ದಾಖಲೆ ಬಜೆಟ್‌ ಮಧ್ಯೆ ಆದಾಯ ಒತ್ತಡ: ಸರ್ಕಾರಕ್ಕೆ 15,000 ಕೋಟಿ ರೂ. ಕೊರತೆ ಭೀತಿ

ಬೆಂಗಳೂರು, ಫೆಬ್ರವರಿ 15: ಪ್ರಸಕ್ತ 2025-26ನೇ ಆರ್ಥಿಕ ವರ್ಷಕ್ಕೆ ದಾಖಲೆಯ 4.09 ಲಕ್ಷ ಕೋಟಿ ರೂ. ಮೊತ್ತದ ಬಜೆಟ್ ಮಂಡಿಸಿರುವ ರಾಜ್ಯ ಸರ್ಕಾರಕ್ಕೆ ಸ್ವಂತ ತೆರಿಗೆ ಮೂಲಗಳಿಂದ ವಾರ್ಷಿಕ ಗುರಿ ಸಾಧನೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಮಾರ್ಚ್ ಅಂತ್ಯದೊಳಗೆ ಇನ್ನೂ 48,306 ಕೋಟಿ ರೂ. ಸಂಗ್ರಹಿಸಬೇಕಿರುವುದರಿಂದ ಆರ್ಥಿಕ ನಿರ್ವಹಣೆಯಲ್ಲಿ ಒತ್ತಡ ಹೆಚ್ಚಾಗಿದೆ. ಅಬಕಾರಿ ಇಲಾಖೆ ಹೊರತುಪಡಿಸಿ ಉಳಿದ ಪ್ರಮುಖ ತೆರಿಗೆ ವಿಭಾಗಗಳಲ್ಲಿ ಗುರಿ ತಲುಪುವ ಸಾಧ್ಯತೆ ಅನುಮಾನಾಸ್ಪದವಾಗಿದೆ ಎಂದು ಹಣಕಾಸು ಇಲಾಖೆಯ ಮೂಲಗಳು ತಿಳಿಸಿವೆ.

 

ವಾಣಿಜ್ಯ ತೆರಿಗೆ, ಮುದ್ರಾಂಕ ಮತ್ತು ನೋಂದಣಿ, ಮೋಟಾರು ವಾಹನ ತೆರಿಗೆಗಳಿಂದ ಒಟ್ಟು ಸುಮಾರು 15,000 ಕೋಟಿ ರೂ. ಆದಾಯ ಕೈತಪ್ಪುವ ಸಾಧ್ಯತೆ ಇದೆ ಎನ್ನಲಾಗಿದೆ. ಇದರಿಂದ ಸರ್ಕಾರದ ವೆಚ್ಚ ನಿರ್ವಹಣೆ ಹಾಗೂ ಬಜೆಟ್ ಗಾತ್ರದ ಮೇಲೆ ಪರಿಣಾಮ ಬೀರುವ ಆತಂಕ ವ್ಯಕ್ತವಾಗಿದೆ. ಅಬಕಾರಿ ಇಲಾಖೆಗೆ 40,000 ಕೋಟಿ ರೂ. ವಾರ್ಷಿಕ ಗುರಿ ನಿಗದಿಯಾಗಿದ್ದು, ಜನವರಿ ಅಂತ್ಯದವರೆಗೆ 33,371 ಕೋಟಿ ರೂ. ಸಂಗ್ರಹವಾಗಿದೆ. ಕಳೆದ 2024-25ನೇ ಸಾಲಿನ ಇದೇ ಅವಧಿಯಲ್ಲಿ 29,460 ಕೋಟಿ ರೂ. ಸಂಗ್ರಹವಾಗಿತ್ತು. ಅಂದರೆ ಶೇ.13.27ರಷ್ಟು ಏರಿಕೆ ಕಂಡುಬಂದಿದೆ. ಮಾಸಿಕ ಸರಾಸರಿ 3,000 ಕೋಟಿ ರೂ. ಸಂಗ್ರಹವಾಗುತ್ತಿರುವ ಹಿನ್ನೆಲೆಯಲ್ಲಿ ಮಾರ್ಚ್ ಅಂತ್ಯದ ವೇಳೆಗೆ ಗುರಿ ಮೀರಿಸುವ ವಿಶ್ವಾಸ ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ.

