ರಾಜ್ಯ ಸರ್ಕಾರಿ ನೌಕರರು ತಿಂಗಳ ಮೊದಲ ಶನಿವಾರ `ಖಾದಿ ಬಟ್ಟೆ' ಧರಿಸೋದು ಕಡ್ಡಾಯ : ಸರ್ಕಾರ ಮಹತ್ವದ ಆದೇಶ

ಬೆಂಗಳೂರು: ರಾಜ್ಯದ ಸರ್ಕಾರಿ ನೌಕರರು ಸ್ವಯಂ ಪ್ರೇರಣೆಯಿಂದ ಪ್ರತಿ ತಿಂಗಳ ಮೊದಲ ಶನಿವಾರದಂದು ಖಾದಿ ಉಡುಪನ್ನು ಧರಿಸುವುದು. ಅಲ್ಲದೇ ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವ ಸೇರಿದಂತೆ ಎಲ್ಲಾ ಅಧಿಕೃತ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವಾಗ ಖಾದಿ ಉಡುಪನ್ನು ಧರಿಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಸೂಚಿಸಿದ್ದಾರೆ.

 

ಈ ಕುರಿತಂತೆ ರಾಜ್ಯದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿಗಳಿಗೆ ಸುತ್ತೋಲೆ ಹೊರಡಿಸಿರುವಂತ ಅವರು, "ಖಾದಿ" ಕೇವಲ ಒಂದು ಉಡುವು ಮಾತ್ರವಲ್ಲ, ಅದು ರಾಷ್ಟ್ರದ ಗೌರವ ಮತ್ತು ಹೆಮ್ಮೆಯ ಪ್ರತೀಕವಾಗಿದೆ. ಪ್ರಸ್ತುತ ಖಾದಿ ನೇಕಾರರು ನೂತನ ಶೈಲಿಯ ವಿನ್ಯಾಸದಲ್ಲಿ ಉಡುವುಗಳನ್ನು ತಯಾರಿಸಲು ಮುಂದಾಗಿದ್ದಾರೆ. ಅಲ್ಲದೇ, ಖಾದಿ ಉತ್ಪಾದನೆಯು ಗ್ರಾಮೀಣ ಆರ್ಥಿಕತೆಯ ಮೂಲ ಆಧಾರವಾಗಿದ್ದು, ರಾಜ್ಯದ ಸಾವಿರಾರು ಗ್ರಾಮೀಣ ನೂಲುಗಾರರು ಮತ್ತು ನೇಕಾರರಿಗೆ ನೇರ ಹಾಗೂ ಪರೋಕ್ಷವಾಗಿ ಜೀವನೋಪಾಯವನ್ನು ಒದಗಿಸುತ್ತಿದೆ ಎಂದಿದ್ದಾರೆ.

 

ಆದುದರಿಂದ, 77ನೇ ಗಣರಾಜ್ಯೋತ್ಸವದ ಶುಭಸಂದರ್ಭದಲ್ಲಿ, ಸಾರ್ವಜನಿಕ ಸೇವೆಯನ್ನು ದೇಶದ ಸ್ವಾತಂತ್ರ್ಯ ಹೋರಾಟದೊಂದಿಗೆ ಮರುಸಂಪರ್ಕಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ಖಾದಿ ಬಳಕೆಯನ್ನು ಉತ್ತೇಜಿಸಲು ಒಂದು ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಅದರಂತೆ, ರಾಜ್ಯದ ಎಲ್ಲಾ ಸರ್ಕಾರಿ/ ಅನುದಾನಿತ ಸಂಸ್ಥೆಗಳು/ ನಿಗಮ/ಮಂಡಳಿ/ಸ್ಮಾಯತ್ತ ಸಂಸ್ಥೆಗಳು/ ವಿಶ್ವವಿದ್ಯಾಲಯಗಳ ಅಧಿಕಾರಿ/ ನೌಕರರುಗಳು "ಸ್ವಯಂ ಪ್ರೇರಣೆಯಿಂದ" ಪ್ರತಿ ತಿಂಗಳ ಮೊದಲ ಶನಿವಾರದಂದು ಖಾದಿ ಉಡುಪನ್ನು ಧರಿಸುವುದು ಅಲ್ಲದೇ, ಸ್ವಾತಂತ್ರ ದಿನಾಚರಣೆ ಮತ್ತು ಗಣರಾಜ್ಯೋತ್ಸವ ಸೇರಿದಂತೆ ಎಲ್ಲಾ ಅಧಿಕೃತ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವಾಗ ಖಾದಿ ಉಡುಪನ್ನು ಧರಿಸುವಂತೆ ತಮ್ಮ ಇಲಾಖೆಗಳ ಅಧಿಕಾರಿ/ ಸಿಬ್ಬಂದಿಗಳಿಗೆ ನಿರ್ದೇಶನ ನೀಡಲು ಕೋರಿದ್ದಾರೆ.

