ಚಾಮರಾಜನಗರ: ಮೋದಿಯವರ ವರ್ಚಸ್ಸು ನಮ್ಮ ಗೆಲುವನ್ನು ಸುಲಭ ಮಾಡಿಕೊಟ್ಟಿದೆ -ಎಸ್.ಬಾಲರಾಜ್
ಚಾಮರಾಜನಗರ: ದಿವಂಗತ ರಾಜಶೇಖರ್ ಮೂರ್ತಿರವರು ನನ್ನ ರಾಜಕೀಯ ಗುರುಗಳು ಎಂದು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಬಾಲರಾಜ್ ಹೇಳಿದ್ದಾರೆ. ಗುಂಡ್ಲುಪೇಟೆ ತಾಲೂಕಿನ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಈ ದೇಶಕ್ಕೆ ಮೋದಿಯವರು ಅನಿವಾರ್ಯ ಎಂಬುದು ಕಟ್ಟೆಕಡೆಯ ಗ್ರಾಮದ ವ್ಯಕ್ತಿಗೆ ಅರಿವಿದೆ. ಸೋಲಿಗ ಜನಾಂಗದ ವ್ಯಕ್ತಿ ಮೋದಿಯವರನ್ನು ನೆನೆಸಿಕೊಳ್ಳುತ್ತಾರೆ. ನಾನು ಯಾವುದೇ ಊರಿಗೆ ಹೋದರು ಅಲ್ಲಿನ ಜನರು ಮೋದಿ ಬಗ್ಗೆ ಮಾತನಾಡುತ್ತಾರೆ. ಹೀಗಾಗಿ ಮೋದಿಯವರ ವರ್ಚಸ್ಸು ನಮ್ಮ ಗೆಲುವನ್ನು ಸುಲಭ ಮಾಡಿಕೊಟ್ಟಿದೆ
ಬಿವೈ ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರಾದ ಬಳಿಕ ಸಂಘಟನೆ ಅತ್ಯುತ್ತಮವಾಗಿದೆ. ರಾಜಕೀಯಕ್ಕೆ ಬಂದಿದ್ದೇ ನಾನು ರಾಜಶೇಖರಮೂರ್ತಿ ಅವರ ಗರಡಿಯಿಂದ ಎಂದು ಹೇಳುವ ಮೂಲಕ ಮಾಜಿ ಕೇಂದ್ರ ಸಚಿವ ದಿ.ರಾಜಶೇಖರಮೂರ್ತಿ ನೆನಪು ಮೆಲಕು ಹಾಕಿದ್ದಾರೆ. ನನ್ನಲ್ಲಿ ಶಾಸಕನಾಗುವ ಅರ್ಹತೆ ಇದೆ ಎಂದು ಗುರುತಿಸಿದ್ದು ರಾಜಶೇಖರಮೂರ್ತಿ ಅವರು. ಚುನಾವಣೆ ಖರ್ಚನ್ನು ಕೂಡ ಕೊಟ್ಟವರು ರಾಜಶೇಖರಮೂರ್ತಿ. ಅವರ ಮೂಲಕ ನನಗೆ ಯಡಿಯೂರಪ್ಪ ಪರಿಚಯ ಆದರು. ಬಿಎಸ್ ವೈ ಅವರು ನನಗೆ ಮೊದಲ ಬಾರಿಗೆ ಬಿಜೆಪಿ ಟಿಕೆಟ್ ಕೊಟ್ಟಿದ್ದರು. ಬಿಜೆಪಿ ಟಿಕೆಟ್ ಕೈತಪ್ಪಿದಾಗ ಪಕ್ಷೇತರ ಅಭ್ಯರ್ಥಿಯಾಗಿ ಜಯಗಳಿಸಿದ್ದೆ. ರಾಜಶೇಖರಮೂರ್ತಿ ಹಾಗು ವಾಜಪೇಯಿ ಅವರ ಫೋಟೋ ಮುಂದಿಟ್ಟುಕೊಂಡು ಚುನಾವಣೆ ಗೆದ್ದು ಬಂದಿದ್ದೆ ಎಂದರು.
