“ಬೂಟ್ ನೆಕ್ಕುವ ಸಂಸ್ಕೃತಿ ಇದೆಯಾ?”: ಬಿಜೆಪಿ ವಿರುದ್ಧ ಸೋಮಶೇಖರ್ ಪ್ರಶ್ನೆ

ಬೆಂಗಳೂರು: ಬಿಜೆಪಿ ಪಕ್ಷದಿಂದ ಉಚ್ಚಾಟನೆಯಾದ ಶಾಸಕ ಎಸ್.ಟಿ. ಸೋಮಶೇಖರ್ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸುದೀರ್ಘ ಪತ್ರ ಬರೆದು, ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ. ಪತ್ರದಲ್ಲಿ ತಮ್ಮ ರಾಜಕೀಯ ಪಯಣವನ್ನು ವಿವರಿಸಿರುವ ಸೋಮಶೇಖರ್, ಯಾವುದೇ ಆಮಿಷ ಅಥವಾ ಸ್ವಾರ್ಥವಿಲ್ಲದೆ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರಿದ್ದೇನೆ ಎಂದು ತಿಳಿಸಿದ್ದಾರೆ. “ನಮ್ಮ ಸಹಕಾರದಿಂದ ನೀವು ಮುಖ್ಯಮಂತ್ರಿ ಆಗಿದ್ದೀರಿ. ನನ್ನನ್ನು ಸಚಿವನನ್ನಾಗಿ ಮಾಡಿದಕ್ಕಾಗಿ ನಿಮ್ಮ ಮೇಲೆ ಅಪಾರ ಗೌರವವಿದೆ” ಎಂದು ಹೇಳಿದ್ದಾರೆ.

 

2023ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಯಗಳಿಸಿದ್ದೇನೆ. ಕ್ಷೇತ್ರದ ಸಮಸ್ಯೆಗಳ ಸಂದರ್ಭದಲ್ಲಿ ಪಕ್ಷವನ್ನು ಬಿಡಬಾರದು ಎಂದು ನೀವು ನೀಡಿದ ಸಲಹೆಯನ್ನು ನಾನು ಪಾಲಿಸಿದ್ದೇನೆ ಎಂದು ಅವರು ನೆನಪಿಸಿಕೊಂಡಿದ್ದಾರೆ. ಆದರೆ ಪಕ್ಷದಿಂದ ಉಚ್ಚಾಟನೆ ಮಾಡಿದ ಬಳಿಕ ಮತ್ತೆ ಸೇರಿಸಿಕೊಳ್ಳುವ ಕುರಿತು ಯಾವುದೇ ಕ್ರಮ ಕೈಗೊಳ್ಳದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನೈಸ್ ವಿಚಾರವಾಗಿ ಸದನದಲ್ಲಿ ಮಾತನಾಡಿದ ನಂತರ ತಮ್ಮ ವಿರುದ್ಧ ಅವಮಾನಕಾರಿ ಹೇಳಿಕೆ ನೀಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

 

ಇದೇ ವೇಳೆ ಯಡಿಯೂರಪ್ಪ ಅವರಿಗೆ 13 ಪ್ರಶ್ನೆಗಳನ್ನೂ ಕೇಳಿರುವ ಸೋಮಶೇಖರ್, ಪಕ್ಷದ ಒಳಗಿನ ಸಂಸ್ಕೃತಿ ಹಾಗೂ ನಾಯಕತ್ವದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ನಾನು ಯಾರ ಬೂಟನ್ನೂ ನೆಕ್ಕಿಲ್ಲ ಎಂಬ ಕಾರಣಕ್ಕೆ ನನ್ನನ್ನು ಅಮಾನತು ಮಾಡಲಾಗಿದೆಯೇ?” ಎಂಬಂತಹ ಪ್ರಶ್ನೆಗಳ ಮೂಲಕ ಅವರು ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮ್ಮ ರಾಜಕೀಯ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು, ಮತ್ತೆ ಪಕ್ಷಕ್ಕೆ ಅವಕಾಶ ನೀಡುವಂತೆ ಯಡಿಯೂರಪ್ಪ ಅವರನ್ನು ಸೋಮಶೇಖರ್ ಮನವಿ ಮಾಡಿದ್ದಾರೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

3 hours ago

   
Image 1
ಉತ್ತರಕನ್ನಡ

ಕಾರವಾರ

ಸಿಲಿಂಡರ್ ಸಿಗದೆ ಸಂಕಷ್ಟ: ಅರಣ್ಯಕ್ಕೆ ದೌಡಾಯಿಸಿದ ಜನ

ಕಾರವಾರ: ಗ್ಯಾಸ್ ಸಿಲಿಂಡರ್ ಕೊರತೆಯಿಂದ ಉತ್ತರ ಕನ್ನಡ ಜಿಲ್ಲೆಯ ಗ... ಓದನ್ನು ಮುಂದುವರಿಸಿ


Edited by: ಬಾನು

2 hours ago

   
Image 1
ರಾಮನಗರ

ಸಂಗಮ ವನ್ಯಜೀವಿಧಾಮದಿಂದ ಆನೆಗಳ ಸಂಚಾರ?: ಜನರಲ್ಲಿ ಆತಂಕ

ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ತಾಲೂಕಿನ ಕೆಲ ಭಾಗಗ... ಓದನ್ನು ಮುಂದುವರಿಸಿ


