ಪಿಯುಸಿ ಎಕ್ಸಾಂಗೆ ಕೌಂಟ್‌ಡೌನ್: 7 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು, ಭದ್ರತೆ ಕಠಿಣ
ಬೆಂಗಳೂರು: ರಾಜ್ಯದಲ್ಲಿ ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಲಿದ್ದು, ಅಕ್ರಮ ತಡೆಯಲು ಪರೀಕ್ಷಾ ಮಂಡಳಿ ಹಾಗೂ ಶಿಕ್ಷಣ ಇಲಾಖೆ ಕಠಿಣ ಕ್ರಮಗಳನ್ನು ಕೈಗೊಂಡಿವೆ. ಮಾರ್ಚ್ 17ರವರೆಗೆ ನಡೆಯುವ ಈ ಪರೀಕ್ಷೆಗೆ ಒಟ್ಟು 7,10,363 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ. ರಾಜ್ಯಾದ್ಯಂತ 1,217 ಕೇಂದ್ರಗಳಲ್ಲಿ ಬೆಳಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ಪರೀಕ್ಷೆ ನಡೆಯಲಿದೆ.
ಕಟ್ಟುನಿಟ್ಟಿನ ಭದ್ರತಾ ಕ್ರಮಗಳು
ಪರೀಕ್ಷೆಗಳು ಪಾರದರ್ಶಕ ಹಾಗೂ ಶಾಂತಿಯುತವಾಗಿ ನಡೆಯಲು ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಜಾರಿಗೊಳಿಸಲಾಗಿದೆ:
ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ
ಸಮೀಪದ ಜೆರಾಕ್ಸ್ ಅಂಗಡಿ, ಸೈಬರ್ ಸೆಂಟರ್, ಕಂಪ್ಯೂಟರ್ ಅಂಗಡಿಗಳನ್ನು ತಾತ್ಕಾಲಿಕವಾಗಿ ಮುಚ್ಚುವ ಕ್ರಮ
ಹಿಂದಿನ ಅಕ್ರಮಗಳಲ್ಲಿ ಭಾಗಿಯಾಗಿದ್ದವರ ಮೇಲೆ ಪೊಲೀಸ್ ವಿಶೇಷ ನಿಗಾ
ಎಲ್ಲಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಕೆ
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ತಡೆಯಲು ವಿಶೇಷ ಪೊಲೀಸ್ ತಂಡ ರಚನೆ
ವೆಬ್ ಕ್ಯಾಸ್ಟಿಂಗ್ ಮೂಲಕ ಪರೀಕ್ಷಾ ಮೇಲ್ವಿಚಾರಣೆ; ಪ್ರತಿ ಜಿಲ್ಲೆಯಲ್ಲಿ ಡಿಸಿ ಹಾಗೂ ಎಸ್‌ಪಿ ಮೇಲ್ವಿಚಾರಣೆ
ಪ್ರಶ್ನೆಪತ್ರಿಕೆ ರವಾನೆಗೆ ಬಿಗಿ ಪೊಲೀಸ್ ಭದ್ರತೆ ಮತ್ತು ವಿಡಿಯೋ ಚಿತ್ರೀಕರಣ
ನಿಗದಿತ ಸಮಯಕ್ಕಿಂತ ಮೊದಲು ಪ್ರಶ್ನೆಪತ್ರಿಕೆ ತೆರೆಯಲು ಅವಕಾಶ ಇಲ್ಲ; ಉಲ್ಲಂಘನೆಗೆ ಕಾನೂನು ಕ್ರಮ
ವಿದ್ಯಾರ್ಥಿಗಳು, ಸಿಬ್ಬಂದಿ, ಅಧಿಕಾರಿಗಳಿಗೆ ಮೊಬೈಲ್ ಫೋನ್ ನಿಷೇಧ
ವಾಚ್ ಸೇರಿದಂತೆ ಎಲ್ಲಾ ಎಲೆಕ್ಟ್ರಾನಿಕ್ ಉಪಕರಣಗಳಿಗೆ ನಿಷೇಧ
