ಪ್ರೇಯಸಿಯ ಖಾಸಗಿ ಕ್ಷಣಗಳ ಸೆರೆ: “ಇದು ಪ್ರೇಮವಲ್ಲ, ಅಪರಾಧ” ಎಂದ ಹೈಕೋರ್ಟ್

ಬೆಂಗಳೂರು: ಪ್ರೇಮ ಸಂಬಂಧದ ನೆಪದಲ್ಲಿ ಪ್ರೇಯಸಿಯ ಖಾಸಗಿ ಕ್ಷಣಗಳನ್ನು ಸೆರೆಹಿಡಿದು ಲೈಂಗಿಕ ಕ್ರಿಯೆಗೆ ಬಲವಂತಪಡಿಸಿದ್ದ ಆರೋಪಿಯು ಕರ್ನಾಟಕ ಹೈಕೋರ್ಟ್ ನಿರೀಕ್ಷಣಾ ಜಾಮೀನು ಕೋರುವ ಪ್ರಯತ್ನ ವಿಫಲವಾಗಿದೆ. ಆರೋಪಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿ. ಶ್ರೀಶಾನಂದ ಅವರ ನೇತೃತ್ವದ ಏಕಸದಸ್ಯ ಪೀಠ, ಪ್ರಕರಣದ ಗಂಭೀರತೆಯನ್ನು ಗಮನಿಸಿ ಜಾಮೀನು ನಿರಾಕರಿಸಿ ಆದೇಶ ಹೊರಡಿಸಿದೆ. ವಿಚಾರಣೆ ವೇಳೆ ನ್ಯಾಯಾಲಯ, “ನಿಜವಾದ ಪ್ರೇಮಿಯೊಬ್ಬನು ತನ್ನ ಪ್ರೇಯಸಿಯೊಂದಿಗೆ ಕಳೆದ ಖಾಸಗಿ ಕ್ಷಣಗಳನ್ನು ಸೆರೆಹಿಡಿಯುವುದಿಲ್ಲ. ಅಲ್ಲದೆ, ಅಂತಹ ದೃಶ್ಯಗಳನ್ನು ಬಳಸಿ ಲೈಂಗಿಕ ಕ್ರಿಯೆಗೆ ಒತ್ತಾಯಿಸುವುದು ಪ್ರೀತಿಯ ಲಕ್ಷಣವಲ್ಲ” ಎಂದು ಸ್ಪಷ್ಟ ಅಭಿಪ್ರಾಯ ವ್ಯಕ್ತಪಡಿಸಿತು.

 


ಸಂತ್ರಸ್ತ ಮಹಿಳೆ 2025ರ ಮಾರ್ಚ್ 11ರಂದು ಪೊಲೀಸರಿಗೆ ದೂರು ನೀಡಿದ್ದು, ಆರೋಪಿ ಖಾಸಗಿ ಚಿತ್ರಗಳು ಮತ್ತು ವಿಡಿಯೋಗಳನ್ನು ಬಳಸಿ ಬ್ಲ್ಯಾಕ್‌ಮೇಲ್ ಮಾಡಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಿದ್ದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಆರೋಪಿ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ್ದಾರೆ.  ಈ ಹಿಂದೆ ವಿಚಾರಣಾ ನ್ಯಾಯಾಲಯ ಕೂಡ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿತ್ತು. ಹೈಕೋರ್ಟ್ ವಿಚಾರಣೆಯ ಸಮಯದಲ್ಲಿ, ಆರೋಪಿ ತಾನು ಕಾನೂನು ಪಾಲಕನಾಗಿದ್ದು ಜಾಮೀನು ನೀಡಬೇಕು ಎಂದು ಮನವಿ ಮಾಡಿದ್ದರೂ, ತಲೆಮರೆಸಿಕೊಂಡಿರುವುದನ್ನು ಗಮನಿಸಿ ನ್ಯಾಯಾಲಯ ಅರ್ಜಿಯನ್ನು ನಿರಾಕರಿಸಿತು. ಪೊಲೀಸರು ಸಂಗ್ರಹಿಸಿರುವ ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿದ ಬಳಿಕ, ಜಾಮೀನು ನೀಡಲು ಯಾವುದೇ ಕಾರಣಗಳಿಲ್ಲವೆಂದು ನ್ಯಾಯಾಲಯ ತಿಳಿಸಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

13 hours ago

   
Image 1
Image 1
ದಾವಣಗೆರೆ

"ಅಧಿಕಾರ ಹಂಚಿಕೆ ಒಪ್ಪಂದವಾಗಿದೆ – ಡಿಕೆಶಿ ಹೇಳಿದರೆ ಪ್ರಾಣ ಕೊಡೋದಕ್ಕೂ ಸಿದ್ದ: ಶಾಸಕ ಶಿವಗಂಗಾ ಬಸವರಾಜ್

ದಾವಣಗೆರೆ: ರಾಜ್ಯ ಕಾಂಗ್ರೆಸ್ ರಾಜಕೀಯದಲ್ಲಿ ಅಧಿಕಾರ ಹಂಚಿಕೆ ವಿಚ... ಓದನ್ನು ಮುಂದುವರಿಸಿ


Edited by: ಬಾನು

12 hours ago

   
Image 1
ಚಿಕ್ಕಬಳ್ಳಾಪುರ

ಗೌರಿಬಿದನೂರು: ಖಾಸಗಿ ಶಾಲೆಯಲ್ಲಿ ವಿದ್ಯಾರ್ಥಿ ಮೇಲೆ ಶಿಕ್ಷಕರ ಹಲ್ಲೆ ಎಂಟನೇ ತರಗತಿಯ ವಿದ್ಯಾರ್ಥಿ ಪ್ರಜ್ಞೆ ಕಳೆದುಕೊಂಡು ಖಾಸಗಿ ಆಸ್ಪತ್ರೆಗೆ ದಾಖಲು

