ಗ್ಯಾಸ್ ಲೀಕ್ ದುರಂತ: ಕ್ಷಣಾರ್ಧದಲ್ಲಿ ಮನೆ ಸ್ಫೋಟ
ಹಾಸನ: ಜಿಲ್ಲೆಯ ಅರಕಲಗೂಡು ತಾಲೂಕಿನ ಕೆ. ಅಬ್ಬೂರು ಗ್ರಾಮದಲ್ಲಿ ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಬದಲಿಸುವ ವೇಳೆ ಅನಿಲ ಸೋರಿಕೆಯಿಂದ ಭೀಕರ ಸ್ಫೋಟ ಸಂಭವಿಸಿ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಸುಂದರೇಶ್ ಅವರ ಮನೆಯಲ್ಲಿ ಈ ದುರ್ಘಟನೆ ನಡೆದಿದ್ದು, ಅಡುಗೆ ಅನಿಲ ಸಿಲಿಂಡರ್ ಖಾಲಿಯಾದ ಹಿನ್ನೆಲೆ ಹೊಸ ಸಿಲಿಂಡರ್ ಅಳವಡಿಸಲು ಕುಟುಂಬ ಸದಸ್ಯರು ಮುಂದಾಗಿದ್ದರು. ಈ ವೇಳೆ ರೆಗ್ಯುಲೇಟರ್ ಜೋಡಿಸುವಾಗ ಅನಿಲ ಸೋರಿಕೆಯಾಗಿ ಕ್ಷಣಾರ್ಧದಲ್ಲಿ ಸ್ಫೋಟ ಸಂಭವಿಸಿದೆ ಎಂದು ತಿಳಿದುಬಂದಿದೆ.
ಸ್ಫೋಟದ ಪರಿಣಾಮ ಮನೆಯಲ್ಲಿದ್ದ ಮಹಿಳೆ ಹಾಗೂ ಪುತ್ರ ಸೇರಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣವೇ ಸ್ಥಳೀಯರು ಗಾಯಾಳುಗಳನ್ನು ರಕ್ಷಿಸಿ ಕೊಣನೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದಾರೆ. ಗಾಯಾಳುಗಳಿಗೆ ಚಿಕಿತ್ಸೆ ಮುಂದುವರಿದಿದ್ದು, ಅವರ ಸ್ಥಿತಿ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷೆಯಲ್ಲಿದೆ.
ಸ್ಫೋಟದಿಂದ ಮನೆಯೊಳಗಿನ ಸಾಮಾನುಗಳಿಗೆ ಭಾರೀ ಹಾನಿಯಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಸ್ಫೋಟದ ಭಾರೀ ಶಬ್ದದಿಂದ ಸ್ಥಳೀಯರು ಆತಂಕಕ್ಕೀಡಾಗಿ ಕೆಲಕಾಲ ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿತ್ತು. ಈ ಸಂಬಂಧ ಕೊಣನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಆಡುಗೋಡಿಯಲ್ಲಿ ಗಾಂಜಾ ದಂಧೆ ಬಯಲು: ಮೂವರು ಪೆಡ್ಲರ್‌ಗಳು ಅರೆಸ್ಟ್
ಬೆಂಗಳೂರು: ಗಾಂಜಾ ಮಾರಾಟದಲ್ಲಿ ತೊಡಗಿದ್ದ ಮೂವರು ಪೆಡ್ಲರ್‌ಗಳನ್ನ... ಓದನ್ನು ಮುಂದುವರಿಸಿ
ಬ್ರಾಂಡೆಡ್ ವಾಚ್ ಖರೀದಿಗೆ ಎಚ್ಚರಿಕೆ: ಬ್ರಾಂಡೆಡ್ ಹೆಸರಿನಲ್ಲಿ ಮೋಸ: ₹25 ಲಕ್ಷದ ನಕಲಿ ವಾಚ್ ವಶ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬ್ರಾಂಡೆಡ್ ವಾಚ್ ಖರೀದಿಸುವ ಗ್... ಓದನ್ನು ಮುಂದುವರಿಸಿ
