Kokum Juice Benefit: ಬೇಸಿಗೆಯಲ್ಲಿ ಕೋಕಂ ಜ್ಯೂಸ್ ಸೇವನೆಯ ಪ್ರಯೋಜನಗಳನ್ನು ತಿಳಿಯಿರಿ!
ಕೋಕಂ ಹಣ್ಣು ದೇಹದ ನಿರ್ಜಲೀಕರಣವಾಗುವುದನ್ನು ತಡೆಯುವ ಶಕ್ತಿಯನ್ನು ಹೊಂದಿದೆ. ಅಂದರೆ ಯಾವುದೇ ಒಬ್ಬ ಡಿಹೈಡ್ರಾಟ್ ಆದ ಅಥವಾ ನಿರ್ಜಲೀಕರಣಗೊಂಡ ವ್ಯಕ್ತಿಗೆ ಕೋಕಂ ಹಣ್ಣಿನ ಸಿಪ್ಪೆಯ ರಸವನ್ನು ಕೊಟ್ಟಿದ್ದೇ ಆದರೆ, ಆತನಿಗೆ ತಕ್ಷಣ ದೇಹ ಉತ್ತೇಜನ ಗೊಂಡಂತಹ ಅನುಭವ ಆಗುತ್ತದೆ.
ದೇಹದ ತೂಕ ಕಡಿಮೆ ಮಾಡಲು ಉತ್ತಮ ಆಯ್ಕೆ: ತೂಕ ಇಳಿಸಬೇಕು ಎಂದು ಸಾಕಷ್ಟು ಕಸರತ್ತುಗಳನ್ನೇ ಮಾಡುವ ಮಂದಿ ಗಮನಿಸಬೇಕಿರುವ ವಿಚಾರವೆಂದರೆ, ಕೋಕಂ ಶರಬತ್ತು ಸೇವನೆಯು ತೂಕ ಇಳಿಸುವಲ್ಲಿ ಸಹಾಯ ಮಾಡುತ್ತದೆ ಎಂಬುದು. ಈ ಹಣ್ಣಿನಲ್ಲಿ ಹೈಡ್ರಾಕ್ಸಿಸಿಟ್ರಿಕ್ ಆಮ್ಲವಿದ್ದು, ಇದು ದೇಹದಲ್ಲಿ ಕೊಬ್ಬಿನ ಉತ್ಪಾದನೆಯನ್ನು ಕಡಿಮೆ ಮಾಡುತ್ತದೆ ಮತ್ತು ಸಂಗ್ರಹವಾಗಿರುವ ಕೊಬ್ಬನ್ನು ಅತಿ ವೇಗವಾಗಿ ಕರಗಿಸುವಲ್ಲಿ ನೆರವಾಗುತ್ತದೆ.
ನೋವು ಮತ್ತು ಊತವನ್ನು ನಿವಾರಿಸಬಲ್ಲದು: ದೇಹಕ್ಕೆ ಉಂಟಾಗುವ ನಿರಂತರ ಉರಿಯೂತದಿಂದ ದೇಹದ ಮೇಲೆ ಅನೇಕ ರೀತಿಯ ಕೆಟ್ಟ ಪರಿಣಾಮಗಳು ಬೀರಬಹುದು. ಕೋಕಂ ಅದರ ಉರಿಯೂತದ ಗುಣಲಕ್ಷಣಗಳಿಗೆ ಹೆಸರುವಾಸಿಯಾಗಿದ್ದು, ನಿತ್ಯವೂ ಅದರ ಜ್ಯೂಸ್ ಸೇವನೆ ಮಾಡುವುದರಿಂದ ಸಂಧಿವಾತ ಅಥವಾ ಇತರ ಉರಿಯೂತದಿಂದ ಉಂಟಾಗುವ ನೋವು ಮತ್ತು ಊತವನ್ನು ನಿವಾರಿಸಲು ಸಹಾಯ ಮಾಡುತ್ತದೆ. ದೇಹವನ್ನು ಸ್ವಸ್ತ್ಯವಾಗಿಡಲು ನೆರವಾಗುತ್ತದೆ.
