ಮಹಾತ್ಮ ಗಾಂಧೀಜಿ ಉದ್ಯೋಗ ಖಾತ್ರಿ ಯೋಜನೆ ರದ್ದಿಗೆ ವಿರೋಧ. ಸಿಪಿಎಂ ವತಿಯಿಂದ ಉಪವಾಸ ಸತ್ಯಾಗ್ರಹ.
ಗುಡಿಬಂಡೆ: ಕೇಂದ್ರ ಸರ್ಕಾರವು ಮಹಾತ್ಮ ಗಾಂಧೀಜಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಬದಲಾಗಿ ಜಾರಿಗೆ ತಂದಿರುವ ವಿಕಸಿತ ಭಾರತ್ ಗ್ರಾಮೀಣ ರೋಜ್ಗಾರ್ ಅಜೀವಿಕಾ ಮಿಷನ್ (ವಿಬಿ–ಗ್ರಾಮ್ ಜಿ) ಕಾಯ್ದೆಯು ಗ್ರಾಮೀಣ ಬಡವರು, ಕೃಷಿ ಕೂಲಿ ಕಾರ್ಮಿಕರು ಹಾಗೂ ಸಣ್ಣ–ಮಧ್ಯಮ ರೈತರಿಗೆ ಮರಣಶಾಸನವಾಗಿದ್ದು, ಈ ಕಾಯ್ದೆಯನ್ನು ತಕ್ಷಣ ಹಿಂಪಡೆಯಬೇಕೆಂದು ಆಗ್ರಹಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸವಾದಿ) ಗುಡಿಬಂಡೆ ತಾಲೂಕು ಸಮಿತಿ ವತಿಯಿಂದ ಇಂದು ಪಟ್ಟಣದ ಅಂಬೇಡ್ಕರ್ ಪುತ್ಥಳಿ ಬಳಿ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಯಿತು.
ಸತ್ಯಾಗ್ರಹವನ್ನು ಉದ್ದೇಶಿಸಿ ಮಾತನಾಡಿದ ಸಿಪಿಎಂ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಮುನಿ ವೆಂಕಟಪ್ಪ ಎಂ.ಪಿ. ರವರು ಮಾತನಾಡಿ ಗ್ರಾಮೀಣ ಬಡವರಿಗೆ ಆಸರೆಯಾಗಿದ್ದ ಮಹಾತ್ಮ ಗಾಂಧೀಜಿ ಉದ್ಯೋಗ ಖಾತ್ರಿ ಯೋಜನೆಯನ್ನು ರದ್ದುಗೊಳಿಸಿ, ಬಡವರ ವಿರೋಧಿ ವಿಬಿ–ಗ್ರಾಮ್ ಜಿ ಎಂಬ ಹೊಸ ಕಾಯ್ದೆಯನ್ನು ಕೇಂದ್ರ ಸರ್ಕಾರ ಜಾರಿಗೊಳಿಸಿರುವುದು ಖಂಡನೀಯ ಎಂದು ಹೇಳಿದರು. ಈ ಹೊಸ ಕಾಯ್ದೆಯನ್ನು ವಾಪಸ್ ಪಡೆದು, ಉದ್ಯೋಗ ಖಾತ್ರಿ ಯೋಜನೆಯನ್ನು ಬಲಪಡಿಸಿ ಮುಂದುವರಿಸಬೇಕೆಂದು ಅವರು ಆಗ್ರಹಿಸಿದರು.
ಸಿಪಿಎಂ ತಾಲೂಕು ಸಮಿತಿ ಸದಸ್ಯರಾದ ರಮಣರವರು ಮಾತನಾಡಿ, ಶ್ರೀಮಂತರಿಗೆ ಅನುಕೂಲವಾಗುವಂತಹ ಕಾಯ್ದೆಗಳನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಮುಂದಾಗಿದ್ದು, ದೇಶದ ಕಾರ್ಮಿಕರು, ಕೃಷಿ ಕಾರ್ಮಿಕರು, ಮಧ್ಯಮ ರೈತರು ಹಾಗೂ ಕೂಲಿ ಕಾರ್ಮಿಕರು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ತಿಳಿಸಿದರು. ಬಡವರ ವಿರೋಧಿ ಕಾಯ್ದೆಯನ್ನು ತಕ್ಷಣ ವಾಪಸ್ ಪಡೆಯಬೇಕು ಎಂದು ಅವರು ಒತ್ತಾಯಿಸಿದರು.
