ಕೇರಳ ಸರ್ಕಾರದ ಲೋಗೋ ಬಳಸಿ ನಕಲಿ ಲಾಟರಿ! 15 ಲಕ್ಷ ಬಹುಮಾನ ಎಂಬ ಮೆಸೇಜ್‌ಗೆ ಪ್ರತಿಕ್ರಿಯಿಸಬೇಡಿ

ಗದಗ: ಜಿಲ್ಲೆಯಲ್ಲಿ ನಕಲಿ ಲಾಟರಿ ಯೋಜನೆಯ ಹೆಸರಿನಲ್ಲಿ ಜನರನ್ನು ಮೋಸಗೊಳಿಸುತ್ತಿರುವ ವಂಚಕ ಜಾಲ ಸಕ್ರಿಯವಾಗಿದೆ ಎಂಬ ಆರೋಪ ಕೇಳಿಬಂದಿದೆ. ಖದೀಮರು ಕೇರಳ ಸರ್ಕಾರದ ಹೆಸರು ಮತ್ತು ಚಿಹ್ನೆಯನ್ನು ದುರುಪಯೋಗಪಡಿಸಿಕೊಂಡು ಜನರಿಗೆ ಲಾಟರಿ ಬಹುಮಾನ ಸಿಕ್ಕಿದೆ ಎಂದು ನಂಬಿಸಿ ಹಣ ವಸೂಲಿ ಮಾಡುತ್ತಿರುವುದು ಬೆಳಕಿಗೆ ಬಂದಿದೆ.

 

ಮೂಲಗಳ ಪ್ರಕಾರ, ಅಪರಿಚಿತ ಮೊಬೈಲ್ ಸಂಖ್ಯೆಗಳಿನಿಂದ ರ‍್ಯಾಂಡಮ್ ಸಂಖ್ಯೆಗೆ ಸಂದೇಶಗಳನ್ನು ಕಳುಹಿಸಲಾಗುತ್ತಿದೆ. “ನೀವು 15 ಲಕ್ಷ ರೂಪಾಯಿ ಲಾಟರಿ ಬಹುಮಾನ ಗೆದ್ದಿದ್ದೀರಿ” ಎಂಬ ಮಾಹಿತಿ ಸಂದೇಶದಲ್ಲಿ ಇರಲಿದ್ದು, ಜೊತೆಗೆ ಕೇರಳ ಸರ್ಕಾರದ ಚಿಹ್ನೆ ಹೊಂದಿರುವ ಪಿಡಿಎಫ್ ಪ್ರಮಾಣಪತ್ರವನ್ನೂ ಕಳುಹಿಸಲಾಗುತ್ತಿದೆ. ಇದರಿಂದ ಲಾಟರಿ ನಿಜವಾಗಿಯೇ ಗೆದ್ದಿದ್ದೇವೆ ಎಂಬ ಭಾವನೆ ಮೂಡಿಸಿ ಜನರನ್ನು ವಂಚಿಸಲಾಗುತ್ತಿದೆ ಎನ್ನಲಾಗಿದೆ.

 

ಹಣದ ಆಸೆಗೆ ಬಿದ್ದವರಿಗೆ ಬಹುಮಾನ ಪಡೆಯಲು 8 ಸಾವಿರ ರೂಪಾಯಿ ಪ್ರೊಸೆಸಿಂಗ್ ಶುಲ್ಕ ಪಾವತಿಸಲು ಸೂಚಿಸಲಾಗುತ್ತದೆ. ಕೆಲವರು ಪ್ರಮಾಣಪತ್ರವನ್ನು ನಿಜವೆಂದು ನಂಬಿ ಆನ್‌ಲೈನ್ ಮೂಲಕ ಹಣ ವರ್ಗಾವಣೆ ಕೂಡ ಮಾಡಿದ್ದಾರೆ ಎಂದು ತಿಳಿದುಬಂದಿದೆ.