ಜೀರ್ಣಕ್ರಿಯೆ ಸರಾಗವಾಗಲು ಸಹಾಯಕ: ಕೋಕಂ ಹಣ್ಣಿನಲ್ಲಿ ಕ್ಯಾಲ್ಸಿಯಂ, ಐರನ್, ಮ್ಯಾಂಗನೀಸ್, ಪೊಟ್ಯಾಶಿಯಮ್, ಜಿಂಕ್ ಮಾತ್ರವಲ್ಲದೆ ವಿಟಮಿನ್ ಎ, ವಿಟಮಿನ್ ಬಿ3 ಮತ್ತು ವಿಟಮಿನ್ ಸಿ ಮುಂತಾದ ಖನಿಜಾಂಶಗಳು ಹೇರಳವಾಗಿವೆ. ಕೋಕಂ ಇಲ್ಲವೇ ಪುನರ್ಪುಳಿ ಹಣ್ಣಿನ ರಸವನ್ನು ಸೇವನೆ ಮಾಡುವುದರಿಂದ ಮತ್ತೊಂದು ಪ್ರಯೋಜನವೆಂದರೆ ಜೀರ್ಣಕ್ರಿಯೆಗೆ ಸಹಾಯ ಮಾಡುವ ಸಾಮರ್ಥ್ಯ. ಕೋಕಮ್ ಹೊಟ್ಟೆಯ ಒಳಪದರದಲ್ಲಿನ ಉರಿಯೂತವನ್ನು ಕಡಿಮೆ ಮಾಡುತ್ತದೆ ಮತ್ತು ಹುಣ್ಣುಗಳ ರಚನೆಯನ್ನು ತಡೆಯುತ್ತದೆ.
ಚರ್ಮದ ಆರೋಗ್ಯಕ್ಕಿದು ಔಷಧವೇ ಸರಿ: ವರ್ಷ 40 ದಾಟಿದರೂ ಚರ್ಮ ಸುಕ್ಕುಗಟ್ಟದೆ ಹದಿಹರೆಯದಂತಿರಬೇಕು ಅಂದುಕೊಳ್ಳುವವರು ತಪ್ಪದೇ ಕೋಕಂ ಜ್ಯೂಸ್ ಸೇವಿಸಬೇಕು. ಯಾಕೆಂದರೆ ಇದು ಚರ್ಮದ ಆರೋಗ್ಯನವನ್ನು ಕಾಪಾಡುತ್ತದೆ. ಕೋಕಂಹಣ್ಣಿನಲ್ಲಿ ಆಂಟಿ ಆಕ್ಸಿಡೆಂಟ್ ಗುಣಲಕ್ಷಣಗಳಿದ್ದು ಚರ್ಮಕ್ಕೆ ನಾನಾ ರೀತಿಯಲ್ಲಿ ಸಹಕಾರಿಯಾಗುತ್ತದೆ. ಚರ್ಮದ ಮೇಲೆ ಉಂಟಾಗುವ ಅಲರ್ಜಿಯ ಕಲೆಗಳನ್ನು ತೆಗೆಯುವಲ್ಲಿಯೂ ಬಹಳ ಸಹಕಾರಿ. ಅಲ್ಲದೆ ಚರ್ಮ ಸಂಬಂಧಿ ಅನೇಕ ಸಮಸ್ಯೆಗಳಿಗೆ ಪುನರ್ಪುಳಿಯ ಔಷಧೀಯ ಗುಣ ಪರಿಹಾರ ನೀಡುತ್ತದೆ.
ಆಂಟಿ ಆಕ್ಸಿಡೆಂಟ್ ಗುಣವುಳ್ಳ ಪುನರ್ಪುಳಿ: ಹೊಟ್ಟೆಯ ತಳಮಳವನ್ನು ಕಡಿಮೆ ಮಾಡಲು ಕೋಕಂ ಹಣ್ಣು ಬಹಳ ಉಪಯುಕ್ತ. ಇದರಲ್ಲಿ ಗಾರ್ಸಿನೋಲ್ ಎನ್ನುವ ಅಂಶವಿದ್ದು, ಇದು ಉರಿಯೂತ ಶಮನಕಾರಿ, ಬ್ಯಾಕ್ಟೀರಿಯಾ ವಿರೋಧಿ ಮತ್ತು ಆಂಟಿಆಕ್ಸಿಡೆಂಟ್ ಗುಣಗಳನ್ನು ಹೊಂದಿದೆ. ಕೋಕಂನಲ್ಲಿ ಉತ್ಕರ್ಷಣ ನಿರೋಧಕ ಸಮೃದ್ಧವಾಗಿದ್ದು, ಪಿತ್ತಜನಕಾಂಗದ ಕಾರ್ಯಚಟುವಟಿಕೆಗಳನ್ನು ಚುರುಕುಗೊಳಿಸುತ್ತದೆ.