 

ವಾಣಿಜ್ಯ ತೆರಿಗೆ ಮೂಲದಿಂದ ಜನವರಿ ಅಂತ್ಯದವರೆಗೆ 90,229 ಕೋಟಿ ರೂ. ಸಂಗ್ರಹವಾಗಿದೆ. ಇದರಲ್ಲಿ ಜಿಎಸ್‌ಟಿ ಮೂಲಕ 66,605 ಕೋಟಿ ರೂ., ಮಾರಾಟ ತೆರಿಗೆಯಿಂದ 22,387 ಕೋಟಿ ರೂ. ಹಾಗೂ ವೃತ್ತಿ ತೆರಿಗೆಯಿಂದ 1,236 ಕೋಟಿ ರೂ. ಬಂದಿದೆ. ಕೇಂದ್ರ ಸರ್ಕಾರವು ಜಿಎಸ್‌ಟಿ ದರ ರಚನೆಯಲ್ಲಿ ಬದಲಾವಣೆ ಮಾಡಿರುವ ಹಿನ್ನೆಲೆ ರಾಜ್ಯಕ್ಕೆ ವಾರ್ಷಿಕವಾಗಿ ಸುಮಾರು 9,000 ಕೋಟಿ ರೂ. ನಷ್ಟವಾಗುವ ಸಾಧ್ಯತೆ ಇದೆ ಎಂದು ಮುಖ್ಯಮಂತ್ರಿ  ತಿಳಿಸಿದ್ದಾರೆ.

 

ಮುದ್ರಾಂಕ ಮತ್ತು ನೋಂದಣಿ ಶುಲ್ಕ ಸೇರಿದಂತೆ ಇತರೆ ಶುಲ್ಕಗಳಿಂದ ಜನವರಿವರೆಗೆ 20,500 ಕೋಟಿ ರೂ. ಆದಾಯ ಬಂದಿದೆ. ಉಳಿದ ಎರಡು ತಿಂಗಳಲ್ಲಿ 7,500 ಕೋಟಿ ರೂ. ಸಂಗ್ರಹಿಸುವುದು ಕಷ್ಟಕರವಾಗಿದ್ದು, ಸುಮಾರು 3,000 ಕೋಟಿ ರೂ. ಆದಾಯ ಕೊರತೆ ಉಂಟಾಗುವ ಸಾಧ್ಯತೆ ಇದೆ ಎಂದು ಮೂಲಗಳು ಅಂದಾಜಿಸಿವೆ. ಪ್ರಸಕ್ತ ಸಾಲಿನಲ್ಲಿ ಬಂಡವಾಳ ವೆಚ್ಚಕ್ಕೆ 83,200 ಕೋಟಿ ರೂ. ವಿನಿಯೋಗಿಸುವುದಾಗಿ ಸರ್ಕಾರ ಘೋಷಿಸಿದ್ದರೂ, ತೆರಿಗೆ ಆದಾಯದಲ್ಲಿ ಕುಸಿತ ಉಂಟಾದರೆ ಅಭಿವೃದ್ಧಿ ಯೋಜನೆಗಳಿಗೆ ಅನುದಾನ ಕಡಿತಗೊಳ್ಳುವ ಸಾಧ್ಯತೆ ಇದೆ. ಒಟ್ಟಿನಲ್ಲಿ, ಅಬಕಾರಿ ಇಲಾಖೆ ಉತ್ತಮ ಸಾಧನೆ ನಿರೀಕ್ಷೆಯಲ್ಲಿದ್ದರೂ, ಇತರೆ ತೆರಿಗೆ ಮೂಲಗಳಿಂದ ಗುರಿ ತಲುಪುವುದು ಸರ್ಕಾರಕ್ಕೆ ಕಠಿಣ ಪರೀಕ್ಷೆಯಾಗಿರುವುದು ಸ್ಪಷ್ಟವಾಗಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

14 hours ago

   
Image 1
Image 1
ಬೆಂಗಳೂರು ನಗರ

ಮೂಲಗಳನ್ನು ಮರೆಯಬೇಡಿ, ವಿದ್ಯೆಯೇ ನಿಜವಾದ ಸಂಪತ್ತು: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ‌:“ಬೇರನ್ನು ಮರೆತರೆ ಮರ ಬಾಳುವುದಿಲ್ಲ. ಅದೇ ರೀತಿ ನಿ... ಓದನ್ನು ಮುಂದುವರಿಸಿ


Edited by: ಬಾನು

25 minutes ago

   
Image 1
ಬೆಂಗಳೂರು ನಗರ

90ನೇ ವಾರ್ಷಿಕೋತ್ಸವ: ಮಲಬಾರ್ ಮುಸ್ಲಿಂ ಅಸೋಸಿಯೇಷನ್‍ಗೆ ಸಿಎಂ ಸಿದ್ದರಾಮಯ್ಯ ಮತ್ತಿತರ ಗಣ್ಯರ ಸನ್ಮಾನ

ಬೆಂಗಳೂರು: ಸಿದ್ದರಾಮಯ್ಯ ಅವರು ಮಲಬಾರ್ ಮುಸ್ಲಿಂ ಅಸೋಸಿಯೇಷನ್ 90... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಬೆಂಗಳೂರು ನಗರ

