ಬಜೆಟ್ ಘೋಷಣೆ ಜೂ.20 ರೊಳಗೆ ಅನುಷ್ಠಾನ ತನ್ನಿ: ಎನ್. ಚಲುವರಾಯಸ್ವಾಮಿ ಸೂಚನೆ
ಬೆಂಗಳೂರು: ರಾಜ್ಯ ಸರ್ಕಾರ ಬಜೆಟ್ ನಲ್ಲಿ ಘೋಷಿಸಿರುವ ಜನಕ ಹೊಸ ಕೃಷಿ ಯೋಜನೆಗಳನ್ನು ಜೂ 20 ರೊಳಗೆ ಅನುಷ್ಠಾನಕ್ಕೆ ತರುವಂತೆ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ವಿಧಾನ ಸೌಧದ ಸಮಿತಿ ಕೊಠಡಿಯಲ್ಲಿ 2024-25 ನೇ ಸಾಲಿನ ಆಯವ್ಯಯದಲ್ಲಿ ಘೋಷಣೆಯಾಗಿರುವ ಕೃಷಿ ಇಲಾಖೆ ಹೊಸ ಯೋಜನೆಗಳ ಅನುಷ್ಠಾನ ಕುರಿತು ಇಲಾಖೆ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಅವರು ಈ ನಿರ್ದೇಶನ ನೀಡಿದರು. 2024-25 ರ ಆಯವ್ಯಯಲ್ಲಿ ಘೋಷಣೆಯಾದ 19 ಯೋಜನೆಗಳಲ್ಲಿ 12 ಯೋಜನೆಗಳಿಗೆ ಸರ್ಕಾರಿ ಆದೇಶ ಹೊರಡಿಸಿದ್ದು ಬಾಕಿ ಉಳಿದ 7 ಘೋಷಣೆಗಳಿಗೆ ವಾರದೊಳಗೆ ಸರ್ಕಾರಿ ಆದೇಶ ಹೊರಡಿಸಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿ ಎಂದು ಸೂಚಿಸಿದರು.
ಸರ್ಕಾರದಲ್ಲಿ ಅನುದಾನಕ್ಕೆ ಕೊರತೆ ಇಲ್ಲ.ಕೃಷಿ ಕ್ಷೇತ್ರವನ್ನು ಸುಸ್ಥಿರ ಹಾಗೂ ಲಾಭದಾಯಕ ಗೊಳಿಸಲು ರೈತ ಸಮೃದ್ದಿ ಯೋಜನೆ ರೂಪಿಸಿದ್ದು ಇದು ಸಮರ್ಪಕವಾಗಿ ತಲುಪಬೇಕು ಇದು ರಾಜ್ಯ ಸರ್ಕಾರದ ಆಶಯ ಕೃಷಿ,ತೋಟಗಾರಿಕೆ, ಪಶು ಸಂಗೋಪನೆ ಒಳಗೊಂಡಂತೆ ವಿವಿಧ ಇಲಾಖೆಗಳ ಯೋಜನೆಗಳ ಸಂಯೋಜನೆ ಮೂಲಕ ಕಾರ್ಯಕ್ರಮ ಅನುಷ್ಠಾನ ಮಾಡಬೇಕು ಎಂದು ಚಲುವರಾಯ ಸ್ವಾಮಿ ಹೇಳಿದರು. ಯೋಜನೆಗಳ ಅನುಷ್ಠಾನದ ಸಂದರ್ಭದಲ್ಲಿ ಉಂಟಾಗಬಹುದಾದ ಸಮಸ್ಯೆಗಳ ಬಗ್ಗೆ ಪೂರ್ವಾವಲೋಕನ ಆಗಬೇಕಿದೆ. ಈ ಬಗ್ಗೆ ಅಧಿಕಾರಿಗಳು ಚರ್ಚಿಸಿ ಅಭಿಪ್ರಾಯ ತಿಳಿಸಿ ಎಂದು ಕೃಷಿ ಸಚಿವರು ತಿಳಿಸಿದರು. ಪ್ರತ್ಯೇಕ ಆಹಾರ ಸಂಸ್ಕೃರಣೆ ಮತ್ತು ರಪ್ತು ಉತ್ತೇಜನ ಆಯುಕ್ತಾಲಯ ಸ್ಥಾಪನೆ ಮತ್ತು ಕೆಲ ಸಂಸ್ಥೆಗಳನ್ನು ಅದರ ವ್ಯಾಪ್ತಿಗೆ ತರುವ ಬಗ್ಗೆ ಸಾಧಕ ಬಾಧಕಗಳ ಬಗ್ಗೆ ಪರಿಶೀಲಿಸಿ ಪ್ರಸ್ತಾವನೆ ಸಿದ್ದಪಡಿಸಿ ಎಂದರು.
