ಬೆಳೆವಿಮೆ ಯೋಜನೆ ಜಾರಿಯಲ್ಲಿ ಕರ್ನಾಟಕ ನಂ.1: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರವು ಮನರೇಗಾ ಯೋಜನೆಯನ್ನು ರದ್ದುಪಡಿಸಿ ವಿಬಿಐ ಜಿ ರಾಮ್ ಜಿ ಕಾಯ್ದೆಯನ್ನು ಜಾರಿಗೊಳಿಸಿರುವುದನ್ನು ರೈತರು ಒಕ್ಕೊರಲಿನಿಂದ ವಿರೋಧಿಸಬೇಕೆಂದು ತಿಳಿಸಿದ್ದಾರೆ. ಅವರು ಈ ಅಭಿಪ್ರಾಯವನ್ನು ಅಂತರರಾಷ್ಟ್ರೀಯ ವಾಣಿಜ್ಯ ಮೇಳ – 2026 ರ “ಉತ್ಪಾದನೋತ್ತರ ಕೃಷಿ: ರೈತರ ಸಬಲೀಕರಣ” ಹಾಗೂ ರಾಜ್ಯಮಟ್ಟದ ಕೃಷಿ ಪಂಡಿತ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ತಿಳಿಸಿದ್ದಾರೆ. ನಮ್ಮ ಸರ್ಕಾರ ಕೃಷಿ ಕ್ಷೇತ್ರಕ್ಕೆ ಸದಾ ಬೆಂಬಲ ನೀಡುತ್ತಿದೆ. ಕೃಷಿಕರ ಸಬಲೀಕರಣ ಮತ್ತು ಕೃಷಿ ಲಾಭದಾಯಕತೆಯನ್ನು ಹೆಚ್ಚಿಸಲು ಸರ್ಕಾರ ಹೆಚ್ಚಿನ ಒತ್ತು ನೀಡುತ್ತದೆ. ರೈತರು ಕೃಷಿ ಮತ್ತು ಉತ್ಪಾದನೋತ್ತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ, ಕೃಷಿ ಲಾಭದಾಯಕವಾಗಬಹುದು.

 

ರೈತರು ಉದ್ಯಮಿಗಳಾಗಬೇಕು . ಉತ್ಪನ್ನಗಳನ್ನು ಬೆಳೆಯುವ ಜೊತೆಗೆ, ಸಂಗ್ರಹಣೆ, ಸಂಸ್ಕರಣೆ, ಪ್ಯಾಕೇಜಿಂಗ್, ಮಾರುಕಟ್ಟೆ , ಉಪಉತ್ಪನ್ನಗಳ ಅಭಿವೃದ್ಧಿಯಲ್ಲಿ ರೈತರು ನಿರತರಾಗಬೇಕಿದೆ. ಕೃಷಿಕ್ಷೇತ್ರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ತೊಡಗಿಕೊಳ್ಳುವುದು ಅಗತ್ಯ. ಇಂದಿನ ಪ್ರಶಸ್ತಿಗೆ ಭಾಜನರಾದ ಮಹಿಳಾ ಕೃಷಿಕರ ಸಾಧನೆ ಸ್ಪೂರ್ತಿದಾಯಕವಾಗಿದೆ ಎಂದರು. ರೈತರಿಗೆ ಉತ್ತಮವಾದ ಬಿತ್ತನೆ ಬೀಜ, ಗೊಬ್ಬರ, ಔಷದಿ, ಸರ್ಕಾರ ಒದಗಿಸುತ್ತಿದ್ದು, ಯಂತ್ರೋಪಕರಣಗಳ ಖರೀದಿಗೆ 1,500 ಕೋಟಿ ಸಹಾಯಧನವನ್ನು ನೀಡಲಾಗುತ್ತಿದೆ. ಬೆಳೆವಿಮೆ ಯೋಜನೆ ಜಾರಿಯಲ್ಲಿ ಕರ್ನಾಟಕ, ದೇಶದಲ್ಲಿ ನಂ.1 ರಾಜ್ಯವಾಗಿದ್ದು, ಈವರೆಗೆ 6000 ಕೋಟಿ ರೂ.ಗಳ ವಿಮೆಪರಿಹಾರವನ್ನು ರೈತರಿಗೆ ವಿತರಿಸಲಾಗಿದೆ. ಕಬ್ಬು, ರಾಗಿ ಸೇರಿದಂತೆ ಹಲವು ಬೆಳೆಗಳನ್ನು ಬೆಳೆಸುವುದಕ್ಕೆ ರೈತರು ಸೀಮಿತವಾಗುತ್ತಿದ್ದಾರೆ.

