ಗೋಕರ್ಣ ಸಮೀಪ 44 ಅನಧಿಕೃತ ರೆಸಾರ್ಟ್‌ಗಳಿಗೆ ತೆರವು ಆದೇಶ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ ಸಮೀಪದ ದುಬ್ಬನಸಶಿ ಗ್ರಾಮದಲ್ಲಿ ಕರಾವಳಿ ನಿಯಂತ್ರಣ ವಲಯ (CRZ) ನಿಯಮಗಳನ್ನು ಉಲ್ಲಂಘಿಸಿ ನಿರ್ಮಿಸಲಾದ ಅನಧಿಕೃತ ರೆಸಾರ್ಟ್‌ಗಳ ವಿರುದ್ಧ ತಾಲೂಕು ಆಡಳಿತ ಕಠಿಣ ಕ್ರಮ ಕೈಗೊಂಡಿದೆ.

 

ಕುಮಟಾ ತಹಶೀಲ್ದಾರ್ ಶ್ರೀಕೃಷ್ಣ ಅವರು ಒಟ್ಟು 44 ಅನಧಿಕೃತ ರೆಸಾರ್ಟ್‌ಗಳನ್ನು ತೆರವುಗೊಳಿಸಲು ಆದೇಶ ನೀಡಿದ್ದಾರೆ. ಈ ರೆಸಾರ್ಟ್‌ಗಳು ದುಬ್ಬನಸಶಿ, ನಡುಮಸ್ಕೇರಿ ಸೇರಿದಂತೆ ಅರಬ್ಬಿ ಸಮುದ್ರ ತೀರದ ವಿವಿಧ ಭಾಗಗಳಲ್ಲಿ ನಿರ್ಮಾಣಗೊಂಡಿರುವುದಾಗಿ ತಿಳಿದುಬಂದಿದೆ.

 

ಆದರೆ 44 ರೆಸಾರ್ಟ್‌ಗಳ ಪೈಕಿ 16 ರೆಸಾರ್ಟ್ ಮಾಲೀಕರು ಕರ್ನಾಟಕ ಹೈಕೋರ್ಟ್‌ನಿಂದ ತಡೆಯಾಜ್ಞೆ ಪಡೆದಿರುವ ಹಿನ್ನೆಲೆಯಲ್ಲಿ, ಆ ರೆಸಾರ್ಟ್‌ಗಳನ್ನು ತಾತ್ಕಾಲಿಕವಾಗಿ ತೆರವುಗೊಳಿಸಲಾಗುವುದಿಲ್ಲ. ಉಳಿದ 28 ರೆಸಾರ್ಟ್‌ಗಳ ಪೈಕಿ 7 ರೆಸಾರ್ಟ್‌ಗಳನ್ನು ಮಾಲೀಕರು ಸ್ವಯಂಪ್ರೇರಿತವಾಗಿ ತೆರವುಗೊಳಿಸುತ್ತಿದ್ದು, ಉಳಿದ 21 ರೆಸಾರ್ಟ್‌ಗಳನ್ನು ತಾಲೂಕು ಆಡಳಿತ ಸೀಜ್ ಮಾಡಿ, ನಿಯಮಾನುಸಾರ ತೆರವುಗೊಳಿಸುವ ಕ್ರಮ ಕೈಗೊಳ್ಳಲಿದೆ ಎಂದು ತಹಶೀಲ್ದಾರ್ ಶ್ರೀಕೃಷ್ಣ ತಿಳಿಸಿದ್ದಾರೆ.

 

ರೆಸಾರ್ಟ್ ತೆರವು ಕಾರ್ಯಾಚರಣೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ BNS 163ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ದುಬ್ಬನಸಶಿ, ಗಂಗೆಕೊಳ್ಳ ಮತ್ತು ಭಾವಿಕೊಡ್ಲ ಗ್ರಾಮಗಳಲ್ಲಿ ಮಾರ್ಚ್ 9ರ ಬೆಳಗ್ಗೆ 10 ಗಂಟೆಯಿಂದ ಮಾರ್ಚ್ 10ರ ಬೆಳಗ್ಗೆ 10 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಈ ಆದೇಶವನ್ನು ಕುಮಟಾ ಸಹಾಯಕ ಆಯುಕ್ತ ಶ್ರವಣಕುಮಾರ ಹೊರಡಿಸಿದ್ದಾರೆ.

 

ಇದರ ನಡುವೆ ರೆಸಾರ್ಟ್ ತೆರವು ಕ್ರಮಕ್ಕೆ ವಿರೋಧ ವ್ಯಕ್ತಪಡಿಸಿ ದುಬ್ಬನಸಶಿಯಲ್ಲಿ ರೆಸಾರ್ಟ್ ಮಾಲೀಕರು ಹಾಗೂ ಕಾರ್ಮಿಕರು ಪ್ರತಿಭಟನೆ ನಡೆಸಿದರು. ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ದಿನಕರ ಶೆಟ್ಟಿ ರೆಸಾರ್ಟ್ ಮಾಲೀಕರಿಗೆ ಬೆಂಬಲ ವ್ಯಕ್ತಪಡಿಸಿದರು.

