ಬೀದಿ ನಾಯಿಯ ಅಟ್ಟಹಾಸ – 3 ವರ್ಷದ ಬಾಲಕಿ ಸೇರಿ ಐವರಿಗೆ ಗಾಯ, ಆತಂಕದಲ್ಲಿ ನಾಗರೀಕರು

ಕೂಡ್ಲಿಗಿ: ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದಲ್ಲಿ ಬೀದಿ ನಾಯಿಯ ಅಟ್ಟಹಾಸದಿಂದ 3 ವರ್ಷದ ಬಾಲಕಿ ಸೇರಿದಂತೆ ಐದು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಪಟ್ಟಣದ ಮೊದಲನೇ ವಾರ್ಡ್‌ನ ಬಸ್ ನಿಲ್ದಾಣದ ಹಿಂಭಾಗದಲ್ಲಿ ಈ ಘಟನೆ ಸಂಭವಿಸಿದ್ದು, ನಾಗರೀಕರಲ್ಲಿ ಭಾರೀ ಆತಂಕ ಉಂಟಾಗಿದೆ. ಗಾಯಾಳುಗಳು ಕೂಡಲೇ ಸಾರ್ವಜನಿಕ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದಾರೆ. ವೈದ್ಯರು ಅಗತ್ಯ ಚಿಕಿತ್ಸೆ ನೀಡಿ, ಲಸಿಕೆ ಹಾಗೂ ಮುನ್ನೆಚ್ಚರಿಕಾ ಸೂಚನೆಗಳನ್ನು ನೀಡಿದ್ದಾರೆ.

 

ಗಾಯಗೊಂಡವರಲ್ಲಿ ಶ್ರೀನಿವಾಸ್ ಅವರ ಮೂರು ವರ್ಷದ ಮೊಮ್ಮಗಳು ಶ್ರೀನಿಧಿ ಕೂಡ ಇದ್ದಾಳೆ. ಮನೆ ಅಂಗಳದಲ್ಲಿ ಆಟವಾಡುತ್ತಿದ್ದ ವೇಳೆ ಬೀದಿ ನಾಯಿ ಏಕಾಏಕಿ ದಾಳಿ ನಡೆಸಿ, ಬಾಲಕಿಯ ಕುತ್ತಿಗೆ ಹಾಗೂ ಸೊಂಟ ಭಾಗಕ್ಕೆ ತೀವ್ರವಾಗಿ ಕಚ್ಚಿ ಗಾಯಗೊಳಿಸಿದೆ. ಬಾಲಕಿಯ ಕಿರುಚಾಟ ಕೇಳಿ ಪೋಷಕರು ಹಾಗೂ ನೆರೆದವರು ಓಡಿ ಬಂದು, ನಾಯಿಯಿಂದ ಬಾಲಕಿಯನ್ನು ರಕ್ಷಿಸಿದ್ದಾರೆ. ಇದೇ ನಾಯಿ ಅದೇ ಪ್ರದೇಶದಲ್ಲಿ ಇನ್ನೂ ನಾಲ್ವರು ಮೇಲೆ ದಾಳಿ ನಡೆಸಿ ಗಾಯಗೊಳಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಬೆಳಿಗ್ಗೆಯಿಂದ ಸಂಜೆವರೆಗೆ ಯಾವುದೇ ಕಾರಣವಿಲ್ಲದೆ ಜನರ ಮೇಲೆ ದಾಳಿ ನಡೆಸಿರುವುದು ಆತಂಕ ಹೆಚ್ಚಿಸಿದೆ. ಈ ಘಟನೆಗೆ ಮೊದಲು ಈ ನಾಯಿ ಯಾರ ಮೇಲೂ ದಾಳಿ ನಡೆಸಿರಲಿಲ್ಲ ಎಂದು ನಿವಾಸಿಗಳು ಹೇಳಿದ್ದಾರೆ.

