ಬಂಡೀಪುರ–ನಾಗರಹೊಳೆಯಲ್ಲಿ ಸಫಾರಿ ತಾತ್ಕಾಲಿಕ ಬಂದ್: ಸಚಿವ ಈಶ್ವರ್ ಬಿ. ಖಂಡ್ರೆ ಸ್ಪಷ್ಟನೆ

ಬೆಂಗಳೂರು/ಚಾಮರಾಜನಗರ: ಕಳೆದ ನವೆಂಬರ್‌ನಲ್ಲಿ ಬಂಡೀಪುರ ರಾಷ್ಟ್ರೀಯ ಉದ್ಯಾನವನ ಮತ್ತು ನಾಗರಹೊಳೆಯ ರಾಷ್ಟ್ರೀಯ ಉದ್ಯಾನವನಗಳಲ್ಲಿ ಸಫಾರಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಬಳಿಕ ಷರತ್ತುಬದ್ಧವಾಗಿ ಪುನರಾರಂಭಿಸಿದ ಕ್ರಮವನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಸಮರ್ಥಿಸಿಕೊಂಡಿದ್ದಾರೆ.

 

ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಪ್ರತಿಪಕ್ಷ ನಾಯಕ ಆರ್. ಅಶೋಕ್ ಮಧ್ಯಪ್ರವೇಶಿಸಿ, ಸಫಾರಿ ಸ್ಥಗಿತಗೊಳಿಸಿದ್ದರಿಂದ 4 ಸಾವಿರಕ್ಕೂ ಹೆಚ್ಚು ಜನರು ಉದ್ಯೋಗ ಕಳೆದುಕೊಂಡಿದ್ದಾರೆ ಎಂದು ಆಕ್ಷೇಪಿಸಿದರು. ದೇಶದ ಹಲವು ಭಾಗಗಳಲ್ಲಿ ಸಫಾರಿ ವರ್ಷಗಳಿಂದ ನಡೆಯುತ್ತಿದ್ದು, ಯಾವುದೇ ಸಮೀಕ್ಷೆ ನಡೆಸದೇ ಏಕಾಏಕಿ ಸಫಾರಿಯನ್ನು ನಿಲ್ಲಿಸಿರುವುದು ಸರಿಯಲ್ಲ ಎಂದು ಅವರು ಹೇಳಿದರು.

 

ಇದಕ್ಕೆ ಉತ್ತರಿಸಿದ ಸಚಿವ ಖಂಡ್ರೆ, ಸಫಾರಿಯನ್ನು ಏಕಾಏಕಿ ನಿಲ್ಲಿಸಲಾಗಿಲ್ಲ ಎಂದು ಸ್ಪಷ್ಟಪಡಿಸಿದರು. ಕಳೆದ ನವೆಂಬರ್‌ನಲ್ಲಿ 15 ದಿನಗಳ ಅವಧಿಯಲ್ಲಿ ಮೂರು ಅಮೂಲ್ಯ ಜೀವಹಾನಿ ಸಂಭವಿಸಿತ್ತು. ಜೊತೆಗೆ ಒಬ್ಬರು ಶಾಶ್ವತ ಅಂಗವಿಕಲರಾಗಿದ್ದರು. ಈ ನಡುವೆ ಹುಲಿಗಳು ಕಾಡಿನಿಂದ ಹೊರಬಂದು ದಾಳಿ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಜನರ ಜೀವ ರಕ್ಷಣೆಗಾಗಿ ಸಫಾರಿಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿತ್ತು ಎಂದು ಹೇಳಿದರು.

