ಬೆಂಗಳೂರು ಮುಖ್ಯರಸ್ತೆಗಳಲ್ಲಿ ಬೀದಿ ವ್ಯಾಪಾರ ನಿಷೇಧ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ನಗರದ ಪಾದಚಾರಿ ಮಾರ್ಗಗಳನ್ನು ಸುಧಾರಿಸಲು ಹೊಸ ನೀತಿ ರೂಪಿಸಲು ತೀರ್ಮಾನಿಸಲಾಗಿದ್ದು, ಮುಖ್ಯ ಹಾಗೂ ಉಪಮುಖ್ಯ ರಸ್ತೆಗಳ ಮೇಲೆ ಬೀದಿ ವ್ಯಾಪಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

 

ವಿಧಾನಸೌಧದಲ್ಲಿ ಜಿಬಿಎ ಪಾಲಿಕೆಗಳ ಬಜೆಟ್ ಸಿದ್ಧತೆ ಹಾಗೂ ಕಾರ್ಯಕಾರಿ ಸಭೆಯ ಬಳಿಕ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. ಸಭೆಯಲ್ಲಿ ಜಿಬಿಎ ವ್ಯಾಪ್ತಿಯ ಎಲ್ಲಾ ಶಾಸಕರು, ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸೇರಿದಂತೆ ಹಲವು ಜನಪ್ರತಿನಿಧಿಗಳು ಹಾಗೂ ಪೊಲೀಸ್, ಬೆಸ್ಕಾಂ, ಬಿಎಂಆರ್‌ಸಿಎಲ್, ಬಿಡಬ್ಲ್ಯೂಎಸ್‌ಎಸ್‌ಬಿ, ಬಿಡಿಎ ಅಧಿಕಾರಿಗಳು ಭಾಗವಹಿಸಿದ್ದರು.

 

ಐದು ಪಾಲಿಕೆಗಳು ಪ್ರತ್ಯೇಕವಾಗಿ ಬಜೆಟ್ ತಯಾರಿಸಿಕೊಂಡಿದ್ದು, ಶಾಸಕರು ವಾರ್ಡ್‌ವಾರು ಅನುದಾನ ನೀಡುವಂತೆ ಮನವಿ ಮಾಡಿದ್ದಾರೆ. ಪಾದಚಾರಿಗಳಿಗೆ ಅನುಕೂಲವಾಗುವಂತೆ ಫುಟ್‌ಪಾತ್‌ಗಳ ಮೇಲಿನ ಒತ್ತುವರಿಯನ್ನು ತೆರವುಗೊಳಿಸಿ, ಬೀದಿ ವ್ಯಾಪಾರಿಗಳಿಗೆ ಪ್ರತ್ಯೇಕ ಸ್ಥಳಗಳನ್ನು ಒದಗಿಸುವ ಯೋಜನೆ ರೂಪಿಸಲಾಗುತ್ತಿದೆ. ಬೀದಿ ವ್ಯಾಪಾರಕ್ಕೆ ನಿರ್ದಿಷ್ಟ ರಸ್ತೆಗಳನ್ನು ಗುರುತಿಸಲಾಗುವುದು ಎಂದು ತಿಳಿಸಿದ್ದಾರೆ.

 

ಹಗಲು ವ್ಯಾಪಾರ ಮಾಡಿ ರಾತ್ರಿ ವೇಳೆ ಗಾಡಿಗಳನ್ನು ರಸ್ತೆಬದಿಯಲ್ಲಿ ಬಿಟ್ಟುಹೋಗುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಈಗಾಗಲೇ 60 ಸಾವಿರ ಬೀದಿ ವ್ಯಾಪಾರಿಗಳು ನೋಂದಣಿ ಮಾಡಿಕೊಂಡಿದ್ದು, ಗುರುತಿನ ಚೀಟಿ ಹೊಂದಿರುವವರಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ ನೀಡಲಾಗುತ್ತದೆ ಎಂದು ಹೇಳಿದರು.

 

ಅನಧಿಕೃತ ಫ್ಲೆಕ್ಸ್‌ಗಳ ನಿಯಂತ್ರಣಕ್ಕೂ ಕಠಿಣ ಕ್ರಮ ಕೈಗೊಳ್ಳಲಾಗಿದ್ದು, ಪ್ರತಿ ಫ್ಲೆಕ್ಸ್‌ಗೆ ₹50 ಸಾವಿರದಿಂದ ₹1 ಲಕ್ಷದವರೆಗೆ ದಂಡ ವಿಧಿಸಲು ಸೂಚಿಸಲಾಗಿದೆ. ಸರ್ಕಾರ ನಿಗದಿಪಡಿಸಿದ ಸ್ಥಳಗಳಲ್ಲಿ ಮಾತ್ರ ಅನುಮತಿ ಪಡೆದು ಜಾಹೀರಾತು ಹಾಕಿಕೊಳ್ಳಬೇಕು ಎಂದು ತಿಳಿಸಿದರು.

