‘ಐಐಟಿ ವಾಲೆ ಬಾಬಾ’ ಮದುವೆ: ವೈರಲ್ ಸನ್ಯಾಸಿಯಿಂದ ಗೃಹಸ್ಥಾಶ್ರಮಕ್ಕೆ ಕಾಲಿಟ್ಟ ಅಭಯ್ ಸಿಂಗ್

ಚಂಡೀಗಢ: ಕಳೆದ ವರ್ಷ ಪ್ರಯಾಗ್‌ರಾಜ್ ಮಹಾಕುಂಭದಲ್ಲಿ ಭಾರೀ ವೈರಲ್ ಆಗಿದ್ದ ‘ಐಐಟಿ ವಾಲೆ ಬಾಬಾ’ ಇದೀಗ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಅಭಯ್ ಸಿಂಗ್ ಎಂಬುದು ಅವರ ನಿಜವಾದ ಹೆಸರು. ಹರಿಯಾಣದ ಜಜ್ಜರ್ ಜಿಲ್ಲೆಯವರಾದ ಅವರು, ಬೆಂಗಳೂರಿನ ಎಂಜಿನಿಯರ್ ಪ್ರತೀಕಾ ಅವರೊಂದಿಗೆ ವಿವಾಹವಾಗಿದ್ದಾರೆ. ಫೆಬ್ರವರಿ 15ರಂದು ಮಹಾಶಿವರಾತ್ರಿ ಹಬ್ಬದಂದು ಹಿಮಾಚಲ ಪ್ರದೇಶದ ಅಂಜೋರ್ ಮಹಾದೇವ್ ದೇವಸ್ಥಾನದಲ್ಲಿ ಈ ಜೋಡಿ ಸರಳವಾಗಿ ಮದುವೆಯಾಗಿದ್ದಾರೆ.

 

ಇತ್ತೀಚೆಗೆ ಅಭಯ್ ಸಿಂಗ್ ತಮ್ಮ ತಂದೆಯನ್ನು ಭೇಟಿ ಮಾಡಲು ಜಜ್ಜರ್‌ಗೆ ತೆರಳಿದ್ದು, ಈ ವೇಳೆ ಪತ್ನಿ ಪ್ರತೀಕಾ ಕೂಡ ಜೊತೆಯಲ್ಲಿದ್ದರು. ಪ್ರಯಾಗ್‌ರಾಜ್ ಮಹಾಕುಂಭ ಮೇಳದಲ್ಲಿ ತಪಸ್ವಿಯಂತೆ ವೇಷ ಧರಿಸಿ “ನಾನು ಐಐಟಿ ಪದವೀಧರ” ಎಂದು ಹೇಳಿಕೊಂಡಿದ್ದರಿಂದ ಅವರು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣರಾಗಿದ್ದರು. ‘ಐಐಟಿ ವಾಲೆ ಬಾಬಾ’ ಎಂಬ ಹೆಸರಿನಿಂದ ಅಪಾರ ಜನಪ್ರಿಯತೆ ಪಡೆದಿದ್ದರು. ಮದುವೆಯ ನಂತರ ದಂಪತಿ ತಮ್ಮ ಜೀವನವನ್ನು ಸನಾತನ ಧರ್ಮದ ಪ್ರಚಾರಕ್ಕೆ ಮೀಸಲಿಡುವುದಾಗಿ ತಿಳಿಸಿದ್ದಾರೆ. ಜೊತೆಗೆ ಸನಾತನ ವಿಶ್ವವಿದ್ಯಾಲಯ ಸ್ಥಾಪನೆಗೂ ಯೋಜನೆ ರೂಪಿಸಿದ್ದಾರೆ.

 

ಇತ್ತಿಚೆಗೆ ಕೆಲವು ವಿವಾದಗಳಲ್ಲೂ ಸಿಲುಕಿದ್ದ ಅಭಯ್ ಸಿಂಗ್, ಜೈಪುರದಲ್ಲಿ ಗಾಂಜಾ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಈಗ ಮದುವೆಯ ಮೂಲಕ ಮತ್ತೊಮ್ಮೆ ಸುದ್ದಿಯಲ್ಲಿರುವ ‘ಐಐಟಿ ವಾಲೆ ಬಾಬಾ’, ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ಚರ್ಚೆಗೆ ಗ್ರಾಸರಾಗಿದ್ದಾರೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

3 weeks ago

   
Image 1
Image 1

ತಮಿಳುನಾಡು ಚುನಾವಣೆ ಕಾವು: ನಟ ವಿಜಯ್ ಭರ್ಜರಿ ರೋಡ್ ಶೋ

ಚೆನೆಲ್ಲೈ: ತಮಿಳುನಾಡು ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ... ಓದನ್ನು ಮುಂದುವರಿಸಿ