 

ಆದರೆ ಬೆಳೆ ತೆಗೆದ ನಂತರ ಚಟುವಟಿಕೆಗಳಲ್ಲಿ ರೈತರು ಕೈಗೊಳ್ಳಬೇಕು. ಕಬ್ಬು ಬೆಳೆ ರೈತರೊಂದಿಗೆ ಚರ್ಚಿಸಿ ಸಂಧಾನ ನಡೆಸಿ ಕಬ್ಬು ಬೆಳೆಗೆ ಬೆಲೆ ನಿಗಧಿ ಪಡಿಸಲಾಯಿತು. ಅಂತೆಯೇ ತೊಗರಿ ಬೆಳೆಗೆ ಖರೀದಿ ಕೇಂದ್ರವನ್ನು ಒಂದು ತಿಂಗಳ ಮುಂಚೆಯೇ ತೆರೆದು ರೈತರಿಗೆ ಅನುಕೂಲ ಕಲ್ಪಿಸಲಾಯಿತು. ಮೆಕ್ಕೆ ಜೋಳ ಹೆಚ್ಚುವರಿ ಇಳುವರಿ ಬಂದು 54 ಲಕ್ಷ ಮೆ.ಟನ್ ಉತ್ಪಾದನೆಯಾಗಬಹುದಾಗಿದೆ. ಆದ್ದರಿಂದ ಕೇಂದ್ರ ಕ್ವಿಂಟಾಲ್ ವೊಂದಕ್ಕೆ 2400 ರೂ. ನಿಗದಿಪಡಿಸಿದ್ದು, ಮೆಕ್ಕೆಜೋಳ ಬಳಸುವ ಕಾರ್ಖಾನೆಗಳು, ಎಥನಾಲ್ ತಯಾರಕರೊಂದಿಗೆ ಚರ್ಚೆ ನಡೆಸಿ, 40 ಲಕ್ಷ ಮೆ.ಟನ್ ಮೆಕ್ಕೆಜೋಳ ಖರೀದಿಗೆ ಅನುವು ಮಾಡಿಕೊಡಲಾಯಿತು ಎಂದರು.

 

ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ಕೃಷಿಯಲ್ಲಿ ತೊಡಗಿಕೊಳ್ಳಬೇಕು. ಸ್ವಾತಂತ್ರ್ಯಪೂರ್ವದಲ್ಲಿ ಶೇ.80 ರಷ್ಟು ಜನ ಕೃಷಿಯನ್ನು ಅವಲಂಬಿಸಿದ್ದರು. ಈಗ ಈ ಪ್ರತಿಶತ ಶೇ. 62 ಕ್ಕೆ ಇಳಿದಿದೆ. ಕೃಷಿಯಲ್ಲಿ ಉತ್ಪಾದನೋತ್ತರ ಕಾರ್ಯಗಳನ್ನು ಕೈಗೊಂಡಾಗ ಮಾತ್ರ ಕೃಷಿ ಲಾಭದಾಯಕವಾಗುತ್ತದೆ ಎಂದರು. ಭಾರತ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿದೆ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳಲ್ಲಿ ಬಹಳಷ್ಟು ಈಡೇರಿಸಲಾಗಿದ್ದು, ಅವುಗಳಲ್ಲಿ ಜಾರಿಯಾಗಿರುವ ಕೃಷಿ ಭಾಗ್ಯ ಯೋಜನೆ ಪ್ರಮುಖವಾಗಿದೆ. ಬಿಜೆಪಿ ತನ್ ಅಧಿಕಾರಾವಧಿಯಲ್ಲಿ ಈ ಯೋಜನೆಯನ್ನು ಸ್ಥಗಿತಗೊಳಿಸಿತ್ತು.