ಕೋಮುವಾದ ಪರಿಸ್ಥಿತಿ ಕಾರಣವಾಗಿ ಐಟಿ-ಬಿಟಿ ಹೂಡಿಕೆ ತಡೆ — ಖರ್ಗೆ ಎಚ್ಚರಿಕೆ

ಬೆಂಗಳೂರು: ಕೋಮುವಾದದ ವಾತಾವರಣ ಕರಾವಳಿ ಭಾಗದ ಅಭಿವೃದ್ಧಿಗೆ ಅಡ್ಡ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಬೆಂಗಳೂರು ನಗರ

ಸ್ಥಳೀಯ ಚುನಾವಣೆಗೆ ಮೈತ್ರಿ ಸಂಕಟ: ಜೆಡಿಎಸ್ ಪ್ಲ್ಯಾನ್–ಬಿ ಸಿದ್ಧ

ಬೆಂಗಳೂರು: ಸ್ಥಳೀಯ ಸಂಸ್ಥೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಬೆಂಗಳೂರು ನಗರ

ಬಿಕ್ಲು ಶಿವ ಹತ್ಯೆ ಪ್ರಕರಣ ತೀವ್ರತೆ: ಬೈರತಿ ಬಸವರಾಜ್ ಸಿಐಡಿ ಕಸ್ಟಡಿಗೆ

ಬೆಂಗಳೂರು: ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಶಾಸಕ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಚಾಮರಾಜನಗರ

ಜಲಾಶಯದಲ್ಲಿ ತೇಲುತ್ತಿದ್ದ ಹುಲಿ ಶವ: ಅರಣ್ಯ ಇಲಾಖೆ ತೀವ್ರ ತನಿಖೆ

ಚಾಮರಾಜನಗರ, ಫೆ.15: ಕೊಳ್ಳೇಗಾಲ ತಾಲೂಕಿನ ಗುಂಡಾಲ್ ಜಲಾಶಯದಲ್ಲಿ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಕೋಲಾರ

ಮಹಾಶಿವರಾತ್ರಿ ಸಂಭ್ರಮದಲ್ಲಿ ಕೋಲಾರ ಮಿಂದೆದ್ದಿತು; ಭಾರತ ಜಯಕ್ಕಾಗಿ ವಿಶೇಷ ಪೂಜೆ

ಕೋಲಾರ: ಮಹಾಶಿವರಾತ್ರಿ ಹಬ್ಬದ ಅಂಗವಾಗಿ ಕೋಲಾರ ನಗರ ಭಕ್ತಿಭಾವದಿಂ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಚಿಕ್ಕಬಳ್ಳಾಪುರ

ಗುಡಿಬಂಡಾ

ಗುಡಿಬಂಡೆ ತಾಲೂಕಿನಾದ್ಯಂತ ಶ್ರದ್ದಾಭಕ್ತಿಯಿಂದ ಶಿವರಾತ್ರಿ ಆಚರಣೆ

ಗುಡಿಬಂಡೆ: ತಾಲೂಕಿನ ವಿವಿಧ ಶಿವನ ದೇವಾಲಯ ಸೇರಿದಂತೆ ವಿವಿಧ ದೇವಾ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ಚಿಕ್ಕಬಳ್ಳಾಪುರ

ಗುಡಿಬಂಡಾ

ಇಂದು ಪರಿಸರ ವೇದಿಕೆ, ಕನ್ನಡ ಸಾಹಿತ್ಯ ಪರಿಷತ್ತು, ಜಯ ಕರ್ನಾಟಕ, ಗ್ರೀನ್ ವಾರಿಯರ್ಸ್, ರಾಜಭೀದಿಯಲ್ಲಿ ಗಿಡ ನೆಟ್ಟು ಮಹಾಶಿವರಾತ್ರಿ ಹಬ್ಬ ಆಚರಣೆ

ಗುಡಿಬಂಡೆ : ಇಂದು ಪರಿಸರ ವೇದಿಕೆ, ಕನ್ನಡ ಸಾಹಿತ್ಯ ಪರಿಷತ್ತು, ಜ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ಚಿಕ್ಕಬಳ್ಳಾಪುರ

ಗುಡಿಬಂಡಾ

ಗುಡಿಬಂಡೆಯ ಶ್ರೀಕರ್ ಪಬ್ಲಿಕ್ ಶಾಲೆಯಲ್ಲಿ 'ಸಮಾಜ ದಿನ' ಆಚರಣೆ: ವಿದ್ಯಾರ್ಥಿಗಳಿಂದ ಐತಿಹಾಸಿಕ ಮಾದರಿಗಳ ಪ್ರದರ್ಶನ

 

ಗುಡಿಬಂಡೆ: ಪಟ್ಟಣದ ಶ್ರೀಕರ್ ಪಬ್ಲಿಕ್ ಶಾಲೆಯಲ್ಲಿ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1