ಹುಡುಗಿ ವಿಚಾರಕ್ಕೆ ಕಿರಿಕ್ - ನಡು ರಸ್ತೆಯಲ್ಲಿ ಲಾಂಗು, ಮಚ್ಚು ಹಿಡಿದು ಹೊಡೆದಾಟ!

ತುಮಕೂರು: ಯುವತಿಯ ವಿಚಾರಕ್ಕೆ ಎರಡು ಗುಂಪುಗಳ ನುಡವೆ ಮಾರಾಮಾರಿ ನಡೆದಿದ್ದು, ನಡು ರಸ್ತೆಯಲ್ಲೇ ಗುಂಪುಗಳು ಮಚ್ಚು ಹೊಡೆದಾಡಿಕೊಂಡ ಶಾಕಿಂಗ್‌ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ಪಟ್ಟಣದಲ್ಲಿ ನಡೆದಿದೆ. ವರದಿಗಳ ಪ್ರಕಾರ ಬಿದನಗೆರೆ ಗ್ರಾಮದ ಜಗದೀಶ್ ಎಂಬಾತ ಕುಣಿಗಲ್ ಪಟ್ಟಣದ ಹೌಸಿಂಗ್ ಬೋರ್ಡ್ ವಾಸಿ ಮಂಜುನಾಥ್ ಎಂಬವನ ತಂಗಿಯನ್ನು ಪ್ರೀತಿಸುತ್ತಿದ್ದ. ಕಳೆದ ಮೂರು ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಈ ವಿಚಾರ ಮಂಜುನಾಥ್ ಗೆ ಗೊತ್ತಾಗಿ, ಗಲಾಟೆ ನಡೆದಿದೆ.

 

ನಿನ್ನೆ ಬೆಳಗ್ಗೆ ಕುಣಿಗಲ್ ಪಟ್ಟಣದಲ್ಲಿ ಎರಡು ಕಡೆಯಿಂದ ನ್ಯಾಯ ಪಂಚಾಯ್ತಿ ಮಾಡಲಾಗಿತ್ತು. ಆದರೆ ನ್ಯಾಯ ಪಂಚಾಯ್ತಿ ಬಗೆಹರಿದಿರಲಿಲ್ಲ. ಬಳಿಕ ಯುವತಿಯ ಸಹೋದರ ಮಂಜುನಾಥ್ ಹಾಗೂ ಆತನ ಸ್ನೇಹಿತರು ಮನೆಗೆ ವಾಪಸ್ ತೆರಳುತ್ತಿದ್ದ ವೇಳೆ ಯುವತಿಯನ್ನು ಲವ್ ಮಾಡುತ್ತಿದ್ದ ಜಗದೀಶ್ ಹಾಗೂ ಆತನ ಸ್ನೇಹಿತ ವಿಜಯ್ ಹಲ್ಲೆಗೆ ಮುಂದಾಗಿದ್ದಾರೆ.

 

ಇದರಿಂದ ರೊಚ್ಚಿಗೆದ್ದ ಮಂಜುನಾಥ್‌ ಹಾಗೂ ಸಹಚರರು ಮಚ್ಚು ತಂದು ಜಗದೀಶ್ ಹಾಗೂ ವಿಜಯ್ ಮೇಲೆ‌ ಮಾರಣಾತಿಂಕ ಹಲ್ಲೆ ನಡೆಸಿದ್ದಾರೆ. ಮಂಜುನಾಥ್ ಹಾಗೂ ಆತನ ಸ್ನೇಹಿತ ನವೀನ್ ನಡು ರಸ್ತೆಯಲ್ಲೇ ಮಚ್ಚು ಬೀಸಿದ್ದಾರೆ. ಗಲಾಟೆಯಲ್ಲಿ ಜಗದೀಶ್ ಹಾಗೂ ವಿಜಯ್‌ಗೆ ಗಂಭೀರವಾದ ಗಾಯಗಳಾಗಿವೆ. ಕೂಡಲೇ ಗಾಯಳುಗಳಿಗೆ ಕುಣಿಗಲ್ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಬೆಳ್ಳೂರಿನ ಆದಿಚುಂಚನಗಿರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಕುಣಿಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

9 hours ago

   
Image 1
Image 1
ಮೈಸೂರು

ನಂಜನಗೂಡು

ಬೈಕ್ ನಲ್ಲಿ ತೆರಳುತ್ತಿದ್ದ ದಂಪತಿ ಮೇಲೆ ಚಿರತೆ ಅಟ್ಯಾಕ್...ಮಗು ಸೇರಿ ಮೂವರಿಗೆ ಗಂಭೀರ ಗಾಯ

ನಂಜನಗೂಡು : ಜಮೀನಿಗೆ ಬೈಕ್ ನಲ್ಲಿ ತೆರಳುತ್ತಿದ್ದ ರೈತ ದಂಪತಿಗಳ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಬೆಂಗಳೂರು ನಗರ

ಬಸ್‌ಗಳಲ್ಲಿ ತಂಬಾಕು ಉತ್ಪನ್ನ ಜಾಹೀರಾತಿಗೆ ನಿರ್ಬಂಧ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಕೆಕೆಆರ್‌ಟಿಸಿ, ಬಿಎಂಟ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಕೊಪ್ಪಳ