Edited by: ಬಾನು

2 hours ago

   
Image 1
ಬೆಂಗಳೂರು ನಗರ

ವಿದ್ಯುತ್ ದರ ಏರಿಕೆ: ಏಪ್ರಿಲ್ 1ರಿಂದ ಹೊಸ ದರ ಜಾರಿ: ಬಿಲ್ ಹೆಚ್ಚಳ ಶಾಕ್

ಬೆಂಗಳೂರು: ಹೊಸ ಆರ್ಥಿಕ ವರ್ಷದ ಆರಂಭದಲ್ಲೇ ರಾಜ್ಯದ ವಾಣಿಜ್ಯ ಹಾಗ... ಓದನ್ನು ಮುಂದುವರಿಸಿ


Edited by: ಬಾನು

3 hours ago

   
Image 1
ಬೆಂಗಳೂರು ನಗರ

ಬಿಸಿಲಿನ ತಾಪಕ್ಕೆ ಬ್ರೇಕ್: 9 ಜಿಲ್ಲೆಗಳಲ್ಲಿ ಕಚೇರಿ ಸಮಯ ಬದಲಾವಣೆ

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಬಿಸಿಲಿನ ತಾಪಮಾನವನ್ನು... ಓದನ್ನು ಮುಂದುವರಿಸಿ


Edited by: ಬಾನು

3 hours ago

   
Image 1
ಮೈಸೂರು

ದಾಸವಾಳ ಹೂ ನುಂಗಿ ಶಿಶು ಸಾವು: ಮೈಸೂರಿನಲ್ಲಿ ಮನಕಲಕುವ ಘಟನೆ

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ದೊಡ್ಡ ಹೆಜ್ಜೂರು ಗ್ರಾಮದಲ್... ಓದನ್ನು ಮುಂದುವರಿಸಿ


Edited by: ಬಾನು

3 hours ago

   
Image 1
ಧಾರವಾಡ

ಜಿಮ್ ಟ್ರೈನರ್ ವಿರುದ್ಧ ಅಸಭ್ಯ ವರ್ತನೆ ಆರೋಪ: ಯುವತಿಯರೊಂದಿಗೆ ದುರ್ವರ್ತನೆ?: ಜಿಮ್‌ಗೆ ಬೀಗ ಹಾಕಿ ಆಕ್ರೋಶ

ಧಾರವಾಡ: ಯುವತಿಯರೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆಂಬ ಆರೋಪದ... ಓದನ್ನು ಮುಂದುವರಿಸಿ


Edited by: ಬಾನು

3 hours ago

   
Image 1
ಬೀದರ್

ಜಮೀನಿನಲ್ಲಿ ಕೆಲಸ ಮಾಡುವಾಗ ಸಿಡಿಲು : ಯುವ ರೈತನ ಸಾವು

ಬೀದರ್: ಕೃಷಿ ಕೆಲಸಕ್ಕಾಗಿ ಜಮೀನಿಗೆ ತೆರಳಿದ್ದ ಯುವ ರೈತ ಸಿಡಿಲಿಗ... ಓದನ್ನು ಮುಂದುವರಿಸಿ


Edited by: ಬಾನು

3 hours ago

   
Image 1
ಮಂಡ್ಯ

ಹಿಂದಿ ಹೇರಿಕೆ ವಿರೋಧ: “ಕನ್ನಡಕ್ಕೇ ಮೊದಲ ಆದ್ಯತೆ”: ಸಕ್ಕರೆನಾಡಿನಲ್ಲಿ ಸಂಭ್ರಮ

ಮಂಡ್ಯ: ರಾಜ್ಯ ಸರ್ಕಾರದ ಹಿಂದಿ ಹೇರಿಕೆ ವಿರೋಧಿ ನಿರ್ಧಾರಕ್ಕೆ ಸಕ... ಓದನ್ನು ಮುಂದುವರಿಸಿ


Edited by: ಬಾನು

3 hours ago

   
Image 1
ಧಾರವಾಡ

ಹುಬ್ಬಳ್ಳಿ

ಏಪ್ರಿಲ್ 1ರಿಂದ ಸ್ವಯಂ ಜನಗಣತಿ ಆರಂಭ: ಸಾರ್ವಜನಿಕರಿಗೆ ಪಾಲಿಕೆ ಮನವಿ

ಹುಬ್ಬಳ್ಳಿ: ದೇಶವ್ಯಾಪಿ ಜನಗಣತಿ ಪ್ರಕ್ರಿಯೆಯ ಭಾಗವಾಗಿ ಏಪ್ರಿಲ್... ಓದನ್ನು ಮುಂದುವರಿಸಿ


Edited by: ಬಾನು

3 hours ago

   
Image 1
ದಾವಣಗೆರೆ

ಮೂಲ ಸೌಕರ್ಯ ಇಲ್ಲ: ದಾವಣಗೆರೆ ಉಪಚುನಾವಣೆಗೆ ಮತದಾನ ಬಹಿಷ್ಕಾರ ಎಚ್ಚರಿಕೆ

ದಾವಣಗೆರೆ: ದಕ್ಷಿಣ ಕ್ಷೇತ್ರದ ಉಪಚುನಾವಣೆ ಕಾವು ದಿನದಿಂದ ದಿನಕ್ಕ... ಓದನ್ನು ಮುಂದುವರಿಸಿ


Edited by: ಬಾನು

3 hours ago

   
Image 1