“ಝಾಂಬಿ ಡ್ರಗ್” ಸುಳ್ಳು ವಿಡಿಯೋ ವೈರಲ್: ದುನಿಯಾ ವಿಜಯ್ ಸೇರಿದಂತೆ 25 ಮಂದಿಗೆ ಪೊಲೀಸರ ನೋಟಿಸ್
ಬೆಂಗಳೂರು: “ಝಾಂಬಿ ಡ್ರಗ್” ಹೆಸರಿನಲ್ಲಿ ವೈರಲ್ ಆದ ವಿಡಿಯೋಗೆ ಸಂಬಂಧಿಸಿ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಕಠಿಣ ಎಚ್ಚರಿಕೆ ನೀಡಿದ್ದಾರೆ. ತಪ್ಪು ಮಾಹಿತಿ ಹಂಚಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಡಿಯೋದಲ್ಲಿರುವ ಯುವಕನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಆತ ಯಾವುದೇ “ಝಾಂಬಿ ಡ್ರಗ್” ಸೇವಿಸಿಲ್ಲ ಎಂದು ವರದಿ ತಿಳಿಸಿದೆ ಎಂದರು. ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ ವ್ಯಕ್ತಿಯನ್ನು ಈಗಾಗಲೇ ಬಂಧಿಸಲಾಗಿದೆ. ಆತ ತನ್ನ ತಪ್ಪನ್ನು ಒಪ್ಪಿಕೊಂಡು ಕ್ಷಮೆಯಾಚನೆ ಮಾಡಿರುವ ಮತ್ತೊಂದು ವಿಡಿಯೋ ಬಿಡುಗಡೆ ಮಾಡಿದ್ದಾನೆ.
ಬಾಗಲೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದು, ವಿಡಿಯೋವನ್ನು ಹಂಚಿಕೊಂಡವರಿಗೂ ನೋಟಿಸ್ ನೀಡುವ ಪ್ರಕ್ರಿಯೆ ಆರಂಭಿಸಲಾಗಿದೆ. ಆರಂಭಿಕ ಹಂತದಲ್ಲಿ ಸುಮಾರು 25 ಮಂದಿಗೆ ನೋಟಿಸ್ ನೀಡುವ ಸಾಧ್ಯತೆ ಇದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ. ಆಧಾರರಹಿತ ಮಾಹಿತಿಯನ್ನು ಹಂಚುವುದು ಗಂಭೀರ ಅಪರಾಧವಾಗಿದ್ದು, ಇಂತಹ ಪ್ರಕರಣಗಳಲ್ಲಿ ಕಾನೂನು ಕ್ರಮ ತಪ್ಪದೇ ಕೈಗೊಳ್ಳಲಾಗುತ್ತದೆ ಎಂದು ಆಯುಕ್ತರು ಎಚ್ಚರಿಸಿದ್ದಾರೆ. ಯಾವುದೇ ವಿಷಯದ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸುವ ಮೊದಲು ವೈದ್ಯಕೀಯ ವರದಿ ಅಥವಾ ಅಧಿಕೃತ ಮಾಹಿತಿಯನ್ನೇ ಆಧಾರವಾಗಿಟ್ಟುಕೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.
ವಿದೇಶಗಳಲ್ಲಿ ಕಂಡುಬರುವ ಡ್ರಗ್ ಬಳಕೆಯ ಉದಾಹರಣೆಗಳನ್ನು ಉಲ್ಲೇಖಿಸಿ ಈ ವಿಡಿಯೋ ಹಂಚಲಾಗಿದೆ ಎಂದು ತನಿಖೆಯಲ್ಲಿ ಬಹಿರಂಗವಾಗಿದೆ. ಈ ಕುರಿತು ಸಂಬಂಧಿಸಿದ ವ್ಯಕ್ತಿಯನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಇದೇ ವೇಳೆ, ನಟ ದುನಿಯಾ ವಿಜಯ್ ಹಾಗೂ ನಿವೃತ್ತ ಪೊಲೀಸ್ ಆಯುಕ್ತ Bhaskar Rao ಸೇರಿದಂತೆ ಕೆಲವರು ಈ ವಿಡಿಯೋವನ್ನು ಹಂಚಿಕೊಂಡಿರುವುದು ಕೂಡ ಗಮನಕ್ಕೆ ಬಂದಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಮಾಣಿಕ್ಯಧಾರಾ ದುರಂತ: 3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿ ಶವವಾಗಿ ಪತ್ತೆ