 

ಘಟನೆಯಿಂದ ಮೊದಲನೇ ವಾರ್ಡ್ ಮಾತ್ರವಲ್ಲ, ಸಂಪೂರ್ಣ ಪಟ್ಟಣದ ಜನರು ಬೆಚ್ಚಿಬಿದ್ದಿದ್ದು, ಭಯದ ವಾತಾವರಣ ನಿರ್ಮಾಣವಾಗಿದೆ. ತಕ್ಷಣವೇ ಪಟ್ಟಣ ಪಂಚಾಯಿತಿ ಅಧಿಕಾರಿಗಳು ದಾಳಿ ನಡೆಸಿದ ನಾಯಿಯನ್ನು ಸೆರೆಹಿಡಿದು, ಅದರ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸಬೇಕು. ಅಗತ್ಯ ಚಿಕಿತ್ಸೆ ನೀಡಿ, ಜನವಸತಿ ಪ್ರದೇಶದಿಂದ ದೂರ ಸ್ಥಳಾಂತರಿಸಬೇಕು ಎಂದು ನಾಗರೀಕರು ಆಗ್ರಹಿಸಿದ್ದಾರೆ. ಇದೇ ವೇಳೆ ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಅವುಗಳನ್ನು ಕೂಡಲೇ ನಿಯಂತ್ರಣಕ್ಕೆ ತರಬೇಕು ಎಂದು ವಂದೇ ಮಾತರಂ ಜಾಗೃತಿ ವೇದಿಕೆ ಮುಖಂಡ ವಿ.ಜಿ. ವೃಷಭೇಂದ್ರ ಸೇರಿದಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

4 hours ago

   
Image 1
Image 1
ಮೈಸೂರು

ಮುಡಾ ಹಗರಣಕ್ಕೆ ಹೊಸ ತಿರುವು – ಹೈಕೋರ್ಟ್‌ಗೆ ಅರ್ಜಿ, ಮರುತನಿಖೆ ಬೇಡಿಕೆ!

ಮೈಸೂರು: ಮುಡಾ ಹಗರಣ ಪ್ರಕರಣದಲ್ಲಿ ಮತ್ತೆ ಮುಖ್ಯಮಂತ್ರಿ ಸಿದ್ದರಾ... ಓದನ್ನು ಮುಂದುವರಿಸಿ


Edited by: ಬಾನು

28 minutes ago

   
Image 1
ಚಿಕ್ಕಮಗಳೂರು

ನರಸಿಂಹರಾಜಪುರ

ಹೊಳೆಗೆ ಹಾರಿ ನರ್ಸ್ ಆತ್ಮಹತ್ಯೆ – ಕಾರಣ ತಿಳಿಯದ ದುರ್ಘಟನೆ

ಚಿಕ್ಕಮಗಳೂರು: ಜಿಲ್ಲೆಯ ನರಸಿಂಹರಾಜಪುರ ತಾಲ್ಲೂಕಿನ ಮುತ್ತಿನಕೊಪ್... ಓದನ್ನು ಮುಂದುವರಿಸಿ


Edited by: ಬಾನು

34 minutes ago

   
Image 1
ಬೆಂಗಳೂರು ನಗರ

ಹಸುಗಳ ಶೆಡ್‌ಗೆ ಬೆಂಕಿ – 6 ಹಸುಗಳ ದಾರುಣ ಸಾವು, ವಾಹನಗಳಿಗೂ ಬೆಂಕಿ ಹಾನಿ

ಬೆಂಗಳೂರು: ನಗರದ ಡಿಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಶಾಂಪುರ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಬೆಂಗಳೂರು ನಗರ

ಹೆಲ್ಮೆಟ್ ಧರಿಸಿದ ಕಳ್ಳನ ದಾಳಿ – ಮನೆಗೆ ನುಗ್ಗಿ ಗ್ಯಾಸ್ ಸಿಲಿಂಡರ್ ಕಳವು!

