ನಾನು PCC ಅಧ್ಯಕ್ಷ – ಸಿಎಂ ವಿಚಾರದಲ್ಲಿ ನನ್ನ ಮಾತೇ ಅಂತಿಮ: ಡಿ.ಕೆ. ಶಿವಕುಮಾರ್

ಹುಬ್ಬಳ್ಳಿ: ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳ ನಡುವೆ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. “ನಾನು ಕಾಂಗ್ರೆಸ್ ಪಕ್ಷದ ರಾಜ್ಯ ಅಧ್ಯಕ್ಷ. ಸಿಎಂ ವಿಚಾರದಲ್ಲಿ ನನ್ನ ಹಾಗೂ ಮುಖ್ಯಮಂತ್ರಿಯವರ ಹೇಳಿಕೆಯ ಹೊರತಾಗಿ ಬೇರೆ ಯಾರ ಮಾತಿಗೂ ಮಹತ್ವ ಇಲ್ಲ,” ಎಂದು ಅವರು ಖಡಕ್ ಸಂದೇಶ ನೀಡಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 2028ರವರೆಗೆ ಸಿದ್ದರಾಮಯ್ಯ ಸಿಎಂ ಆಗಿರುತ್ತಾರೆ ಎಂಬ ಹೇಳಿಕೆ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿ, “ಇತರರ ಹೇಳಿಕೆಗಳಿಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ,” ಎಂದರು.

 

ಚುನಾವಣೆಯ ನಂತರ ನಾಯಕತ್ವ ಬದಲಾವಣೆ ಸಾಧ್ಯತೆ ಬಗ್ಗೆ ಕೇಳಿದಾಗ, “ಈ ವಿಚಾರವಾಗಿ ಅನಾವಶ್ಯಕ ಚರ್ಚೆ ಬೇಡ. ಎಲ್ಲಕ್ಕೂ ಕಾಲವೇ ಉತ್ತರ ನೀಡುತ್ತದೆ,” ಎಂದು ಹೇಳಿದ್ದಾರೆ. ಇದೇ ವೇಳೆ, ರಾಜ್ಯದ ಉಪಚುನಾವಣೆ ಕುರಿತು ವಿಶ್ವಾಸ ವ್ಯಕ್ತಪಡಿಸಿದ ಡಿಕೆ ಶಿವಕುಮಾರ್, “ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ. ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಂದ ಜನರು ತೃಪ್ತರಾಗಿದ್ದಾರೆ,” ಎಂದು ತಿಳಿಸಿದರು. ಬೆಲೆ ಏರಿಕೆ ವಿಚಾರದಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, “ಈ ವಿಷಯದಲ್ಲಿ ಬಿಜೆಪಿ ಮೌನವಾಗಿದ್ದು, ಕೇಂದ್ರ ಸರ್ಕಾರವೂ ಯಾವುದೇ ಪರಿಹಾರ ಕ್ರಮ ಘೋಷಿಸಿಲ್ಲ,” ಎಂದು ಟೀಕಿಸಿದರು.

 

ಅಡುಗೆ ಅನಿಲ ಸಮಸ್ಯೆಗೆ ಪೆಟ್ರೋಲ್ ಬಳಸುವ ಸಲಹೆ ಕುರಿತು ಪ್ರತಿಕ್ರಿಯಿಸಿದ ಅವರು, “ದಕ್ಷಿಣ ಭಾರತದ ಹಿತದೃಷ್ಠಿಯಿಂದ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು. ಇಂಧನ ಸಾಗಣೆ ವಿಷಯದಲ್ಲೂ ದಕ್ಷಿಣಕ್ಕೆ ಅನ್ಯಾಯ ಆಗುತ್ತಿದೆ,” ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ಕೇರಳ ವಿಧಾನಸಭೆ ಚುನಾವಣೆ ಕುರಿತು ಮಾತನಾಡಿದ ಅವರು, “ಈ ಬಾರಿ ಯುಡಿಎಫ್ ಮೈತ್ರಿಕೂಟಕ್ಕೆ ಮೂರನೇ ಎರಡರಷ್ಟು ಬಹುಮತ ಸಿಗುವ ವಿಶ್ವಾಸವಿದೆ. ಎಲ್‌ಡಿಎಫ್ ಆಡಳಿತದಿಂದ ಜನ ಬೇಸತ್ತಿದ್ದಾರೆ,” ಎಂದು ಅಭಿಪ್ರಾಯಪಟ್ಟರು.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

6 hours ago

   
Image 1
Image 1
ಬೆಂಗಳೂರು ನಗರ

ಖರ್ಗೆ ವಿರುದ್ಧ ಪ್ರಚೋದನಾಕಾರಿ ಹೇಳಿಕೆ ಆರೋಪ – ಬೆಂಗಳೂರಿನಲ್ಲಿ ದೂರು

ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ವಿರುದ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಬೆಂಗಳೂರು ನಗರ

