ರೇಣುಕಾಸ್ವಾಮಿ ಕೊಲೆ ಪ್ರಕರಣ ಪೊಲೀಸ್ ಕಮಿಷನರ್ ಬಿ.ದಯಾನಂದ್ ಅವರಿಂದ ಸುದ್ದಿಗೋಷ್ಠಿ
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಒಟ್ಟು 17ಮಂದಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದು, ಪ್ರಕರಣದ ಬಗ್ಗೆ ಪೊಲೀಸ್ ಕಮಿಷನರ್ ಬಿ.ದಯಾನಂದ್ ಸುದ್ದಿಗೋಷ್ಠಿ ನಡೆಸಿ ತನಿಖೆಯ ಮಾಹಿತಿ ನೀಡಿದ್ದಾರೆ. ಪೊಲೀಸರು ನಿಷ್ಪಕ್ಷಪಾತ ಹಾಗೂ ಪ್ರಾಮಾಣಿಕತೆಯಿಂದ ತನಿಖೆ ನಡೆಸುತ್ತಿದ್ದಾರೆ. ಶೀಘ್ರವೇ ಪ್ರಕರಣ ಸತ್ಯತೆಯನ್ನು ಬಯಲು ಮಾಡುವುದಾಗಿ ಹೇಳಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಪೊಲೀಸ್ ಕಮಿಷನರ್ ಬಿ ದಯಾನಂದ್ ಅವರು, ಈವರೆಗೆ 17 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಹೇಳಿದ್ರು.
ಆರೋಪಿಗಳ ಕೂಲಂಕಷ ವಿಚಾರಣೆ ನಡೆಸಲಾಗ್ತಿದೆ ಇದೆ. ಪ್ರಕರಣದ ತನಿಖೆಯನ್ನ ಎಸಿಪಿ ಮಟ್ಟದ ಅಧಿಕಾರಿಗೆ ನೀಡಲಾಗಿದೆ ಎಂದರು. ಪ್ರತಿ ವಿಚಾರದ ಬಗ್ಗೆ ಪ್ರತ್ಯೇಕ ತಂಡ ರಚಿಸಿ ತನಿಖೆ ಮಾಡಲಾಗುತ್ತಿದೆ. ತನಿಖಾ ತಂಡದಲ್ಲಿ ಹಲವು ಇನ್ಸ್‌ಪೆಕ್ಟರ್, ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಅಷ್ಟೇ ಅಲ್ಲದೇ ಸಾಕ್ಷಿ ಸಂಗ್ರಹಕ್ಕೆ ಸಹಕರಿಸಲು ಎಫ್‌ಎಸ್‌ಎಲ್ ತಜ್ಞರು, ತಾಂತ್ರಿಕ ಪರಿಣತರು ಇದ್ದಾರೆ. ಪ್ರಕರಣ ಬೆಳಕಿಗೆ ಬಂದ ತಕ್ಷಣವೇ ಪೊಲೀಸರು ನಿಷ್ಪಕ್ಷಪಾತ, ಪ್ರಾಮಾಣಿಕ ತನಿಖೆ ನಡೆಸುತ್ತಿದ್ದಾರೆ ಎಂದು ಕಮಿಷನ್ ದಯಾನಂದ ಹೇಳಿದ್ರು. ರೇಣುಕಾ ಸ್ವಾಮಿ ಕೊಲೆಗೆ ಸಂಬಂಧಿಸಿದಂತೆ ತ್ವರಿತಗತಿಯಲ್ಲಿ ಸಾಕ್ಷಿಗಳನ್ನ ಸಂಗ್ರಹಿಸಲಾಗಿದೆ. ಇದೊಂದು ಹೀನ ಕೃತ್ಯವಾಗಿದೆ. ಆರೋಪಿಗಳಿಗೆ ಶಿಕ್ಷೆಯಾಗುವಂತೆ ನಾವು ನೋಡಿಕೊಳ್ಳಬೇಕು, ಕೊಲೆಯಾದ ವ್ಯಕ್ತಿಯ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದ್ರು.
