ಮುಡಾ ವಿವಾದ: ದಿನೇಶ್ ಕುಮಾರ್ ವಿರುದ್ಧ ED ವಿಚಾರಣೆಗೆ ಹೈಕೋರ್ಟ್ ಮಧ್ಯಂತರ ತಡೆ
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಮಾಜಿ ಆಯುಕ್ತ ಜಿ.ಟಿ. ದಿನೇಶ್ ಕುಮಾರ್ ವಿರುದ್ಧ ದಾಖಲಾಗಿರುವ ಅಕ್ರಮ ಹಣ ವರ್ಗಾವಣೆ ತಡೆ ಕಾಯಿದೆ (ಪಿಎಂಎಲ್‌ಎ) ಪ್ರಕರಣದ ವಿಚಾರಣೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಪಿಎಂಎಲ್‌ಎ ಅಡಿ ತನ್ನ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಯನ್ನು ಪ್ರಶ್ನಿಸಿ ದಿನೇಶ್ ಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರಿದ್ದ ನ್ಯಾಯಪೀಠ ವಿಚಾರಣೆ ನಡೆಸಿ ಈ ಆದೇಶ ನೀಡಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಜಾರಿ ನಿರ್ದೇಶನಾಲಯವು ಯಾವುದೇ ಜನಪ್ರತಿನಿಧಿಯ ವಿರುದ್ಧ ಪ್ರಕರಣ ದಾಖಲಿಸಿಲ್ಲ ಎಂದು ವಾದಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ನಾಲ್ವರ ವಿರುದ್ಧ ಲೋಕಾಯುಕ್ತ ಪೊಲೀಸರು ದಾಖಲಿಸಿದ್ದ ಪ್ರಕರಣದಲ್ಲಿ ಬಿ-ರಿಪೋರ್ಟ್ ಸಲ್ಲಿಕೆಯಾಗಿದ್ದು, ಅದನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವೂ ಅಂಗೀಕರಿಸಿದೆ ಎಂದು ಅವರು ನ್ಯಾಯಾಲಯಕ್ಕೆ ತಿಳಿಸಿದರು.
ಹೀಗಾಗಿ ಈ ಪ್ರಕರಣವನ್ನು ವಿಚಾರಣೆ ನಡೆಸುವ ಅಧಿಕಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಇಲ್ಲ. ಪ್ರಕರಣದಲ್ಲಿ ಯಾವುದೇ ಜನಪ್ರತಿನಿಧಿ ಆರೋಪಿ ಆಗಿಲ್ಲದ ಕಾರಣ, ಇದುವರೆಗೆ ನ್ಯಾಯಾಲಯ ನೀಡಿರುವ ಆದೇಶಗಳು ಅಧಿಕಾರ ವ್ಯಾಪ್ತಿಗೆ ಒಳಪಡುವುದಿಲ್ಲ ಎಂದು ಅರ್ಜಿದಾರರ ಪರ ವಕೀಲರು ನ್ಯಾಯಪೀಠಕ್ಕೆ ವಿವರಿಸಿದರು.
ಇದಕ್ಕೆ ಪ್ರತಿಯಾಗಿ ಜಾರಿ ನಿರ್ದೇಶನಾಲಯ (ಇಡಿ) ಪರ ವಕೀಲರು, ಕೆಲವು ಸಂದರ್ಭಗಳಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಪ್ರಕರಣ ಮುಂದುವರಿಯಲು ಸುಪ್ರೀಂ ಕೋರ್ಟ್ ಅವಕಾಶ ನೀಡಿರುವುದಾಗಿ ಹೇಳಿದರು. ಸಂಬಂಧಿತ ತೀರ್ಪುಗಳನ್ನು ಮಂಡಿಸಲು ಕಾಲಾವಕಾಶ ನೀಡುವಂತೆ ಅವರು ನ್ಯಾಯಪೀಠವನ್ನು ಮನವಿ ಮಾಡಿದರು.
ವಕೀಲರ ಮನವಿಯನ್ನು ಪರಿಗಣಿಸಿದ ನ್ಯಾಯಪೀಠ, ಅರ್ಜಿದಾರರ ವಿರುದ್ಧ ಇಡಿ ದಾಖಲಿಸಿರುವ ಪ್ರಕರಣದ ವಿಚಾರಣೆಯನ್ನು ಮುಂದಿನ ವಿಚಾರಣೆವರೆಗೆ ನಡೆಸದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ನಿರ್ಬಂಧ ವಿಧಿಸಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ಮಾರ್ಚ್ 26ಕ್ಕೆ ಮುಂದೂಡಲಾಗಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್‌ಗೆ 6 ವರ್ಷ: ಶಾಸಕರಿಗೆ ವಿಶೇಷ ಔತಣಕೂಟ
ಬೆಂಗಳೂರು: ಡಿಕೆ ಶಿವಕುಮಾರ್ ಅವರು Karnataka Pradesh... ಓದನ್ನು ಮುಂದುವರಿಸಿ
:ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಶಯಾಸ್ಪದ ಪಾರ್ಸೆಲ್ ಶಾಕ್ – ನಗ್ನ ಫೋಟೋ, ಹೂವಿನ ಹಾರ ಪತ್ತೆ!