ಪ್ರತಿ ಕೇಂದ್ರದಲ್ಲಿ ಸಿಟ್ಟಿಂಗ್ ಸ್ಕ್ವಾಡ್ ಮತ್ತು ಫ್ಲೈಯಿಂಗ್ ಸ್ಕ್ವಾಡ್ ನಿಯೋಜನೆ
ಫೆಬ್ರವರಿ 28 – ಕನ್ನಡ, ಅರೇಬಿಕ್
ಮಾರ್ಚ್ 2 – ಭೂಗೋಳಶಾಸ್ತ್ರ, ಸಂಖ್ಯಾಶಾಸ್ತ್ರ, ಮನಃಶಾಸ್ತ್ರ
ಮಾರ್ಚ್ 3 – ಇಂಗ್ಲೀಷ್
ಮಾರ್ಚ್ 4 – ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
ಮಾರ್ಚ್ 5 – ಇತಿಹಾಸ
ಮಾರ್ಚ್ 6 – ಭೌತಶಾಸ್ತ್ರ
ಮಾರ್ಚ್ 7 – ಐಚ್ಛಿಕ ಕನ್ನಡ, ವ್ಯವಹಾರ ಅಧ್ಯಯನ, ಭೂಗರ್ಭಶಾಸ್ತ್ರ
ಮಾರ್ಚ್ 9 – ರಸಾಯನಶಾಸ್ತ್ರ, ಶಿಕ್ಷಣಶಾಸ್ತ್ರ, ಮೂಲ ಗಣಿತ
ಮಾರ್ಚ್ 10 – ಅರ್ಥಶಾಸ್ತ್ರ
ಮಾರ್ಚ್ 11 – ತರ್ಕಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗೃಹ ವಿಜ್ಞಾನ
ಮಾರ್ಚ್ 12 – ಹಿಂದಿ
ಮಾರ್ಚ್ 13 – ರಾಜ್ಯಶಾಸ್ತ್ರ
ಮಾರ್ಚ್ 14 – ಲೆಕ್ಕಶಾಸ್ತ್ರ, ಗಣಿತ
ಮಾರ್ಚ್ 16 – ಸಮಾಜಶಾಸ್ತ್ರ, ಜೀವಶಾಸ್ತ್ರ, ಗಣಕ ವಿಜ್ಞಾನ
ಮಾರ್ಚ್ 17 – ಹಿಂದುಸ್ತಾನಿ, ಸಂಗೀತ, ರೀಟೇಲ್ ಆಟೋಮೊಬೈಲ್, ಆರೋಗ್ಯ ರಕ್ಷಣೆ
ಪರೀಕ್ಷೆಗಳು ಯಾವುದೇ ಅಕ್ರಮವಿಲ್ಲದೆ ಸುಗಮವಾಗಿ ನಡೆಯಲು ಶಿಕ್ಷಣ ಇಲಾಖೆ ಹಾಗೂ ಪೊಲೀಸ್ ಇಲಾಖೆ ಸಂಯುಕ್ತವಾಗಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿವೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ 15 ಸಾವಿರ ಶಿಕ್ಷಕರ ನೇಮಕಾತಿ ಶೀಘ್ರ – ಸಚಿವ ಮಧು ಬಂಗಾರಪ್ಪ
ಬೆಂಗಳೂರು: ರಾಜ್ಯದ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಖಾಲಿ ಇರುವ ಸು... ಓದನ್ನು ಮುಂದುವರಿಸಿ
ಹೈಕೋರ್ಟ್: ಪರೀಕ್ಷಾ ಕೇಂದ್ರಕ್ಕೆ ಮೊಬೈಲ್ ತಂದ 12ನೇ ವಿದ್ಯಾರ್ಥಿಯ ಪರೀಕ್ಷೆ ರದ್ದು ಮಾಡುವುದು ಸರಿಯೇ
ಬೆಂಗಳೂರು: Central Board of Secondary Education (ಸಿಬಿಎಸ್‌ಇ) ಮಾರ್ಗಸೂಚಿಗಳನ್... ಓದನ್ನು ಮುಂದುವರಿಸಿ
ಚಿಕ್ಕೋಡಿ
ಯುಪಿಎಸ್‌ಸಿ ಪರೀಕ್ಷೆ: ಚಿಕ್ಕೋಡಿಯ ಕಿರಣ ಕಮತೆಗೆ ದೇಶಕ್ಕೆ 53ನೇ ರ್ಯಾಂಕ್, ರಾಜ್ಯಕ್ಕೆ ಪ್ರಥಮ
ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹತ್ತರವಾಟ ಗ್ರ... ಓದನ್ನು ಮುಂದುವರಿಸಿ
ಮಹಿಳಾ ಅತಿಥಿ ಉಪನ್ಯಾಸಕರಿಗೆ 90 ದಿನ ಮಾತೃತ್ವ ರಜೆ: ಸಿದ್ದರಾಮಯ್ಯ ಘೋಷಣೆ
ಬೆಂಗಳೂರು: 2026-27ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಪ್ರಧಾನ ಮುಖ್... ಓದನ್ನು ಮುಂದುವರಿಸಿ
ಸರ್ಕಾರಿ ಕಾಲೇಜುಗಳಲ್ಲಿ 2,000 ಬೋಧಕ ಹುದ್ದೆಗಳ ನೇಮಕಕ್ಕೆ ಗ್ರೀನ್ ಸಿಗ್ನಲ್ – CM ಸಿದ್ದರಾಮಯ್ಯ ಘೋಷಣೆ
ಬೆಂಗಳೂರು: 2026–27ನೇ ಸಾಲಿನ ಕರ್ನಾಟಕ ಬಜೆಟ್‌ನಲ್ಲಿ ಉನ್ನತ ಶಿಕ... ಓದನ್ನು ಮುಂದುವರಿಸಿ
ಕರ್ನಾಟಕದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಬಳಕೆ ನಿಷೇಧ: ಬಜೆಟ್ ನಲ್ಲಿ ಸಿಎಂ ಘೋಷಣೆ
ಬೆಂಗಳೂರು: 2026–27ನೇ ಸಾಲಿನ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದ... ಓದನ್ನು ಮುಂದುವರಿಸಿ
1ನೇ ತರಗತಿ ಪ್ರವೇಶಕ್ಕೆ 6 ವರ್ಷ ಕಡ್ಡಾಯ: ಪೋಷಕರು 90 ದಿನ ವಿನಾಯಿತಿ ಕೋರಿ ಪ್ರತಿಭಟನೆ
ಬೆಂಗಳೂರು: ಕರ್ನಾಟಕ ಸರ್ಕಾರ 2025–26ನೇ ಶೈಕ್ಷಣಿಕ ಸಾಲಿನಿಂದ 1ನ... ಓದನ್ನು ಮುಂದುವರಿಸಿ
PG ಮೆಡಿಕಲ್ ಪ್ರವೇಶ: ನಾಲ್ಕನೇ ರೌಂಡ್ ಕೌನ್ಸೆಲಿಂಗ್ ಆರಂಭ – ಅರ್ಜಿ ಸಲ್ಲಿಕೆ ಕೊನೆಯ ದಿನ ಮಾರ್ಚ್ 3
ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ನಾಲ್ಕನ... ಓದನ್ನು ಮುಂದುವರಿಸಿ
ಇಂದು ಕೊಪ್ಪಳ ಬಂದ್: ಶಾಲೆಗಳಿಗೆ ರಜೆ ಘೋಷಣೆ, ಪರೀಕ್ಷೆಗಳು ಮುಂದಿನ ದಿನಕ್ಕೆ ಶಿಫ್ಟ್
ಕೊಪ್ಪಳ: ಇಂದು ನಡೆಯಲಿರುವ “ಕೊಪ್ಪಳ-ಭಾಗ್ಯನಗರ” ಬಂದ್ ಹೋರಾಟದ ಹಿ... ಓದನ್ನು ಮುಂದುವರಿಸಿ
ಯುಜಿಸಿಇಟಿ 2026: ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ಫೆ.27ಕ್ಕೆ ವಿಸ್ತರಣೆ
ಬೆಂಗಳೂರು : ಎಂಜಿನಿಯರಿಂಗ್ ಮತ್ತು ಇತರ ವೃತ್ತಿಪರ ಕೋರ್ಸ್‌ಗಳಿಗೆ... ಓದನ್ನು ಮುಂದುವರಿಸಿ