 

ನಮ್ಮ ಸರ್ಕಾರ ಮತ್ತೊಮ್ಮೆ ಕೃಷಿ ಭಾಗ್ಯ ಯೋಜನೆಯನ್ನು ಮರುಸ್ಥಾಪಿಸಿದೆ. ಸುಮಾರು 200 ಕೋಟಿ ಅನುದಾನವನ್ನು ಇದಕ್ಕಾಗಿ ನೀಡಲಾಗಿದೆ. ನಮ್ಮ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳಲ್ಲಿ ಮಹಿಳೆಯರಿಗಾಗಿ ಮಾಡಿದ ಶಕ್ತಿ, ಗೃಹಜ್ಯೋತಿ ಹಾಗೂ ಗೃಹಲಕ್ಷ್ಮಿ ಯೋಜನೆಗಳು ಅತ್ಯಂತ ಪ್ರಮುಖವೆನಿಸಿವೆ. ಅಲ್ಲದೇ ಅನ್ನಭಾಗ್ಯ ಯೋಜನೆಗಳಿಂದ ಬಡವರು ಉಳಿತಾಯದಲ್ಲಿ ಹೂಡಿಕೆ ಮಾಡಬಹುದಾಗಿದೆ. ಎಲ್ಲರಿಗೂ ಸಮಾನ ಅವಕಾಶವನ್ನು ನೀಡುವ ಉದ್ದೇಶದಿಂದ ಈ ಜನಪರ ಯೋಜನೆಗಳನ್ನು ಜಾರಿಗೊಳಿಸಲಾಗಿದೆ ಎಂದರು.

 

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಸರ್ಕಾರ ಈ ಹಿಂದೆ ಮನರೇಗಾ ಯೋಜನೆಯನ್ನು ಜಾರಿಗೊಳಿಸಿತ್ತು. ಇದರಡಿ ಮಹಿಳೆಯರು, ಅದಿವಾಸಿಗಳು, ಕಾರ್ಮಿಕರಿಗೆ ಉದ್ಯೋಗ ನೀಡುವ ಉತ್ತಮ ಯೋಜನೆಯಾಗಿದ್ದು, ಗ್ರಾಮಸಭೆಗಳಲ್ಲಿ ಕಾಮಗಾರಿಗಳು ನಿರ್ಧಾರವಾಗುತ್ತಿತ್ತು. ಆದರೆ ಈ ಅಧಿಕಾರವು ಈಗ ಕೇಂದ್ರ ಸರ್ಕಾರದ ಕೈಯಲ್ಲಿದ್ದು, ಅವರ ನಿರ್ಧರಿಸಿದಂತೆ ಕಾಮಗಾರಿ, ಅನುದಾನ ನೀಡಲಾಗುತ್ತದೆ.

 ರಾಜ್ಯದ ರೈತರು ಮನರೇಗಾ ಯೋಜನೆಯನ್ನು ಮರುಸ್ಥಾಪನೆ ಮಾಡಬೇಕು ಮತ್ತು ವಿಬಿ ಜಿ ರಾಮ್ ಜಿ ಯೋಜನೆಯನ್ನು ತಿರಸ್ಕರಿಸಬೇಕು ಎಂದು ಮುಖ್ಯಮಂತ್ರಿ ಮನವಿ ಮಾಡಿದ್ದಾರೆ. ಹಿಂದಿನಂತೆ, ಕೇಂದ್ರವು ಕಾರ್ಮಿಕರ ವೇತನವನ್ನು 100% ಪೂರ್ತಿಯಾಗಿ ನೀಡುತ್ತಿದ್ದರೂ, ಈಗ ಕೇವಲ 60% ಅನುದಾನ ನೀಡುತ್ತದೆ ಮತ್ತು ಉಳಿದ 40% ರಾಜ್ಯ ಸರ್ಕಾರದ ಭಾರವಾಗಿದೆ. ಮನರೇಗಾ ಯೋಜನೆಯ 100 ದಿನದ ಕೆಲಸದ ಖಾತರಿಯು ಈಗ ಇಲ್ಲ, ಮತ್ತು ಮಹಾತ್ಮ ಗಾಂಧೀಜಿ ಹೆಸರನ್ನು ಯೋಜನೆಯಿಂದ ತೆಗೆದುಹಾಕಲಾಗಿದೆ. ಎಂದರು


