ಜಿಬಿಎ–ಬಿಬಿಎಂಪಿ ಚುನಾವಣೆ ಪೂರ್ವ ತಯಾರಿ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ವಿಶೇಷ ಸಭೆ
ಬೆಂಗಳೂರು: ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಗ್ರೇಟರ್ ಬೆಂಗಳೂರು ಅಥಾರಿಟಿ (ಜಿಬಿಎ–ಬಿಬಿಎಂಪಿ) ಚುನಾವಣೆಗೆ ಸಂಬಂಧಿಸಿದ ಪೂರ್ವ ತಯಾರಿ ಸಭೆ ಆರಂಭವಾಗಿದೆ. ಜಿಬಿಎ ಚುನಾವಣೆಗೆ ಸಂಬಂಧಿಸಿ ರಾಜ್ಯ ಬಿಜೆಪಿ ವಿಶೇಷ ಸಭೆ ಕರೆದಿದ್ದು, ಚುನಾವಣಾ ಉಸ್ತುವಾರಿ ರಾಮ್ ಮಾಧವ್ ಅವರ ನೇತೃತ್ವದಲ್ಲಿ ಮೊದಲ ಸಭೆ ನಡೆಯಿತು. ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆಯ ವಿಪಕ್ಷ ನಾಯಕ ಆರ್. ಅಶೋಕ್, ಸಹ ಉಸ್ತುವಾರಿ ಸತೀಶ್ ಪೂನಿಯಾ, ಸಂಜಯ್ ಉಪಾಧ್ಯಾಯ, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಬೆಂಗಳೂರು ನಗರ ಹಾಗೂ ಗ್ರಾಮಾಂತರದ ಸಂಸದರು, ಶಾಸಕರು, ಎಂಎಲ್‌ಸಿಗಳು, ಜಿಲ್ಲಾಧ್ಯಕ್ಷರು, ಮಾಜಿ ಸಚಿವರು ಮತ್ತು ಹಿರಿಯ ಮುಖಂಡರು ಭಾಗವಹಿಸಿದ್ದರು.
ಜಿಬಿಎ–ಬಿಬಿಎಂಪಿ ಚುನಾವಣೆಯಲ್ಲಿ ಅಧಿಕಾರದ ಮೇಲೆ ಕಣ್ಣಿಟ್ಟಿರುವ ಬಿಜೆಪಿ, ಗೆಲುವಿನ ತಂತ್ರಗಳ ಕುರಿತು ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಸಿತು. ಐದು ಪಾಲಿಕೆಗಳನ್ನು ಗೆಲ್ಲುವ ಸಂಬಂಧ ಚುನಾವಣಾ ತಂತ್ರಗಾರಿಕೆ, ಕ್ಷೇತ್ರವಾರು ಸ್ಥಿತಿಗತಿ ಹಾಗೂ ಸಂಘಟನಾ ಬಲವರ್ಧನೆ ಕುರಿತು ಮಾತುಕತೆ ನಡೆಯಿತು. ಇದೇ ವೇಳೆ ಮೈತ್ರಿ ಪಕ್ಷ ಜೆಡಿಎಸ್ ಜೊತೆ ಚುನಾವಣೆಗೆ ಹೋಗುವ ಬಗ್ಗೆ ಸಹ ಚರ್ಚೆ ನಡೆದಿದ್ದು, ಈ ಕುರಿತು ಶೀಘ್ರದಲ್ಲೇ ಸ್ಪಷ್ಟ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಆರೋಪಗಳನ್ನು ಬೆಂಗಳೂರಿನ ಜನರಿಗೆ ಇನ್ನಷ್ಟು ಪರಿಣಾಮಕಾರಿಯಾಗಿ ತಲುಪಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಬೆಂಗಳೂರು ನಗರದ ಪ್ರಮುಖ ನಾಗರಿಕ ಸಮಸ್ಯೆಗಳು, ಪಕ್ಷದ ಅಭ್ಯರ್ಥಿಗಳು ಹಾಗೂ ಆಕಾಂಕ್ಷಿಗಳ ಆಯ್ಕೆ ಕುರಿತು ಮುಂದಿನ ದಿನಗಳಲ್ಲಿ ಸಭೆಗಳು ನಡೆಯಲಿವೆ. ಜೊತೆಗೆ ಪಕ್ಷದ ಚುನಾವಣಾ ಪ್ರಚಾರ ತಂತ್ರ, ಸಾರ್ವಜನಿಕ ಸಂಪರ್ಕ ಹಾಗೂ ಪ್ರಚಾರ ಕಾರ್ಯತಂತ್ರಗಳ ಬಗ್ಗೆ ಸಹ ಸಭೆಯಲ್ಲಿ ಪ್ರಾಥಮಿಕ ಮಾತುಕತೆ ನಡೆಸಲಾಗಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
"ಅಧಿಕಾರ ಹಂಚಿಕೆ ಒಪ್ಪಂದವಾಗಿದೆ – ಡಿಕೆಶಿ ಹೇಳಿದರೆ ಪ್ರಾಣ ಕೊಡೋದಕ್ಕೂ ಸಿದ್ದ: ಶಾಸಕ ಶಿವಗಂಗಾ ಬಸವರಾಜ್
