ಹಾಲಿನ ಜೊತೆಗೆ ಅರಿಶಿನ ಬೆರೆಸಿ ಕುಡಿದ್ರೆ ಈ ಕಾಯಿಲೆಗಳೆಲ್ಲಾ ಮಾಯ... ಆರೋಗ್ಯಕ್ಕೆ ಹತ್ತಾರು ಲಾಭ
ಹಾಲಿಗೆ ಅರಿಶಿನ ಸೇರಿಸಿ ಕುಡಿಯುವ ರೂಢಿ ನಮ್ಮ ಭಾರತೀಯ ಸಂಪ್ರದಾಯದಲ್ಲಿ ಮೊದಲಿನಿಂದಲೂ ಇದೆ. ಇದನ್ನು ಚಿನ್ನದ ಹಾಲು ಎಂದೂ ಕರೆಯುತ್ತಾರೆ. ಅದರ ಬಣ್ಣ ನೋಡಿ ಮಾತ್ರವಲ್ಲ, ಪ್ರಯೋಜನಗಳನ್ನು ನೋಡಿ. ಅತ್ಯದ್ಭುತ ಪೌಷ್ಠಿಕಾಂಶಗಳನ್ನು ಹೊಂದಿರುವ ಅರಿಶಿನ ಹಾಲನ್ನು ಕುಡಿಯುವುದರಿಂದ ಅನೇಕ ಕಾಯಿಲೆಗಳು ದೂರ ವಾಗುವುದಲ್ಲದೆ, ನಿಮ್ಮ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಪ್ರತಿದಿನ ಅರಿಶಿನ ಹಾಲನ್ನು ಕುಡಿಯುವುದರಿಂದ ಆರೋಗ್ಯಕ್ಕೆ ಆಗುವ ಲಾಭಗಳು ಇಲ್ಲಿವೆ ನೋಡಿ.
ರಕ್ತವನ್ನು ಶುದ್ಧೀಕರಿಸುತ್ತದೆ : ಅರಿಶಿನ ಹಾಲು ರಕ್ತವನ್ನು ಶುದ್ಧೀಕರಿಸುತ್ತದೆ. ರಕ್ತ ಪರಿಚಲನೆ ಹೆಚ್ಚಿಸಲು ಸಹಾಯ ಮಾಡುತ್ತದೆ. ಎಲ್ಲಾ ಕಲ್ಮಶಗಳಿಂದ ರಕ್ತನಾಳಗಳು ಮತ್ತು ದುಗ್ಧರಸ ವ್ಯವಸ್ಥೆ(ಲಿಂಫ್ಯಾಟಿಕ್ ಸಿಸ್ಟಮ್)ಯನ್ನು ಶುದ್ಧಗೊಳಿಸುತ್ತದೆ.
ಕ್ಯಾನ್ಸರ್ ತಡೆಗಟ್ಟುತ್ತದೆ : ಅರಿಶಿನ ಹಾಲನ್ನು ನಿಯಮಿತವಾಗಿ ಸೇವಿಸುವುದರಿಂದ ಆರಂಭಿಕ ಹಂತದಲ್ಲಿ ಕ್ಯಾನ್ಸರ್ ಬೆಳವಣಿಗೆಯನ್ನು ತಡೆಯಬಹುದು. ಅರಿಶಿನದಲ್ಲಿರುವ ‘ಕರ್ಕ್ಯುಮಿನ್ ‘ ಕ್ಯಾನ್ಸರ್ ಕೋಶಗಳನ್ನು ಕೊಲ್ಲಲು ಸಹಾಯ ಮಾಡುತ್ತದೆ.
