ಬಿಸಿಲಿನ ತಾಪಕ್ಕೆ ಬ್ರೇಕ್: 9 ಜಿಲ್ಲೆಗಳಲ್ಲಿ ಕಚೇರಿ ಸಮಯ ಬದಲಾವಣೆ

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಬಿಸಿಲಿನ ತಾಪಮಾನವನ್ನು ಮನಗಂಡು ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕಿತ್ತೂರು ಹಾಗೂ ಕಲ್ಯಾಣ ಕರ್ನಾಟಕ ಭಾಗದ 9 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಸಮಯವನ್ನು ತಾತ್ಕಾಲಿಕವಾಗಿ ಬದಲಿಸಿ ಆದೇಶ ಹೊರಡಿಸಲಾಗಿದೆ. 2026ರ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಪ್ರಸ್ತುತ ವೇಳಾಪಟ್ಟಿಗೆ ಬದಲಾಗಿ ಬೆಳಿಗ್ಗೆ 8.00ರಿಂದ ಮಧ್ಯಾಹ್ನ 1.30ರವರೆಗೆ ಕಚೇರಿಗಳು ಕಾರ್ಯನಿರ್ವಹಿಸಲಿವೆ. ಈ ಕ್ರಮವನ್ನು ಸರ್ಕಾರಿ ನೌಕರರು ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಜಾರಿಗೆ ತರಲಾಗಿದೆ ಎಂದು ಸರ್ಕಾರ ತಿಳಿಸಿದೆ.

 

ಬೆಳಗಾವಿ ವಿಭಾಗದ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳು ಹಾಗೂ ಕಲಬುರಗಿ ವಿಭಾಗದ ಬೀದರ್, ರಾಯಚೂರು, ಯಾದಗಿರಿ, ಕೊಪ್ಪಳ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಈ ಹೊಸ ಸಮಯ ಅನ್ವಯವಾಗಲಿದೆ. ಹೆಚ್ಚುತ್ತಿರುವ ಉಷ್ಣತೆಯಿಂದ ನೌಕರರು ಕರ್ತವ್ಯ ನಿರ್ವಹಿಸಲು ಎದುರಿಸುತ್ತಿರುವ ತೊಂದರೆಗಳನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ. ಬದಲಾದ ವೇಳಾಪಟ್ಟಿಯಲ್ಲಿಯೇ ಯಾವುದೇ ಅಡಚಣೆ ಇಲ್ಲದೆ ಸೇವೆ ನೀಡುವಂತೆ ನೌಕರರಿಗೆ ಸೂಚಿಸಲಾಗಿದೆ. ತುರ್ತು ಪರಿಸ್ಥಿತಿಗಳಲ್ಲಿ ಜಿಲ್ಲಾಧಿಕಾರಿ ಅಥವಾ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ನಿರ್ದೇಶನದ ಮೇರೆಗೆ ಸಮಯದ ಮಿತಿಯಿಲ್ಲದೆ ಕರ್ತವ್ಯ ನಿರ್ವಹಿಸಬೇಕೆಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

3 hours ago

   
Image 1
ಉತ್ತರಕನ್ನಡ

ಕಾರವಾರ

ಸಿಲಿಂಡರ್ ಸಿಗದೆ ಸಂಕಷ್ಟ: ಅರಣ್ಯಕ್ಕೆ ದೌಡಾಯಿಸಿದ ಜನ

ಕಾರವಾರ: ಗ್ಯಾಸ್ ಸಿಲಿಂಡರ್ ಕೊರತೆಯಿಂದ ಉತ್ತರ ಕನ್ನಡ ಜಿಲ್ಲೆಯ ಗ... ಓದನ್ನು ಮುಂದುವರಿಸಿ


Edited by: ಬಾನು

2 hours ago

   
Image 1
ರಾಮನಗರ

ಸಂಗಮ ವನ್ಯಜೀವಿಧಾಮದಿಂದ ಆನೆಗಳ ಸಂಚಾರ?: ಜನರಲ್ಲಿ ಆತಂಕ

ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ತಾಲೂಕಿನ ಕೆಲ ಭಾಗಗ... ಓದನ್ನು ಮುಂದುವರಿಸಿ