ಬಿಎಸ್ ವೈ ಕೆಜೆಪಿ ಕಟ್ಟಿದಾಗ ನಾನು ಅವರನ್ನು ಹಿಂಬಾಲಿಸಿದ್ದವನು. ಹತ್ತು ವರ್ಷ ದುಡಿಸಿಕೊಂಡ ಕಾಂಗ್ರೆಸ್ ನನಗೆ ಅನ್ಯಾಯ ಮಾಡಿದೆ. ಮತ್ತೆ ನಾನು ಬಿಜೆಪಿಗೆ ಹಿಂತಿರುಗಿದಾಗ ಪಕ್ಷ ನನ್ನ ಕೈ ಹಿಡಿದಿದೆ. ಈಗ ಬಿಜೆಪಿ ಅಭ್ಯರ್ಥಿಯಾಗಿ ನಿಲ್ಲಲು ಪಕ್ಷ ನನಗೆ ಅವಕಾಶ ಕೊಟ್ಟಿದೆ.ರಾಜಕೀಯಕ್ಕೆ ಬಂದಾಗಿನಿಂದಲೂ ಜನರ ಕಷ್ಟಗಳಿಗೆ ಸ್ಪಂದಿಸಿದ್ದೇನೆ. ಕ್ಷೇತ್ರದ ಜನರ ಜೊತೆ ನಿಕಟವಾದ ಸಂಪರ್ಕ ಹೊಂದಿದ್ದೇನೆ. ನರ್ಸ್ ಆಗಿ ನನ್ನ ತಾಯಿ ಮಾಡಿದ ಪ್ರಾಮಾಣಿಕ ಸೇವೆ ಮಾಡಿದ್ದಾರೆ. ಜನರಿಗಾಗಿ ನನ್ನ ತಂದೆ ತಾಯಿ ಮಾಡಿದ ಸೇವೆಯನ್ನು ಸ್ಮರಿಸಿಕೊಳ್ಳುತ್ತೇನೆ. ಇಪ್ಪತ್ತು ವರ್ಷಗಳಿಂದ ನನಗೆ ರಾಜಕೀಯ ಅವಕಾಶ ಸಿಕ್ಕಿಲ್ಲ. ಈ ಬಾರಿ ನನಗೆ ಒಂದು ಅವಕಾಶ ಕೊಡಿ ನಿಮ್ಮ ಋಣ ತೀರಿಸುತ್ತೇನೆ. ಜ್ಯಾತ್ಯಾತೀತ ಜನತಾದಳ ಎನ್.ಡಿ.ಎ ಭಾಗವಾಗಿದೆ
ಜನತಾದಳ ತನ್ನದೇ ಆದ ಮತ ಬ್ಯಾಂಕ್ ಹೊಂದಿರುವುದು ನನಗೆ ಸಹಕಾರಿಯಾಗಿದೆ. ಹಾಲಿ ಸಂಸದರಾದ ವಿ.ಶ್ರೀನಿವಾಸ್ ಪ್ರಸಾದ್ ಅವರ ಆಶೀರ್ವಾದ ಇದೆ
ಎಂದು ಹೇಳಿದ್ದಾರೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಮಂಗಳೂರು
ಕಮರ್ಷಿಯಲ್ ಸಿಲಿಂಡರ್ ತಂದುಕೊಟ್ಟವರಿಗೆ ₹5,500 ಮೌಲ್ಯದ ಉಚಿತ ಆಹಾರ
ಮಂಗಳೂರು: ಗಲ್ಫ್ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ... ಓದನ್ನು ಮುಂದುವರಿಸಿ
ರಾಜ್ಯಸಭೆ ಅಡ್ಡ ಮತದಾನದ ಭೀತಿ: ಒಡಿಶಾ ಶಾಸಕರು ಬಿಡದಿ ರೆಸಾರ್ಟ್‌ನಿಂದ ಮೈಸೂರಿಗೆ
ರಾಮನಗರ: ಒಡಿಶಾ ರಾಜ್ಯದ ಕಾಂಗ್ರೆಸ್ ಶಾಸಕರು ರಾಮನಗರದ ಬಿಡದಿಯಲ್ಲ... ಓದನ್ನು ಮುಂದುವರಿಸಿ
ಜಿಲ್ಲಾಧಿಕಾರಿ ಡಿಜಿಟಲ್ ಸಹಿ ದುರುಪಯೋಗ ಪ್ರಕರಣದಲ್ಲಿ 6 ಆರೋಪಿಗಳು
ಚಿತ್ರದುರ್ಗ, ಮಾ.14: ಜಿಲ್ಲಾಧಿಕಾರಿ ಮತ್ತು ಎಡಿಸಿ ಅವರ ಡಿಜಿಟಲ್... ಓದನ್ನು ಮುಂದುವರಿಸಿ