ಕರ್ನಾಟಕ ರೈತ ಸಮೃದ್ದಿ ಯೋಜನೆ,ಕೃಷಿ ಅಭಿವೃದ್ಧಿ ಪ್ರಾಧಿಕಾರ, ಕೃಷಿ ಭಾಗ್ಯ ಯೋಜನೆ, ಸಮುದಾಯದ ಬೀಜ ಬ್ಯಾಂಕ್ ಸ್ಥಾಪನೆ, ನಮ್ಮ ಮಿಲೆಟ್ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಆಗಬೇಕು ವ್ಯವಸ್ಥಿತ ಚಾಲನೆ ನೀಡಬೇಕು ಎಂದು ಚಲುವರಾಯಸ್ವಾಮಿ ಸೂಚಿಸಿದರು. ಬೆಂಗಳೂರಿನಲ್ಲಿ ಆರ್.ಕೆ ಶಾಲಾ ಕೃಷಿ ಕ್ಷೇತ್ರ ವನ್ನು ತಾಂತ್ರಿಕತೆ ಪಸರಿಸುವ ಜ್ಞಾನ ಕೇಂದ್ರವನ್ನಾಗಿ ಅಭಿವೃದ್ಧಿ ಪಡಿಸಿ ರೈತರಿಗೆ ಕೀಟ /ರೋಗ ಮತ್ತು ಪೋಷಕಾಂಶಗಳ ನಿರ್ವಹಣೆ ಸಲಹೆ ನೀಡಲು ಇ ಸ್ಯಾಪ್ ತಂತ್ರಾಂಶ ಸರಿಯಾಗಿ ಬಳಸಬೇಕು ಅದನ್ನು ಉಪಯೋಗಿಸುವವರಿಗೆ ಸೂಕ್ತ ತರಬೇತಿ ಒದಗಿಸಿ ಎಂದು ಸಚಿವರು ತಿಳಿಸಿದರು. ಮಿಷಿನ್ ಲರ್ನಿಂಗ್ ನಂತಹ ಅತ್ಯಾಧುನಿಕ ತಂತ್ರಜ್ಞಾನ ಬಳಸಿ.
ಬೆಳೆ ಉತ್ಪಾದಕತೆ ಮುನ್ಸೂಚಿಸಲು ದತ್ತಾಂಶ ಅಭಿವೃದ್ಧಿ ಪಡಿಸಿ.. ರೈತ ಉತ್ಪಾಕತೆ ಸಂಸ್ಥೆಗಳಿಗೆ ಬೆಂಬಲ ನೀಡಲು ಅಗ್ರಿ ಅ್ಯಕ್ಸಿಲೇಟರ್ ಪ್ಲ್ಯಾಟ್ ಫಾರ್ಮ್ ಮೂಲಕ ಕೃಷಿ ವಲಯದ ಸ್ಟಾರ್ಟಫ್ ಗಳನ್ನು ಉತ್ತೇಜಿಸುವ ಅನುಷ್ಠಾನ ಚುರುಕುಗೊಳಿಸಿ ಎಂದು ಸಚಿವರು ಹೇಳಿದರು..ಇಲಾಖೆ ಯಲ್ಲಿ ಬಾಕಿ ಉಳಿದ ಕಡತಗಳನ್ನು ಪೂರ್ಣ ಗೊಳಿಸಿ ವಿಲೇವಾರಿಯಾಗುವಂತೆ ನಿಗಾವಹಿಸಿ ಎಂದು ಸಚಿವರು ಸೂಚನೆ ನೀಡದರು.. ಬಿತ್ತನೆ ಬೀಜ ರಸಗೊಬ್ಬರ ಕೊರತೆ ಇಲ್ಲ ; ಅಧಿಕಾರಿಗಳು ನಿಗಾ ವಹಿಸಿ- ಎನ್ ಚಲುವರಾಯಸ್ವಾಮಿ ಸೂಚನೆ. ಇದೇ ವೇಳೆ ರಾಜ್ಯದ ಯಾವುದೇ ಜಿಲ್ಲೆಯಲ್ಲಿಯೂ ಬಿತ್ತನೆ ಬೀಜ, ರಸಗೊಬ್ಬರದ ಕೊರತೆ ಇಲ್ಲ. ಅಧಿಕಾರಿಗಳು ರೈತರಿಗೆ ಸೂಕ್ತ ಮಾಹಿತಿ ಮಾರ್ಗದರ್ಶನ ನೀಡಬೇಕು.