ಚಿಕ್ಕಮಗಳೂರು: ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರಾ ಜಲಪಾತ... ಓದನ್ನು ಮುಂದುವರಿಸಿ
ಮದ್ದೂರು
ರೌಡಿಶೀಟರ್ ಯಶ್ವಂತ್ ಹತ್ಯೆ: ಆರೋಪಿಗಳ ಹೆಡೆಮುರಿ ಕಟ್ಟಿದ ಮದ್ದೂರು ಪೊಲೀಸರು
ಮದ್ದೂರು: ಸಿಗರೇಟ್ ಎಂಬ ಸಾಮಾನ್ಯ ವಿಷಯದಿಂದ ಆರಂಭವಾದ ಗಲಾಟೆ ಕೊಲ... ಓದನ್ನು ಮುಂದುವರಿಸಿ
ಕಳ್ಳತನಕ್ಕೂ ಮುನ್ನ ದೇವರಿಗೆ ನಮಸ್ಕಾರ: ದೇವಾಲಯದ ಹುಂಡಿ ಕಳವು ಸಿಸಿಟಿವಿಯಲ್ಲಿ ಸೆರೆ
ಚಾಮರಾಜನಗರ: ಕಳ್ಳರಿಗೆ ಭಯವೇ ಇಲ್ಲ ಎಂಬ ಮಾತು ಸಾಮಾನ್ಯ. ಆದರೆ ಗು... ಓದನ್ನು ಮುಂದುವರಿಸಿ
ಸರ್ಕಾರಿ ಕಚೇರಿಯಲ್ಲೇ ದಲಿತ ಮಹಿಳೆ ಅವಮಾನ ಆರೋಪ: 3 MSIL ಅಧಿಕಾರಿಗಳ ವಿರುದ್ಧ ಪ್ರಕರಣ
ಬೆಂಗಳೂರು: MSIL ಚಿಟ್ ಫಂಡ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ದ... ಓದನ್ನು ಮುಂದುವರಿಸಿ
6 ವರ್ಷದ ಪ್ರೀತಿ ಅಂತ್ಯ – ಮದುವೆ ನಿರಾಕರಣೆಗೆ ಯುವಕ ಆತ್ಮಹತ್ಯೆ
ಬೆಂಗಳೂರು: ಪ್ರೀತಿಯ ವಿಚಾರದಲ್ಲಿ ಮನನೊಂದು ಯುವಕ ಆತ್ಮಹತ್ಯೆ ಮಾಡ... ಓದನ್ನು ಮುಂದುವರಿಸಿ
‘ಜೋಂಬಿ ಡ್ರಗ್’ ಆರೋಪಕ್ಕೆ ಬ್ರೇಕ್ – ಪೊಲೀಸರಿಂದ ಸ್ಪಷ್ಟನೆ
ಬೆಂಗಳೂರು: ನಗರದಲ್ಲಿ ‘ಜೋಂಬಿ ಡ್ರಗ್’ ನಶೆಯಲ್ಲಿ ವ್ಯಕ್ತಿ ತೇಲಾಡ... ಓದನ್ನು ಮುಂದುವರಿಸಿ
ಅಪ್ರಾಪ್ತೆಯ ಮೇಲಿನ ದೌರ್ಜನ್ಯ: ಆರೋಪಿಗೆ 20 ವರ್ಷ ಜೈಲು ಶಿಕ್ಷೆ
ಮಂಡ್ಯ: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲ... ಓದನ್ನು ಮುಂದುವರಿಸಿ
ಆನೇಕಲ್ ಜಾತ್ರೆಯಲ್ಲಿ ಅಪಘಾತ : ಪಲ್ಲಕ್ಕಿ ಟ್ರ್ಯಾಕ್ಟರ್ ಹರಿದು ಯುವಕ ಸಾವು
ಆನೇಕಲ್: ತಾಲೂಕಿನ ಹುಳಿಮಾವು ಗ್ರಾಮದ ಶ್ರೀ ಕೋದಂಡ ರಾಮಸ್ವಾಮಿ ದೇ... ಓದನ್ನು ಮುಂದುವರಿಸಿ
ಹುಬ್ಬಳ್ಳಿ
“ಬಾಲ ಬಿಚ್ಚಿದರೆ ಗುಂಡಾ ಕಾಯ್ದೆ” – 450ಕ್ಕೂ ಹೆಚ್ಚು ರೌಡಿಗಳಿಗೆ ಕಮಿಷನರ್ ಶಶಿಕುಮಾರ್ ಖಡಕ್ ವಾರ್ನಿಂಗ್
ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ನಗರದಲ್ಲಿ ಪುಡಿ ರೌಡಿಗಳ ಚಟುವಟಿ... ಓದನ್ನು ಮುಂದುವರಿಸಿ
ಪ್ರೇಯಸಿ ಸಾವಿನ ಸುದ್ದಿ ಕೇಳಿ ಪ್ರಿಯಕರ ಆತ್ಮಹತ್ಯೆ
ಬಾಗಲಕೋಟೆ: ಪ್ರೇಯಸಿ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ತಿಳಿದು ಪ್ರಿ... ಓದನ್ನು ಮುಂದುವರಿಸಿ