ಜ್ಞಾನಭಾರತಿ ಯುನಿವರ್ಸಿಟಿಯಲ್ಲಿ ವಿದ್ಯಾರ್ಥಿಗೆ ಗ್ಯಾಂಗ್ ದಾಳಿ
ಬೆಂಗಳೂರು: ಜ್ಞಾನಭಾರತಿ ಯುನಿವರ್ಸಿಟಿಯಲ್ಲಿ ವಿದ್ಯಾರ್ಥಿ ಅಭಿಷೇಕ... ಓದನ್ನು ಮುಂದುವರಿಸಿ
ರ್ಯಾಪಿಡೋ ಚಾಲಕನಿಂದ ಯುವತಿಗೆ ಕಿರುಕುಳ: ಬೆಂಗಳೂರಿನಲ್ಲಿ ಬಂಧನ
ಬೆಂಗಳೂರು: ರ್ಯಾಪಿಡೋ ಬೈಕ್ ಚಾಲಕನೊಬ್ಬ ಯುವತಿಗೆ ಲೈಂಗಿಕ ಕಿರುಕು... ಓದನ್ನು ಮುಂದುವರಿಸಿ
ಗೃಹಸಚಿವರ ವಿರುದ್ಧ ಅವಹೇಳನಕಾರಿ ಪೋಸ್ಟ್: ಸೈಬರ್ ಕ್ರೈಂ ಕೇಸ್
ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಗೃಹಸಚಿವ ಡಾ. ಜಿ. ಪರಮೇಶ್ವರ್... ಓದನ್ನು ಮುಂದುವರಿಸಿ
ಆದಾಯಕ್ಕೂ ಮೀರಿದ ಆಸ್ತಿ ಪ್ರಕರಣ: 12 ವರ್ಷದ ಬಳಿಕ ತೀರ್ಪು: ಮುನಿಯಪ್ಪಗೆ 3 ವರ್ಷ ಜೈಲು, ₹4.5 ಕೋಟಿ ದಂಡ
ಬೆಂಗಳೂರು: ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಪ್ರಕರಣದಲ್ಲಿ ಕರ್ನಾಟ... ಓದನ್ನು ಮುಂದುವರಿಸಿ
ಭದ್ರಾವತಿ
ಸೇತುವೆಯಿಂದ ಹಳ್ಳಕ್ಕೆ ಉರುಳಿದ ಬಸ್: ಅತಿ ವೇಗವೇ ಕಾರಣ?: ಬಸ್ ಅಪಘಾತದಲ್ಲಿ ಪ್ರಯಾಣಿಕರಿಗೆ ಗಾಯ
ಶಿವಮೊಗ್ಗ: ಭದ್ರಾವತಿ ತಾಲೂಕಿನ ಕಾಗೇಹಳ್ಳ ಸಮೀಪ ಖಾಸಗಿ ಬಸ್ಸೊಂದು... ಓದನ್ನು ಮುಂದುವರಿಸಿ
ಸಿನಿಮಾದ ಸ್ಟೈಲ್ ದಾಳಿ : ಕಾರು ಅಡ್ಡಗಟ್ಟಿ 38 ಲಕ್ಷ ದೋಚಿದ ದುಷ್ಕರ್ಮಿಗಳು
ದಾವಣಗೆರೆ: ಕಾರು ಅಡ್ಡಗಟ್ಟಿ 38 ಲಕ್ಷ ರೂ. ದೋಚಿದ ದರೋಡೆ ಪ್ರಕರಣ... ಓದನ್ನು ಮುಂದುವರಿಸಿ
ಮಂಗಳೂರು
12ನೇ ಮಹಡಿಯಿಂದ ಜಿಗಿದು ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ
ಮಂಗಳೂರು: ಅಪಾರ್ಟ್‌ಮೆಂಟ್‌ನ 12ನೇ ಮಹಡಿಯಿಂದ ಜಿಗಿದು ವೈದ್ಯಕೀಯ... ಓದನ್ನು ಮುಂದುವರಿಸಿ
ಡೀಸೆಲ್ ಸೋರಿಕೆ ನಡುವೆ ಅಪಘಾತ: ಅಗ್ನಿಶಾಮಕ ಸಿಬ್ಬಂದಿಯಿಂದ ಪರಿಸ್ಥಿತಿ ನಿಯಂತ್ರಣ
ಹಾಸನ: ನಗರದ ಎಂ.ಜಿ ರಸ್ತೆಯಲ್ಲಿ ಇಂದು ಮುಂಜಾನೆ ಡೀಸೆಲ್ ಟ್ಯಾಂಕರ... ಓದನ್ನು ಮುಂದುವರಿಸಿ