ಒಟ್ಟಿನಲ್ಲಿ ಕೋಕಂ ಅಥವಾ ಪುನರ್ಪುಳಿ ಹಣ್ಣನ ರಸವನ್ನು ಸೇವಿಸುವುದರಿಂದ ಜೀರ್ಣಕ್ರಿಯೆಯು ಸುಧಾರಿಸಲು, ಉರಿಯೂತವನ್ನು ತಡೆಯಲು ಮಾತ್ರವಲ್ಲದೆ, ತೂಕ ನಷ್ಟಕ್ಕೆ ನೆರವಾಗುತ್ತದೆ. ಆ ಮೂಲಕ ನಮ್ಮ ಆರೋಗ್ಯವನ್ನು ಕಾಪಾಡುವಲ್ಲಿ ನಿರ್ಣಾಯಕ ಪಾತ್ರವಹಿಸುತ್ತದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ನಿಮ್ಮ ಮೂತ್ರಪಿಂಡದಲ್ಲಿ ಕಲ್ಲುಗಳು ಇವೆಯೇ..? ಮೂತ್ರಪಿಂಡದ ಕಲ್ಲು ಹೊರ ಹಾಕಲು ನಿತ್ಯ ಈ ಜ್ಯೂಸ್ ಕುಡಿಯಿರಿ…!
ನಿಮ್ಮ ಮೂತ್ರಪಿಂಡದಲ್ಲಿ ಕಲ್ಲುಗಳು ಇವೆಯೇ..? ಹಾಗಿದ್ರೆ ಈ ಸುದ್ದಿ ಪೂರ್ತಿ ಓದಿ.. ವೀ... ಓದನ್ನು ಮುಂದುವರಿಸಿ
ವೀಳ್ಯದೆಲೆಯನ್ನು ಸುಣ್ಣದ ಜೊತೆಗಲ್ಲ, ತುಳಸಿ ಬೀಜದ ಜೊತೆಗೆ ತಿಂದ್ರೆ ಆರೋಗ್ಯಕ್ಕೆ ಒಳ್ಳೆಯದಂತೆ
ವೀಳ್ಯದೆಲೆ ಮತ್ತು ಸುಣ್ಣದ ಜೊತೆ ವೀಳ್ಯದೆಲೆಯನ್ನು ತಿನ್ನುವುದು ಆರೋಗ್ಯಕ್ಕೆ ಪ್ರಯೋಜನ... ಓದನ್ನು ಮುಂದುವರಿಸಿ
ತ್ಯಾಗದ ಪ್ರತೀಕ ಬಕ್ರೀದ್ ಹಬ್ಬದ ಮಹತ್ವ ಇಲ್ಲಿದೆ...
ಬಕ್ರೀದ್… ಮುಸ್ಲಿಂ ಧರ್ಮೀಯರ ಪ್ರಮುಖ ಹಬ್ಬ. ವಿಶ್ವದಾದ್ಯಂತ ಇರುವ ಮುಸ್ಲಿಂ ಧರ್ಮೀಯರು... ಓದನ್ನು ಮುಂದುವರಿಸಿ
ಪುರುಷರೇ ಗಮನಿಸಿ… ನೀರಿನಲ್ಲಿ ನೆನೆಸಿದ ಒಣದ್ರಾಕ್ಷಿ ಸೇವಿಸೋದ್ರಿಂದ ಎಷ್ಟೆಲ್ಲಾ ಪ್ರಯೋಜಕಾರಿ ಗೊತ್ತಾ !?
ಒಣದ್ರಾಕ್ಷಿಯನ್ನು ರಾತ್ರಿ ನೀರಿನಲ್ಲಿ ನೆನೆಸಿಟ್ಟು ಬೆಳಗ್ಗೆ ಸೇವಿಸುವುದರಿಂದ ಸಾಕಷ್ಟ... ಓದನ್ನು ಮುಂದುವರಿಸಿ
ಮಂಡಕ್ಕಿ ಅಥವಾ ಕಡಲೆಪುರಿ ಸೇವನೆ ಆರೋಗ್ಯಕ್ಕೆ ತುಂಬಾ ಪ್ರಯೋಜಕಾರಿ!
