ಕಾನೂನು ಪದವಿಧಾರರಿಗೆ ಸುನಿಹ ಸುದ್ದಿ: ಡೆಲ್ಲಿ ಹೈಕೋರ್ಟ್‌ನಲ್ಲಿ 152 ಹುದ್ದೆಗಳ ಭರ್ಜರಿ ನೇಮಕಾತಿ!
ನವದೆಹಲಿ : ಹೈಕೋರ್ಟ್‍ಗಳಲ್ಲಿ 152 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ, ಮತ್ತು ಇದಕ್ಕೆ ಅರ್ಜಿ ಸಲ್ಲಿಸಲು ಕಾನೂನು ಪದವಿ ಹೊಂದಿರುವ ಅಭ್ಯರ್ಥಿಗಳು ಅರ್ಹರು ದೆಹಲಿ ಹೈಕೋರ್ಟ್ ಜೂನಿಯರ್ ಜ್ಯುಡಿಷಿಯಲ್ ಅಸಿಸ್ಟೆಂಟ್ / ರಿಸ್ಟೋರರ್ (JJA) ನೇಮಕಾತಿ ಪರೀಕ್ಷೆ–2026ರ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಒಟ್ಟು 152 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಕಾನೂನು ಕ್ಷೇತ್ರದಲ್ಲಿ ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ.
ಆನ್‌ಲೈನ್ ನೋಂದಣಿ ಪ್ರಕ್ರಿಯೆ ಫೆಬ್ರವರಿ 4ರಿಂದ ಆರಂಭವಾಗಲಿದ್ದು, ಫೆಬ್ರವರಿ 23ರ ರಾತ್ರಿ 11 ಗಂಟೆಯವರೆಗೆ ಅರ್ಜಿಗಳನ್ನು ಸಲ್ಲಿಸಬಹುದು. ಈ ನೇಮಕಾತಿ ಗ್ರೂಪ್–ಬಿ ವರ್ಗದಡಿ ನಡೆಯಲಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ 7ನೇ ವೇತನ ಆಯೋಗದ ಪ್ರಕಾರ ಲೆವೆಲ್–6 ಸಂಬಳ ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಜೊತೆಗೆ, ಕಂಪ್ಯೂಟರ್‌ನಲ್ಲಿ ನಿಮಿಷಕ್ಕೆ ಕನಿಷ್ಠ 35 ಪದಗಳ ಇಂಗ್ಲಿಷ್ ಟೈಪಿಂಗ್ ವೇಗ ಹೊಂದಿರುವುದು ಕಡ್ಡಾಯವಾಗಿದೆ. ಜನವರಿ 1, 2026ರ ವೇಳೆಗೆ ಅಭ್ಯರ್ಥಿಗಳ ವಯಸ್ಸು 18ರಿಂದ 32 ವರ್ಷಗಳೊಳಗಿರಬೇಕು. ನಿಯಮಾನುಸಾರ ಎಸ್‌ಸಿ, ಎಸ್‌ಟಿ, ಒಬಿಸಿ, ಪಿಡಬ್ಲ್ಯೂಬಿಡಿ ಸೇರಿದಂತೆ ಮೀಸಲು ವರ್ಗಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ. ಕೊನೆಯ ದಿನಾಂಕದೊಳಗೆ ಅಗತ್ಯವಿರುವ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು.
ಆಯ್ಕೆ ಪ್ರಕ್ರಿಯೆ ಹೇಗಿರುತ್ತದೆ?
ಆಯ್ಕೆ ಪ್ರಕ್ರಿಯೆ ಒಟ್ಟು ನಾಲ್ಕು ಹಂತಗಳಲ್ಲಿ ನಡೆಯಲಿದೆ.
ಪ್ರಾಥಮಿಕ ಪರೀಕ್ಷೆಯಲ್ಲಿ ಋಣಾತ್ಮಕ ಅಂಕಗಳ ವ್ಯವಸ್ಥೆ ಇರಲಿದೆ. ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಅಂಕಗಳ ಆಧಾರದ ಮೇಲೆ ಅಂತಿಮ ಮೆರಿಟ್ ಪಟ್ಟಿ ಸಿದ್ಧಪಡಿಸಲಾಗುತ್ತದೆ.