ನೀರಿನ ಬಿಲ್ ಪಾವತಿಗೆ ಸುವರ್ಣಾವಕಾಶ – ಬಡ್ಡಿ ಮನ್ನಾ ಘೋಷಣೆ

ಬೆಂಗಳೂರು: ನಗರದ ನೀರಿನ ಬಿಲ್ ಬಾಕಿದಾರರಿಗೆ ಬೆಂಗಳೂರು ನೀರು ಸರಬ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಬೆಂಗಳೂರು ನಗರ

2011 ಜನಗಣತಿ ಆಧಾರ ಅಪಾಯಕರ – ಡಿಕೆ ಸುರೇಶ್ ತೀವ್ರ ಅಭಿಪ್ರಾಯ

ಬೆಂಗಳೂರು: ಲೋಕಸಭಾ ಮತ್ತು ವಿಧಾನಸಭಾ ಕ್ಷೇತ್ರಗಳ ಮರು ವಿಂಗಡಣೆ ವ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಬೀದರ್

ಭಾಲ್ಕಿ

ಮನೆ ಸಮಾರಂಭದಲ್ಲಿ ಊಟ ಸೇವಿಸಿದವರಿಗೆ ಅನಾರೋಗ್ಯ – ಆಸ್ಪತ್ರೆಗೆ ದಾಖಲು - 40ಕ್ಕೂ ಹೆಚ್ಚು ಜನ ಅಸ್ವಸ್ಥ

ಬೀದರ್: ಜಿಲ್ಲೆಯ ಭಾಲ್ಕಿ ತಾಲೂಕಿನ ಜಾಂತಿ ಗ್ರಾಮದಲ್ಲಿ ಸಂಭವಿಸಿದ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಬೆಳಗಾವಿ

ಬಿಜೆಪಾಕ್ಕೆ ಯತ್ನಾಳ್ ರೀ-ಎಂಟ್ರಿ? ವೇದಿಕೆ ಸಿದ್ಧ ಎಂದ ಜಾರಕಿಹೊಳಿ

ಬೆಳಗಾವಿ: ಮಾಜಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಶೀಘ್ರದಲ್ಲ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಧಾರವಾಡ

ಖಾಲಿ ಹುದ್ದೆಗಳ ಭರ್ತಿಗೆ ವಿದ್ಯಾರ್ಥಿಗಳ ಹೋರಾಟಕ್ಕೆ ಬ್ರೇಕ್!

ಧಾರವಾಡ: ವಿವಿಧ ಸರ್ಕಾರಿ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಮೈಸೂರು

ಮುಡಾ ಹಗರಣಕ್ಕೆ ಹೊಸ ತಿರುವು – ಹೈಕೋರ್ಟ್‌ಗೆ ಅರ್ಜಿ, ಮರುತನಿಖೆ ಬೇಡಿಕೆ!

ಮೈಸೂರು: ಮುಡಾ ಹಗರಣ ಪ್ರಕರಣದಲ್ಲಿ ಮತ್ತೆ ಮುಖ್ಯಮಂತ್ರಿ ಸಿದ್ದರಾ... ಓದನ್ನು ಮುಂದುವರಿಸಿ


Edited by: ಬಾನು

11 hours ago

   
Image 1
ಚಿಕ್ಕಮಗಳೂರು

ನರಸಿಂಹರಾಜಪುರ

ಹೊಳೆಗೆ ಹಾರಿ ನರ್ಸ್ ಆತ್ಮಹತ್ಯೆ – ಕಾರಣ ತಿಳಿಯದ ದುರ್ಘಟನೆ

ಚಿಕ್ಕಮಗಳೂರು: ಜಿಲ್ಲೆಯ ನರಸಿಂಹರಾಜಪುರ ತಾಲ್ಲೂಕಿನ ಮುತ್ತಿನಕೊಪ್... ಓದನ್ನು ಮುಂದುವರಿಸಿ


Edited by: ಬಾನು

11 hours ago

   
Image 1
ಬೆಂಗಳೂರು ನಗರ

ಹಸುಗಳ ಶೆಡ್‌ಗೆ ಬೆಂಕಿ – 6 ಹಸುಗಳ ದಾರುಣ ಸಾವು, ವಾಹನಗಳಿಗೂ ಬೆಂಕಿ ಹಾನಿ

ಬೆಂಗಳೂರು: ನಗರದ ಡಿಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಶಾಂಪುರ... ಓದನ್ನು ಮುಂದುವರಿಸಿ


Edited by: ಬಾನು

15 hours ago

   
Image 1
ಬೆಂಗಳೂರು ನಗರ

ಹೆಲ್ಮೆಟ್ ಧರಿಸಿದ ಕಳ್ಳನ ದಾಳಿ – ಮನೆಗೆ ನುಗ್ಗಿ ಗ್ಯಾಸ್ ಸಿಲಿಂಡರ್ ಕಳವು!

ಬೆಂಗಳೂರು: ನಗರದ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿಚಿತ... ಓದನ್ನು ಮುಂದುವರಿಸಿ


Edited by: ಬಾನು

15 hours ago

   
Image 1