ಚಿಕ್ಕಬಳ್ಳಾಪುರ : ಗೌರಿಬಿದನೂರು ನಗರದ ಖಾಸಗಿ ವಿದ್ಯಾನಿಧಿ ಶಾಲೆಯ... ಓದನ್ನು ಮುಂದುವರಿಸಿ


Edited by: ಬಾನು

12 hours ago

   
Image 1
ಚಿಕ್ಕಮಗಳೂರು

ಜಾತ್ರೆಗೆ ಕಡಿಯಲು ತಂದ ಆಡು ರೈತನ ಪಾಲಿಗೆ ವರ: ಒಂದೇ ಬಾರಿ 6 ಮರಿಗೆ ಜನ್ಮ

ಚಿಕ್ಕಮಗಳೂರು: ಚಂದ್ರಕಟ್ಟೆ ಪ್ರದೇಶದಲ್ಲಿ ಅಪರೂಪದ ಘಟನೆ ನಡೆದಿದೆ... ಓದನ್ನು ಮುಂದುವರಿಸಿ


Edited by: ಬಾನು

13 hours ago

   
Image 1
ಬೆಂಗಳೂರು ನಗರ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಭರ್ಜರಿ ದಾಳಿ ₹2.97 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂ... ಓದನ್ನು ಮುಂದುವರಿಸಿ


Edited by: ಬಾನು

13 hours ago

   
Image 1
ಬೆಂಗಳೂರು ನಗರ

ಜಿಬಿಎ–ಬಿಬಿಎಂಪಿ ಚುನಾವಣೆ ಪೂರ್ವ ತಯಾರಿ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ವಿಶೇಷ ಸಭೆ

ಬೆಂಗಳೂರು: ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಗ್ರೇಟರ್... ಓದನ್ನು ಮುಂದುವರಿಸಿ


Edited by: ಬಾನು

13 hours ago

   
Image 1
ಬೆಂಗಳೂರು ನಗರ

ಮೆಟ್ರೋ ದರ ಏರಿಕೆ ವಿಚಾರ ರಾಜ್ಯ ಸರ್ಕಾರದ ವಿರುದ್ಧ ಎಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

ಬೆಂಗಳೂರು: ಮೆಟ್ರೋ ದರ ಏರಿಕೆ ವಿಷಯದಲ್ಲಿ ರಾಜ್ಯ ಸರ್ಕಾರದ ವಿರುದ... ಓದನ್ನು ಮುಂದುವರಿಸಿ


Edited by: ಬಾನು

13 hours ago

   
Image 1
ಬೆಂಗಳೂರು ನಗರ

ಬೆಂಗಳೂರು ಐಟಿ ಉದ್ಯೋಗಿಯ ಅಳಲು: ₹50,000 ಬಾಡಿಗೆ, ಆದರೆ ಐಷಾರಾಮಿ ಸೌಲಭ್ಯ ಬಳಸಲು ಸಮಯವಿಲ್ಲ

ಬೆಂಗಳೂರು: ಬೆಂಗಳೂರಿನಲ್ಲಿ ಮನೆಗಳ ಬಾಡಿಗೆ ದಿನದಿಂದ ದಿನಕ್ಕೆ ಏರ... ಓದನ್ನು ಮುಂದುವರಿಸಿ


Edited by: ಬಾನು

18 hours ago

   
Image 1
ಬೆಂಗಳೂರು ನಗರ

ಬೆಳೆವಿಮೆ ಯೋಜನೆ ಜಾರಿಯಲ್ಲಿ ಕರ್ನಾಟಕ ನಂ.1: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರವು ಮನರೇಗ... ಓದನ್ನು ಮುಂದುವರಿಸಿ


Edited by: ಬಾನು

20 hours ago

   
Image 1
ಬೆಂಗಳೂರು ನಗರ

“ಮಹಾತ್ಮರನ್ನೇ ಬಂಡವಾಳ ಮಾಡಿಕೊಂಡಿದ್ದಾರೆ ಬಿಜೆಪಿ ಮತ್ತು ಕಾಂಗ್ರೆಸ್” – ಮುಖ್ಯಮಂತ್ರಿ ಚಂದ್ರು ಆಕ್ರೋಶ

ಪ್ರತಿ ದಿನ ರಾಜ್ಯದ ಪ್ರಮುಖ ದಿನಪತ್ರಿಕೆಗಳ ಮುಖಪುಟಗಳಲ್ಲಿ ವಿಧಿ ಜಿ ರಾಮ್ ಜಿ ಯೋಜನೆಯ... ಓದನ್ನು ಮುಂದುವರಿಸಿ


Edited by: ಬಾನು

20 hours ago

   
Image 1
ಚಿಕ್ಕಬಳ್ಳಾಪುರ

ಗುಡಿಬಂಡಾ

ಚರಂಡಿ ಸ್ವಚ್ಛತೆ ಇಲ್ಲದೆ ನರಳುತ್ತಿರುವ ಗ್ರಾಮಸ್ಥರು – ಅಂಗನವಾಡಿ, ವಿದ್ಯುತ್ ಸಮಸ್ಯೆಗಳಿಗೂ ಉತ್ತರ ಇಲ್ಲ.

ಗುಡಿಬಂಡೆ: ಬೀಚಗಾನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1