ಹಾಸನಾಂಬೆ ಉತ್ಸವ ದೀಪಾಲಂಕಾರದಲ್ಲಿ ಗೋಲ್ಮಾಲ್? 15 ಲಕ್ಷ ರೂಪಾಯಿ ಗಲಾಟೆ ಸಂಶಯ

ಹಾಸನ: ವರ್ಷಕ್ಕೊಮ್ಮೆ ಮಾತ್ರ ದರ್ಶನ ಭಾಗ್ಯ ನೀಡುವ ಶಕ್ತಿದೇವತೆ ಹಾಸನಾಂಬೆ ದೇವಸ್ಥಾನ ಉತ್ಸವದ ವಿದ್ಯುತ್ ದೀಪಾಲಂಕಾರ ಟೆಂಡರ್ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಲಕ್ಷಾಂತರ ಭಕ್ತರು ಭಾಗವಹಿಸುವ ಈ ಜಾತ್ರೆಯಲ್ಲಿ ಭಕ್ತರ ಹಣ ದುರ್ಬಳಕೆ ಆಗಿರುವ ಸಾಧ್ಯತೆ ಕುರಿತು ಗಂಭೀರ ಪ್ರಶ್ನೆಗಳು ಎದ್ದಿವೆ. ಆರ್‌ಟಿಐ ಕಾರ್ಯಕರ್ತ ಮನು ಸಲ್ಲಿಸಿದ ದೂರಿನ ಆಧಾರದಲ್ಲಿ ಲೋಕಾಯುಕ್ತ ಅಧಿಕಾರಿಗಳು ಮಹಾನಗರ ಪಾಲಿಕೆ ಕಚೇರಿಯಲ್ಲಿ ಪರಿಶೀಲನೆ ನಡೆಸಿದ್ದಾರೆ. ಮುಜರಾಯಿ ಇಲಾಖೆಯ ಗ್ರೇಡ್ ಒನ್ ದೇವಸ್ಥಾನಕ್ಕೆ ಸಂಬಂಧಿಸಿದ ಟೆಂಡರ್ ಪ್ರಕ್ರಿಯೆಯಲ್ಲಿ ನಿಯಮ ಉಲ್ಲಂಘನೆ ನಡೆದಿದೆ ಎಂಬ ಆರೋಪ ವ್ಯಕ್ತವಾಗಿದೆ.

 

ಪ್ರತಿ ವರ್ಷವೂ ಒಬ್ಬನೇ ಗುತ್ತಿಗೆದಾರನಿಗೆ ಟೆಂಡರ್ ನೀಡಲಾಗುತ್ತಿದ್ದು, ಅಗತ್ಯ ದಾಖಲೆಗಳು ಸಮರ್ಪಕವಾಗಿ ಸಲ್ಲಿಸಲ್ಪಟ್ಟಿಲ್ಲ ಎಂಬ ಆರೋಪವೂ ಕೇಳಿಬಂದಿದೆ. ಲೋಕಾಯುಕ್ತ ಅಧಿಕಾರಿ ಗಾಯಿತ್ರಿ ಅವರ ನೇತೃತ್ವದಲ್ಲಿ ನಡೆದ ವಿಚಾರಣೆಯಲ್ಲಿ ಮಹಾನಗರ ಪಾಲಿಕೆ ಇಂಜಿನಿಯರ್ ಸುಜಾತಾ ಹಾಗೂ ನಿವೃತ್ತ ಇಂಜಿನಿಯರ್ ರಂಗಸ್ವಾಮಿ ಅವರನ್ನು ಪ್ರಶ್ನಿಸಲಾಯಿತು. ದಾಖಲೆಗಳ ಕೊರತೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅಧಿಕಾರಿಗಳು, ಸೂಕ್ತ ಮಾಹಿತಿ ಒದಗಿಸದಿದ್ದರೆ ವರದಿ ಸಲ್ಲಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.