 

ಈ ಕ್ರಮವು ಸರ್ಕಾರಿ ಅಧಿಕಾರಿ/ನೌಕರರುಗಳಲ್ಲಿ ಸ್ವದೇಶಿ ಉತ್ಪನ್ನಗಳ ಬಗ್ಗೆ ಗೌರವ, ಐಕ್ಯತೆ, ರಾಷ್ಟ್ರೀಯ ಭಾವನೆ, ಭಾರತೀಯತೆ, ಸ್ವಾಭಿಮಾನ ಮತ್ತು ಸಾಮಾಜಿಕ ಜವಾಬ್ದಾರಿಯ ಭಾವನೆಯನ್ನು ಬೆಳೆಸುವಲ್ಲಿ ಸಹಾಯಕವಾಗಲಿದೆ ಎಂದು ಭಾವಿಸಿದೆ. ಎಲ್ಲಾ ಜಿಲ್ಲೆಗಳಲ್ಲಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ 176 ಖಾದಿ ಸಂಘ-ಸಂಸ್ಥೆಗಳ ಹೆಸರು, ವಿಳಾಸ ಹಾಗೂ ಉತ್ಪನ್ನಗಳ ವಿವರಗಳನ್ನು https://khadi.karnataka.gov.in ದಲ್ಲಿ ಪಡೆಯಬಹುದಾಗಿದೆ ಎಂದಿದ್ದಾರೆ.

 


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

1 day ago

   
Image 1
Image 1
ಮೈಸೂರು

ನಂಜನಗೂಡು

ಬೈಕ್ ನಲ್ಲಿ ತೆರಳುತ್ತಿದ್ದ ದಂಪತಿ ಮೇಲೆ ಚಿರತೆ ಅಟ್ಯಾಕ್...ಮಗು ಸೇರಿ ಮೂವರಿಗೆ ಗಂಭೀರ ಗಾಯ

ನಂಜನಗೂಡು : ಜಮೀನಿಗೆ ಬೈಕ್ ನಲ್ಲಿ ತೆರಳುತ್ತಿದ್ದ ರೈತ ದಂಪತಿಗಳ... ಓದನ್ನು ಮುಂದುವರಿಸಿ


Edited by: ಬಾನು

7 hours ago

   
Image 1
ತುಮಕೂರು

ಕುಣಿಗಲ್

ಹುಡುಗಿ ವಿಚಾರಕ್ಕೆ ಕಿರಿಕ್ - ನಡು ರಸ್ತೆಯಲ್ಲಿ ಲಾಂಗು, ಮಚ್ಚು ಹಿಡಿದು ಹೊಡೆದಾಟ!

ತುಮಕೂರು: ಯುವತಿಯ ವಿಚಾರಕ್ಕೆ ಎರಡು ಗುಂಪುಗಳ ನುಡವೆ ಮಾರಾಮಾರಿ ನ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ಬೆಂಗಳೂರು ನಗರ

ಬಸ್‌ಗಳಲ್ಲಿ ತಂಬಾಕು ಉತ್ಪನ್ನ ಜಾಹೀರಾತಿಗೆ ನಿರ್ಬಂಧ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಕೆಕೆಆರ್‌ಟಿಸಿ, ಬಿಎಂಟ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಕೊಪ್ಪಳ

