ಅಂಗಡಿ ಮಾಲೀಕನ ಗಮನ ಬೇರೆಡೆ ತಿರುಗಿಸಿ ಚಿನ್ನ ಎಗರಿಸಿದ ಕಳ್ಳ!

ನೆಲಮಂಗಲ: ಚಿನ್ನದ ಬೆಲೆ ಗಗನಕ್ಕೇರುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ಕಳ್ಳರ ಚಟುವಟಿಕೆಗಳು ದಿನೇದಿನೇ ಹೆಚ್ಚುತ್ತಿವೆ. ನೆಲಮಂಗಲ ಸಮೀಪದ ನಾಗಸಂದ್ರದಲ್ಲಿರುವ ಪೂರನ್ ಜ್ಯುವೆಲರ್ಸ್ ಅಂಗಡಿಯಲ್ಲಿ ಅಟೆಂಶನ್ ಡೈವರ್ಶನ್ ತಂತ್ರ ಬಳಸಿ ಸುಮಾರು 3 ಲಕ್ಷ ರೂಪಾಯಿ ಮೌಲ್ಯದ 18 ಗ್ರಾಂ ಚಿನ್ನಾಭರಣ ಕಳವು ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

 

ಅಂಗಡಿ ಮಾಲೀಕ ಮಹೇಂದ್ರ ಅವರಿಗೆ ಸೇರಿದ ಅಂಗಡಿಗೆ ಗ್ರಾಹಕನಂತೆ ಬಂದಿದ್ದ ವ್ಯಕ್ತಿಯೊಬ್ಬ ಉಂಗುರದ ತೂಕ ತೋರಿಸುವಂತೆ ಕೇಳಿದ್ದಾನೆ. ಈ ವೇಳೆ ಅಂಗಡಿ ಸಿಬ್ಬಂದಿಯ ಗಮನ ಬೇರೆಡೆ ಸೆಳೆದ ಆರೋಪಿಯು ಅಸಲಿ ಉಂಗುರವನ್ನು ಕದ್ದುಕೊಂಡು ಅದರ ಬದಲು ನಕಲಿ ಉಂಗುರವನ್ನು ಟ್ರೇನಲ್ಲಿ ಇಟ್ಟು ಪರಾರಿಯಾಗಿದ್ದಾನೆ. ಕಳ್ಳತನದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಪ್ರಕರಣ ಸಂಬಂಧ ಬೆಂಗಳೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

 

ಹಾಸನದಲ್ಲಿ ಮನೆ ಕಳ್ಳತನಕ್ಕೆ ಯತ್ನ ವಿಫಲ

ಇನ್ನೊಂದೆಡೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಗಾಂಧಿ ಸರ್ಕಲ್‌ನಲ್ಲಿ ಮನೆ ಕಳ್ಳತನಕ್ಕೆ ಯತ್ನಿಸಿದ ಐವರ ಗ್ಯಾಂಗ್ ಪತ್ತೆಯಾಗಿದೆ. ಕಾರಿನಲ್ಲಿ ಬಂದಿದ್ದ ಆರೋಪಿಗಳು ಮನೆಯ ಹಿಂಬಾಗಿಲು ಮುರಿದು ಒಳನುಗ್ಗಲು ಡ್ರ್ಯಾಗರ್ ಸೇರಿದಂತೆ ಉಪಕರಣಗಳನ್ನು ತಂದಿದ್ದರು. ಮನೆ ಮಾಲೀಕ ಸಂತೋಷ್ ತಮ್ಮ ಮೊಬೈಲ್‌ನಲ್ಲಿ ಸಿಸಿಟಿವಿ ದೃಶ್ಯ ಗಮನಿಸಿ ತಕ್ಷಣ ಸ್ನೇಹಿತರು ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳೀಯರು ಧಾವಿಸಿ ಕಳ್ಳರನ್ನು ಹಿಡಿಯಲು ಯತ್ನಿಸಿದಾಗ ಮೂವರು ಪರಾರಿಯಾಗಿದ್ದು, ಒಬ್ಬನನ್ನು ಹಿಡಿದು ಥಳಿಸಿ ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ. ಗಾಯಗೊಂಡ ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದವರಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.

