ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಂಕಿತ ಭಯೋತ್ಪಾದಕ ಸಾವು ಅನಾರೋಗ್ಯದಿಂದ ಚಿಕಿತ್ಸೆಯಲ್ಲಿದ್ದ ಸಾಧಿಕ್ ಪಾಷಾ ಮೃತ
ಬೆಂಗಳೂರು: ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿದ್ದ ಶಂಕಿತ ಭಯೋತ್ಪಾದಕನೊಬ್ಬ ಅನಾರೋಗ್ಯದ ಹಿನ್ನೆಲೆಯಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ. ಸುದ್ದಗುಂಟೆಪಾಳ್ಯ ಸ್ಫೋಟಕ ವಸ್ತು ಸಂಗ್ರಹ ಪ್ರಕರಣದಲ್ಲಿ ಆರೋಪಿಯಾಗಿದ್ದ ಸಾಧಿಕ್ ಪಾಷಾ (47) ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ (ಫೆಬ್ರವರಿ 6) ತಡರಾತ್ರಿ ಸಾವನ್ನಪ್ಪಿದ್ದಾರೆ.
ಕಳೆದ ಆರು ತಿಂಗಳಿಂದ ಲೋ ಬಿಪಿ, ಹೈ ಶುಗರ್ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಸಾಧಿಕ್ ಪಾಷಾ ಅವರ ಆರೋಗ್ಯ ಸ್ಥಿತಿ ಇತ್ತೀಚೆಗೆ ತೀವ್ರವಾಗಿ ಹದಗೆಟ್ಟಿತ್ತು. ಈ ಹಿನ್ನೆಲೆಯಲ್ಲಿ ಜೈಲು ಅಧಿಕಾರಿಗಳು ಅವರನ್ನು ನಗರದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಮಧ್ಯರಾತ್ರಿ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಸಾಧಿಕ್ ಪಾಷಾ 2020ರಲ್ಲಿ ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಸ್ಫೋಟಕ ವಸ್ತು ಸಂಗ್ರಹ ಪ್ರಕರಣದ ಪ್ರಮುಖ ಆರೋಪಿಯಾಗಿದ್ದರು. ಈ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತನಿಖೆ ನಡೆಸಿದ್ದು, ಸಾಧಿಕ್ ಪಾಷಾ ಸೇರಿದಂತೆ ಒಟ್ಟು ಆರು ಶಂಕಿತರನ್ನು ಬಂಧಿಸಲಾಗಿತ್ತು. ಕಳೆದ ಆರು ವರ್ಷಗಳಿಂದ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲೇ ನ್ಯಾಯಾಂಗ ಬಂಧನದಲ್ಲಿದ್ದರು. ಸಾಧಿಕ್ ಪಾಷಾ ಸಾವಿನ ಕುರಿತು ಜೈಲು ಹಾಗೂ ವಿಕ್ಟೋರಿಯಾ ಆಸ್ಪತ್ರೆ ಅಧಿಕಾರಿಗಳು ಅಗತ್ಯ ಕಾನೂನು ಪ್ರಕ್ರಿಯೆಗಳನ್ನು ಕೈಗೊಂಡಿದ್ದು, ಮುಂದಿನ ಕ್ರಮಗಳು ಮುಂದುವರಿದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಶ್ರೀನಿವಾಸಪುರ
ಶ್ರೀನಿವಾಸಪುರದಲ್ಲಿ ಮಾನವೀಯತೆಯನ್ನೇ ಮರೆಸುವ ಪ್ರಕರಣ: ಹೆತ್ತ ಮಗುವನ್ನು ಮಾರಾಟ ಮಾಡಿದ್ದ ದಂಪತಿ-ಮಧ್ಯವರ್ತಿ ಬಂಧನ
ಕೋಲಾರ: ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದಲ್ಲಿ ಹೆತ್ತ ಮಗುವ... ಓದನ್ನು ಮುಂದುವರಿಸಿ