ಕೊಪ್ಪಳದಲ್ಲಿ ಲೋಕಾಯುಕ್ತ ಅಧಿಕಾರಿಗಳ ದಾಳಿ : ಕಿಮ್ಸ್ ಆಡಳಿತಾಧಿಕಾರಿ ಬಿ.ಕಲ್ಲೇಶ ಮನೆ ಶೋಧ

ಕೊಪ್ಪಳ  :  ಕೊಪ್ಪಳ ತಾಲೂಕು ಭಾಗ್ಯನಗರ ಪಟ್ಟಣದಲ್ಲಿನ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ಗ್ರಾಮಾಂತರ

ಆನೇಕಲ್ ತಾಲ್ಲೂಕು

ಮನರೇಗಾ ಮರುಜಾರಿಗೆ ಆಗ್ರಹಿಸಿ ಚನಕೆ, ಬಾಂಡ್ಲಿ, ಸುತ್ತಿಗೆ ಹಿಡಿದು ವಿನೂತನ ಪ್ರತಿಭಟನೆ

ಬೆಂಗಳೂರು : ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ರಾಜ್ಯ ಮಹಿಳಾ ಕಾ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ತುಮಕೂರು

ನಿವೇಶನ ಸರ್ವೆಗೆ ಹಿರಿಯ ನಟಿ ಜಯಶ್ರೀ ಅಲೆದಾಡಿಸಿದ ಭೂಮಾಪನ ಅಧಿಕಾರಿ

ತುಮಕೂರು: ನಿವೇಶನ ಸಮೀಕ್ಷೆಯ ವಿಚಾರವಾಗಿ ಹಿರಿಯ ರಂಗಕರ್ಮಿ, ರಾಜ್... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೀದರ್

ಹುಮನಾಬಾದ

ಬೀದರ್ ನಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟ, ತನಿಖೆಗೆ ಖಂಡ್ರೆ ಆದೇಶ

ಬೀದರ್:  ಹುಮ್ನಾಬಾದ್ ಸಮೀಪ ಅನುಮಾನಾಸ್ಪದ ವಸ್ತು ಸ್ಫೋಟಗೊಂ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಚಿಕ್ಕಬಳ್ಳಾಪುರ

ಶಿಡ್ಲಘಟ್ಟ

ನಾನು ಕಳ್ಳತನ ಮಾಡಿಲ್ಲ, ಕೊಲೆ ಮಾಡಿಲ್ಲ ಶಿಡ್ಲಘಟ್ಟದ ಜನರಿಗಾಗಿ ತ್ಯಾಗ ಮಾಡಿದ್ದೇನೆ, ಬೇಲ್ ಪಡೆದ ರಾಜೀವ್ ಗೌಡ ಹೊಸ ವರಸೆ

ಚಿಕ್ಕಬಳ್ಳಾಪುರ: ಬ್ಯಾನರ್ ತೆರವು ವಿಚಾರಕ್ಕೆ ಸಂಬಂಧಪಟ್ಟಂತೆ ಶಿಡ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ಹೋಂ ವರ್ಕ್ ಮಾಡಿಲ್ಲ ಎಂದು 4ನೇ ತರಗತಿ ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ: ಪೋಷಕರಿಗೆ ಹೇಳಿದರೆ ಕತ್ತು ಹಿಸುಕುತ್ತೇನೆ ಎಂದು ಬೆದರಿಕೆ

ಬೆಂಗಳೂರು : ಹೋಂ ವರ್ಕ್ ಮಾಡಿಲ್ಲ ಎಂಬ ಕಾರಣಕ್ಕೆ ಶಿಕ್ಷಕಿಯೊಬ್ಬರ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಚಿಕ್ಕಬಳ್ಳಾಪುರ

ಗುಡಿಬಂಡಾ

ಮಹಾತ್ಮ ಗಾಂಧೀಜಿ ಉದ್ಯೋಗ ಖಾತ್ರಿ ಯೋಜನೆ ರದ್ದಿಗೆ ವಿರೋಧ. ಸಿಪಿಎಂ ವತಿಯಿಂದ ಉಪವಾಸ ಸತ್ಯಾಗ್ರಹ.

ಗುಡಿಬಂಡೆ: ಕೇಂದ್ರ ಸರ್ಕಾರವು ಮಹಾತ್ಮ ಗಾಂಧೀಜಿ ರಾಷ್ಟ್ರೀಯ ಗ್ರಾ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1