 

ಮೈಸೂರಿನಲ್ಲಿ ದೇವಾಲಯ ದರೋಡೆ

ಮೈಸೂರು ತಾಲ್ಲೂಕಿನ ಸಿದ್ದಲಿಂಗಪುರ ಗ್ರಾಮದಲ್ಲಿರುವ ಷಷ್ಠಿ ಸುಬ್ರಮಣ್ಯ ಸ್ವಾಮಿ ದೇವಸ್ಥಾನದಲ್ಲೂ ಕಳ್ಳತನ ನಡೆದಿದೆ. ದೇವಾಲಯದ ಬೀಗ ಮುರಿದು ಒಳನುಗ್ಗಿದ ಖದೀಮರು ಗೋಲಕವನ್ನು ಹೊರಗೆ ತೆಗೆದುಕೊಂಡು ಹೋಗಿ ಒಡೆದು ಹಣ ಕಳವು ಮಾಡಿದ್ದಾರೆ. ಬೆಳಿಗ್ಗೆ ಘಟನೆ ಬೆಳಕಿಗೆ ಬಂದಿದ್ದು, ಮೇಟಗಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ರಾಜ್ಯದ ವಿವಿಧ ಭಾಗಗಳಲ್ಲಿ ಸಂಭವಿಸುತ್ತಿರುವ ಸರಣಿ ಕಳ್ಳತನ ಪ್ರಕರಣಗಳು ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿವೆ. ಹೆಚ್ಚುತ್ತಿರುವ ಚಿನ್ನದ ಬೆಲೆ ಹಿನ್ನೆಲೆ ಆಭರಣ ಅಂಗಡಿಗಳು ಹಾಗೂ ಮನೆಗಳಲ್ಲಿ ಭದ್ರತೆ ಹೆಚ್ಚಿಸುವಂತೆ ಪೊಲೀಸರು ಸಾರ್ವಜನಿಕರಿಗೆ ಸೂಚನೆ ನೀಡಿದ್ದಾರೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

7 hours ago

   
Image 1
Image 1
ಬೆಳಗಾವಿ

ಕಿತ್ತೂರು

ಗ್ರಾಮದಲ್ಲಿ ರಕ್ತರಂಜಿತ ಘಟನೆ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ!

ಬೆಳಗಾವಿ : ಜಿಲ್ಲೆಯ ಕಿತ್ತೂರು ತಾಲ್ಲೂಕಿನ ಹಿರೇನಂದಿಹಳ್ಳಿ ಗ್ರಾ... ಓದನ್ನು ಮುಂದುವರಿಸಿ


Edited by: ಬಾನು

7 hours ago

   
Image 1
ಬೆಂಗಳೂರು ಗ್ರಾಮಾಂತರ

ಹೊಸಕೋಟೆ

ಹೊಸಕೋಟೆ ಬಳಿ ಭೀಕರ ಅಪಘಾತ: ಲಾರಿ-ಬೈಕ್ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು

ಬೆಂಗಳೂರು ಗ್ರಾಮಾಂತರ : ಹೊಸಕೋಟೆ–ಚಿಂತಾಮಣಿ ರಾಷ್ಟ್ರೀಯ ಹೆದ್ದಾರ... ಓದನ್ನು ಮುಂದುವರಿಸಿ


Edited by: ಬಾನು

7 hours ago

   
Image 1
ಬೆಂಗಳೂರು ನಗರ

ಕೆಎಎಸ್ ಅಧಿಕಾರಿ ನಟೇಶ್ ಪ್ರಕರಣ: ವಿನೋದ್ ಮಾತು ನಂಬಿ ಪೋಸ್ಟ್ – ಸಿಸಿಬಿ ವಿಚಾರಣೆಯಲ್ಲಿ ಸ್ನೇಹಮಯಿ ಕೃಷ್ಣ ಒಪ್ಪಿಗೆ

