ಜಿ7 ಶೃಂಗಸಭೆಯಲ್ಲಿ ಪಾಳ್ಗೊಳ್ಳಲು ಇಟಲಿಗೆ ಪ್ರಧಾನಿ ಮೋದಿ: ಮೆಲೋನಿ ಜತೆ ದ್ವಿಪಕ್ಷೀಯ ಸಭೆ
ಪ್ರಧಾನಿ ನೇಂದ್ರ ಮೋದಿ ಇಂದು ಇಟಲಿಯಲ್ಲಿ ನಡೆಯಲಿರುವ ಜಿ7 ಶೃಂಗಸಭೆಯಲ್ಲಿ ಪಾಳ್ಗೊಳ್ಳಲಿದ್ದಾರೆ. ಈ ವೇಳೆ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಹಾಗೂ ಪ್ರಧಾನಿ ಮೋದಿ ನಡುವೆ ದ್ವಿಪಕ್ಷೀಯ ಮಾತುಕತೆಗಳು ನಡೆಯಲಿವೆ. ಸತತ ಮೂರನೇ ಅವಧಿಗೆ ಅಧಿಕಾರ ವಹಿಸಿಕೊಂಡ ನಂತರ ಪ್ರಧಾನಿ ಮೋದಿಯವರ ಮೊದಲ ವಿದೇಶ ಪ್ರವಾಸ ಇದಾಗಿದೆ.
ಬೋರ್ಗೊ ಎಗ್ನಾಜಿಯಾದ ಐಷಾರಾಮಿ ರೆಸಾರ್ಟ್‌ನಲ್ಲಿ ನಡೆಯುತ್ತಿರುವ ಜಿ7 ಶೃಂಗಸಭೆಯಲ್ಲಿ ವಿಶ್ವದ ಗಣ್ಯ ನಾಯಕರ ಜೊತೆಗೆ ಜನರ ಜೀವನ ಸುಧಾರಿಸುವ ಹಾಗೂ ಕೃತಕ ಬುದ್ಧಿಮತ್ತೆ, ಶಕ್ತಿ, ಆಫ್ರಿಕಾ-ಮೆಡಿಟರೇನಿಯನ್ ವಿಷಯ ಸೇರಿದಂತೆ ಹಲವು ವಿಚಾರಗಳ ಕುರಿತು ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಈ ವೇಳೆ ಇಟಾಲಿಯನ್ ಪ್ರಧಾನಿ ಜಾರ್ಜಿಯಾ ಮೆಲೋನಿ, ಪೋಪ್ ಫ್ರಾನ್ಸಿಸ್ ಅವರು ಸಹ ಇರಲಿದ್ದಾರೆ.
ಅಪುಲಿಯಾದಲ್ಲಿ ಶೃಂಗಸಭೆಯಲ್ಲಿ ಅವರು ಭಾಗಿಯಾಗಲಿದ್ದು, ಅಲ್ಲಿ ಅವರು ವಿಶ್ವ ನಾಯಕರೊಂದಿಗೆ ಹಲವು ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ ಎಂದು ಭಾರತದ ದೇಶಾಂಗ ವ್ಯವಹಾರಗಳ ಸಚಿವಾಲಯದ ಅಧಿಕೃತ ವಕ್ತಾರ ರಣಧೀರ್ ಜೈಸ್ವಾಲ್ ವಿಡಿಯೋ ಮೂಲಕ ತಿಳಿಸಿದ್ದಾರೆ. ಜಿ7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಇಟಲಿಗೆ ಆಗಮಿಸಿದ್ದೇನೆ, ವಿಶ್ವ ನಾಯಕರೊಂದಿಗೆ ದ್ವಿಪಪಕ್ಷೀಯ ಚರ್ಚೆಗಳಲ್ಲಿ ತೊಡಗಿಸಿಕೊಳ್ಳಲು ಎದುರು ನೋಡುತ್ತಿದ್ದೇನೆ.
ನಾವೆಲ್ಲರೂ ಒಟ್ಟಾಗಿ, ಜಾಗತಿಕ ಸವಾಲುಗಳನ್ನು ಎದುರಿಸಲು ಮತ್ತು ಉಜ್ವಲ ಭವಿಷ್ಯಕ್ಕಾಗಿ ಅಂತಾರಾಷ್ಟ್ರೀಯ ಸಹಕಾರವನ್ನು ಬೆಳೆಸುವ ಗುರಿಯನ್ನು ಹೊಂದಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. ಜಿ7 ಯುಎಸ್, ಯುಕೆ, ಫ್ರಾನ್ಸ್, ಇಟಲಿ, ಜರ್ಮನಿ, ಕೆನಡಾ ಹಾಗೂ ಜಪಾನ್ ಅನ್ನು ಒಳಗೊಂಡಿದೆ. ಭಾರತವಲ್ಲದೆ ಆಫ್ರಿಕಾ, ದಕ್ಷಿಣ ಅಮೆರಿಕ ಹಾಗೂ ಇಂಡೋ ಪೆಸಿಫಿಕ್ ಪ್ರದೇಶದ 11 ಅಭಿವೃದ್ಧಿಶೀಲ ರಾಷ್ಟ್ರಗಳ ನಾಯಕರನ್ನು ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಇಟಲಿ ಆಹ್ವಾನಿಸಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಅಪಾಯಕ್ಕೆ ಸಿಲುಕಿದ ಹಾಯಿ ದೋಣಿ: 11 ಮಂದಿ ಸಾವು, 66ಕ್ಕೂ ಹೆಚ್ಚು ಜನರ ನಾಪತ್ತೆ
ಇಟಲಿಯ ಕರಾವಳಿಯಲ್ಲಿ ಸೋಮವಾರ ಹಾಯಿ ದೋಣಿಯೊಂದು ಅಪಪಾಯಕ್ಕೆ ಸಿಲುಕಿದ್ದು ಪರಿಣಾಮ ಕನಿಷ... ಓದನ್ನು ಮುಂದುವರಿಸಿ
ಕೆನಡಾ: 20 ಮಿಲಿಯನ್ ಡಾಲರ್ ಚಿನ್ನ ಕಳ್ಳತನ- ಭಾರತೀಯ ಮೂಲದ ಶಂಕಿತ ಆರೋಪಿ ಶರಣು.