ಜೀರ್ಣಕ್ರಿಯೆ ಹೆಚ್ಚಿಸುತ್ತದೆ: ಅರಿಶಿನದ ಹಾಲು ಜೀರ್ಣಕ್ರಿಯೆಯನ್ನು ಹೆಚ್ಚಿಸಿ ಹೊಟ್ಟೆಯ ಹುಣ್ಣು ಮತ್ತು ಅತಿಸಾರವನ್ನು ತಡೆಯುತ್ತದೆ. ಹೊಟ್ಟೆಯುಬ್ಬರ , ಎದೆಯುರಿ, ಇತರ ಜಠರಗರುಳಿನ ಸೋಂಕುಗಳಿದ್ದರೆ ಪ್ರತಿದಿನ ಅರಿಶಿನವನ್ನು ಒಂದು ಕಪ್ ಹಾಲಿಗೆ ಸೇರಿಸಿ ಕುಡಿಯಿರಿ.
ಸಮಯಕ್ಕೆ ಸರಿಯಾಗಿ ಋತುಚಕ್ರ: ಅರಿಶಿನದ ಹಾಲು ಕುಡಿಯುತ್ತಿದ್ದರೆ ಮುಟ್ಟಿನ ನೋವು ಶಮನಗೊಂಡು, ಋತುಚಕ್ರ ಸಮಯಕ್ಕೆ ಸರಿಯಾಗಿ ಆಗುತ್ತದೆ. ಜೊತೆಗೆ, ಲ್ಯುಕೋರಿಯಾ, ಎಂಡೊಮೆಟ್ರಿಯೊಸಿಸ್, ಫೈಬ್ರಾಯ್ಡ್ಸ್ ಮತ್ತು ಹಾರ್ಮೋನುಗಳಲ್ಲಿ ಅಸಮತೋಲನ ಹೊಂದಿರುವ ಮಹಿಳೆಯರಿಗೂ ಅರಿಶಿನ ಹಾಲು ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ.
ಕೆಮ್ಮು ಮತ್ತು ಶೀತಕ್ಕೆ ಪರಿಹಾರ : ಅರಿಶಿನ ಹಾಲು ಆಂಟಿವೈರಲ್ ಮತ್ತು ಆಂಟಿಬ್ಯಾಕ್ಟೀರಿಯಾ ಗುಣಗಳನ್ನು ಹೊಂದಿರುವುದರಿಂದ ಕೆಮ್ಮು ಮತ್ತು ಶೀತವನ್ನು ಹೋಗಲಾಡಿಸುತ್ತದೆ. ಗಂಟಲು ನೋಯುತ್ತಿದ್ದರೆ ಅರಿಶಿನ ಹಾಲನ್ನು ಕುಡಿಯಿರಿ.
ಉಸಿರಾಟದ ಸಮಸ್ಯೆಗಳ ವಿರುದ್ಧ ಹೋರಾಡುತ್ತದೆ : ಅರಿಶಿನದ ಹಾಲು ಬ್ಯಾಕ್ಟೀರಿಯಾ ಮತ್ತು ವೈರಲ್ ಸೋಂಕುಗಳ ವಿರುದ್ಧ ಹೋರಾಡುತ್ತದೆ. ಅಸ್ತಮಾ, ಬ್ರಾಂಕೈಟಿಸ್‌ಗೆ ಪರಿಣಾಮಕಾರಿ ಪರಿಹಾರವಾಗಿದೆ. ಸೈನಸ್ ಮತ್ತು ಶ್ವಾಸಕೋಶದ ಸಮಸ್ಯೆಯಿದ್ದರೂ ಪರಿಹಾರ ನೀಡುತ್ತದೆ.
ತೂಕ ಕಡಿಮೆಯಾಗುತ್ತದೆ : ಹೌದು, ಅರಿಶಿನ ಹಾಲು ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ! ದೇಹದಲ್ಲಿ ಸಂಗ್ರಹವಾಗಿರುವ ಹೆಚ್ಚುವರಿ ಕೊಬ್ಬನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ.