 

ವಿದ್ಯುತ್ ದೀಪಾಲಂಕಾರದಲ್ಲಿ ಸುಮಾರು 15 ಲಕ್ಷ ರೂಪಾಯಿಗೂ ಅಧಿಕ ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಲೈಟಿಂಗ್ ಹಾಗೂ ಹೂವಿನ ಅಲಂಕಾರ ಸೇರಿದಂತೆ ವಿವಿಧ ಗುತ್ತಿಗೆಗಳನ್ನು ಒಂದೇ ವ್ಯಕ್ತಿಗೆ ನೀಡಿರುವುದು ಅನುಮಾನಗಳಿಗೆ ಕಾರಣವಾಗಿದೆ. ಆರೋಪಗಳ ಕುರಿತು ಸಂಬಂಧಿತ ಅಧಿಕಾರಿಗಳ ಪ್ರತಿಕ್ರಿಯೆ ನಿರೀಕ್ಷೆಯಲ್ಲಿದ್ದು, ಮುಂದಿನ ತನಿಖೆಯ ಬಳಿಕ ಹೆಚ್ಚಿನ ವಿವರಗಳು ಬಹಿರಂಗವಾಗುವ ಸಾಧ್ಯತೆ ಇದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

8 hours ago

   
Image 1
Image 1
ಚಾಮರಾಜನಗರ

ಬಿಳಿಗಿರಿ ಅರಣ್ಯದಲ್ಲಿ ಹುಲಿ ಸಾವು: ಉರುಳು ಹಾಕಿದ್ದ ಬೇಟೆಗಾರ ಬಂಧನ

ಚಾಮರಾಜನಗರ: ಬಿಳಿಗಿರಿ ಹುಲಿ ಸಂರಕ್ಷಿತಾರಣ್ಯದ ಕೊಳ್ಳೇಗಾಲ ವಲಯದಲ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ಗದಗ

ಲಕ್ಕುಂಡಿ “ಚಿನ್ನದ ನಿಧಿ” ಪ್ರಕರಣಕ್ಕೆ ಹೊಸ ತಿರುವು .. ಹಂಡೆಯಲ್ಲಿ ಚಿನ್ನದ ನಾಣ್ಯ ವಿಡಿಯೋ… ಬಳಿಕ ಬಯಲಾದ ನಕಲಿ ಕಥೆ

ಗದಗ: ಲಕ್ಕುಂಡಿ ಗ್ರಾಮದಲ್ಲಿ 455 ಗ್ರಾಂ ಚಿನ್ನ ಪತ್ತೆಯಾದ ಸುದ್ದ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ಉತ್ತರಕನ್ನಡ

ದಾಂಡೇಲಿ

ರಸ್ತೆ ಬದಿ ಚಪ್ಪಲಿ ಹೊಲಿಸಿದ ಅಣ್ಣಂದಿರ ಕನಸು ನನಸಾದ ದಿನ –ಸಿವಿಲ್ ಜಡ್ಜ್ ಆದ ಪದ್ಮಾವತಿ ಮಾದಿಗ

ದಾಂಡೇಲಿ : ಬಡತನವು ಸಾಧನೆಗೆ ಅಡ್ಡಿಯಾಗುವುದಿಲ್ಲ ಎಂಬುದನ್ನು ತಮ್... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ವಿಜಯಪುರ

ಸಿಂದಗಿ ಆಸ್ಪತ್ರೆ ದುರಂತ: ವೈದ್ಯರ ಕೊರತೆ, ಹೆರಿಗೆ ವೇಳೆ ನವಜಾತ ಶಿಶು ಹಾಗೂ ತಾಯಿ ಸಾವು

ವಿಜಯಪುರ : ಸಿಂದಗಿ ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ... ಓದನ್ನು ಮುಂದುವರಿಸಿ


Edited by: ಬಾನು

11 hours ago

   
Image 1
ರಾಮನಗರ

ರಾಮನಗರದಲ್ಲಿ ವಿಶೇಷ ಕ್ಷಣ : ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆಗೆ ಆಗಮ