ಕೊಪ್ಪಳದಲ್ಲಿ ಲೋಕಾಯುಕ್ತ ಅಧಿಕಾರಿಗಳ ದಾಳಿ : ಕಿಮ್ಸ್ ಆಡಳಿತಾಧಿಕಾರಿ ಬಿ.ಕಲ್ಲೇಶ ಮನೆ ಶೋಧ

ಕೊಪ್ಪಳ  :  ಕೊಪ್ಪಳ ತಾಲೂಕು ಭಾಗ್ಯನಗರ ಪಟ್ಟಣದಲ್ಲಿನ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ಗ್ರಾಮಾಂತರ

ಆನೇಕಲ್ ತಾಲ್ಲೂಕು

ಮನರೇಗಾ ಮರುಜಾರಿಗೆ ಆಗ್ರಹಿಸಿ ಚನಕೆ, ಬಾಂಡ್ಲಿ, ಸುತ್ತಿಗೆ ಹಿಡಿದು ವಿನೂತನ ಪ್ರತಿಭಟನೆ

ಬೆಂಗಳೂರು : ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ರಾಜ್ಯ ಮಹಿಳಾ ಕಾ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ತುಮಕೂರು

ನಿವೇಶನ ಸರ್ವೆಗೆ ಹಿರಿಯ ನಟಿ ಜಯಶ್ರೀ ಅಲೆದಾಡಿಸಿದ ಭೂಮಾಪನ ಅಧಿಕಾರಿ

ತುಮಕೂರು: ನಿವೇಶನ ಸಮೀಕ್ಷೆಯ ವಿಚಾರವಾಗಿ ಹಿರಿಯ ರಂಗಕರ್ಮಿ, ರಾಜ್... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೀದರ್

ಹುಮನಾಬಾದ

ಬೀದರ್ ನಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟ, ತನಿಖೆಗೆ ಖಂಡ್ರೆ ಆದೇಶ

ಬೀದರ್:  ಹುಮ್ನಾಬಾದ್ ಸಮೀಪ ಅನುಮಾನಾಸ್ಪದ ವಸ್ತು ಸ್ಫೋಟಗೊಂ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ರಾಜ್ಯ ಸರ್ಕಾರಿ ನೌಕರರು ತಿಂಗಳ ಮೊದಲ ಶನಿವಾರ `ಖಾದಿ ಬಟ್ಟೆ' ಧರಿಸೋದು ಕಡ್ಡಾಯ : ಸರ್ಕಾರ ಮಹತ್ವದ ಆದೇಶ

ಬೆಂಗಳೂರು: ರಾಜ್ಯದ ಸರ್ಕಾರಿ ನೌಕರರು ಸ್ವಯಂ ಪ್ರೇರಣೆಯಿಂದ ಪ್ರತಿ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಚಿಕ್ಕಬಳ್ಳಾಪುರ

ಶಿಡ್ಲಘಟ್ಟ

ನಾನು ಕಳ್ಳತನ ಮಾಡಿಲ್ಲ, ಕೊಲೆ ಮಾಡಿಲ್ಲ ಶಿಡ್ಲಘಟ್ಟದ ಜನರಿಗಾಗಿ ತ್ಯಾಗ ಮಾಡಿದ್ದೇನೆ, ಬೇಲ್ ಪಡೆದ ರಾಜೀವ್ ಗೌಡ ಹೊಸ ವರಸೆ

ಚಿಕ್ಕಬಳ್ಳಾಪುರ: ಬ್ಯಾನರ್ ತೆರವು ವಿಚಾರಕ್ಕೆ ಸಂಬಂಧಪಟ್ಟಂತೆ ಶಿಡ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ಹೋಂ ವರ್ಕ್ ಮಾಡಿಲ್ಲ ಎಂದು 4ನೇ ತರಗತಿ ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ: ಪೋಷಕರಿಗೆ ಹೇಳಿದರೆ ಕತ್ತು ಹಿಸುಕುತ್ತೇನೆ ಎಂದು ಬೆದರಿಕೆ

ಬೆಂಗಳೂರು : ಹೋಂ ವರ್ಕ್ ಮಾಡಿಲ್ಲ ಎಂಬ ಕಾರಣಕ್ಕೆ ಶಿಕ್ಷಕಿಯೊಬ್ಬರ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಚಿಕ್ಕಬಳ್ಳಾಪುರ

ಗುಡಿಬಂಡಾ

ಮಹಾತ್ಮ ಗಾಂಧೀಜಿ ಉದ್ಯೋಗ ಖಾತ್ರಿ ಯೋಜನೆ ರದ್ದಿಗೆ ವಿರೋಧ. ಸಿಪಿಎಂ ವತಿಯಿಂದ ಉಪವಾಸ ಸತ್ಯಾಗ್ರಹ.

ಗುಡಿಬಂಡೆ: ಕೇಂದ್ರ ಸರ್ಕಾರವು ಮಹಾತ್ಮ ಗಾಂಧೀಜಿ ರಾಷ್ಟ್ರೀಯ ಗ್ರಾ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1