ಅನಗತ್ಯ ಗೊಂದಲ ಸೃಷ್ಟಿ ಮಾಡಿದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು. ಸಭೆಯಲ್ಲಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗು ಅಭಿವೃದ್ಧಿ ಆಯುಕ್ತರಾದ ಶಾಲಿನಿ ರಜನೀಶ್ ಅವರು ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಕುರಿತು ಹಲವು ಸಲಹೆಗಳನ್ನು ನೀಡಿದರು. ಕೃಷಿ ಇಲಾಖೆ ಕಾರ್ಯದರ್ಶಿ ಅನ್ಬುಕುಮಾರ್ ಅವರುಹಣಕಾಸು ಇಲಾಖೆ ಅನುಮೋದನೆಯೊಂದಿಗೆ ಶೀಘ್ರವಾಗಿ ಬಾಕಿ ಉಳಿದ ಆದೇಶ ಘೋಷಣೆಗಳು ಸರ್ಕಾರಿ ಹೊರಡಿಲಾಗುವುದು ಎಂದು ಸಭೆಗೆ ಮಾಹಿತಿ ನೀಡಿದರು. ಕೃಷಿ ಇಲಾಖೆ ಆಯುಕ್ತ ವೈ.ಎಸ್.ಪಾಟೀಲ್, ಆಹಾರ ಸಂಸ್ಕರಣೆ ಹಾಗೂ ಕಟಾವು ತಂತ್ರಜ್ಞಾನ ವಿಶೇಷ ಕಾರ್ಯದರ್ಶಿ ರೋಹಿಣಿ ಸಿಂಧೂರಿ, ಜಲಾನಯನ ಅಭಿವೃದ್ಧಿ ಆಯುಕ್ತ ಡಾ. ಗಿರೀಶ್, ಕೃಷಿ ಇಲಾಖೆ ನಿರ್ದೇಶಕ ಡಾ. ಜಿ.ಟಿ.ಪುತ್ರ, ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಟೊಮೆಟೊ ಬೆಲೆ ಗಗನಕ್ಕೆ, ತರಕಾರಿ ಬೆಲೆಯೂ ಏರಿಕೆ..! ದರ ಜಿಗಿತಕ್ಕೆ ಗ್ರಾಹಕರ ಜೇಬಿಗೆ ಕತ್ತರಿ
ಬೆಂಗಳೂರು : ಕಳೆದ ವಾರವಷ್ಟೆ ಕೆಜಿಗೆ 50 ರೂ.ಗೆ ದೊರೆಯುತ್ತಿದ್ದ... ಓದನ್ನು ಮುಂದುವರಿಸಿ
ಹುಬ್ಬಳ್ಳಿ
ಅಡಿಯಲ್ಲಿ ಕೃಷಿ ಉತ್ಪನ್ನಗಳ ಖರೀದಿಗೆ ಕೇಂದ್ರ ನೀಡುವ ಅನುದಾನದಲ್ಲಿ ಕರ್ನಾಟಕಕ್ಕೆ ಅನ್ಯಾಯ
ಹುಬ್ಬಳ್ಳಿ: ಕನಿಷ್ಠ ಬೆಂಬಲ ಬೆಲೆ (ಎಂಎಸ್ ಪಿ) ಅಡಿಯಲ್ಲಿ ಕೃಷಿ ಉ... ಓದನ್ನು ಮುಂದುವರಿಸಿ
ಕರಿಮೆಣಸಿನ ಕೃಷಿಗೆ ಹೆಚ್ಚಿದ ಬೇಡಿಕೆ, ಇಲ್ಲಿದೆ ಇದರ ಕೃಷಿ ವಿಧಾನಗಳು
ಕರಿಮೆಣಸನ್ನು ಮಸಾಲೆಗಳ ರಾಜ ಎಂದೂ ಕರೆಯುತ್ತಾರೆ. ಹೆಚ್ಚಿನ ಅಡುಗೆಮನೆಗಳಲ್ಲಿ ನೀವು ಈ... ಓದನ್ನು ಮುಂದುವರಿಸಿ
ತೆಂಗಿನ ಕೃಷಿಯ ಸಮಯದಲ್ಲಿ ಈ ವಿಷಯಗಳ ಬಗ್ಗೆ ವಿಶೇಷ ಕಾಳಜಿ ವಹಿಸಿ
ತೆಂಗಿನ ಕೃಷಿಯನ್ನು ಸರಿಯಾದ ರೀತಿಯಲ್ಲಿ ಮಾಡಿದರೆ ಉತ್ತಮ ಆದಾಯ ಗಳಿಸಬಹುದು. ಸರಿಯಾದ ಕ... ಓದನ್ನು ಮುಂದುವರಿಸಿ
ಒಂದು ವರ್ಷದಲ್ಲಿ ಆಲೂಗಡ್ಡೆ, ಈರುಳ್ಳಿ, ಟೊಮೆಟೊ ಬೆಲೆ ಎಷ್ಟು ಹೆಚ್ಚಾಗಿದೆ?