ಸರಿಯಾಗಿ ನಿದ್ರೆ ಬರಲು : ನಿದ್ರೆ ಸರಿಯಾಗಿ ಬರದಿದ್ದರೆ ಅರಿಶಿನ ಹಾಲು ಕುಡಿಯಿರಿ. ಮಲಗುವ ಮೊದಲು ಅರಿಶಿನ ಹಾಲು ಕುಡಿದರೆ ವಿಶ್ರಾಂತಿ ಸಿಗುತ್ತದೆ. ಮನಸ್ಸು ಶಾಂತಗೊಂಡು ನಿದ್ರೆ ಬರುತ್ತದೆ.
ಕೀಲು ನೋವು ನಿವಾರಣೆ : ಅರಿಶಿನವನ್ನು ಆಯುರ್ವೇದದಲ್ಲಿ ‘ನೈಸರ್ಗಿಕ ಆಸ್ಪಿರಿನ್’ಎಂದು ಕರೆಯುತ್ತಾರೆ. ಇದು ಎಲ್ಲಾ ರೀತಿಯ ನೋವನ್ನು ನಿವಾರಿಸುತ್ತದೆ. ಅರಿಶಿನ ಹಾಲಿನಲ್ಲಿ ಕ್ಯಾಲ್ಸಿಯಂ ಇರುವುದರಿಂದ ಕೀಲುಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಮೂಳೆಗಳನ್ನು ಆರೋಗ್ಯವಾಗಿರಿಸುತ್ತದೆ. ಈ ಹಾಲನ್ನು ಪ್ರತಿದಿನ ಸೇವಿಸುವುದರಿಂದ ಭವಿಷ್ಯದಲ್ಲಿ ಆಸ್ಟಿಯೊಪೊರೋಸಿಸ್ ಮತ್ತು ಸಂಧಿವಾತ ಬರುವುದನ್ನು ತಪ್ಪಿಸಬಹುದು.
ಚರ್ಮಕ್ಕೆ ಹೊಳಪು ನೀಡುತ್ತದೆ : ಅರಿಶಿನದ ಹಾಲು ಮೊಡವೆ, ಎಸ್ಜಿಮಾ, ಇತರ ಚರ್ಮದ ಸಮಸ್ಯೆಗಳ ವಿರುದ್ಧ ಹೋರಾಡುತ್ತದೆ. ಚರ್ಮದಲ್ಲಿ ಮೂಡಿರುವ ಸುಕ್ಕುಗಳನ್ನು ತೆಗೆದು, ನೈಸರ್ಗಿಕವಾಗಿ ಹೊಳೆಯಲು ಸಹಾಯ ಮಾಡುತ್ತದೆ.
ಹೃದ್ರೋಗದ ಅಪಾಯ ಕಡಿಮೆ ಮಾಡುತ್ತದೆ : ಅರಿಶಿನ ಹೃದ್ರೋಗದ ಅಪಾಯ ಕಡಿಮೆ ಮಾಡುತ್ತದೆ ಎಂದು ಅಧ್ಯಯನಗಳು ಹೇಳಿವೆ. ಅರಿಶಿನದಲ್ಲಿನ ಕರ್ಕ್ಯುಮಿನ್ ಸೈಟೊಕಿನ್ ಗಳ ಬಿಡುಗಡೆ ತಡೆಯುತ್ತದೆ. ಈ ಸೈಟೊಕಿನ್ ಗಳು ಹೆಚ್ಚಾಗಿ ಹೃದಯ ಸಂಬಂಧಿ ಕಾಯಿಲೆಗೆ ಸಂಬಂಧಿಸಿವೆ.