ಬೆಂಗಳೂರು: ನಗರದ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿಚಿತ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಬಾಗಲಕೋಟೆ

ಉಪಚುನಾವಣೆ ಕಾವು ತಾರಕ್ಕೇರಿತು – ಇಂದು ಪ್ರಚಾರಕ್ಕೆ ತೆರೆ, ಅಂತಿಮ ಕಸರತ್ತು ಜೋರಾಗಿ!

ದಾವಣಗೆರೆ/ಬಾಗಲಕೋಟೆ: ಏಪ್ರಿಲ್ 9ರಂದು ನಡೆಯಲಿರುವ ದಾವಣಗೆರೆ ದಕ್... ಓದನ್ನು ಮುಂದುವರಿಸಿ


Edited by: ಬಾನು

7 hours ago

   
Image 1
ಬೆಂಗಳೂರು ನಗರ

ಎಲ್‌ಪಿಜಿ ಅಭಾವದ ಹೊಡೆತ – ಸಂಕಷ್ಟದಲ್ಲಿ ಆಟೋ ಚಾಲಕರು, ಸರ್ಕಾರಕ್ಕೆ ಬಂದ್ ಎಚ್ಚರಿಕೆ

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಇರಾನ್–ಇಸ್ರೇಲ್ ಸ... ಓದನ್ನು ಮುಂದುವರಿಸಿ


Edited by: ಬಾನು

7 hours ago

   
Image 1
ಬೀದರ್

ವೇಗದ ಕಾರಿನ ಡಿಕ್ಕಿ: 9 ವರ್ಷದ ಬಾಲಕ ಸ್ಥಳದಲ್ಲೇ ಸಾವು

ಬೀದರ್: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕ... ಓದನ್ನು ಮುಂದುವರಿಸಿ


Edited by: ಬಾನು

17 hours ago

   
Image 1
ದಾವಣಗೆರೆ

“ನನ್ನನ್ನು ಬೈದು ಮತ ಕೇಳುವ ದಾರಿದ್ರ್ಯ ಬಿಜೆಪಿಗೆ” – ಸಿಎಂ ಸಿದ್ದರಾಮಯ್ಯ ಕಿಡಿ

ದಾವಣಗೆರೆ: ನಾವು ಮಾಡಿದ ಅಭಿವೃದ್ಧಿ ಮತ್ತು ಜನಪರ ಕೆಲಸಗಳ ಆಧಾರದಲ... ಓದನ್ನು ಮುಂದುವರಿಸಿ


Edited by: ಬಾನು

17 hours ago

   
Image 1
ಬಾಗಲಕೋಟೆ

“ಅರಳು ಮರಳು ಆರೋಪ ಬೇಡ” –“ನಾನು ಯಾರಿಗೆ ವಿಶ್ವಾಸದ್ರೋಹ ಮಾಡಿದೆ?” – ಯಡಿಯೂರಪ್ಪಗೆ ಸಿಎಂ ಸವಾಲು

ಬಾಗಲಕೋಟೆ: ಯಡಿಯೂರಪ್ಪ ಅವರ ಆರೋಪಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ... ಓದನ್ನು ಮುಂದುವರಿಸಿ


Edited by: ಬಾನು

17 hours ago

   
Image 1
ಹಾವೇರಿ

ಮನೆಯ ಮುಂದೆ ಆಟವಾಡುತ್ತಿದ್ದ 2 ವರ್ಷದ ಮಗು ಮೇಲೆ ಟ್ರ್ಯಾಕ್ಟರ್ ಹರಿದು ಸಾವು

ಹಾವೇರಿ: ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಹಳೆಬಂಕಾಪುರ ಗ್ರಾಮದಲ್ಲಿ... ಓದನ್ನು ಮುಂದುವರಿಸಿ


Edited by: ಬಾನು

19 hours ago

   
Image 1