 

ಪಾಲಿಕೆ ವ್ಯಾಪ್ತಿಯ ಉದ್ಯಾನಗಳ ಸಮಯ ನಿಗದಿ, ರಸ್ತೆಗಳಲ್ಲಿ ವಾರಗಳ ಕಾಲ ನಿಲ್ಲಿಸಿದ ಹಳೆಯ ವಾಹನಗಳ ತೆರವು ಸೇರಿದಂತೆ ಹಲವು ವಿಷಯಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ನಿಯಮ ಉಲ್ಲಂಘಿಸಿ ನಿಲುಗಡೆ ಮಾಡಿದ ವಾಹನಗಳನ್ನು ಟೋಯಿಂಗ್ ಮಾಡಲಾಗುವುದು ಎಂದರು. ವಾರ್ಡ್‌ಗಳಿಗೆ ಹೆಚ್ಚಿನ ಅನುದಾನ ಬೇಡಿಕೆ ಬಂದಿದ್ದು, ಅದರ ಬಗ್ಗೆ ಪರಿಶೀಲನೆ ನಡೆಯಲಿದೆ ಎಂದು ಶಿವಕುಮಾರ್ ಹೇಳಿದರು.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

6 hours ago

   
Image 1
Image 1
ಉತ್ತರಕನ್ನಡ

ಕಾರವಾರ

ಬಡವರ ಹತ್ತಿರ ಸುಲಿಗೆ ಮಾಡಿದ್ರೆ ಹುಷಾರ್: ವೈದ್ಯರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ ಶಾಸಕ ಆರ್ವಿ ದೇಶಪಾಂಡೆ

ಕಾರವಾರ: ಉತ್ತರ ಕನ್ನಡ ಜಿಲ್ಲೆ, ದಾಂಡೇಲಿ ತಾಲ್ಲೂಕಿನಲ್ಲಿ ನಡೆದ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಕೊಪ್ಪಳ

ಎಲ್‌ಪಿಜಿ ಕೊರತೆಗೆ ಮೋದಿ–ಟ್ರಂಪ್ ಸ್ನೇಹ ಜವಾಬ್ದಾರಿ: ಎನ್.ಎಸ್. ಬೋಸರಾಜು ಟೀಕೆ

ಕೊಪ್ಪಳ: ಎಲ್‌ಪಿಜಿ ಸಿಲಿಂಡರ್ ಕೊರತೆಯ ಪರಿಣಾಮಕ್ಕಾಗಿ ಕೇಂದ್ರ ಸರ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ದಾವಣಗೆರೆ

ಶಾಮನೂರು ಕುಟುಂಬ ರಾಜಕೀಯ ಪರಂಪರೆ ಮುಂದುವರಿದು: ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ

ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಶಾಮನೂರು... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಕಲ್ಬುರ್ಗಿ

ಸಚಿವ ಖರ್ಗೆ ಮನಸ್ಸು ತೋರದ ಕಾರಣ ಏರ್‌ಪೋರ್ಟ್ ಸ್ಥಗಿತ - ವಿಜಯೇಂದ್ರ ಟೀಕೆ

ಕಲಬುರಗಿ: ಕಲಬುರಗಿ ಏರ್‌ಪೋರ್ಟ್ ತಕ್ಷಣ ಕಾರ್ಯಾರಂಭಗೊಳ್ಳಬಹುದಾಗಿ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ತುಮಕೂರು

ಕೋತಿ ಕಿತಾಪತಿ–ಹೆಜ್ಜೇನು ದಾಳಿ: ತುಮಕೂರಿನಲ್ಲಿ : 65 ವರ್ಷದ ವ್ಯಕ್ತಿ ಸಾವು

ತುಮಕೂರು: ತುಮಕೂರಿನ ಮಾರುತಿ ನಗರದಲ್ಲಿ ಕೋತಿಯ ಕಿತಾಪತಿಯಿಂದ ಉಂಟ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಬೆಂಗಳೂರು ನಗರ

700 ಫ್ಲಾಟ್‌ಗಳಲ್ಲಿ 1.73 ಕೋಟಿ ರೂ. ವಂಚನೆ ಆರೋಪ 18 ಮಂದಿ ವಿರುದ್ಧ FIR

ಬೆಂಗಳೂರು: ಉತ್ತರ ತಾಲ್ಲೂಕಿನ ಶೆಟ್ಟಿಹಳ್ಳಿಯ ಪ್ರತಿಷ್ಠಿತ ಪ್ರಿನ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಬೆಂಗಳೂರು ನಗರ

ಕೆಂಪೇಗೌಡ ಏರ್‌ಪೋರ್ಟ್ ಸತತ ಸಾಧನೆ : ವಿಶ್ವ ಮಟ್ಟದಲ್ಲಿ ಬೆಂಗಳೂರು ಏರ್‌ಪೋರ್ಟ್ ಟಾಪ್!

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಕೆಂಪೇಗೌ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಬೆಂಗಳೂರು ನಗರ

ವಾರ್ಡ್ ಮೀಸಲಾತಿ ಗೊಂದಲ: ಟಿ.ಎ. ಶರವಣ ಸಕ್ರೀಯ ಆಕ್ಷೇಪ

ಬೆಂಗಳೂರು: ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಐದು ನಗರ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಬೆಂಗಳೂರು ನಗರ

ರಸ್ತೆಬದಿಯಲ್ಲಿ ವಾಹನ ನಿಲ್ಲಿಸಿದರೆ ಕ್ಷಮೆ ಇಲ್ಲ: ಡಿಕೆಶಿ ಎಚ್ಚರಿಕೆ

ಬೆಂಗಳೂರು: ನಗರದಲ್ಲಿ ರಸ್ತೆ ಬದಿಯಲ್ಲಿ ಹಳೆಯ ವಾಹನಗಳನ್ನು ನಿರ್ಲ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಬೆಂಗಳೂರು ನಗರ

ಸಿಲಿಂಡರ್ ಕೊರತೆ ಹೆಚ್ಚಳ: ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಪತ್ರ

ಬೆಂಗಳೂರು: ದೇಶದಾದ್ಯಂತ ಎಲ್‌ಪಿಜಿ ಸಿಲಿಂಡರ್ ಕೊರತೆ ಮುಂದುವರಿದ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1