ಅರ್ಜಿ ಶುಲ್ಕ ವಿವರ
ಸಾಮಾನ್ಯ, ಒಬಿಸಿ ಹಾಗೂ ಇಡಬ್ಲ್ಯೂಎಸ್ ವರ್ಗದ ಅಭ್ಯರ್ಥಿಗಳು 1,500 ರೂ. ಅರ್ಜಿ ಶುಲ್ಕ ಪಾವತಿಸಬೇಕಾಗುತ್ತದೆ.
ಎಸ್‌ಸಿ, ಎಸ್‌ಟಿ ಮತ್ತು ಪಿಡಬ್ಲ್ಯೂಬಿಡಿ ವರ್ಗದ ಅಭ್ಯರ್ಥಿಗಳಿಗೆ 1,300 ರೂ. ಶುಲ್ಕ ನಿಗದಿಪಡಿಸಲಾಗಿದೆ. ಶುಲ್ಕವನ್ನು ಯುಪಿಐ, ನೆಟ್ ಬ್ಯಾಂಕಿಂಗ್, ಕ್ರೆಡಿಟ್ ಅಥವಾ ಡೆಬಿಟ್ ಕಾರ್ಡ್ ಮೂಲಕ ಆನ್‌ಲೈನ್‌ನಲ್ಲಿ ಪಾವತಿಸಬಹುದು.
ಅರ್ಜಿ ನಮೂನೆಯಲ್ಲಿ ದೋಷಗಳಿದ್ದಲ್ಲಿ, ಅವುಗಳನ್ನು ಸರಿಪಡಿಸಲು ಫೆಬ್ರವರಿ 27ರವರೆಗೆ ತಿದ್ದುಪಡಿ ವಿಂಡೋ ಲಭ್ಯವಿರುತ್ತದೆ. ಇದಕ್ಕೆ ಪ್ರತ್ಯೇಕ ಶುಲ್ಕ ವಿಧಿಸಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ
ಅಭ್ಯರ್ಥಿಗಳು ದೆಹಲಿ ಹೈಕೋರ್ಟ್‌ನ ಅಧಿಕೃತ ವೆಬ್‌ಸೈಟ್ www.delhihighcourt.nic.in ಗೆ ಭೇಟಿ ನೀಡಿ, ನೇಮಕಾತಿ ವಿಭಾಗದಲ್ಲಿರುವ JJA / Restorer Exam 2026 ಲಿಂಕ್ ಅನ್ನು ಆಯ್ಕೆ ಮಾಡಬೇಕು. ಮೊದಲು ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಿ, ನಂತರ ಅರ್ಜಿ ನಮೂನೆಯನ್ನು ಜಾಗ್ರತೆಯಿಂದ ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ ಶುಲ್ಕ ಪಾವತಿಸಿದ ಬಳಿಕ ಅರ್ಜಿಯನ್ನು ಸಲ್ಲಿಸಬಹುದು.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಯಾವುದೇ ಲಿಖಿತ ಪರೀಕ್ಷೆಯಿಲ್ಲ: Indian Navy SSC ನಲ್ಲಿ 260 Sub Lieutenant ಹುದ್ದೆಗಳಿಗೆ ಅರ್ಜಿ ಆಹ್ವಾನ
Indian Navy ಯಲ್ಲಿ ಅಧಿಕಾರಿಯಾಗಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಸುವರ್ಣಾವಕಾಶ... ಓದನ್ನು ಮುಂದುವರಿಸಿ
SC-ST ಮಹಿಳಾ ಯುವನಿಧಿ ಫಲಾನುಭವಿಗಳಿಗೆ ಅವಕಾಶ: 30 ದಿನಗಳ ಉಚಿತ ಫ್ಯಾಷನ್ ಡಿಸೈನಿಂಗ್ ತರಬೇತಿ!