ಬಿಹಾರದ ರಾಜಗೀರ್‌ನಲ್ಲಿ ತುಮಕೂರಿನ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ: ಧರ್ಮಶಾಲೆ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವಗಳು ಪತ್ತೆ
ನಾಲಂದಾ: ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಒಂದೇ ಕುಟುಂಬದ ನ... ಓದನ್ನು ಮುಂದುವರಿಸಿ
ಕೆ ಆರ್ ಪುರುಂ: ಯುವತಿ ವಿಚಾರದಲ್ಲಿ ಚಾಕು ಚಾಕು ಇರಿದ ಕಾರಣ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು
ಬೆಂಗಳೂರು: ಕೆ ಆರ್ ಪುರುಂ ಪ್ರದೇಶದಲ್ಲಿ ಯುವತಿ ಸಂಬಂಧದ ವಿಚಾರದಲ... ಓದನ್ನು ಮುಂದುವರಿಸಿ
ಮಾಗಡಿ ರಸ್ತೆ ದಂಪತಿ ಹತ್ಯೆ ಪ್ರಕರಣ ಪಿಸ್ತೂಲ್ ಖರೀದಿಗೆ ನೆರವಾದ ಮತ್ತೊಬ್ಬ ಆರೋಪಿ ಬಂಧನ
ಬೆಂಗಳೂರು: ಮಾಗಡಿ ರಸ್ತೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪತಿಯೊಬ್... ಓದನ್ನು ಮುಂದುವರಿಸಿ
ಸೈಬರ್ ವಂಚನೆಗೆ ದೊಡ್ಡ ಹೊಡೆತ: 42 ಸಾವಿರ ಮ್ಯೂಲ್ ಬ್ಯಾಂಕ್ ಖಾತೆಗಳ ಜಾಲ ಪತ್ತೆ 13 ಮಂದಿ ಬಂಧನ, 29 ಜಿಲ್ಲೆಗಳಲ್ಲಿ ಸಿಐಡಿ ಸೈಬರ್ ಕಮಾಂಡ್ ದಾಳಿ
ಬೆಂಗಳೂರು: ಸಿಐಡಿ ಸೈಬರ್ ಕಮಾಂಡ್ ವಿಭಾಗವು ರಾಜ್ಯಾದ್ಯಂತ ನಡೆಸಿದ... ಓದನ್ನು ಮುಂದುವರಿಸಿ
ಹೊಸಕೋಟೆ
ಹೊಸಕೋಟೆ–ಚಿಂತಾಮಣಿ ಹೆದ್ದಾರಿ ಅಪಘಾತ: ಮಾರುತಿ ಓಮ್‌ನಿ-ಬೈಕ್ ಡಿಕ್ಕಿ, 1 ಮೃತ, ಹಲವರಿಗೆ ಗಾಯ
ಬೆಂಗಳೂರು ಗ್ರಾಮಾಂತರ: ಹೊಸಕೋಟೆ – ಚಿಂತಾಮಣಿ ರಾಷ್ಟ್ರೀಯ ಹೆದ್ದಾ... ಓದನ್ನು ಮುಂದುವರಿಸಿ
ಮಾರಕಾಸ್ತ್ರ ಹಿಡಿದು ಹುಟ್ಟುಹಬ್ಬ ಕೇಕ್ ಕತ್ತರಿಸಿದ ಅರೆಸ್ಟ್
ಚಿತ್ರದುರ್ಗ: ಚಿತ್ರದುರ್ಗದ ಭೋವಿ ಕಾಲೋನಿಯಲ್ಲಿ ಮಾರಕಾಸ್ತ... ಓದನ್ನು ಮುಂದುವರಿಸಿ
ಹುಬ್ಬಳ್ಳಿ
ಸೈಬರ್ ವಂಚನೆ ಪ್ರಕರಣ: ಹುಬ್ಬಳ್ಳಿಯಲ್ಲಿ ಒಂದೇ ಖಾತೆಯಿಂದ ಕೋಟಿ ಕೋಟಿ ಹಣ ವರ್ಗಾವಣೆ
ಹುಬ್ಬಳ್ಳಿ : ಹುಬ್ಬಳ್ಳಿಯ ನಗರದಲ್ಲಿ ನಡೆದ ಭಾರೀ ಸೈಬರ್ ವಂಚನೆಯ... ಓದನ್ನು ಮುಂದುವರಿಸಿ
ರಾಜ್ಯದಲ್ಲಿ ಸೈಬರ್ ದಂಧೆ ಜಾಲ ಭೇದಿಸಿದ ಸಿಐಡಿ: ಮ್ಯೂಲ್ ಅಕೌಂಟ್ ಕೇಸ್‌ನಲ್ಲಿ 13 ವಂಚಕರು ಅರೆಸ್ಟ್
ಬೆಂಗಳೂರು: ಸಿಐಡಿ ಸೈಬರ್ ಕ್ರೈಂ ವಿಭಾಗವು ರಾಜ್ಯಾದ್ಯಂತ ಮೆಗಾ ಕಾ... ಓದನ್ನು ಮುಂದುವರಿಸಿ
ಬೆಂಗಳೂರು ಏರ್ ಪೋರ್ಟ್ʼನಲ್ಲಿ ಕೋಟ್ಯಂತರ ರೂ. ಮೌಲ್ಯದ ಚಿನ್ನ, ವಜ್ರ ಕಳ್ಳತನ!
ದೇವನಹಳ್ಳಿ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಕೆಂಪೇಗ... ಓದನ್ನು ಮುಂದುವರಿಸಿ