 

ಚಾಮರಾಜನಗರದಲ್ಲಿ ನಡೆದ ಸಭೆಯಲ್ಲಿ ರೈತ ಸಂಘಟನೆಗಳು ಕೂಡ ಸಫಾರಿ ರಾತ್ರಿ ವೇಳೆಯವರೆಗೆ ನಡೆಯುತ್ತಿರುವುದು, ಹೆಚ್ಚಿನ ವಾಹನ ಸಂಚಾರ ಹಾಗೂ ಪ್ರವಾಸಿಗರ ಒತ್ತಡದಿಂದ ವನ್ಯಜೀವಿಗಳು ಅಶಾಂತಗೊಂಡು ಕಾಡಿನಿಂದ ಹೊರಬರುತ್ತಿವೆ ಎಂದು ಆಕ್ಷೇಪ ವ್ಯಕ್ತಪಡಿಸಿ ಸಫಾರಿ ಸ್ಥಗಿತಗೊಳಿಸುವಂತೆ ಮನವಿ ಮಾಡಿದ್ದವು ಎಂದು ಸಚಿವರು ತಿಳಿಸಿದರು.

 

ಈ ಮಧ್ಯೆ ಮತ್ತೊಂದು ಹುಲಿ ದಾಳಿ ಸಂಭವಿಸಿ ವ್ಯಕ್ತಿಯೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ಸಫಾರಿಯನ್ನು ತಾತ್ಕಾಲಿಕವಾಗಿ ನಿಲ್ಲಿಸಿ, ಸಿಬ್ಬಂದಿ ಹಾಗೂ ವಾಹನಗಳನ್ನು ಕಾಡಿನಂಚಿನ ಗ್ರಾಮಗಳಲ್ಲಿ ನಿಗಾ ವಹಿಸಲು ಬಳಸಲಾಯಿತು ಎಂದು ಸಚಿವರು ಮಾಹಿತಿ ನೀಡಿದರು.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

5 hours ago

   
Image 1
Image 1
ಬೆಂಗಳೂರು ನಗರ

ಗೃಹಬಳಕೆ ಎಲ್‌ಪಿಜಿ ಸಿಲಿಂಡರ್‌ಗಳು ಲಭ್ಯ – ಸುಳ್ಳು ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ ಜಗದೀಶ.ಜಿ

ಬೆಂಗಳೂರು: ನಗರದಲ್ಲಿ ಗೃಹಬಳಕೆ ಎಲ್‌ಪಿಜಿ ಸಿಲಿಂಡರ್‌ಗಳು ಸಾಕಷ್ಟ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಬೆಂಗಳೂರು ನಗರ

ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಆರ್.ಕೆ.ಪುರಂ ಶಾಸಕ ಬೈರತಿ ಬಸವರಾಜ್‌ಗೆ ನ್ಯಾಯಾಲಯದಿಂದ ಜಾಮೀನು

ಬೆಂಗಳೂರು: ಭಾರೀ ಸಂಚಲನ ಮೂಡಿಸಿದ್ದ ಬಿಕ್ಲು ಶಿವ ಕೊಲೆ ಪ್ರಕರಣದಲ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಬೆಂಗಳೂರು ನಗರ

1 ಗಂಟೆ ಒಳಗೆ ಬ್ಲಾಸ್ಟ್: ಬಸವಭವನಕ್ಕೆ ಇಮೇಲ್ ಮೂಲಕ ಬಾಂಬ್ ಬೆದರಿಕೆ!

ಬೆಂಗಳೂರು: ನಗರದ ಬಸವಭವನ ಕಟ್ಟಡಗೆ ಸೈನೇಡ್ ಬಾಂಬ್ ಸ್ಫೋಟ ಮಾಡುವು... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಬೆಂಗಳೂರು ನಗರ

ಜಿಬಿಎ ವ್ಯಾಪ್ತಿಯಲ್ಲಿ 441 ಹೊಸ ಶೌಚಾಲಯಗಳ ನಿರ್ಮಾಣ – ಡಿ. ಕೆ. ಶಿವಕುಮಾರ್ ಪ್ರಕಟಣೆ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ 388... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಬೆಂಗಳೂರು ನಗರ