ಕಳೆದ ವರ್ಷ ಬೆಲೆ ಏರಿಕೆ ಹೆಚ್ಚಾಗಿದೆ. ಹಲವು ವಸ್ತುಗಳ ಬೆಲೆಯೂ ಏರಿಕೆಯಾಗಿದೆ. ಹಣದುಬ್... ಓದನ್ನು ಮುಂದುವರಿಸಿ
ಬಕ್ರೀದ್ ಹಬ್ಬ ಪ್ರಯುಕ್ತ ಬೆಂಗಳೂರಲ್ಲಿ ಭರ್ಜರಿ ಕುರಿ ವ್ಯಾಪಾರ.. ರೈತರು ಖುಷ್!
ಬೆಂಗಳೂರು: ಬಕ್ರೀದ್ ಹಬ್ಬದ ಹಿನ್ನೆಲೆ ಪ್ರತಿ ವರ್ಷವೂ ಭರ್ಜರಿ... ಓದನ್ನು ಮುಂದುವರಿಸಿ
ಪ್ರಧಾನಿಯಾಗಿ ಮೊದಲ ದಿನವೇ ಬಿಗ್ ಅನೌನ್ಸ್ ಮಾಡಿದ ಮೋದಿ... ರೈತರೇ ನಿಮ್ಮ ಬ್ಯಾಂಕ್ ಅಕೌಂಟ್ ನೋಡಿ!
ನವದೆಹಲಿ: ಪ್ರಧಾನಿಯಾದ ಮೊದಲ ದಿನವೇ ಮೋದಿ ರೈತರಿಗೆ ಬಂಪರ್ ಗಿಫ್ಟ... ಓದನ್ನು ಮುಂದುವರಿಸಿ
ಶುಂಠಿ ಕೃಷಿಯ ವಿಧಾನಗಳೇನು? ಇಲ್ಲಿದೆ ಮಾಹಿತಿ
ಜೂನ್ ಮತ್ತು ಜುಲೈ ತಿಂಗಳಲ್ಲಿ ಸಾಂಬಾರ ಬೆಳೆಗಳನ್ನು ಬೆಳೆಯಲು ರೈತರು ತಮ್ಮ ಹೊಲಗಳನ್ನು... ಓದನ್ನು ಮುಂದುವರಿಸಿ
ದೊಡ್ಡ ಮೆಣಸಿನಕಾಯಿ ಬೆಳೆಯಿಂದ ಲಕ್ಷ ಲಕ್ಷ ಗಳಿಸಿ!
ಬೆಂಗಳೂರು: ಕ್ಯಾಪ್ಸಿಕಂಗೆ ದೇಶ ಮಾತ್ರವಲ್ಲದೆ ವಿದೇಶಗಳಲ್ಲೂ ಸಾಕಷ... ಓದನ್ನು ಮುಂದುವರಿಸಿ
ರಸಗೊಬ್ಬರದ ವ್ಯಾಪಾರ ಮಾಡುವ ಮೂಲಕ ರೈತರು ಅತ್ಯಧಿಕ ಲಾಭ ಗಳಿಸಬಹುದು
ಭಾರತ ಕೃಷಿ ಪ್ರಧಾನ ದೇಶ. ಇಂದಿಗೂ, ಭಾರತದ ಜನಸಂಖ್ಯೆಯ 50% ಕ್ಕಿಂತ ಹೆಚ್ಚು ಜನರು ಕೃಷ... ಓದನ್ನು ಮುಂದುವರಿಸಿ