ದಾವಣಗೆರೆ: ರಾಜ್ಯ ಕಾಂಗ್ರೆಸ್ ರಾಜಕೀಯದಲ್ಲಿ ಅಧಿಕಾರ ಹಂಚಿಕೆ ವಿಚ... ಓದನ್ನು ಮುಂದುವರಿಸಿ
ಗೌರಿಬಿದನೂರು: ಖಾಸಗಿ ಶಾಲೆಯಲ್ಲಿ ವಿದ್ಯಾರ್ಥಿ ಮೇಲೆ ಶಿಕ್ಷಕರ ಹಲ್ಲೆ ಎಂಟನೇ ತರಗತಿಯ ವಿದ್ಯಾರ್ಥಿ ಪ್ರಜ್ಞೆ ಕಳೆದುಕೊಂಡು ಖಾಸಗಿ ಆಸ್ಪತ್ರೆಗೆ ದಾಖಲು
ಚಿಕ್ಕಬಳ್ಳಾಪುರ : ಗೌರಿಬಿದನೂರು ನಗರದ ಖಾಸಗಿ ವಿದ್ಯಾನಿಧಿ ಶಾಲೆಯ... ಓದನ್ನು ಮುಂದುವರಿಸಿ
ಜಾತ್ರೆಗೆ ಕಡಿಯಲು ತಂದ ಆಡು ರೈತನ ಪಾಲಿಗೆ ವರ: ಒಂದೇ ಬಾರಿ 6 ಮರಿಗೆ ಜನ್ಮ
ಚಿಕ್ಕಮಗಳೂರು: ಚಂದ್ರಕಟ್ಟೆ ಪ್ರದೇಶದಲ್ಲಿ ಅಪರೂಪದ ಘಟನೆ ನಡೆದಿದೆ... ಓದನ್ನು ಮುಂದುವರಿಸಿ
ಪ್ರೇಯಸಿಯ ಖಾಸಗಿ ಕ್ಷಣಗಳ ಸೆರೆ: “ಇದು ಪ್ರೇಮವಲ್ಲ, ಅಪರಾಧ” ಎಂದ ಹೈಕೋರ್ಟ್
ಬೆಂಗಳೂರು: ಪ್ರೇಮ ಸಂಬಂಧದ ನೆಪದಲ್ಲಿ ಪ್ರೇಯಸಿಯ ಖಾಸಗಿ ಕ್ಷಣಗಳನ್... ಓದನ್ನು ಮುಂದುವರಿಸಿ
ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಭರ್ಜರಿ ದಾಳಿ ₹2.97 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂ... ಓದನ್ನು ಮುಂದುವರಿಸಿ
ಮೆಟ್ರೋ ದರ ಏರಿಕೆ ವಿಚಾರ ರಾಜ್ಯ ಸರ್ಕಾರದ ವಿರುದ್ಧ ಎಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ
ಬೆಂಗಳೂರು: ಮೆಟ್ರೋ ದರ ಏರಿಕೆ ವಿಷಯದಲ್ಲಿ ರಾಜ್ಯ ಸರ್ಕಾರದ ವಿರುದ... ಓದನ್ನು ಮುಂದುವರಿಸಿ
ಬೆಂಗಳೂರು ಐಟಿ ಉದ್ಯೋಗಿಯ ಅಳಲು: ₹50,000 ಬಾಡಿಗೆ, ಆದರೆ ಐಷಾರಾಮಿ ಸೌಲಭ್ಯ ಬಳಸಲು ಸಮಯವಿಲ್ಲ
ಬೆಂಗಳೂರು: ಬೆಂಗಳೂರಿನಲ್ಲಿ ಮನೆಗಳ ಬಾಡಿಗೆ ದಿನದಿಂದ ದಿನಕ್ಕೆ ಏರ... ಓದನ್ನು ಮುಂದುವರಿಸಿ
ಬೆಳೆವಿಮೆ ಯೋಜನೆ ಜಾರಿಯಲ್ಲಿ ಕರ್ನಾಟಕ ನಂ.1: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರವು ಮನರೇಗ... ಓದನ್ನು ಮುಂದುವರಿಸಿ
“ಮಹಾತ್ಮರನ್ನೇ ಬಂಡವಾಳ ಮಾಡಿಕೊಂಡಿದ್ದಾರೆ ಬಿಜೆಪಿ ಮತ್ತು ಕಾಂಗ್ರೆಸ್” – ಮುಖ್ಯಮಂತ್ರಿ ಚಂದ್ರು ಆಕ್ರೋಶ
ಪ್ರತಿ ದಿನ ರಾಜ್ಯದ ಪ್ರಮುಖ ದಿನಪತ್ರಿಕೆಗಳ ಮುಖಪುಟಗಳಲ್ಲಿ ವಿಧಿ ಜಿ ರಾಮ್ ಜಿ ಯೋಜನೆಯ... ಓದನ್ನು ಮುಂದುವರಿಸಿ
ಗುಡಿಬಂಡಾ
ಚರಂಡಿ ಸ್ವಚ್ಛತೆ ಇಲ್ಲದೆ ನರಳುತ್ತಿರುವ ಗ್ರಾಮಸ್ಥರು – ಅಂಗನವಾಡಿ, ವಿದ್ಯುತ್ ಸಮಸ್ಯೆಗಳಿಗೂ ಉತ್ತರ ಇಲ್ಲ.
ಗುಡಿಬಂಡೆ: ಬೀಚಗಾನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ... ಓದನ್ನು ಮುಂದುವರಿಸಿ