ರಾಜ್ಯ ಸರ್ಕಾರ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕುತ್ತಿರುವುದು ಸುಳ್ಳಲ್ಲ – ಬಿ. ವೈ. ವಿಜಯೇಂದ್ರ ಟೀಕೆ

ಬೆಂಗಳೂರು: 2026-27ನೇ ಸಾಲಿನ ರಾಜ್ಯ ಬಜೆಟ್ ಜನರ ನಿರೀಕ್ಷೆಗಳಿಗೆ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಬೆಂಗಳೂರು ನಗರ

ಅಡುಗೆ ಅನಿಲ ಪೂರೈಕೆ ವ್ಯತ್ಯಯ: ದೇವೇಗೌಡ ಅಪ್ಪಾಜಿ ಕ್ಯಾಂಟೀನ್ ತಾತ್ಕಾಲಿಕ ಸ್ಥಗಿತ -ಟಿ. ಎ. ಶರವಣ

ಬೆಂಗಳೂರು: ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಬೆಂಗಳೂರು ನಗರ

ತುಂಗಭದ್ರ ಅಚ್ಚುಕಟ್ಟು ರೈತರ ಸಂಕಷ್ಟ: 33 ಗೇಟ್‌ಗಳನ್ನು ಶೀಘ್ರ ಅಳವಡಿಸಲು ಟಿ. ಎ. ಶರವಣ ಆಗ್ರಹ

ಬೆಂಗಳೂರು: ತುಂಗಭದ್ರ ಅಚ್ಚುಕಟ್ಟು ಪ್ರದೇಶದ ರೈತರ ಸಂಕಷ್ಟದ ಕುರಿ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಗದಗ

ಕೇರಳ ಸರ್ಕಾರದ ಲೋಗೋ ಬಳಸಿ ನಕಲಿ ಲಾಟರಿ! 15 ಲಕ್ಷ ಬಹುಮಾನ ಎಂಬ ಮೆಸೇಜ್‌ಗೆ ಪ್ರತಿಕ್ರಿಯಿಸಬೇಡಿ

ಗದಗ: ಜಿಲ್ಲೆಯಲ್ಲಿ ನಕಲಿ ಲಾಟರಿ ಯೋಜನೆಯ ಹೆಸರಿನಲ್ಲಿ ಜನರನ್ನು ಮ... ಓದನ್ನು ಮುಂದುವರಿಸಿ


Edited by: ಬಾನು

13 hours ago

   
Image 1
ತುಮಕೂರು

ತಿಪಟೂರು

ಮದುವೆಯಾಗಿ ಮೂರು ತಿಂಗಳಲ್ಲೇ ಪತಿ ಕೊಲೆ: ಪ್ರಿಯಕರನ ಜೊತೆ ಸೇರಿ ಸಂಚು ರೂಪಿಸಿದ ಪತ್ನಿ ಬಂಧನ

ತುಮಕೂರು: ಜಿಲ್ಲೆಯ ತಿಪಟೂರು ಗ್ರಾಮಾಂತರದ ಚಿಕ್ಕಕೊಟ್ಟಗಿಹಳ್ಳಿ ಗ... ಓದನ್ನು ಮುಂದುವರಿಸಿ


Edited by: ಬಾನು

13 hours ago

   
Image 1
ಬೆಂಗಳೂರು ನಗರ

ಅಡುಗೆ ಅನಿಲ ಕೊರತೆ ಕುರಿತು ಸಂಸತ್ತಿನಲ್ಲಿ ಮಾತನಾಡಲಿ: ಡಿ.ಕೆ. ಶಿವಕುಮಾರ್

ಬೆಂಗಳೂರು: ಬೇರೆ ವಿಚಾರಗಳಲ್ಲಿ ಮಾತನಾಡುವ ಸಂಸದರು ಅಡುಗೆ ಅನಿಲ ಕ... ಓದನ್ನು ಮುಂದುವರಿಸಿ


Edited by: ಬಾನು

13 hours ago

   
Image 1