ರಾಮನಗರ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ರಾಮ... ಓದನ್ನು ಮುಂದುವರಿಸಿ


Edited by: ಬಾನು

11 hours ago

   
Image 1
ಕಲ್ಬುರ್ಗಿ

ಕಲಬುರಗಿ: ಬೀದಿ ನಾಯಿಗಳ ದಾಳಿಯಲ್ಲಿ 5 ಮಕ್ಕಳಿಗೆ ಗಂಭೀರ ಗಾಯ

ಕಲಬುರಗಿ : ನಗರದ ದೇವಿನಗರ ಬಡಾವಣೆಯಲ್ಲಿ ಭಾನುವಾರದಂದು ನಡೆದ ದುರ... ಓದನ್ನು ಮುಂದುವರಿಸಿ


Edited by: ಬಾನು

11 hours ago

   
Image 1
ಬೆಂಗಳೂರು ನಗರ

ಕೆಎಂಎಫ್ ನಂದಿನಿ ಉತ್ಪನ್ನಗಳಿಗೆ QR ಕೋಡ್‌ ಜೊತೆ ಹೊಸ ಸುರಕ್ಷತಾ ಕ್ರಮ

ಬೆಂಗಳೂರು: ರಾಜ್ಯದ ಹೆಮ್ಮೆಯ ನಂದಿನಿ ಉತ್ಪನ್ನಗಳ ಸುರಕ್ಷತೆಯನ್ನು... ಓದನ್ನು ಮುಂದುವರಿಸಿ


Edited by: ಬಾನು

15 hours ago

   
Image 1
ಬೆಂಗಳೂರು ನಗರ

ಕಲ್ಯಾಣ ಮಂಟಪಗಳಿಗೆ ವಧು–ವರರ ವಯಸ್ಸು ಪರಿಶೀಲನೆ ಕಡ್ಡಾಯವಿಲ್ಲ: ಹೈಕೋರ್ಟ್ ಸ್ಪಷ್ಟನೆ

ಬೆಂಗಳೂರು : ಕರ್ನಾಟಕ ಹೈಕೋರ್ಟ್ ಬಾಲ್ಯ ವಿವಾಹ ಆರೋಪದಲ್ಲಿ ಹುಸೈನ... ಓದನ್ನು ಮುಂದುವರಿಸಿ


Edited by: ಬಾನು

15 hours ago

   
Image 1
ಮಂಡ್ಯ

ಮದ್ದೂರು

ನಾಡಬಾಂಬ್ ಸ್ಫೋಟದಲ್ಲಿ ಹಸುವಿನ ಬಾಯಿ ಛಿದ್ರ-ಛಿದ್ರ; ರೈತ ಮಹಿಳೆ ಗಂಭೀರ ಆಘಾತ

ಮಂಡ್ಯ: ಮದ್ದೂರು ತಾಲ್ಲೂಕಿನ K. M. Doddi ಸಮೀಪದ ಹರಳಹಳ್ಳಿ ಗ್ರ... ಓದನ್ನು ಮುಂದುವರಿಸಿ


Edited by: ಬಾನು

18 hours ago

   
Image 1
ಮಂಡ್ಯ

ವೈರಮುಡಿ ಬ್ರಹ್ಮೋತ್ಸವ: ಮಂಡ್ಯದಲ್ಲಿ 13 ದಿನಗಳ ಶೋಭಾಯಾತ್ರೆ ಪ್ರಾರಂಭ

ಮಂಡ್ಯ: ಮಾರ್ಚ್ 23ರಿಂದ ಏಪ್ರಿಲ್ 5ರವರೆಗೆ ನಡೆಯುವ ವೈರಮುಡಿ ಬ್ರ... ಓದನ್ನು ಮುಂದುವರಿಸಿ


Edited by: ಬಾನು

18 hours ago

   
Image 1