ಮಧುಮೇಹ ಚಿಕಿತ್ಸೆಗೆ : ಅರಿಶಿನದಲ್ಲಿರುವ ಕರ್ಕ್ಯುಮಿನ್ ಅಂಶ ರಕ್ತದಲ್ಲಿರುವ ಗ್ಲೂಕೋಸ್ ಮಟ್ಟ ಕಡಿಮೆ ಮಾಡುತ್ತದೆ. ಇದು ಮಧುಮೇಹ ಚಿಕಿತ್ಸೆಗೆ ಸಹಾಯ ಮಾಡುತ್ತದೆ. ಡಯಾಬಿಟಿಕ್ ನೆಫ್ರೋಪತಿ, ಡಯಾಬಿಟಿಕ್ ರೆಟಿನೋಪತಿ ಚಿಕಿತ್ಸೆಯಲ್ಲಿ ಕರ್ಕ್ಯುಮಿನ್ ಬಳಸಲಾಗುತ್ತದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ನಿಮ್ಮ ಮೂತ್ರಪಿಂಡದಲ್ಲಿ ಕಲ್ಲುಗಳು ಇವೆಯೇ..? ಮೂತ್ರಪಿಂಡದ ಕಲ್ಲು ಹೊರ ಹಾಕಲು ನಿತ್ಯ ಈ ಜ್ಯೂಸ್ ಕುಡಿಯಿರಿ…!
ನಿಮ್ಮ ಮೂತ್ರಪಿಂಡದಲ್ಲಿ ಕಲ್ಲುಗಳು ಇವೆಯೇ..? ಹಾಗಿದ್ರೆ ಈ ಸುದ್ದಿ ಪೂರ್ತಿ ಓದಿ.. ವೀ... ಓದನ್ನು ಮುಂದುವರಿಸಿ
ವೀಳ್ಯದೆಲೆಯನ್ನು ಸುಣ್ಣದ ಜೊತೆಗಲ್ಲ, ತುಳಸಿ ಬೀಜದ ಜೊತೆಗೆ ತಿಂದ್ರೆ ಆರೋಗ್ಯಕ್ಕೆ ಒಳ್ಳೆಯದಂತೆ
ವೀಳ್ಯದೆಲೆ ಮತ್ತು ಸುಣ್ಣದ ಜೊತೆ ವೀಳ್ಯದೆಲೆಯನ್ನು ತಿನ್ನುವುದು ಆರೋಗ್ಯಕ್ಕೆ ಪ್ರಯೋಜನ... ಓದನ್ನು ಮುಂದುವರಿಸಿ
ತ್ಯಾಗದ ಪ್ರತೀಕ ಬಕ್ರೀದ್ ಹಬ್ಬದ ಮಹತ್ವ ಇಲ್ಲಿದೆ...
ಬಕ್ರೀದ್… ಮುಸ್ಲಿಂ ಧರ್ಮೀಯರ ಪ್ರಮುಖ ಹಬ್ಬ. ವಿಶ್ವದಾದ್ಯಂತ ಇರುವ ಮುಸ್ಲಿಂ ಧರ್ಮೀಯರು... ಓದನ್ನು ಮುಂದುವರಿಸಿ
ಪುರುಷರೇ ಗಮನಿಸಿ… ನೀರಿನಲ್ಲಿ ನೆನೆಸಿದ ಒಣದ್ರಾಕ್ಷಿ ಸೇವಿಸೋದ್ರಿಂದ ಎಷ್ಟೆಲ್ಲಾ ಪ್ರಯೋಜಕಾರಿ ಗೊತ್ತಾ !?
ಒಣದ್ರಾಕ್ಷಿಯನ್ನು ರಾತ್ರಿ ನೀರಿನಲ್ಲಿ ನೆನೆಸಿಟ್ಟು ಬೆಳಗ್ಗೆ ಸೇವಿಸುವುದರಿಂದ ಸಾಕಷ್ಟ... ಓದನ್ನು ಮುಂದುವರಿಸಿ
ಮಂಡಕ್ಕಿ ಅಥವಾ ಕಡಲೆಪುರಿ ಸೇವನೆ ಆರೋಗ್ಯಕ್ಕೆ ತುಂಬಾ ಪ್ರಯೋಜಕಾರಿ!