ಬೆಂಗಳೂರು:ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪೋಸ್ಟ್ ಆ... ಓದನ್ನು ಮುಂದುವರಿಸಿ
ಸಾರ್ವಜನಿಕ ದೂರುಗಳ ವಿಲೇವಾರಿಗೆ 21 ದಿನದಲ್ಲಿ ಪರಿಹಾರ: ರಾಜ್ಯ ಸರ್ಕಾರ ಹೊಸ ನಿಯಮ
ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಇಲಾಖೆಗಳು ಹಾಗೂ ಅವುಗಳ ಅಧೀನ... ಓದನ್ನು ಮುಂದುವರಿಸಿ
ಟಿ20 ವಿಶ್ವಕಪ್ ಗೆದ್ದ ನಾಯಕನ ಪವಾಡ : ಉಡುಪಿ ಕಾಪು ಮಾರಿಗುಡಿಯ ಅಪ್ಪಟ ಭಕ್ತ ಸೂರ್ಯ: 9 ದಿನಗಳಲ್ಲಿ ನುಡಿ ಪವಾಡವಾಗಿ ನಿಜವಾಗಿದೆ!
ಉಡುಪಿ: 2026 ರ ಟಿ20 ವಿಶ್ವಕಪ್ ಗೆದ್ದು ಇತಿಹಾಸ ಸೃಷ್ಟಿಸಿರುವ ಟ... ಓದನ್ನು ಮುಂದುವರಿಸಿ
ಬಗರ್ ಹುಕುಂ ಯೋಜನೆ ಉದ್ದೇಶದಲ್ಲಿ ಬದಲಾವಣೆ ಇಲ್ಲ – ಸಚಿವ ಕೃಷ್ಣ ಬೈರೇಗೌಡ
ಬೆಂಗಳೂರು: ಅಕ್ರಮ ಸಕ್ರಮ ಬಗರ್ ಹುಕುಂ ಯೋಜನೆಯಡಿ ಅರ್ಹ ರೈತರಿಗೆ... ಓದನ್ನು ಮುಂದುವರಿಸಿ
ಕೃಷಿ ಹೊಂಡದಲ್ಲಿ ಆಕಸ್ಮಿಕ ಬಿದ್ದು ಯುವತಿ ದುರಂತ ಸಾವು
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲೂಕಿನ ದಿಬ್ಬೂರು ಗ್ರ... ಓದನ್ನು ಮುಂದುವರಿಸಿ
ಮೆಕ್ಕೆಜೋಳ ರಾಶಿಗೆ ಬೆಂಕಿಯಿಟ್ಟ ಕಿಡಿಗೇಡಿಗಳು – ರೈತರಿಗೆ 4 ಲಕ್ಷ ರೂ. ನಷ್ಟ
ಹಾವೇರಿ: ಹಾವೇರಿ ಜಿಲ್ಲೆಯ ಕಾಟೇನಹಳ್ಳಿ ಗ್ರಾಮದಲ್ಲಿ ಬೆಳೆ... ಓದನ್ನು ಮುಂದುವರಿಸಿ
ಇರಾನ್-ಇಸ್ರೇಲ್ ಯುದ್ಧ: ವಿಶ್ವ ಪ್ರಸಿದ್ಧ ಬ್ಯಾಡಗಿ ಮೆಣಸಿನಕಾಯಿ ರಫ್ತು ಯುದ್ಧದ ಪರಿಣಾಮದಿಂದ ಸ್ಥಗಿತ
ಹಾವೇರಿ: ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧದ ಪರಿಣಾಮದ... ಓದನ್ನು ಮುಂದುವರಿಸಿ
ಹೈದರಾಬಾದ್ ಉತ್ತಮ, ಬೆಂಗಳೂರು ಟ್ರಾಫಿಕ್ ಜಾಮ್ ಹಾಸ್ಯ – CM ರೇವಂತ್ ರೆಡ್ಡಿ
ಬೆಂಗಳೂರು: ಐಟಿ ಸಿಟಿ ಬೆಂಗಳೂರು ನಗರದ ಟ್ರಾಫಿಕ್ ಸಮಸ್ಯೆ ಈಗ ರಾಜ... ಓದನ್ನು ಮುಂದುವರಿಸಿ
ಕರ್ನಾಟಕ ಪರ್ವತಾರೋಹಣ ತಂಡ ಮುಂಟ್ ಎವೆರೆಸ್ಟ್ ಏರಲು ಸಿದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭಾಶಯ
ಬೆಂಗಳೂರು: ಏಪ್ರಿಲ್ ಮತ್ತು ಮೇ ತಿಂಗಳಲ್ಲಿ Mount Everest ಏರುವ... ಓದನ್ನು ಮುಂದುವರಿಸಿ