ಅನ್ನಭಾಗ್ಯ ಯೋಜನೆಗೆ ಹೊಸ ರೂಪ: 5 ಕೆಜಿ ಅಕ್ಕಿಯ ಬದಲು “ಇಂದಿರಾ ಆಹಾರ ಕಿಟ್” ವಿತರಣೆ – ಸಿದ್ದರಾಮಯ್ಯ ಘೋಷಣೆ
ಬೆಂಗಳೂರು: ರಾಜ್ಯದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಯಲ್ಲಿ ಮಹತ್ವದ ಬದಲಾವಣೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಪ್ರಸ್ತುತ ನೀಡುತ್ತಿರುವ ಹೆಚ್ಚುವರಿ 5 ಕೆಜಿ ಅಕ್ಕಿಯ ಬದಲು ತೊಗರಿಬೇಳೆ, ಸಕ್ಕರೆ, ಉಪ್ಪು ಹಾಗೂ ಅಡುಗೆ ಎಣ್ಣೆ ಒಳಗೊಂಡ ‘ಇಂದಿರಾ ಆಹಾರ ಕಿಟ್’ ವಿತರಿಸಲು ಸರ್ಕಾರ ನಿರ್ಧರಿಸಿದೆ.
2026–27ನೇ ಸಾಲಿನ ಬಜೆಟ್ ಮಂಡನೆ ವೇಳೆ ಮಾತನಾಡಿದ ಅವರು, ಅನ್ನಭಾಗ್ಯ ಯೋಜನೆಯಡಿ 4.54 ಕೋಟಿ ಫಲಾನುಭವಿಗಳಿಗೆ ಪ್ರತಿ ತಿಂಗಳು ಐದು ಕೆಜಿ ಹೆಚ್ಚುವರಿ ಅಕ್ಕಿಯನ್ನು ವಿತರಿಸಲಾಗುತ್ತಿದೆ ಎಂದು ವಿವರಿಸಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ ಈ ಯೋಜನೆಗೆ ಒಟ್ಟು ₹17,167 ಕೋಟಿ ವೆಚ್ಚ ಮಾಡಲಾಗಿದೆ.
ಇನ್ನು ಮುಂದೆ ಹೆಚ್ಚುವರಿ ಅಕ್ಕಿಯ ಬದಲಿಗೆ ಪೌಷ್ಟಿಕಾಂಶಯುಕ್ತ ಆಹಾರ ಕಿಟ್ ವಿತರಿಸಲಾಗುವುದು. ಈ ಯೋಜನೆಗಾಗಿ ಪ್ರಸ್ತುತ ಸಾಲಿನಲ್ಲಿ ₹6,200 ಕೋಟಿ ಮೀಸಲಾಗಿರುವುದು ತಿಳಿಸಲಾಗಿದೆ.
ಅನಂತರ, ಆಹಾರ ಧಾನ್ಯಗಳ ವಿತರಣೆಗಾಗಿ ಲಾಭಾಂಶ ಪಾವತಿಯಲ್ಲಿ ಉಂಟಾಗುವ ವಿಳಂಬವನ್ನು ತಪ್ಪಿಸಲು FIST ಅಪ್ಲಿಕೇಶನ್ ಮೂಲಕ ಲಾಭಾಂಶವನ್ನು ನೇರವಾಗಿ ಪಾವತಿಸುವ ವ್ಯವಸ್ಥೆ ಜಾರಿಗೊಳಿಸಲಾಗುವುದು.
ಇದರ ಜೊತೆಗೆ ದಾಸೋಹ ಯೋಜನೆಯಡಿ ಈಗಾಗಲೇ ರಾಜ್ಯಾದ್ಯಂತ 274 ಕಲ್ಯಾಣ ಸಂಸ್ಥೆಗಳ 32,059 ಫಲಾನುಭವಿಗಳಿಗೆ ₹14 ಕೋಟಿ ವೆಚ್ಚದಲ್ಲಿ ಆಹಾರ ಭದ್ರತೆ ಒದಗಿಸಲಾಗುತ್ತಿದೆ. ಪ್ರಸಕ್ತ ವರ್ಷದಲ್ಲಿ ಇನ್ನೂ 34 ಹೊಸ ಕಲ್ಯಾಣ ಸಂಸ್ಥೆಗಳ 6,701 ಫಲಾನುಭವಿಗಳಿಗೆ ಈ ಯೋಜನೆಯನ್ನು ವಿಸ್ತರಿಸಲಾಗುವುದು ಎಂದು ಸರ್ಕಾರ ಘೋಷಿಸಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ರೆಫರಲ್ ಇಲ್ಲದೆ : ಆಯುಷ್ಮಾನ್ ಯೋಜನೆಡಿ ಎರಡು ಖಾಸಗಿ ಆಸ್ಪತ್ರೆಗಳಲ್ಲಿ ನೇರ ಉಚಿತ ಚಿಕಿತ್ಸೆ
ಬೆಂಗಳೂರು: ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ ಚಿಕಿತ... ಓದನ್ನು ಮುಂದುವರಿಸಿ
ಪರಿಶಿಷ್ಟ ಜಾತಿ ಯುವಕರಿಗೆ ಸುವರ್ಣಾವಕಾಶ – ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಸಾಲ-ಸಬ್ಸಿಡಿ ಯೋಜನೆಗಳು
ಬೆಂಗಳೂರು: ಪರಿಶಿಷ್ಟ ಜಾತಿಯ ನಿರುದ್ಯೋಗಿ ಯುವಕರು, ಯುವತಿಯರು ಮತ... ಓದನ್ನು ಮುಂದುವರಿಸಿ
SC/ST ಉದ್ಯಮಿಗಳಿಗೆ ಖುಷಿಯ ಸುದ್ದಿ: ಕೈಗಾರಿಕೆ ಸ್ಥಾಪನೆಗೆ ಸರ್ಕಾರಿ ಭರ್ಜರಿ ನೆರವು!
