ಚಿನ್ನ, ಮುದ್ದು, ಬಂಗಾರಿ! ಲೇಡಿ ರೌಡಿಶೀಟರ್‌ಗೇ ಲೈಂಗಿಕ ಕಿರುಕುಳ ನೀಡಿದ ಇನ್ಸ್‌ಪೆಕ್ಟರ್

ಬೆಂಗಳೂರು, ಮಾರ್ಚ್ 25: ನಗರದ ಕೋಣನಕುಂಟೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಪಾಪಣ್ಣ ವಿರುದ್ಧ ಲೈಂಗಿಕ ಕಿರುಕುಳದ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಸಂತ್ರಸ್ತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ದೂರು ಸಲ್ಲಿಸಿ, ಆರೋಪಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

 

ದೂರುದಾರೆಯ ಪ್ರಕಾರ, ಇನ್ಸ್‌ಪೆಕ್ಟರ್ ಪಾಪಣ್ಣ ಕಚೇರಿ ಹಾಗೂ ವೈಯಕ್ತಿಕ ಮೊಬೈಲ್ ಸಂಖ್ಯೆಯಿಂದ ಹಲವು ಬಾರಿ ಕರೆ ಮಾಡಿ ಕಿರುಕುಳ ನೀಡಿದ್ದು, ಅಸಭ್ಯವಾಗಿ ಮಾತನಾಡಿದ್ದಾರೆ. ‘ಚಿನ್ನ, ಮುದ್ದು, ಬಂಗಾರಿ’ ಎಂದು ಕರೆದು ಅಶ್ಲೀಲ ಸಂದೇಶಗಳನ್ನು ಕಳುಹಿಸಿರುವುದಾಗಿ ಆರೋಪಿಸಲಾಗಿದೆ. ಇದಷ್ಟೇ ಅಲ್ಲದೆ, ಪ್ರಕರಣವನ್ನು ಬಹಿರಂಗಪಡಿಸಿದರೆ ದೂರುದಾರೆಯನ್ನೂ ಅವರ ಮಕ್ಕಳನ್ನೂ ಸುಪಾರಿ ಕೊಟ್ಟು ಕೊಲೆ ಮಾಡಿಸುವುದಾಗಿ ಬೆದರಿಕೆ ಹಾಕಿದ್ದಾರೆಯೆಂಬ ಗಂಭೀರ ಆರೋಪವೂ ಕೇಳಿಬಂದಿದೆ. ಮನೆಗೆ ಬರುವುದಾಗಿ ಹೇಳಿ ಹಲವು ಬಾರಿ ಕಿರುಕುಳ ನೀಡಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.

 

ಈ ಆರೋಪಗಳಿಗೆ ಸಂಬಂಧಿಸಿದಂತೆ ವಾಟ್ಸಪ್ ಸಂದೇಶಗಳ ಸ್ಕ್ರೀನ್‌ಶಾಟ್‌ಗಳು ಹಾಗೂ ಸಂಭಾಷಣೆಗಳ ಆಡಿಯೋ ದಾಖಲೆಗಳನ್ನು ಸಹ ಸಂತ್ರಸ್ತೆ ಕಮಿಷನರ್ ಕಚೇರಿಗೆ ಸಲ್ಲಿಸಿದ್ದಾರೆ. ಎಲೆಕ್ಟ್ರಾನಿಕ್ ಸಾಕ್ಷ್ಯಾಧಾರಗಳೊಂದಿಗೆ ಸಲ್ಲಿಸಿರುವ ಈ ದೂರಿನ ಹಿನ್ನೆಲೆಯಲ್ಲಿ, ಅಧಿಕಾರಿಗಳು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಆರಂಭಿಸುವ ಸಾಧ್ಯತೆ ಇದೆ. ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದೂರುದಾರೆ ಒತ್ತಾಯಿಸಿದ್ದಾರೆ. ಇತ್ತೀಚೆಗೆ ಬೆಂಗಳೂರು ಪೊಲೀಸ್ ಇಲಾಖೆಯ ಕೆಲ ಸಿಬ್ಬಂದಿ ವಿರುದ್ಧ ವಿವಿಧ ಆರೋಪಗಳು ಕೇಳಿಬಂದಿರುವ ಹಿನ್ನೆಲೆ, ಈ ಘಟನೆ ಮತ್ತೊಮ್ಮೆ ಇಲಾಖೆಯ ನೈತಿಕತೆಯ ಬಗ್ಗೆ ಪ್ರಶ್ನೆ ಎಬ್ಬಿಸಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