ಕರ್ನಾಟಕ ಪ್ರಾಂತ ರೈತ ಸಂಘದ ತಾಲೂಕು ಸಮಿತಿ ಸದಸ್ಯರಾದ ಶ್ರೀನಿವಾಸ್ ರವರು ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ವಲಸೆ ಸಮಸ್ಯೆ ತಪ್ಪಿಸಲು ಎಡಪಕ್ಷಗಳು ಹಾಗೂ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯನ್ನು ಕೈಬಿಟ್ಟು ಹೊಸ ಕಾಯ್ದೆ ಜಾರಿಗೊಳಿಸಿರುವುದಕ್ಕೆ ವಿರೋಧ ವ್ಯಕ್ತಪಡಿಸಿದರು. ವಿಬಿ–ಗ್ರಾಮ್ ಜಿ ಕಾಯ್ದೆಯನ್ನು ಹಿಂಪಡೆಯದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.ಈ ಉಪವಾಸ ಸತ್ಯಾಗ್ರಹದಲ್ಲಿ ಸಿಪಿಎಂ ತಾಲೂಕು ಸದಸ್ಯರಾದ ಬಿ. ಜಯರಾಮ್ ರೆಡ್ಡಿ, ತಾಲೂಕು ಕಾರ್ಯದರ್ಶಿ ವೆಂಕಟರಾಜು, ಆದಿನಾರಾಯಣಸ್ವಾಮಿ, ಲಕ್ಷ್ಮಿನಾರಾಯಣ ಸೇರಿದಂತೆ ಮಸಣ ಕಾರ್ಮಿಕರು ಹಾಗೂ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.
ವರದಿ ಮಹಮ್ಮದ್ ನಾಸೀರ್ ಗುಡಿಬಂಡೆ
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ನಂಜನಗೂಡು
ಬೈಕ್ ನಲ್ಲಿ ತೆರಳುತ್ತಿದ್ದ ದಂಪತಿ ಮೇಲೆ ಚಿರತೆ ಅಟ್ಯಾಕ್...ಮಗು ಸೇರಿ ಮೂವರಿಗೆ ಗಂಭೀರ ಗಾಯ
ನಂಜನಗೂಡು : ಜಮೀನಿಗೆ ಬೈಕ್ ನಲ್ಲಿ ತೆರಳುತ್ತಿದ್ದ ರೈತ ದಂಪತಿಗಳ... ಓದನ್ನು ಮುಂದುವರಿಸಿ
ಕುಣಿಗಲ್
ಹುಡುಗಿ ವಿಚಾರಕ್ಕೆ ಕಿರಿಕ್ - ನಡು ರಸ್ತೆಯಲ್ಲಿ ಲಾಂಗು, ಮಚ್ಚು ಹಿಡಿದು ಹೊಡೆದಾಟ!
