ಏಪ್ರಿಲ್ 1ರಿಂದ ಸ್ವಯಂ ಜನಗಣತಿ ಆರಂಭ: ಸಾರ್ವಜನಿಕರಿಗೆ ಪಾಲಿಕೆ ಮನವಿ

ಹುಬ್ಬಳ್ಳಿ: ದೇಶವ್ಯಾಪಿ ಜನಗಣತಿ ಪ್ರಕ್ರಿಯೆಯ ಭಾಗವಾಗಿ ಏಪ್ರಿಲ್ 1ರಿಂದ ಸ್ವಯಂ ನೋಂದಣಿ ವ್ಯವಸ್ಥೆ ಆರಂಭವಾಗುತ್ತಿದೆ ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ ಘಾಳಿ ತಿಳಿಸಿದ್ದಾರೆ. ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾರ್ವಜನಿಕರು ಮೊಬೈಲ್ ಸಂಖ್ಯೆಯ ಮೂಲಕ ಅಧಿಕೃತ ವೆಬ್‌ಸೈಟ್‌ನಲ್ಲಿ ನೋಂದಣಿ ಮಾಡಿಕೊಂಡು, ತಮ್ಮ ಮನೆ ಸ್ಥಳವನ್ನು ನಕ್ಷೆಯಲ್ಲಿ ಗುರುತಿಸಿ ಕುಟುಂಬ ಸದಸ್ಯರ ವಿವರಗಳನ್ನು ಸಲ್ಲಿಸಬೇಕು ಎಂದು ಮನವಿ ಮಾಡಿದರು. ಒಟ್ಟು 33 ಪ್ರಶ್ನೆಗಳಿಗೆ ಸರಿಯಾದ ಮಾಹಿತಿಯನ್ನು ನೀಡುವ ಮೂಲಕ ಸ್ವಯಂ ಗಣತಿ ಪೂರ್ಣಗೊಳಿಸಬಹುದು ಎಂದು ಹೇಳಿದರು.

 

ಸ್ವಯಂ ಗಣತಿ ಪೂರ್ಣಗೊಂಡ ಬಳಿಕ ಸಿಗುವ ರೆಫರೆನ್ಸ್ ಐಡಿ ಸಂಖ್ಯೆಯನ್ನು ಏಪ್ರಿಲ್ 15 ನಂತರ ಮನೆಗೆ ಬರುವ ಗಣತಿದಾರರಿಗೆ ನೀಡಬೇಕು ಎಂದು ತಿಳಿಸಿದರು. ಏಪ್ರಿಲ್ 16ರಿಂದ ಕ್ಷೇತ್ರ ಪರಿಶೀಲನೆ ಕಾರ್ಯ ಆರಂಭವಾಗಲಿದ್ದು, ಗಣತಿದಾರರು ಮನೆಗೆ ಭೇಟಿ ನೀಡಿ ಸಲ್ಲಿಸಿದ ಮಾಹಿತಿಯನ್ನು ಪರಿಶೀಲಿಸಲಿದ್ದಾರೆ. ಸ್ವಯಂ ಗಣತಿ ಮಾಡದವರ ಮನೆಗಳಿಗೆ ಅಧಿಕಾರಿಗಳು ತೆರಳಿ ಮಾಹಿತಿ ಸಂಗ್ರಹಿಸಲಿದ್ದಾರೆ.

 

ಈ ಮಹತ್ವದ ಕಾರ್ಯಕ್ಕಾಗಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 2,628 ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಶಿಕ್ಷಣ, ಕಂದಾಯ ಹಾಗೂ ಪಾಲಿಕೆ ಸಿಬ್ಬಂದಿಗಳು ಈ ಕಾರ್ಯದಲ್ಲಿ ಭಾಗವಹಿಸಲಿದ್ದು, ಪ್ರತಿ ಸಿಬ್ಬಂದಿಗೆ ಸರಾಸರಿ 180 ಮನೆಗಳ ಜವಾಬ್ದಾರಿ ನೀಡಲಾಗಿದೆ. ಜನಗಣತಿ ಪ್ರಕ್ರಿಯೆ ಯಶಸ್ವಿಯಾಗಲು ಸಾರ್ವಜನಿಕರು ಸಹಕಾರ ನೀಡುವಂತೆ ಆಯುಕ್ತರು ಮನವಿ ಮಾಡಿದ್ದಾರೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

5 hours ago

   
Image 1
ಉತ್ತರಕನ್ನಡ

ಕಾರವಾರ

ಸಿಲಿಂಡರ್ ಸಿಗದೆ ಸಂಕಷ್ಟ: ಅರಣ್ಯಕ್ಕೆ ದೌಡಾಯಿಸಿದ ಜನ

ಕಾರವಾರ: ಗ್ಯಾಸ್ ಸಿಲಿಂಡರ್ ಕೊರತೆಯಿಂದ ಉತ್ತರ ಕನ್ನಡ ಜಿಲ್ಲೆಯ ಗ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ರಾಮನಗರ

