ಚಿಕ್ಕತೊಟ್ಲುಕೆರೆ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ: ಗಬ್ಬೆದ್ದು ನಾರುತಿರುವ ಚರಂಡಿ
ತುಮಕೂರು : ಜಿಲ್ಲೆ, ತುಮಕೂರು ತಾಲೂಕಿನ ಕೋರ ಹೋಬಳಿಯ ಚಿಕ್ಕತೊಟ್ಲುಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿಂದ ಗ್ರಾಮಸ್ಥರು ಸಂಕಷ್ಟ ಅನುಭವಿಸುತ್ತಿದ್ದಾರೆ. ಗ್ರಾಮದಲ್ಲಿ ಚರಂಡಿ ವ್ಯವಸ್ಥೆ ಸರಿಯಾಗಿ ನಿರ್ವಹಣೆಯಾಗದೇ ಗಬ್ಬೆದ್ದು ನಾರುತಿರುವ ಪರಿಸ್ಥಿತಿ ನಿರ್ಮಾಣವಾಗಿದೆ.
ಚಿಕ್ಕತೊಟ್ಲುಕೆರೆ ಗ್ರಾಮದಿಂದ ಬೆಳಧರಕ್ಕೆ ಸಂಪರ್ಕಿಸುವ ರಸ್ತೆಯ ಬಳಿ ಹಲವು ವರ್ಷಗಳಿಂದ ಚರಂಡಿ ವ್ಯವಸ್ಥೆ ದುಸ್ಥಿತಿಯಲ್ಲಿದೆ. ಗ್ರಾಮದಲ್ಲಿನ ಮನೆಗಳ ಚರಂಡಿ ನೀರು ಹರಿದು ಹೋಗುವ ಭಾಗ ಸಂಪೂರ್ಣವಾಗಿ ಕಟ್ಟಿಕೊಂಡಿದ್ದು, ನೀರು ಸರಿಯಾಗಿ ಹರಿಯದೇ ಕೊಳೆತು ನಾರುತಿರುವ ಪರಿಸ್ಥಿತಿ ಉಂಟಾಗಿದೆ.
ಈ ಬಗ್ಗೆ ಗ್ರಾಮಸ್ಥರು ಹಲವು ಬಾರಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಸದಸ್ಯರಿಗೆ ಮಾಹಿತಿ ನೀಡಿದರೂ, ಸಮಸ್ಯೆ ಪರಿಹರಿಸಲು ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಆರೋಪಿಸಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಪರಿಸ್ಥಿತಿ ದಿನೇದಿನೇ ಹದಗೆಡುತ್ತಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಕ್ಷಣ ಚರಂಡಿ ಸ್ವಚ್ಛಗೊಳಿಸಿ ಸರಿಯಾದ ವ್ಯವಸ್ಥೆ ಕಲ್ಪಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಇಲ್ಲದಿದ್ದರೆ ಸಂಬಂಧಿತ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸುವ ಎಚ್ಚರಿಕೆಯನ್ನೂ ನೀಡಿದ್ದಾರೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಶಿಗ್ಗಾಂವ
ಅಡವಿಸೋಮಾಪುರ ದನಗಳ ನೀರಿನ ತೊಟ್ಟಿ ಸ್ವಚ್ಛತೆ ಆರಂಭ: ಸುದ್ದಿ ಹಿನ್ನಲೆ ಗ್ರಾಮಸ್ಥರಿಗೆ ಸಿಕ್ಕ ಫಲ.!!