ಸಿಲಿಂಡರ್ ಕೊರತೆಗೆ ಪರಿಹಾರ: ಬೆಂಗಳೂರಿನಲ್ಲಿ ಬಯೋಗ್ಯಾಸ್ ಉತ್ಪಾದನೆಗೆ GBA ಮುಂದಾಗಿದೆ
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅಡುಗೆ ಅನಿಲ ಸಿಲಿಂಡ... ಓದನ್ನು ಮುಂದುವರಿಸಿ
ಮಹಿಳಾ ಉದ್ಯಮಿಗಳ ಹೋಟೆಲ್‌ಗಳಿಗೆ ವಾಣಿಜ್ಯ ಎಲ್‌ಪಿಜಿ ಕೊರತೆ: ಪ್ರಧಾನಿ ಮೋದಿಗೆ ಪತ್ರ
ಬೆಂಗಳೂರು: ರಾಜ್ಯದಲ್ಲಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಕೊರತೆ ಹೆಚ್... ಓದನ್ನು ಮುಂದುವರಿಸಿ
ದೇಶದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಕಾಂಗ್ರೆಸ್ ಜನರನ್ನು ತಪ್ಪು ದಾರಿಗೆ ಎಳೆಯುತ್ತಿದೆ – ಪ್ರಹ್ಲಾದ್ ಜೋಶಿ
ಬೆಂಗಳೂರು: ಅಡುಗೆ ಹಾಗೂ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳಿಗೆ ದೇ... ಓದನ್ನು ಮುಂದುವರಿಸಿ
10–12 ಹಡಗುಗಳ ಮೂಲಕ ಭಾರತಕ್ಕೆ ಗ್ಯಾಸ್ ಸರಬರಾಜು: ಸಚಿವರ ಮಾಹಿತಿ
ದೇವನಹಳ್ಳಿ: ವಾಣಿಜ್ಯ ಗ್ಯಾಸ್ ಸಿಲಿಂಡರ್ ಕೊರತೆಯ ಸಮಸ್ಯೆ ಇನ್ನೂ... ಓದನ್ನು ಮುಂದುವರಿಸಿ
ಪಾಕಿಸ್ತಾನ–ಬಾಂಗ್ಲಾ ಪ್ರಜೆಗಳು ಮತದಾರರ ಪಟ್ಟಿಗೆ ಸೇರ್ಪಡೆ ಅಪಾಯಕಾರಿ: ಆರ್. ಅಶೋಕ್
ಬೆಂಗಳೂರು: ಪಾಕಿಸ್ತಾನ ಹಾಗೂ ಬಾಂಗ್ಲಾದೇಶ ಮೂಲದವರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾದ... ಓದನ್ನು ಮುಂದುವರಿಸಿ
ಯುದ್ಧದ ಪರಿಣಾಮ: ಅಡುಗೆ ಎಣ್ಣೆ ದರ ಏರಿಕೆ, ಮಾರುಕಟ್ಟೆಯಲ್ಲಿ ಕೊರತೆ
ಬೆಂಗಳೂರು:ಇರಾನ್-ಇಸ್ರೇಲ್ ಸಂಘರ್ಷ ಹಿನ್ನೆಲೆ ಗ್ಯಾಸ್ ಸಿಲ... ಓದನ್ನು ಮುಂದುವರಿಸಿ
ಬೆಂಗಳೂರು ನಗರ
ನೆಲಮಂಗಲ ಹೆದ್ದಾರಿಯಲ್ಲಿ ಎಲ್‌ಪಿಜಿ ಟ್ಯಾಂಕರ್ ಪಲ್ಟಿ ತಪ್ಪಿತು ದೊಡ್ಡ ಅನಾಹುತ
ಬೆಂಗಳೂರು: ಎಲ್‌ಪಿಜಿ ಗ್ಯಾಸ್ ತುಂಬಿದ್ದ ಟ್ಯಾಂಕರ್ ಪಲ್ಟಿಯಾದ ಘಟ... ಓದನ್ನು ಮುಂದುವರಿಸಿ