ಮನೆಯಲ್ಲಿ ಮಂಡಕ್ಕಿ ಮಸಾಲ ತಯಾರಿಸಿ ಡಬ್ಬದಲ್ಲಿ ಶೇಖರಿಸಿಟ್ಟಿರುತ್ತಾರೆ. ಸಂಜೆಯ ಸ್ನಾಕ... ಓದನ್ನು ಮುಂದುವರಿಸಿ
ನೀವು ಚಪಾತಿ ಪ್ರೇಮಿಗಳಾ? ಹಾಗಾದರೆ ಒಬ್ಬ ವ್ಯಕ್ತಿ ಒಂದು ದಿನಕ್ಕೆ ಎಷ್ಟು ಚಪಾತಿ ತಿನ್ನಬೇಕು? ತಪ್ಪದೇ ತಿಳಿಯಿರಿ!
ನೀವು ತೂಕ ಇಳಿಸಿಕೊಳ್ಳಲು ಬಯಸಿದರೆ, ಇದಕ್ಕಾಗಿ ನೀವು ತಿನ್ನುವ ರೊಟ್ಟಿಯ ಪ್ರಮಾಣದ ಬಗ್... ಓದನ್ನು ಮುಂದುವರಿಸಿ
ಹಾಲಿನ ಜೊತೆಗೆ ಅರಿಶಿನ ಬೆರೆಸಿ ಕುಡಿದ್ರೆ ಈ ಕಾಯಿಲೆಗಳೆಲ್ಲಾ ಮಾಯ... ಆರೋಗ್ಯಕ್ಕೆ ಹತ್ತಾರು ಲಾಭ
ಹಾಲಿಗೆ ಅರಿಶಿನ ಸೇರಿಸಿ ಕುಡಿಯುವ ರೂಢಿ ನಮ್ಮ ಭಾರತೀಯ ಸಂಪ್ರದಾಯದಲ್ಲಿ ಮೊದಲಿನಿಂದಲೂ... ಓದನ್ನು ಮುಂದುವರಿಸಿ
ನಿಮಗೆ ಗೊತ್ತೇ..? ಹುಣಸೆ ಹಣ್ಣಿನ ಹುಳಿಗಿದೆ ಸೌಂದರ್ಯವನ್ನು ದುಪ್ಪಟ್ಟು ಮಾಡುವ ಪವರ್.!
ತಜ್ಞರ ಅಭಿಪ್ರಾಯದಲ್ಲಿ ಹುಣಸೆ ಹಣ್ಣು ನಿಮ್ಮ ಮುಖದ ಹೊಳಪನ್ನು ಹೆಚ್ಚು ಮಾಡಿ ನಿಮ್ಮ ಸೌ... ಓದನ್ನು ಮುಂದುವರಿಸಿ
ಕರ್ಬೂಜ ಬೀಜ ಎಸೆದು ಮೂರ್ಖರಾಗಬೇಡಿ… ಬೀಜಗಳಲ್ಲೂ ಅಡಗಿದೆ ಆರೋಗ್ಯ ಪ್ರಯೋಜನ; ತಿಳಿದ್ರೆ ಶಾಕ್ ಆಗ್ತೀರಿ!
ದೇಹವನ್ನು ತಂಪಗಾಗಿಸಲು ನೀವು ಸವಿಯಬಹುದಾದ ಫ್ರೆಶ್ ಜ್ಯೂಸ್‌ಗಳ ಪೈಕಿ ಕರ್ಬೂಜ ಹಣ್ಣು ಕ... ಓದನ್ನು ಮುಂದುವರಿಸಿ
ಬಿಪಿ ಇಲ್ಲವೆಂದು ಹೆಚ್ಚು ಉಪ್ಪು ಸೇವನೆ ಮಾಡುವವರೇ ಎಚ್ಚರ! ಹಾಗಿದ್ರೆ ಈ ಸುದ್ದಿ ಮಿಸ್ ಮಾಡ್ದೆ ನೋಡಿ!
ಬಿಪಿ ಸಮಸ್ಯೆ ಇಲ್ಲದವರು “ನಮಗೆ ಯಾವುದೇ ರೀತಿಯ ಸಮಸ್ಯೆ ಇಲ್ಲ ನಾವು ಹೆಚ್ಚಿನ ಪ್ರಮಾಣದ... ಓದನ್ನು ಮುಂದುವರಿಸಿ