 

“ರೆಸಾರ್ಟ್ ತೆರವು ಮಾಡಲು ಬಿಡುವುದಿಲ್ಲ, ನಿಮ್ಮ ಜೊತೆ ನಾನು ಇದ್ದೇನೆ. ನ್ಯಾಯ ಸಿಗಬೇಕು” ಎಂದು ಘೋಷಣೆ ಕೂಗಿ ಅವರು ಪ್ರತಿಭಟನಾಕಾರರಿಗೆ ಧೈರ್ಯ ತುಂಬಿದರು. ಈ ಬೆಳವಣಿಗೆಯಿಂದಾಗಿ ಗೋಕರ್ಣ ಸಮೀಪದ ಕರಾವಳಿ ಪ್ರದೇಶದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ತಾಲೂಕು ಆಡಳಿತ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಂಡಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

11 hours ago

   
Image 1
Image 1
ಬೆಂಗಳೂರು ನಗರ

ಬಗರ್ ಹುಕುಂ ಯೋಜನೆ ಉದ್ದೇಶದಲ್ಲಿ ಬದಲಾವಣೆ ಇಲ್ಲ – ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು: ಅಕ್ರಮ ಸಕ್ರಮ ಬಗರ್ ಹುಕುಂ ಯೋಜನೆಯಡಿ ಅರ್ಹ ರೈತರಿಗೆ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಚಿಕ್ಕಬಳ್ಳಾಪುರ

ಕೃಷಿ ಹೊಂಡದಲ್ಲಿ ಆಕಸ್ಮಿಕ ಬಿದ್ದು ಯುವತಿ ದುರಂತ ಸಾವು

ಚಿಕ್ಕಬಳ್ಳಾಪುರ:  ಚಿಕ್ಕಬಳ್ಳಾಪುರ ತಾಲೂಕಿನ ದಿಬ್ಬೂರು ಗ್ರ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಹಾವೇರಿ

ಮೆಕ್ಕೆಜೋಳ ರಾಶಿಗೆ ಬೆಂಕಿಯಿಟ್ಟ ಕಿಡಿಗೇಡಿಗಳು – ರೈತರಿಗೆ 4 ಲಕ್ಷ ರೂ. ನಷ್ಟ

ಹಾವೇರಿ:  ಹಾವೇರಿ ಜಿಲ್ಲೆಯ ಕಾಟೇನಹಳ್ಳಿ ಗ್ರಾಮದಲ್ಲಿ ಬೆಳೆ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಹಾವೇರಿ

ಇರಾನ್-ಇಸ್ರೇಲ್ ಯುದ್ಧ: ವಿಶ್ವ ಪ್ರಸಿದ್ಧ ಬ್ಯಾಡಗಿ ಮೆಣಸಿನಕಾಯಿ ರಫ್ತು ಯುದ್ಧದ ಪರಿಣಾಮದಿಂದ ಸ್ಥಗಿತ

ಹಾವೇರಿ:  ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧದ ಪರಿಣಾಮದ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಬೆಂಗಳೂರು ನಗರ

ಹೈದರಾಬಾದ್‌ ಉತ್ತಮ, ಬೆಂಗಳೂರು ಟ್ರಾಫಿಕ್ ಜಾಮ್ ಹಾಸ್ಯ – CM ರೇವಂತ್ ರೆಡ್ಡಿ

ಬೆಂಗಳೂರು: ಐಟಿ ಸಿಟಿ ಬೆಂಗಳೂರು ನಗರದ ಟ್ರಾಫಿಕ್ ಸಮಸ್ಯೆ ಈಗ ರಾಜ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ಬೆಂಗಳೂರು ನಗರ

ಕರ್ನಾಟಕ ಪರ್ವತಾರೋಹಣ ತಂಡ ಮುಂಟ್ ಎವೆರೆಸ್ಟ್ ಏರಲು ಸಿದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭಾಶಯ

ಬೆಂಗಳೂರು: ಏಪ್ರಿಲ್ ಮತ್ತು ಮೇ ತಿಂಗಳಲ್ಲಿ Mount Everest ಏರುವ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ಕೊಡಗು

ಮಡಿಕೇರಿ

ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಮಾಜಿ ಗ್ರಾಮ ಪಂಚಾಯತ್ ಸದಸ್ಯೆ ಜಲಜಾಕ್ಷಿ ಸಾವು

ಮಡಿಕೇರಿ: ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ವಾಲ್ನೂರಿನಲ್ಲಿ... ಓದನ್ನು ಮುಂದುವರಿಸಿ


Edited by: ಬಾನು

11 hours ago

   
Image 1
ದಕ್ಷಿಣಕನ್ನಡ

ದೇವಾಲಯ ತಲುಪಿದ ಕಾಪು ರಾಜಕೀಯ ಕಿಚ್ಚು: ಸೊರಕೆ ಆರೋಪಗಳ ಹಿಂದೆ ಗುರ್ಮೆ ಸುರೇಶ್ ಶೆಟ್ಟಿ ದೇವರ ಮೊರೆ

ಉಡುಪಿ: ಕಂಬಳ ವಿಚಾರದಿಂದ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ... ಓದನ್ನು ಮುಂದುವರಿಸಿ


Edited by: ಬಾನು

11 hours ago

   
Image 1
ಬೀದರ್

ಬೀದರ್‌ನಲ್ಲಿ ಟ್ರ್ಯಾಕ್ಟರ್ ಪಲ್ಟಿ: 13 ವರ್ಷದ ಬಾಲಕ ಸ್ಥಳದಲ್ಲೇ ಸಾವು

ಬೀದರ್: ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಮದಕಟ್ಟಿ ಕ್ರಾಸ್ ಬಳಿ... ಓದನ್ನು ಮುಂದುವರಿಸಿ


Edited by: ಬಾನು

11 hours ago

   
Image 1
ಬೆಂಗಳೂರು ನಗರ

DCM ಪರಾಗಿ ನಾವು ಇದ್ದೇವೆ, ರಾಜ್ಯದ ಕಾರ್ಯ ಮುಂದುವರಿಯಲಿದೆ – ಸತೀಶ್ ಜಾರಕಿಹೊಳಿ

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಭಾನುವಾರ ಖಾಸಗ... ಓದನ್ನು ಮುಂದುವರಿಸಿ


Edited by: ಬಾನು

13 hours ago

   
Image 1