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

22 hours ago

   
Image 1
Image 1
ದಾವಣಗೆರೆ

"ಅಧಿಕಾರ ಹಂಚಿಕೆ ಒಪ್ಪಂದವಾಗಿದೆ – ಡಿಕೆಶಿ ಹೇಳಿದರೆ ಪ್ರಾಣ ಕೊಡೋದಕ್ಕೂ ಸಿದ್ದ: ಶಾಸಕ ಶಿವಗಂಗಾ ಬಸವರಾಜ್

ದಾವಣಗೆರೆ: ರಾಜ್ಯ ಕಾಂಗ್ರೆಸ್ ರಾಜಕೀಯದಲ್ಲಿ ಅಧಿಕಾರ ಹಂಚಿಕೆ ವಿಚ... ಓದನ್ನು ಮುಂದುವರಿಸಿ


Edited by: ಬಾನು

14 hours ago

   
Image 1
ಚಿಕ್ಕಬಳ್ಳಾಪುರ

ಗೌರಿಬಿದನೂರು: ಖಾಸಗಿ ಶಾಲೆಯಲ್ಲಿ ವಿದ್ಯಾರ್ಥಿ ಮೇಲೆ ಶಿಕ್ಷಕರ ಹಲ್ಲೆ ಎಂಟನೇ ತರಗತಿಯ ವಿದ್ಯಾರ್ಥಿ ಪ್ರಜ್ಞೆ ಕಳೆದುಕೊಂಡು ಖಾಸಗಿ ಆಸ್ಪತ್ರೆಗೆ ದಾಖಲು

ಚಿಕ್ಕಬಳ್ಳಾಪುರ : ಗೌರಿಬಿದನೂರು ನಗರದ ಖಾಸಗಿ ವಿದ್ಯಾನಿಧಿ ಶಾಲೆಯ... ಓದನ್ನು ಮುಂದುವರಿಸಿ


Edited by: ಬಾನು

14 hours ago

   
Image 1
ಚಿಕ್ಕಮಗಳೂರು

ಜಾತ್ರೆಗೆ ಕಡಿಯಲು ತಂದ ಆಡು ರೈತನ ಪಾಲಿಗೆ ವರ: ಒಂದೇ ಬಾರಿ 6 ಮರಿಗೆ ಜನ್ಮ

ಚಿಕ್ಕಮಗಳೂರು: ಚಂದ್ರಕಟ್ಟೆ ಪ್ರದೇಶದಲ್ಲಿ ಅಪರೂಪದ ಘಟನೆ ನಡೆದಿದೆ... ಓದನ್ನು ಮುಂದುವರಿಸಿ


Edited by: ಬಾನು

14 hours ago

   
Image 1
ಬೆಂಗಳೂರು ನಗರ

ಪ್ರೇಯಸಿಯ ಖಾಸಗಿ ಕ್ಷಣಗಳ ಸೆರೆ: “ಇದು ಪ್ರೇಮವಲ್ಲ, ಅಪರಾಧ” ಎಂದ ಹೈಕೋರ್ಟ್

ಬೆಂಗಳೂರು: ಪ್ರೇಮ ಸಂಬಂಧದ ನೆಪದಲ್ಲಿ ಪ್ರೇಯಸಿಯ ಖಾಸಗಿ ಕ್ಷಣಗಳನ್... ಓದನ್ನು ಮುಂದುವರಿಸಿ


Edited by: ಬಾನು

14 hours ago

   
Image 1
ಬೆಂಗಳೂರು ನಗರ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಭರ್ಜರಿ ದಾಳಿ ₹2.97 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂ... ಓದನ್ನು ಮುಂದುವರಿಸಿ