Edited by: ಬಾನು

3 weeks ago

   
Image 1

16 ವರ್ಷದ ಬಾಲಕಿಯೊಬ್ಬಳ ಮೇಲೆ 7 ಜನರಿಂದ ಸಾಮೂಹಿಕ ಅತ್ಯಾಚಾರ

ಲಕ್ನೋ: ಉತ್ತರ ಪ್ರದೇಶದ ಭೋಜಿಪುರ ಪ್ರದೇಶದಲ್ಲಿ ಅಪ್ರಾಪ್ತ ಬಾಲಕಿ... ಓದನ್ನು ಮುಂದುವರಿಸಿ


Edited by: ಬಾನು

3 weeks ago

   
Image 1

ಸಿಎಂ ಸ್ಥಾನ ತ್ಯಾಗದ ಸುಳಿವು? ನಿತೀಶ್ ಕುಮಾರ್ ಮುಂದಿನ ಹೆಜ್ಜೆ ಕುತೂಹಲ

ಪಾಟ್ನಾ: ಬಿಹಾರ ರಾಜಕೀಯದಲ್ಲಿ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗುವಂ... ಓದನ್ನು ಮುಂದುವರಿಸಿ


Edited by: ಬಾನು

3 weeks ago

   
Image 1

ಉದ್ದಿಮೆಗಳಿಗೆ ಕೇಂದ್ರದ ಬೃಹತ್ ನೆರವು – 2.5 ಲಕ್ಷ ಕೋಟಿ ಕ್ರೆಡಿಟ್ ಗ್ಯಾರಂಟಿ ಯೋಜನೆ ಸಿದ್ಧ

ದೆಹಲಿ: ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಪರಿಣಾಮದಿಂದ ಭಾರತದ ಹಲವು ಕ್... ಓದನ್ನು ಮುಂದುವರಿಸಿ


Edited by: ಬಾನು

3 weeks ago

   
Image 1

ಮಣಿಪುರದಲ್ಲಿ ಬಾಂಬ್ ದಾಳಿ – ಇಬ್ಬರು ಮಕ್ಕಳು ದುರ್ಮರಣ

ಇಂಪಾಲ: ಮಣಿಪುರದಲ್ಲಿ ನಡೆದ ಭೀಕರ ಬಾಂಬ್ ದಾಳಿಯಲ್ಲಿ ಇಬ್ಬರು ಮಕ್... ಓದನ್ನು ಮುಂದುವರಿಸಿ


Edited by: ಬಾನು

3 weeks ago

   
Image 1

ಮಳೆಗೆ ತತ್ತರಿಸಿದ ಐಪಿಎಲ್ ಪಂದ್ಯ: ಕೆಕೆಆರ್–ಪಂಜಾಬ್ ಕಿಂಗ್ಸ್ ಮುಖಾಮುಖಿ ಸ್ಥಗಿತ

ಕೋಲ್ಕತ್ತಾ: ಐಪಿಎಲ್ 2026ರ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಪಂ... ಓದನ್ನು ಮುಂದುವರಿಸಿ


Edited by: ಬಾನು

3 weeks ago

   
Image 1

ಸಾಥನ್‌ಕುಲಂ ಕಸ್ಟಡಿ ಸಾವು ಪ್ರಕರಣ: 9 ಪೊಲೀಸರಿಗೆ ಮರಣದಂಡನೆ

ಚೆನ್ನೈ: ದೇಶವನ್ನೇ ಬೆಚ್ಚಿಬೀಳಿಸಿದ್ದ ಸಾಥನ್‌ಕುಲಂ ಕಸ್ಟಡಿ ಸಾವು... ಓದನ್ನು ಮುಂದುವರಿಸಿ


Edited by: ಬಾನು

3 weeks ago

   
Image 1

“ನಾನು ನನ್ನ ಇಚ್ಛೆಗೆ ಬದುಕುತ್ತೇನೆ” –“ಗಂಡನ ಬಿಟ್ಟು ಪ್ರಿಯಕರನ ಜೊತೆ ಬದುಕಲು ಒಪ್ಪಿಗೆ ಕೊಟ್ಟ ಕೋರ್ಟ್!

ದೆಹಲಿ: 19 ವರ್ಷದ ಯುವತಿ ತನ್ನ ವೈಯಕ್ತಿಕ ಸ್ವಾತಂತ್ರ್ಯವನ್ನು ಸ್... ಓದನ್ನು ಮುಂದುವರಿಸಿ


Edited by: ಬಾನು

3 weeks ago

   
Image 1

ಕೇರಳದಲ್ಲಿ ಬಿಜೆಪಿ–ಎಲ್‌ಡಿಎಫ್ ಒಳಒಪ್ಪಂದ ಆರೋಪ: ಡಿಕೆಶಿ ವಾಗ್ದಾಳಿ!

ಕೇರಳ ರಾಜಕೀಯ ರಂಗದಲ್ಲಿ ಚುನಾವಣಾ ಕಾವು ತಾರಕ್ಕೇರಿದೆ. ಈ ನಡುವೆ ಉಪಮುಖ್ಯಮಂತ್ರಿ ಡಿ.... ಓದನ್ನು ಮುಂದುವರಿಸಿ


Edited by: ಬಾನು

3 weeks ago

   
Image 1

ಯುದ್ಧದ ಮಧ್ಯೆಯೂ ಎಲ್ಪಿಜಿ ಕೊರತೆ ಇಲ್ಲ: ಜನರಿಗೆ ಕೇಂದ್ರದ ಭರವಸೆ!

ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ನಡುವೆಯೇ ದೇಶದಲ್ಲಿ ಎಲ್ಪಿಜಿ ಕೊರತೆ ಉಂಟಾಗಬಹು... ಓದನ್ನು ಮುಂದುವರಿಸಿ


Edited by: ಬಾನು

3 weeks ago

   
Image 1