Edited by: ಬಾನು

2 hours ago

   
Image 1
ಬೆಂಗಳೂರು ನಗರ

“ಬೂಟ್ ನೆಕ್ಕುವ ಸಂಸ್ಕೃತಿ ಇದೆಯಾ?”: ಬಿಜೆಪಿ ವಿರುದ್ಧ ಸೋಮಶೇಖರ್ ಪ್ರಶ್ನೆ

ಬೆಂಗಳೂರು: ಬಿಜೆಪಿ ಪಕ್ಷದಿಂದ ಉಚ್ಚಾಟನೆಯಾದ ಶಾಸಕ ಎಸ್.ಟಿ. ಸೋಮಶ... ಓದನ್ನು ಮುಂದುವರಿಸಿ


Edited by: ಬಾನು

3 hours ago

   
Image 1
ಬೆಂಗಳೂರು ನಗರ

ವಿದ್ಯುತ್ ದರ ಏರಿಕೆ: ಏಪ್ರಿಲ್ 1ರಿಂದ ಹೊಸ ದರ ಜಾರಿ: ಬಿಲ್ ಹೆಚ್ಚಳ ಶಾಕ್

ಬೆಂಗಳೂರು: ಹೊಸ ಆರ್ಥಿಕ ವರ್ಷದ ಆರಂಭದಲ್ಲೇ ರಾಜ್ಯದ ವಾಣಿಜ್ಯ ಹಾಗ... ಓದನ್ನು ಮುಂದುವರಿಸಿ


Edited by: ಬಾನು

3 hours ago

   
Image 1
ಮೈಸೂರು

ದಾಸವಾಳ ಹೂ ನುಂಗಿ ಶಿಶು ಸಾವು: ಮೈಸೂರಿನಲ್ಲಿ ಮನಕಲಕುವ ಘಟನೆ

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ದೊಡ್ಡ ಹೆಜ್ಜೂರು ಗ್ರಾಮದಲ್... ಓದನ್ನು ಮುಂದುವರಿಸಿ


Edited by: ಬಾನು

3 hours ago

   
Image 1
ಧಾರವಾಡ

ಜಿಮ್ ಟ್ರೈನರ್ ವಿರುದ್ಧ ಅಸಭ್ಯ ವರ್ತನೆ ಆರೋಪ: ಯುವತಿಯರೊಂದಿಗೆ ದುರ್ವರ್ತನೆ?: ಜಿಮ್‌ಗೆ ಬೀಗ ಹಾಕಿ ಆಕ್ರೋಶ

ಧಾರವಾಡ: ಯುವತಿಯರೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆಂಬ ಆರೋಪದ... ಓದನ್ನು ಮುಂದುವರಿಸಿ


Edited by: ಬಾನು

3 hours ago

   
Image 1
ಬೀದರ್

ಜಮೀನಿನಲ್ಲಿ ಕೆಲಸ ಮಾಡುವಾಗ ಸಿಡಿಲು : ಯುವ ರೈತನ ಸಾವು

ಬೀದರ್: ಕೃಷಿ ಕೆಲಸಕ್ಕಾಗಿ ಜಮೀನಿಗೆ ತೆರಳಿದ್ದ ಯುವ ರೈತ ಸಿಡಿಲಿಗ... ಓದನ್ನು ಮುಂದುವರಿಸಿ


Edited by: ಬಾನು

3 hours ago

   
Image 1
ಮಂಡ್ಯ

ಹಿಂದಿ ಹೇರಿಕೆ ವಿರೋಧ: “ಕನ್ನಡಕ್ಕೇ ಮೊದಲ ಆದ್ಯತೆ”: ಸಕ್ಕರೆನಾಡಿನಲ್ಲಿ ಸಂಭ್ರಮ

ಮಂಡ್ಯ: ರಾಜ್ಯ ಸರ್ಕಾರದ ಹಿಂದಿ ಹೇರಿಕೆ ವಿರೋಧಿ ನಿರ್ಧಾರಕ್ಕೆ ಸಕ... ಓದನ್ನು ಮುಂದುವರಿಸಿ


Edited by: ಬಾನು

3 hours ago

   
Image 1
ಧಾರವಾಡ

ಹುಬ್ಬಳ್ಳಿ

ಏಪ್ರಿಲ್ 1ರಿಂದ ಸ್ವಯಂ ಜನಗಣತಿ ಆರಂಭ: ಸಾರ್ವಜನಿಕರಿಗೆ ಪಾಲಿಕೆ ಮನವಿ

ಹುಬ್ಬಳ್ಳಿ: ದೇಶವ್ಯಾಪಿ ಜನಗಣತಿ ಪ್ರಕ್ರಿಯೆಯ ಭಾಗವಾಗಿ ಏಪ್ರಿಲ್... ಓದನ್ನು ಮುಂದುವರಿಸಿ


Edited by: ಬಾನು

3 hours ago

   
Image 1
ದಾವಣಗೆರೆ

ಮೂಲ ಸೌಕರ್ಯ ಇಲ್ಲ: ದಾವಣಗೆರೆ ಉಪಚುನಾವಣೆಗೆ ಮತದಾನ ಬಹಿಷ್ಕಾರ ಎಚ್ಚರಿಕೆ

ದಾವಣಗೆರೆ: ದಕ್ಷಿಣ ಕ್ಷೇತ್ರದ ಉಪಚುನಾವಣೆ ಕಾವು ದಿನದಿಂದ ದಿನಕ್ಕ... ಓದನ್ನು ಮುಂದುವರಿಸಿ


Edited by: ಬಾನು

3 hours ago

   
Image 1