 

ಗದಗ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಈ ರೀತಿಯ ವಂಚನೆ ಪ್ರಕರಣಗಳು ನಡೆಯುತ್ತಿದ್ದು, ಹಿಂದೆ ಕರ್ನಾಟಕದಲ್ಲಿಯೂ ಜನಪ್ರಿಯವಾಗಿದ್ದ ಕೇರಳ ಲಾಟರಿಗಳ ಹೆಸರನ್ನು ದುರುಪಯೋಗಪಡಿಸಿಕೊಂಡು ವಂಚಕರು ಜನರನ್ನು ಸೆಳೆಯುತ್ತಿದ್ದಾರೆ ಎನ್ನಲಾಗಿದೆ. ಅನೇಕರು ಹಣ ಕಳೆದುಕೊಂಡಿದ್ದರೂ ಭಯ ಅಥವಾ ನಾಚಿಕೆ ಕಾರಣದಿಂದ ಪೊಲೀಸರಿಗೆ ದೂರು ನೀಡದೆ ಮೌನವಾಗಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

 

ರೋಣ ಪಟ್ಟಣದ ನಿವಾಸಿಯೊಬ್ಬರು ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಬಳಿಕ ಪ್ರಕರಣ ಬಹಿರಂಗವಾಗಿದೆ. ಆ ಪೋಸ್ಟ್‌ಗೆ ಪ್ರತಿಕ್ರಿಯಿಸಿದ ಹಲವರು ತಮಗೂ ಇದೇ ರೀತಿಯ ಸಂದೇಶಗಳು ಬಂದಿವೆ ಎಂದು ತಿಳಿಸಿದ್ದಾರೆ. ನಂತರ ಆ ಪೋಸ್ಟ್ ಅಳಿಸಲಾಗಿದೆ ಎಂದು ತಿಳಿದುಬಂದಿದೆ.

 

ಈ ಬಗ್ಗೆ ಮಾತನಾಡಿರುವ ರೋಣದ ನಿವಾಸಿಯೊಬ್ಬರು, “ಕೇರಳ ಸರ್ಕಾರದ ಲೋಗೋ ಇರುವ ಪ್ರಮಾಣಪತ್ರವೇ ಹಲವರನ್ನು ನಂಬುವಂತೆ ಮಾಡಿತು” ಎಂದು ಹೇಳಿದ್ದಾರೆ.

 

ಇದಕ್ಕೆ ಮಧ್ಯೆ ಸೈಬರ್ ವಂಚನೆಗಳ ಬಗ್ಗೆ ಪೊಲೀಸರು ಆನ್‌ಲೈನ್ ಮತ್ತು ಆಫ್‌ಲೈನ್ ಮೂಲಕ ಜಾಗೃತಿ ಅಭಿಯಾನಗಳನ್ನು ನಡೆಸುತ್ತಿದ್ದಾರೆ. ಸಂಶಯಾಸ್ಪದ ಲಾಟರಿ ಸಂದೇಶಗಳಿಗೆ ಪ್ರತಿಕ್ರಿಯಿಸಬಾರದು ಹಾಗೂ ಹಣ ವರ್ಗಾವಣೆ ಮಾಡುವ ಮೊದಲು ಸಮಗ್ರ ಪರಿಶೀಲನೆ ನಡೆಸಬೇಕು ಎಂದು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

13 hours ago

   
Image 1
Image 1
ಬೆಂಗಳೂರು ನಗರ

ಗೃಹಬಳಕೆ ಎಲ್‌ಪಿಜಿ ಸಿಲಿಂಡರ್‌ಗಳು ಲಭ್ಯ – ಸುಳ್ಳು ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ ಜಗದೀಶ.ಜಿ

ಬೆಂಗಳೂರು: ನಗರದಲ್ಲಿ ಗೃಹಬಳಕೆ ಎಲ್‌ಪಿಜಿ ಸಿಲಿಂಡರ್‌ಗಳು ಸಾಕಷ್ಟ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಬೆಂಗಳೂರು ನಗರ

ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಆರ್.ಕೆ.ಪುರಂ ಶಾಸಕ ಬೈರತಿ ಬಸವರಾಜ್‌ಗೆ ನ್ಯಾಯಾಲಯದಿಂದ ಜಾಮೀನು

ಬೆಂಗಳೂರು: ಭಾರೀ ಸಂಚಲನ ಮೂಡಿಸಿದ್ದ ಬಿಕ್ಲು ಶಿವ ಕೊಲೆ ಪ್ರಕರಣದಲ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಬೆಂಗಳೂರು ನಗರ

1 ಗಂಟೆ ಒಳಗೆ ಬ್ಲಾಸ್ಟ್: ಬಸವಭವನಕ್ಕೆ ಇಮೇಲ್ ಮೂಲಕ ಬಾಂಬ್ ಬೆದರಿಕೆ!