ಬೆಂಗಳೂರು : ಕೆಎಎಸ್ ಅಧಿಕಾರಿ ನಟೇಶ್ ವಿರುದ್ಧ ಸಾಮಾಜಿಕ ಜಾಲತಾಣದ... ಓದನ್ನು ಮುಂದುವರಿಸಿ


Edited by: ಬಾನು

7 hours ago

   
Image 1
ಬೆಂಗಳೂರು ಗ್ರಾಮಾಂತರ

ಆನೇಕಲ್ ತಾಲ್ಲೂಕು

ಆನೇಕಲ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ : 9 ಶಾಲಾ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ, ಪೋಕ್ಸೋ ಕೇಸ್ ದಾಖಲು

ಆನೇಕಲ್‌ : ಬೆಂಗಳೂರು ಹೊರವಲಯದ ಆನೇಕಲ್‌ನಲ್ಲಿ ಶಾಲಾ ಮಕ್ಕಳ ಮೇಲೆ... ಓದನ್ನು ಮುಂದುವರಿಸಿ


Edited by: ಬಾನು

7 hours ago

   
Image 1
ಬೆಂಗಳೂರು ಗ್ರಾಮಾಂತರ

ದೇವನಹಳ್ಳಿ

ಪೋಕ್ಸೋ ಆರೋಪ ದಾಖಲಿಸಿದ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ; ನಾಲ್ವರು ಆರೋಪಿಗಳ ವಿರುದ್ಧ FIR

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ಸಂಜಯನಗರದಲ್ಲಿ ಹೇಮಂತ್ ಆತ್ಮಹತ್ಯೆ ಪ್ರಕರಣ: ಯುಡಿಆರ್ ದಾಖಲಾಗಿದ್ದು, ತನಿಖೆ ಪ್ರಾರಂಭ

ಬೆಂಗಳೂರು : ಮಾಜಿ ಮುಖ್ಯಮಂತ್ರಿ Basavaraj Bommai ಅವರ ಪರ್ಸನಲ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ಬೈರತಿ ಬಸವರಾಜ್ ನ್ಯಾಯಾಂಗ ಬಂಧನಕ್ಕೆ: ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಜೈಲು ಆದೇಶ

ಬೆಂಗಳೂರು : ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ Byra... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ಪ್ರಕರಣ ಮುಚ್ಚಿಹಾಕಲು ಕೈ ಜೋಡಿಸಿದ ಆರೋಪ: ವರ್ತೂರು ಪೊಲೀಸ್ ಇನ್‌ಸ್ಪೆಕ್ಟರ್ ಗಂಭೀರ ಟೀಕೆ

ಬೆಂಗಳೂರು : ವರ್ತೂರು ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ Yoganand... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ವಿಚಾರಣೆ ಮುಗಿಸಿ ಕ್ಷಮೆಯಾಚಿಸಿದ ಸ್ನೇಹಮಯಿ ಕೃಷ್ಣ: ಸುಳ್ಳು ಲಂಚದ ಆರೋಪ ತಿರಸ್ಕರಣೆ

ಬೆಂಗಳೂರು : ಸರ್ಕಾರದ ಮುಖ್ಯ ಕಾರ್ಯದರ್ಶಿ Shalini Rajanesh ವಿ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬಾಗಲಕೋಟೆ

ಕಬ್ಬಿನ ಟ್ರ್ಯಾಕ್ಟರ್ ಅಪಘಾತದಲ್ಲಿ 2 ವರ್ಷದ ಮಗು ಸೇರಿದಂತೆ 4 ಮಂದಿ ಮೃತ

ಬಾಗಲಕೋಟೆ, ಜಮಖಂಡಿ : ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಕಟ್ಟೆ ಕೆರೆ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1