ಶಿಗ್ಗಾಂವಿ : ಕುನ್ನೂರ ಪಂಚಾಯಿತಿ ವ್ಯಾಪ್ತಿಯ ಅಡವಿಸೋಮಾಪುರ ಗ್ರಾ... ಓದನ್ನು ಮುಂದುವರಿಸಿ
ದೇವನಹಳ್ಳಿ
ದುಬೈನಿಂದ 200ಕ್ಕೂ ಹೆಚ್ಚು ಕನ್ನಡಿಗರು ಸುರಕ್ಷಿತವಾಗಿ ದೇವನಹಳ್ಳಿಗೆ ವಾಪಸ್
ಬೆಂಗಳೂರು ಗ್ರಾಮಾಂತರ : ಇತ್ತೀಚೆಗೆ ದುಬೈನಿಂದ 200ಕ್ಕೂ ಹೆಚ್ಚು... ಓದನ್ನು ಮುಂದುವರಿಸಿ
ಕೊಪ್ಪಳ ಪ.ಪಂ ಸಭೆ ಗಲಾಟೆ : ಸದಸ್ಯರ, ಪತ್ರಕರ್ತರ ಮೇಲೆ ಗುಂಪಿನ ಹಲ್ಲೆ ಯತ್ನ
ಕೊಪ್ಪಳ: ಜಿಲ್ಲೆಯ ಕನಕಗಿರಿ ಪಟ್ಟಣ ಪಂಚಾಯತಿ ಸಾಮಾನ್ಯ ಸಭೆಯಲ್ಲಿ... ಓದನ್ನು ಮುಂದುವರಿಸಿ
ಶಿಗ್ಗಾಂವ
ಅಡವಿಸೋಮಾಪುರದಲ್ಲಿ ದನಗಳ ನೀರಿನ ತೊಟ್ಟಿ ನಿರ್ಲಕ್ಷ್ಯ: ಗ್ರಾಮಸ್ಥರ ಆಕ್ರೋಶ
ಶಿಗ್ಗಾಂವಿ: ಕುನ್ನೂರ ಪಂಚಾಯತಿಯ ವ್ಯಾಪ್ತಿಯ ಅಡವಿಸೋಮಾಪುರ ಗ್ರಾಮ... ಓದನ್ನು ಮುಂದುವರಿಸಿ
ಮಾಹಿತಿ ತಡಕ್ಕೆ ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ ₹50,000 ದಂಡ”
ಕಲಬುರಗಿ: ಮಾಹಿತಿ ಹಕ್ಕು ಅಧಿನಿಯಮ, 2005 ರ ಕಲಂ 18(3) ಮತ್ತು 2... ಓದನ್ನು ಮುಂದುವರಿಸಿ
4 ಗ್ರಾಮ ಪಂಚಾಯಿತಿಗಳನ್ನು ಕೈ ಬಿಡದಿದ್ದರೆ ಗೆಜ್ಜಲಗೆರೆದಿಂದ ವಿಧಾನಸೌಧದವರೆಗೆ ಪಾದಯಾತ್ರೆ – ಹೆಚ್.ಡಿ.ಕುಮಾರಸ್ವಾಮಿ ಎಚ್ಚರಿಕೆ
ಮಂಡ್ಯ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಮದ್ದೂರು ನಗರಸಭೆಯ... ಓದನ್ನು ಮುಂದುವರಿಸಿ
ಮುಂಬರುವ ಪಂಚಾಯತ್ ಚುನಾವಣೆಗಳಿಗೆ ತಂತ್ರ: ‘ಯಡಿಯೂರಪ್ಪೋತ್ಸವ’ ಮೂಲಕ ಒಂದೇ ಕಲ್ಲಲ್ಲಿ ಎರಡು ಗುರಿ..!
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ‘ರಾಜಾಹುಲ... ಓದನ್ನು ಮುಂದುವರಿಸಿ
ಗ್ರಾಮ ಪಂಚಾಯಿತಿ ತೆರಿಗೆ ವಸೂಲಾತಿಗೆ ಕಟ್ಟುನಿಟ್ಟಿನ ಮಾರ್ಗಸೂಚಿ; ಗುರಿ ಸಾಧನೆ ವಿಫಲವಾದರೆ ಕ್ರಮ
ವಿಜಯಪುರ : ಜಿಲ್ಲಾ ಪಂಚಾಯಿತಿ ಸಭಾ ಭವನದಲ್ಲಿ ನಡೆದ ಗ್ರಾಮೀಣಾಭಿವ... ಓದನ್ನು ಮುಂದುವರಿಸಿ
ಕುಮಟಾ
ಕುಮಟಾ: ಮಿರ್ಜಾನ ಕೋಟೆ ರಸ್ತೆಯಲ್ಲಿ ಗೇಟ್ ಅಳವಡಿಸುವ ಪರಿಸ್ಥಿತಿಗೆ ಗ್ರಾಮಸ್ಥರ ಮತ್ತು ಮಾಧ್ಯಮ ಹೋರಾಟಕ್ಕೆ ಜಯ
ಕುಮಟಾ: ಐತಿಹಾಸಿಕ ಮಿರ್ಜಾನ ಕೋಟೆ ಬಳಿ ಛತ್ರಕೂರ್ವೆ ಗ್ರಾಮ ಸಂಪರ್... ಓದನ್ನು ಮುಂದುವರಿಸಿ
2024-25ನೇ ಸಾಲಿನಲ್ಲಿ ಕರ್ನಾಟಕ ರಾಜ್ಯವು ಅತಿ ಹೆಚ್ಚು ತೆರಿಗೆ ವಸೂಲಾತಿ ಸಾಧನೆ, 2025-26ನೇ ಸಾಲಿನ ಫೆಬ್ರವರಿ 18ರ ತನಕ 71.39% ವಸೂಲಿ ದಾಖಲೆ
ಬೆಂಗಳೂರು : ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿ 2025-26ನೇ ಸಾಲಿನ ಫ... ಓದನ್ನು ಮುಂದುವರಿಸಿ