ಸಂಗಮ ವನ್ಯಜೀವಿಧಾಮದಿಂದ ಆನೆಗಳ ಸಂಚಾರ?: ಜನರಲ್ಲಿ ಆತಂಕ

ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ತಾಲೂಕಿನ ಕೆಲ ಭಾಗಗ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಬೆಂಗಳೂರು ನಗರ

“ಬೂಟ್ ನೆಕ್ಕುವ ಸಂಸ್ಕೃತಿ ಇದೆಯಾ?”: ಬಿಜೆಪಿ ವಿರುದ್ಧ ಸೋಮಶೇಖರ್ ಪ್ರಶ್ನೆ

ಬೆಂಗಳೂರು: ಬಿಜೆಪಿ ಪಕ್ಷದಿಂದ ಉಚ್ಚಾಟನೆಯಾದ ಶಾಸಕ ಎಸ್.ಟಿ. ಸೋಮಶ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಬೆಂಗಳೂರು ನಗರ

ವಿದ್ಯುತ್ ದರ ಏರಿಕೆ: ಏಪ್ರಿಲ್ 1ರಿಂದ ಹೊಸ ದರ ಜಾರಿ: ಬಿಲ್ ಹೆಚ್ಚಳ ಶಾಕ್

ಬೆಂಗಳೂರು: ಹೊಸ ಆರ್ಥಿಕ ವರ್ಷದ ಆರಂಭದಲ್ಲೇ ರಾಜ್ಯದ ವಾಣಿಜ್ಯ ಹಾಗ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಬೆಂಗಳೂರು ನಗರ

ಬಿಸಿಲಿನ ತಾಪಕ್ಕೆ ಬ್ರೇಕ್: 9 ಜಿಲ್ಲೆಗಳಲ್ಲಿ ಕಚೇರಿ ಸಮಯ ಬದಲಾವಣೆ

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಬಿಸಿಲಿನ ತಾಪಮಾನವನ್ನು... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಮೈಸೂರು

ದಾಸವಾಳ ಹೂ ನುಂಗಿ ಶಿಶು ಸಾವು: ಮೈಸೂರಿನಲ್ಲಿ ಮನಕಲಕುವ ಘಟನೆ

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ದೊಡ್ಡ ಹೆಜ್ಜೂರು ಗ್ರಾಮದಲ್... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಧಾರವಾಡ

ಜಿಮ್ ಟ್ರೈನರ್ ವಿರುದ್ಧ ಅಸಭ್ಯ ವರ್ತನೆ ಆರೋಪ: ಯುವತಿಯರೊಂದಿಗೆ ದುರ್ವರ್ತನೆ?: ಜಿಮ್‌ಗೆ ಬೀಗ ಹಾಕಿ ಆಕ್ರೋಶ

ಧಾರವಾಡ: ಯುವತಿಯರೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆಂಬ ಆರೋಪದ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಬೀದರ್

ಜಮೀನಿನಲ್ಲಿ ಕೆಲಸ ಮಾಡುವಾಗ ಸಿಡಿಲು : ಯುವ ರೈತನ ಸಾವು

ಬೀದರ್: ಕೃಷಿ ಕೆಲಸಕ್ಕಾಗಿ ಜಮೀನಿಗೆ ತೆರಳಿದ್ದ ಯುವ ರೈತ ಸಿಡಿಲಿಗ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಮಂಡ್ಯ

ಹಿಂದಿ ಹೇರಿಕೆ ವಿರೋಧ: “ಕನ್ನಡಕ್ಕೇ ಮೊದಲ ಆದ್ಯತೆ”: ಸಕ್ಕರೆನಾಡಿನಲ್ಲಿ ಸಂಭ್ರಮ

ಮಂಡ್ಯ: ರಾಜ್ಯ ಸರ್ಕಾರದ ಹಿಂದಿ ಹೇರಿಕೆ ವಿರೋಧಿ ನಿರ್ಧಾರಕ್ಕೆ ಸಕ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ದಾವಣಗೆರೆ

ಮೂಲ ಸೌಕರ್ಯ ಇಲ್ಲ: ದಾವಣಗೆರೆ ಉಪಚುನಾವಣೆಗೆ ಮತದಾನ ಬಹಿಷ್ಕಾರ ಎಚ್ಚರಿಕೆ

ದಾವಣಗೆರೆ: ದಕ್ಷಿಣ ಕ್ಷೇತ್ರದ ಉಪಚುನಾವಣೆ ಕಾವು ದಿನದಿಂದ ದಿನಕ್ಕ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1