ಬೆಂಗಳೂರು: ರಾಜ್ಯದಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಹೊಸ ವೇಗ ನೀಡಲು... ಓದನ್ನು ಮುಂದುವರಿಸಿ
ಪಡಿತರ ಅಕ್ಕಿ ಕಳ್ಳಸಾಗಣೆ ತಡೆಯಲು 20,000 ಅಂಗಡಿಗಳಲ್ಲಿ ಸಿಸಿ ಕ್ಯಾಮರಾಗಳ ಅಳವಡಿಕೆ: ಸಚಿವ ಮುನಿಯಪ್ಪ
ಬೆಂಗಳೂರು: ಪಡಿತರ ಅಕ್ಕಿ ಕಳ್ಳ ಸಾಗಣೆ ತಡೆಯಲು ರಾಜ್ಯದ 20 ಸಾವಿರ... ಓದನ್ನು ಮುಂದುವರಿಸಿ
ಮಹಿಳೆಯರಿಗೆ ಯುಗಾದಿ ಗಿಫ್ಟ್: ಗೃಹಲಕ್ಷ್ಮಿ ಯೋಜನೆಯ 27ನೇ ಕಂತು ಬಿಡುಗಡೆ
ಬೆಂಗಳೂರು: ಯುಗಾದಿ ಹಬ್ಬದ ಸಂಭ್ರಮದಲ್ಲಿ ರಾಜ್ಯದ ಮಹಿಳೆಯರಿಗೆ ಸಿ... ಓದನ್ನು ಮುಂದುವರಿಸಿ
ಪೋಷಕರೇ ಗಮನಿಸಿ: ಮಗಳಿಗೆ 18 ವರ್ಷ ತುಂಬಿದರೆ “ಭಾಗ್ಯಲಕ್ಷ್ಮಿ ಬಾಂಡ್”ನ ₹1 ಲಕ್ಷ ಪಡೆಯಿರಿ!
ಬೆಂಗಳೂರು: ಕರ್ನಾಟಕ ಸರ್ಕಾರದ ಭಾಗ್ಯಲಕ್ಷ್ಮಿ ಯೋಜನೆ ಅಡಿಯಲ್ಲಿ ನ... ಓದನ್ನು ಮುಂದುವರಿಸಿ
ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಸಿಗುತ್ತೆ ಬಡ್ಡಿ ಇಲ್ಲದೇ 1.40 ಲಕ್ಷದವರೆಗೆ ಸಾಲ..! ಅರ್ಜಿ ಸಲ್ಲಿಸುವ ವಿಧಾನ ತಿಳಿದುಕೊಳ್ಳಿ
ನವದೆಹಲಿ: ಕೇಂದ್ರ ಸರ್ಕಾರ ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಉತ್ತ... ಓದನ್ನು ಮುಂದುವರಿಸಿ
ಗೃಹಲಕ್ಷ್ಮಿ ಯೋಜನೆ ಗೊಂದಲ – ಸತ್ತ ಮಹಿಳೆಯ ಖಾತೆಗೆ 12 ಕೋಟಿ ರೂ. ಜಮಾ
ಬೀದರ್: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್... ಓದನ್ನು ಮುಂದುವರಿಸಿ
ರಾಜ್ಯ ಬಜೆಟ್‌ನಲ್ಲಿ ಗೃಹಲಕ್ಷ್ಮಿಯರಿಗೆ ಸಂತಸದ ಸುದ್ದಿ: ₹28,608 ಕೋಟಿ ಅನುದಾನ ಘೋಷಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರಾದ ಸಿದ್ದರಾಮಯ್ಯ ಅ... ಓದನ್ನು ಮುಂದುವರಿಸಿ
ಅನರ್ಹ BPL ಕಾರ್ಡ್‌ಗಳ ಮೇಲೆ ಸರ್ಕಾರದ ಕತ್ತರಿ: 5 ತಿಂಗಳಲ್ಲಿ 15 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಶಾಕ್
ಬೆಂಗಳೂರು: ಅನರ್ಹವಾಗಿ BPL ಕಾರ್ಡ್ ಹೊಂದಿರುವವರ ವಿರುದ್ಧ ರಾಜ್ಯ... ಓದನ್ನು ಮುಂದುವರಿಸಿ