8 hours ago

   
Image 1
Image 1
ಬೆಂಗಳೂರು ನಗರ

ಪಂಚಾಯಿತಿ ಕಚೇರಿ ಹೋಗದೆ ಆಸ್ತಿ ತೆರಿಗೆ ಪಾವತಿ: ಗ್ರಾಮೀಣಾಭಿವೃದ್ಧಿ ಇಲಾಖೆಯ ಹೊಸ ಉಪಾಯ

ಬೆಂಗಳೂರು, ಮಾರ್ಚ್ 25: ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕ... ಓದನ್ನು ಮುಂದುವರಿಸಿ


Edited by: ಬಾನು

7 hours ago

   
Image 1
ಮಂಡ್ಯ

ಪ್ರಚೋದನಕಾರಿ ಭಾಷಣ: ಯತ್ನಾಳ್, ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಪ್ರಕರಣ

ಮಂಡ್ಯ: ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಚಿತ್ರದುರ್ಗ

ಜಮೀನು ವಿವಾದದ ಹಿನ್ನೆಲೆ ರೈತನ ಭೀಕರ ಕೊಲೆ

ಚಿತ್ರದುರ್ಗ: ತಾಲೂಕಿನ ಕಡ್ಲೆಗುದ್ದು ಗ್ರಾಮದಲ್ಲಿ ಜಮೀನು ವಿವಾದದ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೀದರ್

ಬೀದರ್ BRIMS ವೈದ್ಯಕೀಯ ಕಾಲೇಜಿನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ – ನಗರದಲ್ಲಿ ಆಘಾತ

ಬೀದರ್: ನಗರದ ಬ್ರಿಮ್ಸ್ (BRIMS) ವೈದ್ಯಕೀಯ ಕಾಲೇಜು ವಸತಿ ನಿಲಯದ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ಕಾರ್ ಡ್ರಿಫ್ಟಿಂಗ್ ಕೇಸ್ : ‘ಬಂದರು ಬಂದರು, ಭಾವ ಬಂದರು’ – ವಕೀಲರ ಕಾಲೆಳೆದ ಬೆಂಗಳೂರು ಪೊಲೀಸರು!

ಬೆಂಗಳೂರು: ಲಂಬೋರ್ಗಿನಿ ಕಾರ್ ಡ್ರಿಫ್ಟಿಂಗ್ ಪ್ರಕರಣದಲ್ಲಿ ಆರೋಪಿ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ಕೆಂಗೇರಿ: ಮಹಿಳೆ ಸಾವು ಪ್ರಕರಣದಲ್ಲಿ ಚಾಲಕ ಶಾಕ್ ನೀಡಿದ ಮೆಜರ್ ಟ್ವಿಸ್ಟ್

ಬೆಂಗಳೂರು: ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ರಾತ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ದಕ್ಷಿಣಕನ್ನಡ

ಮಂಗಳೂರು

ಬದ್ರಿಯಾ ಮಸೀದಿ ಪ್ರಕರಣ: 2 ಗುಂಪುಗಳ ನಡುವೆ ಮಾರಾಮಾರಿ

ಮಂಗಳೂರು: ಉಳ್ಳಾಲದ ಸಜೀಪ್‌ನಡು ಪ್ರದೇಶದಲ್ಲಿ ಸೋಮವಾರ ಮಸೀದಿ ವಿವ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ವೀಲ್ಹಿಂಗ್ ಪ್ರಕರಣದಲ್ಲಿ ಪ್ರಭಾವಶಾಲಿಗಳಿಗೆ ವಿಶೇಷ ಸೌಲಭ್ಯ? ಜನರ ಕಾನೂನು ಸಮಾನತೆ ಆಗ್ರಹ"

ಬೆಂಗಳೂರು: ರಸ್ತೆ ಮೇಲೆ ವೀಲ್ಹಿಂಗ್ ಅಥವಾ ಅಪಾಯಕಾರಿ ಚಾಲನೆ ಮಾಡಿ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ಬೆಂಗಳೂರು ನಗರ

ಐಷಾರಾಮಿ ಕಾರು ಡ್ರಿಫ್ಟಿಂಗ್ ಪ್ರಕರಣ – ರಿಕ್ಕಿ ರೈ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಹಾಜರಿ

ಬೆಂಗಳೂರು: ಐಷಾರಾಮಿ ಕಾರು ಡ್ರಿಫ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ಬೆಂಗಳೂರು ಗ್ರಾಮಾಂತರ

ನೆಲಮಂಗಲ

ನೆಲಮಂಗಲದಲ್ಲಿ ಮನೆ ಕಳ್ಳತನ: ₹10 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ ಖದೀಮರು

ನೆಲಮಂಗಲ, ಬೆಂಗಳೂರು ಉತ್ತರ : ಮಾಚೋಹಳ್ಳಿ ಗ್ರಾಮದ ನವೀನ್ ಅವರ ಮನ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1