ಕೊಪ್ಪಳ: ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ಪರಿಶ... ಓದನ್ನು ಮುಂದುವರಿಸಿ
ಅಗ್ನಿಶಾಮಕ ಹುದ್ದೆಗಳಲ್ಲಿ ಬದಲಾವಣೆ : ‘ಫೈರ್‌ಮ್ಯಾನ್’ ಬದಲಾಗಿ ‘ಫೈರ್ ಫೈಟರ್’ – ಮಹಿಳಾ ಅಭ್ಯರ್ಥಿಗಳಿಗೆ ಶೇ.10 ಮೀಸಲಾತಿ
ಬೆಂಗಳೂರು: ಮಹಿಳಾ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ... ಓದನ್ನು ಮುಂದುವರಿಸಿ
BSNL 2026 ನೇಮಕಾತಿ: ಸೀನಿಯರ್ ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗಳಿಗಾಗಿ ಅರ್ಜಿ ಆಹ್ವಾನ
ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL) ದೇಶಾದ್ಯಂತ ಸೀನಿಯರ್ ಎಕ್ಸಿಕ್ಯುಟಿವ್ ಟ್ರೈನ... ಓದನ್ನು ಮುಂದುವರಿಸಿ
ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ: ಸಹಕಾರಿ ಹಾಲು ಉತ್ಪಾದಕರ ಸಂಘ ಒಕ್ಕೂಟ 194 ಹುದ್ದೆಗಳಿಗೆ ಅರ್ಜಿ ಆಹ್ವಾನ
ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗದ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಉ... ಓದನ್ನು ಮುಂದುವರಿಸಿ
ಬೆಂಗಳೂರು: ಆದಾಯ ತೆರಿಗೆ ಇಲಾಖೆಯಲ್ಲಿ ಕೆಲಸಕ್ಕೆ ಅರ್ಜಿ ಆಹ್ವಾನ..!
ಬೆಂಗಳೂರು: ಆದಾಯ ತೆರಿಗೆ ನೇಮಕಾತಿ 2024 ರ ಅಧಿಕೃತ ಅಧಿಸೂಚನೆಗೆ... ಓದನ್ನು ಮುಂದುವರಿಸಿ
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಬಂಪರ್ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿ
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) 150 ವಿಶೇಷ ಕೇಡರ್ ಅಧಿಕಾರಿಗಳ (SCO) ನೇಮಕಾತಿಗ... ಓದನ್ನು ಮುಂದುವರಿಸಿ
ಐಟಿಐ ಪಾಸ್ ಆದವರಿಗೆ ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್'ನಲ್ಲಿದೆ ಅಪ್ರೆಂಟಿಸ್‌ಶಿಪ್ ಕೆಲಸ
ನೀವು ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ (BHEL) ನಲ್ಲಿ ಕೆಲಸ ಮಾಡಲು ಆಸಕ್ತಿ ಹ... ಓದನ್ನು ಮುಂದುವರಿಸಿ
ಡಿಆರ್‌ಡಿಒನಲ್ಲಿ ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗೆ ನೇಮಕಾತಿ ಪ್ರಕಟ, ವಾಕ್-ಇನ್ ಸಂದರ್ಶನದ ಆಧಾರದ ಮೇಲೆ ಆಯ್ಕೆ
ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ನೇಮಕಾತಿ ಅಧಿಸೂಚನೆಯನ್ನು ಹೊರಡಿ... ಓದನ್ನು ಮುಂದುವರಿಸಿ
BBMPಯಲ್ಲಿದೆ 11 ಸಾವಿರಕ್ಕೂ ಹೆಚ್ಚು ಹುದ್ದೆಗಳು..! ಇಂದೇ ಅರ್ಜಿ ಸಲ್ಲಿಸಿ
ಬೆಂಗಳೂರು: ಉದ್ಯೋಗ ಹುಡುಕಿತ್ತಿದ್ದೀರಾ..? ಹಾಗಿದ್ರೆ ಇಲ್ಲಿದೆ ನ... ಓದನ್ನು ಮುಂದುವರಿಸಿ