಡಿಗೆ, ಆದರೆ ಐಷಾರಾಮಿ ಸೌಲಭ್ಯ ಬಳಸಲು ಸಮಯವಿಲ್ಲ

ಬೆಂಗಳೂರು: ಬೆಂಗಳೂರಿನಲ್ಲಿ ಮನೆಗಳ ಬಾಡಿಗೆ ದಿನದಿಂದ ದಿನಕ್ಕೆ ಏರ... ಓದನ್ನು ಮುಂದುವರಿಸಿ


Edited by: ಬಾನು

18 hours ago

   
Image 1
ಬೆಂಗಳೂರು ನಗರ

ಬೆಳೆವಿಮೆ ಯೋಜನೆ ಜಾರಿಯಲ್ಲಿ ಕರ್ನಾಟಕ ನಂ.1: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರವು ಮನರೇಗ... ಓದನ್ನು ಮುಂದುವರಿಸಿ


Edited by: ಬಾನು

20 hours ago

   
Image 1
ಬೆಂಗಳೂರು ನಗರ

“ಮಹಾತ್ಮರನ್ನೇ ಬಂಡವಾಳ ಮಾಡಿಕೊಂಡಿದ್ದಾರೆ ಬಿಜೆಪಿ ಮತ್ತು ಕಾಂಗ್ರೆಸ್” – ಮುಖ್ಯಮಂತ್ರಿ ಚಂದ್ರು ಆಕ್ರೋಶ

ಪ್ರತಿ ದಿನ ರಾಜ್ಯದ ಪ್ರಮುಖ ದಿನಪತ್ರಿಕೆಗಳ ಮುಖಪುಟಗಳಲ್ಲಿ ವಿಧಿ ಜಿ ರಾಮ್ ಜಿ ಯೋಜನೆಯ... ಓದನ್ನು ಮುಂದುವರಿಸಿ


Edited by: ಬಾನು

20 hours ago

   
Image 1
ಚಿಕ್ಕಬಳ್ಳಾಪುರ

ಗುಡಿಬಂಡಾ

ಚರಂಡಿ ಸ್ವಚ್ಛತೆ ಇಲ್ಲದೆ ನರಳುತ್ತಿರುವ ಗ್ರಾಮಸ್ಥರು – ಅಂಗನವಾಡಿ, ವಿದ್ಯುತ್ ಸಮಸ್ಯೆಗಳಿಗೂ ಉತ್ತರ ಇಲ್ಲ.

ಗುಡಿಬಂಡೆ: ಬೀಚಗಾನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1