ಮನೆಯಲ್ಲಿ ಮಂಡಕ್ಕಿ ಮಸಾಲ ತಯಾರಿಸಿ ಡಬ್ಬದಲ್ಲಿ ಶೇಖರಿಸಿಟ್ಟಿರುತ್ತಾರೆ. ಸಂಜೆಯ ಸ್ನಾಕ... ಓದನ್ನು ಮುಂದುವರಿಸಿ
ನೀವು ಚಪಾತಿ ಪ್ರೇಮಿಗಳಾ? ಹಾಗಾದರೆ ಒಬ್ಬ ವ್ಯಕ್ತಿ ಒಂದು ದಿನಕ್ಕೆ ಎಷ್ಟು ಚಪಾತಿ ತಿನ್ನಬೇಕು? ತಪ್ಪದೇ ತಿಳಿಯಿರಿ!
ನೀವು ತೂಕ ಇಳಿಸಿಕೊಳ್ಳಲು ಬಯಸಿದರೆ, ಇದಕ್ಕಾಗಿ ನೀವು ತಿನ್ನುವ ರೊಟ್ಟಿಯ ಪ್ರಮಾಣದ ಬಗ್... ಓದನ್ನು ಮುಂದುವರಿಸಿ
ನಿಮಗೆ ಗೊತ್ತೇ..? ಹುಣಸೆ ಹಣ್ಣಿನ ಹುಳಿಗಿದೆ ಸೌಂದರ್ಯವನ್ನು ದುಪ್ಪಟ್ಟು ಮಾಡುವ ಪವರ್.!
ತಜ್ಞರ ಅಭಿಪ್ರಾಯದಲ್ಲಿ ಹುಣಸೆ ಹಣ್ಣು ನಿಮ್ಮ ಮುಖದ ಹೊಳಪನ್ನು ಹೆಚ್ಚು ಮಾಡಿ ನಿಮ್ಮ ಸೌ... ಓದನ್ನು ಮುಂದುವರಿಸಿ
ಕರ್ಬೂಜ ಬೀಜ ಎಸೆದು ಮೂರ್ಖರಾಗಬೇಡಿ… ಬೀಜಗಳಲ್ಲೂ ಅಡಗಿದೆ ಆರೋಗ್ಯ ಪ್ರಯೋಜನ; ತಿಳಿದ್ರೆ ಶಾಕ್ ಆಗ್ತೀರಿ!
ದೇಹವನ್ನು ತಂಪಗಾಗಿಸಲು ನೀವು ಸವಿಯಬಹುದಾದ ಫ್ರೆಶ್ ಜ್ಯೂಸ್‌ಗಳ ಪೈಕಿ ಕರ್ಬೂಜ ಹಣ್ಣು ಕ... ಓದನ್ನು ಮುಂದುವರಿಸಿ
ಬಿಪಿ ಇಲ್ಲವೆಂದು ಹೆಚ್ಚು ಉಪ್ಪು ಸೇವನೆ ಮಾಡುವವರೇ ಎಚ್ಚರ! ಹಾಗಿದ್ರೆ ಈ ಸುದ್ದಿ ಮಿಸ್ ಮಾಡ್ದೆ ನೋಡಿ!
ಬಿಪಿ ಸಮಸ್ಯೆ ಇಲ್ಲದವರು “ನಮಗೆ ಯಾವುದೇ ರೀತಿಯ ಸಮಸ್ಯೆ ಇಲ್ಲ ನಾವು ಹೆಚ್ಚಿನ ಪ್ರಮಾಣದ... ಓದನ್ನು ಮುಂದುವರಿಸಿ
ಪಪ್ಪಾಯಿ ಎಲೆಯ ರಸ ಕುಡಿದರೆ ಸಾಕು ಈ ಎಲ್ಲಾ ರೋಗಗಳಿಂದ ಸಿಗುವುದು ಮುಕ್ತಿ
ಹಣ್ಣನ್ನು ಹೊರತುಪಡಿಸಿ, ಪಪ್ಪಾಯಿ ಗಿಡದ ಅತಿ ಹೆಚ್ಚು ಬಳಕೆಯಾದ ಭಾಗವೆಂದರೆ ಎಲೆ. ಪಪ್ಪ... ಓದನ್ನು ಮುಂದುವರಿಸಿ