Edited by: ಬಾನು

14 hours ago

   
Image 1
ಬೆಂಗಳೂರು ನಗರ

ಜಿಬಿಎ–ಬಿಬಿಎಂಪಿ ಚುನಾವಣೆ ಪೂರ್ವ ತಯಾರಿ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ವಿಶೇಷ ಸಭೆ

ಬೆಂಗಳೂರು: ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಗ್ರೇಟರ್... ಓದನ್ನು ಮುಂದುವರಿಸಿ


Edited by: ಬಾನು

14 hours ago

   
Image 1
ಬೆಂಗಳೂರು ನಗರ

ಮೆಟ್ರೋ ದರ ಏರಿಕೆ ವಿಚಾರ ರಾಜ್ಯ ಸರ್ಕಾರದ ವಿರುದ್ಧ ಎಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

ಬೆಂಗಳೂರು: ಮೆಟ್ರೋ ದರ ಏರಿಕೆ ವಿಷಯದಲ್ಲಿ ರಾಜ್ಯ ಸರ್ಕಾರದ ವಿರುದ... ಓದನ್ನು ಮುಂದುವರಿಸಿ


Edited by: ಬಾನು

14 hours ago

   
Image 1
ಬೆಂಗಳೂರು ನಗರ

ಬೆಂಗಳೂರು ಐಟಿ ಉದ್ಯೋಗಿಯ ಅಳಲು: ₹50,000 ಬಾಡಿಗೆ, ಆದರೆ ಐಷಾರಾಮಿ ಸೌಲಭ್ಯ ಬಳಸಲು ಸಮಯವಿಲ್ಲ

ಬೆಂಗಳೂರು: ಬೆಂಗಳೂರಿನಲ್ಲಿ ಮನೆಗಳ ಬಾಡಿಗೆ ದಿನದಿಂದ ದಿನಕ್ಕೆ ಏರ... ಓದನ್ನು ಮುಂದುವರಿಸಿ


Edited by: ಬಾನು

19 hours ago

   
Image 1
ಬೆಂಗಳೂರು ನಗರ

“ಮಹಾತ್ಮರನ್ನೇ ಬಂಡವಾಳ ಮಾಡಿಕೊಂಡಿದ್ದಾರೆ ಬಿಜೆಪಿ ಮತ್ತು ಕಾಂಗ್ರೆಸ್” – ಮುಖ್ಯಮಂತ್ರಿ ಚಂದ್ರು ಆಕ್ರೋಶ

ಪ್ರತಿ ದಿನ ರಾಜ್ಯದ ಪ್ರಮುಖ ದಿನಪತ್ರಿಕೆಗಳ ಮುಖಪುಟಗಳಲ್ಲಿ ವಿಧಿ ಜಿ ರಾಮ್ ಜಿ ಯೋಜನೆಯ... ಓದನ್ನು ಮುಂದುವರಿಸಿ


Edited by: ಬಾನು

22 hours ago

   
Image 1
ಚಿಕ್ಕಬಳ್ಳಾಪುರ

ಗುಡಿಬಂಡಾ

ಚರಂಡಿ ಸ್ವಚ್ಛತೆ ಇಲ್ಲದೆ ನರಳುತ್ತಿರುವ ಗ್ರಾಮಸ್ಥರು – ಅಂಗನವಾಡಿ, ವಿದ್ಯುತ್ ಸಮಸ್ಯೆಗಳಿಗೂ ಉತ್ತರ ಇಲ್ಲ.

ಗುಡಿಬಂಡೆ: ಬೀಚಗಾನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1