ಬೆಂಗಳೂರು: ನಗರದ ಬಸವಭವನ ಕಟ್ಟಡಗೆ ಸೈನೇಡ್ ಬಾಂಬ್ ಸ್ಫೋಟ ಮಾಡುವು... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಬೆಂಗಳೂರು ನಗರ

ಜಿಬಿಎ ವ್ಯಾಪ್ತಿಯಲ್ಲಿ 441 ಹೊಸ ಶೌಚಾಲಯಗಳ ನಿರ್ಮಾಣ – ಡಿ. ಕೆ. ಶಿವಕುಮಾರ್ ಪ್ರಕಟಣೆ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ 388... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಬೆಂಗಳೂರು ನಗರ

ರಾಜ್ಯ ಸರ್ಕಾರ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕುತ್ತಿರುವುದು ಸುಳ್ಳಲ್ಲ – ಬಿ. ವೈ. ವಿಜಯೇಂದ್ರ ಟೀಕೆ

ಬೆಂಗಳೂರು: 2026-27ನೇ ಸಾಲಿನ ರಾಜ್ಯ ಬಜೆಟ್ ಜನರ ನಿರೀಕ್ಷೆಗಳಿಗೆ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಬೆಂಗಳೂರು ನಗರ

ಅಡುಗೆ ಅನಿಲ ಪೂರೈಕೆ ವ್ಯತ್ಯಯ: ದೇವೇಗೌಡ ಅಪ್ಪಾಜಿ ಕ್ಯಾಂಟೀನ್ ತಾತ್ಕಾಲಿಕ ಸ್ಥಗಿತ -ಟಿ. ಎ. ಶರವಣ

ಬೆಂಗಳೂರು: ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಬೆಂಗಳೂರು ನಗರ

ತುಂಗಭದ್ರ ಅಚ್ಚುಕಟ್ಟು ರೈತರ ಸಂಕಷ್ಟ: 33 ಗೇಟ್‌ಗಳನ್ನು ಶೀಘ್ರ ಅಳವಡಿಸಲು ಟಿ. ಎ. ಶರವಣ ಆಗ್ರಹ

ಬೆಂಗಳೂರು: ತುಂಗಭದ್ರ ಅಚ್ಚುಕಟ್ಟು ಪ್ರದೇಶದ ರೈತರ ಸಂಕಷ್ಟದ ಕುರಿ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಬೆಂಗಳೂರು ನಗರ

ಬಂಡೀಪುರ–ನಾಗರಹೊಳೆಯಲ್ಲಿ ಸಫಾರಿ ತಾತ್ಕಾಲಿಕ ಬಂದ್: ಸಚಿವ ಈಶ್ವರ್ ಬಿ. ಖಂಡ್ರೆ ಸ್ಪಷ್ಟನೆ

ಬೆಂಗಳೂರು/ಚಾಮರಾಜನಗರ: ಕಳೆದ ನವೆಂಬರ್‌ನಲ್ಲಿ ಬಂಡೀಪುರ ರಾಷ್ಟ್ರೀ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ತುಮಕೂರು

ತಿಪಟೂರು

ಮದುವೆಯಾಗಿ ಮೂರು ತಿಂಗಳಲ್ಲೇ ಪತಿ ಕೊಲೆ: ಪ್ರಿಯಕರನ ಜೊತೆ ಸೇರಿ ಸಂಚು ರೂಪಿಸಿದ ಪತ್ನಿ ಬಂಧನ

ತುಮಕೂರು: ಜಿಲ್ಲೆಯ ತಿಪಟೂರು ಗ್ರಾಮಾಂತರದ ಚಿಕ್ಕಕೊಟ್ಟಗಿಹಳ್ಳಿ ಗ... ಓದನ್ನು ಮುಂದುವರಿಸಿ


Edited by: ಬಾನು

13 hours ago

   
Image 1
ಬೆಂಗಳೂರು ನಗರ

ಅಡುಗೆ ಅನಿಲ ಕೊರತೆ ಕುರಿತು ಸಂಸತ್ತಿನಲ್ಲಿ ಮಾತನಾಡಲಿ: ಡಿ.ಕೆ. ಶಿವಕುಮಾರ್

ಬೆಂಗಳೂರು: ಬೇರೆ ವಿಚಾರಗಳಲ್ಲಿ ಮಾತನಾಡುವ ಸಂಸದರು ಅಡುಗೆ ಅನಿಲ ಕ... ಓದನ್ನು ಮುಂದುವರಿಸಿ


Edited by: ಬಾನು

13 hours ago

   
Image 1