ಇಬ್ಬರು ಏರ್ ಕೆನಡಾ ಉದ್ಯೋಗಿಗಳು ಸೇರಿದಂತೆ ಶಂಕಿತರು ಸ್ವಿಟ್ಜರ್ಲೆಂಡ್ನಿಂದ ಆಗಮಿಸುವ... ಓದನ್ನು ಮುಂದುವರಿಸಿ
ಇಸ್ರೇಲ್- ಹಮಾಸ್ ಯುದ್ಧದಿಂದ ಗಾಜಾದಲ್ಲಿ ಮೃತಪಟ್ಟವರ ಸಂಖ್ಯೆ 37,296.
ಪ್ಯಾಲೆಸ್ಟೀನ್ ಹಾಗೂ ಇಸ್ರೇಲ್ ನಡುವೆ ಎಂಟು ತಿಂಗಳಿನಿಂದ ನಡೆಯುತ್ತಿರುವ ಯುದ್ಧದಿಂದ... ಓದನ್ನು ಮುಂದುವರಿಸಿ
ಮೋದಿ ಜೊತೆ ಸೆಲ್ಫಿ ಕ್ಲಿಕ್ಕಿಸಿ Melodi ಎಂದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ
ಜಿ7 ಶೃಂಗ ಸಭೆಯಲ್ಲಿ ಭಾಗಿಯಾಗಲು ಪ್ರಧಾನಿ ನರೇಂದ್ರ ಮೋದಿ ಇಟಲಿಗೆ ತೆರಳಿದ್ದರು. ಸಭೆ... ಓದನ್ನು ಮುಂದುವರಿಸಿ
ಇನ್ಮುಂದೆ ಆಂಟಿಗಳು ಜಿಮ್ʼಗೆ ಬರಬಾರದು: ಸುಂದರ ಮಹಿಳೆಯರಿಗೆ ಮಾತ್ರ ಪ್ರವೇಶ – ಪೋಸ್ಟರ್ ವೈರಲ್
ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಎಲ್ಲರೂ ಫಿಟ್ ಆಗಿರಲು ಜಿಮ್ ಗ... ಓದನ್ನು ಮುಂದುವರಿಸಿ
ಕುವೈತ್ ಅಗ್ನಿ ದುರಂತ: ಲುಲು ಗ್ರೂಪ್ ನಿಂದ ಮೃತಪಟ್ಟವರಿಗೆ ತಲಾ 5 ಲಕ್ಷ ರೂ. ಪರಿಹಾರ
ಕುವೈತ್ ನ ವಸತಿ ಅಪಾರ್ಟ್ಮೆಂಟ್ ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 45 ಭಾರತೀಯರು ಸ... ಓದನ್ನು ಮುಂದುವರಿಸಿ
ಕುವೈತ್ ಅಗ್ನಿ ಅವಘಡ : IAF ವಿಮಾನದ ಮೂಲಕ ಕೊಚ್ಚಿ ವಿಮಾನ ನಿಲ್ದಾಣಕ್ಕೆ ಮೃತದೇಹಗಳು ರವಾನೆ
ಕುವೈತ್ ಮಂಗಾಫ್‌ನಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮೃತಪಟ್ಟ 45 ಮಂದಿ ಭಾರತೀಯರ ಪಾ... ಓದನ್ನು ಮುಂದುವರಿಸಿ
ಸೆಕ್ಸ್ ಗಾಗಿ ಕುದುರೆ ಆಫರ್ ನೀಡಿದ ಎಲಾನ್ ಮಸ್ಕ್: ಮಹಿಳಾ ಸಿಬ್ಬಂದಿ ಆರೋಪ
ಸ್ಪೇಸ್ ಎಕ್ಸ್ ನ ಮಾಜಿ ಉದ್ಯೋಗಿಗಳು ಎಲಾನ್ ಮಸ್ಕ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಹ... ಓದನ್ನು ಮುಂದುವರಿಸಿ
ಕಾಂಗೋ: ಎರಡು ಹಡಗುಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಹಡಗು ಮಗುಚಿ 80 ಮಂದಿ ಸಾವು
ಕಾಂಗೋ: ಎರಡು ಹಡಗುಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಹಡಗು... ಓದನ್ನು ಮುಂದುವರಿಸಿ
ಕುವೈತ್ ವಸತಿ ಕಟ್ಟಡದಲ್ಲಿ ಅಗ್ನಿದುರಂತದಲ್ಲಿ ಮೃತರಲ್ಲಿ ಹೆಚ್ಚು ಕೇರಳದವರು
ಕುವೈತ್ ನ ವಸತಿ ಕಟ್ಟಡದಲ್ಲಿ ಬುಧವಾರ ಸಂಭವಿಸಿದ ಅಗ್ನಿ ದುರಂತದಲ್ಲಿ 49 ಮಂದಿ ಮೃತಪಟ... ಓದನ್ನು ಮುಂದುವರಿಸಿ