ತುಮಕೂರು: ಯುವತಿಯ ವಿಚಾರಕ್ಕೆ ಎರಡು ಗುಂಪುಗಳ ನುಡವೆ ಮಾರಾಮಾರಿ ನ... ಓದನ್ನು ಮುಂದುವರಿಸಿ
ಬಸ್‌ಗಳಲ್ಲಿ ತಂಬಾಕು ಉತ್ಪನ್ನ ಜಾಹೀರಾತಿಗೆ ನಿರ್ಬಂಧ: ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು: ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಕೆಕೆಆರ್‌ಟಿಸಿ, ಬಿಎಂಟ... ಓದನ್ನು ಮುಂದುವರಿಸಿ
ಕೊಪ್ಪಳದಲ್ಲಿ ಲೋಕಾಯುಕ್ತ ಅಧಿಕಾರಿಗಳ ದಾಳಿ : ಕಿಮ್ಸ್ ಆಡಳಿತಾಧಿಕಾರಿ ಬಿ.ಕಲ್ಲೇಶ ಮನೆ ಶೋಧ
ಕೊಪ್ಪಳ : ಕೊಪ್ಪಳ ತಾಲೂಕು ಭಾಗ್ಯನಗರ ಪಟ್ಟಣದಲ್ಲಿನ... ಓದನ್ನು ಮುಂದುವರಿಸಿ
ಆನೇಕಲ್ ತಾಲ್ಲೂಕು
ಮನರೇಗಾ ಮರುಜಾರಿಗೆ ಆಗ್ರಹಿಸಿ ಚನಕೆ, ಬಾಂಡ್ಲಿ, ಸುತ್ತಿಗೆ ಹಿಡಿದು ವಿನೂತನ ಪ್ರತಿಭಟನೆ
ಬೆಂಗಳೂರು : ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ರಾಜ್ಯ ಮಹಿಳಾ ಕಾ... ಓದನ್ನು ಮುಂದುವರಿಸಿ
ನಿವೇಶನ ಸರ್ವೆಗೆ ಹಿರಿಯ ನಟಿ ಜಯಶ್ರೀ ಅಲೆದಾಡಿಸಿದ ಭೂಮಾಪನ ಅಧಿಕಾರಿ
ತುಮಕೂರು: ನಿವೇಶನ ಸಮೀಕ್ಷೆಯ ವಿಚಾರವಾಗಿ ಹಿರಿಯ ರಂಗಕರ್ಮಿ, ರಾಜ್... ಓದನ್ನು ಮುಂದುವರಿಸಿ
ಹುಮನಾಬಾದ
ಬೀದರ್ ನಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟ, ತನಿಖೆಗೆ ಖಂಡ್ರೆ ಆದೇಶ
ಬೀದರ್: ಹುಮ್ನಾಬಾದ್ ಸಮೀಪ ಅನುಮಾನಾಸ್ಪದ ವಸ್ತು ಸ್ಫೋಟಗೊಂ... ಓದನ್ನು ಮುಂದುವರಿಸಿ
ರಾಜ್ಯ ಸರ್ಕಾರಿ ನೌಕರರು ತಿಂಗಳ ಮೊದಲ ಶನಿವಾರ `ಖಾದಿ ಬಟ್ಟೆ' ಧರಿಸೋದು ಕಡ್ಡಾಯ : ಸರ್ಕಾರ ಮಹತ್ವದ ಆದೇಶ
ಬೆಂಗಳೂರು: ರಾಜ್ಯದ ಸರ್ಕಾರಿ ನೌಕರರು ಸ್ವಯಂ ಪ್ರೇರಣೆಯಿಂದ ಪ್ರತಿ... ಓದನ್ನು ಮುಂದುವರಿಸಿ
ಶಿಡ್ಲಘಟ್ಟ
ನಾನು ಕಳ್ಳತನ ಮಾಡಿಲ್ಲ, ಕೊಲೆ ಮಾಡಿಲ್ಲ ಶಿಡ್ಲಘಟ್ಟದ ಜನರಿಗಾಗಿ ತ್ಯಾಗ ಮಾಡಿದ್ದೇನೆ, ಬೇಲ್ ಪಡೆದ ರಾಜೀವ್ ಗೌಡ ಹೊಸ ವರಸೆ
ಚಿಕ್ಕಬಳ್ಳಾಪುರ: ಬ್ಯಾನರ್ ತೆರವು ವಿಚಾರಕ್ಕೆ ಸಂಬಂಧಪಟ್ಟಂತೆ ಶಿಡ... ಓದನ್ನು ಮುಂದುವರಿಸಿ
ಹೋಂ ವರ್ಕ್ ಮಾಡಿಲ್ಲ ಎಂದು 4ನೇ ತರಗತಿ ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ: ಪೋಷಕರಿಗೆ ಹೇಳಿದರೆ ಕತ್ತು ಹಿಸುಕುತ್ತೇನೆ ಎಂದು ಬೆದರಿಕೆ
ಬೆಂಗಳೂರು : ಹೋಂ ವರ್ಕ್ ಮಾಡಿಲ್ಲ ಎಂಬ ಕಾರಣಕ್ಕೆ ಶಿಕ್ಷಕಿಯೊಬ್ಬರ... ಓದನ್ನು ಮುಂದುವರಿಸಿ