ಅಲ್ಲದೇ ಸಮರ್ಥ ರೀತಿಯಲ್ಲಿ ತನಿಖೆ ನಡೆಯುತ್ತಿದೆ. ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗಲು ಮಾಧ್ಯಮದವರ ತಾಳ್ಮೆ, ಸಹನೆ ಅಗತ್ಯವಿದೆ. ಸಾರ್ವಜನಿಕರಲ್ಲಿ ಕುತೂಹಲ ಹೆಚ್ಚಿದೆ. ಕೇಸ್ಗೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ವಿಚಾರಣೆ ಆಗಬೇಕಿದೆ ಇದಕ್ಕೆ ಮಹಜರು, ಸಾಕ್ಷಿಗಳು ಕೂಡ ಮುಖ್ಯವಾಗಿದೆ ಎಂದು ಹೇಳಿದರು. ರೇಣುಕಾಸ್ವಾಮಿ ಕೇಸ್ಗೆ ಸಂಬಂಧಿಸಿದಂತೆ ಎಲ್ಲಾ ಕಡೆ ತನಿಖೆ ನಡೆಯುತ್ತಿದೆ. ಚಿತ್ರದುರ್ಗ, ಮೈಸೂರಿನಲ್ಲೂ ಒಂದೊಂದು ತನಿಖಾ ತಂಡ ಇದೆ. ಪಶ್ಚಿಮ ವಿಭಾಗ ಡಿಸಿಪಿ ಗಿರೀಶ್ ಎಲ್ಲವನ್ನೂ ಮಾನಿಟರ್ ಮಾಡ್ತಿದ್ದಾರೆ. ಪ್ರತಿ ತಂಡಕ್ಕೆ ಓರ್ವ ಇನ್ಸ್‌ಪೆಕ್ಟರ್ ನೇತೃತ್ವ ವಹಿಸಿ ತನಿಖೆ ಮಾಡ್ತಿದ್ದಾರೆ. ಕೇಸ್ಗೆ ಸಂಬಂಧಿಸಿದಂತೆ ಈಗಲೇ ಹೆಚ್ಚಿನ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದು ಕಮಿಷನರ್ ದಯಾನಂದ ಹೇಳಿದರು.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಉದ್ಯಮಿ ಸಿ.ಜೆ ರಾಯ್ ಆತ್ಮಹತ್ಯೆ ಕೇಸ್ ತನಿಖೆಗೆ ಹೆಚ್ಚುವರಿ ಪೊಲೀಸ್ ಆಯುಕ್ತ ವಂಶಿಕೃಷ್ಣ ನೇತೃತ್ವದಲ್ಲಿ 'SIT' ರಚನೆ
ಬೆಂಗಳೂರು : ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ ರಾಯ್ ಅವರ ಆತ್ಮಹತ್ಯ... ಓದನ್ನು ಮುಂದುವರಿಸಿ
ಮತ್ತೊಂದು ಲೋಕಾಯುಕ್ತ ಟ್ರ್ಯಾಪ್ - 1 ಲಕ್ಷ ಲಂಚಕ್ಕೆ ಬೇಡಿಕೆ, 40 ಸಾವಿರಕ್ಕೆ ಫೈನಲ್ - ಬಲೆಗೆ ಬಿದ್ದ ತುಮಕೂರು ಗ್ರಾಮಾಂತರ ಪಿಎಸ್ಐ ಚೇತನ್
ತುಮಕೂರು : ಬೆಂಗಳೂರು ಮೂಲದ ವ್ಯಕ್ತಿಗೆ 1 ಲಕ್ಷಕ್ಕೆ ಬೇಡಿಕೆ ಇಟ್... ಓದನ್ನು ಮುಂದುವರಿಸಿ
ಇನ್ಮುಂದೆ ಪೊಲೀಸ್ ಸಿಬ್ಬಂದಿಗಳಿಗೆ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ಸಾಂದರ್ಭಿಕ ರಜೆ: ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ರಾಜ್ಯ ಸರ್ಕಾರದಿಂದ ಪೊಲೀಸ್ ಸಿಬ್ಬಂದಿಗಳಿಗೆ ಭರ್ಜರಿ... ಓದನ್ನು ಮುಂದುವರಿಸಿ
ಕೊಟ್ಟೂರು
ಮಗನಿಂದಲೇ ತಂದೆ, ತಾಯಿ, ಸಹೋದರಿಯ ಬರ್ಬರ ಹತ್ಯೆ
ವಿಜಯನಗರ: ಮಗನೇ ತಂದೆ, ತಾಯಿ ಹಾಗೂ ಸಹೋದರಿ ಮೂವರನ್ನು ಹತ್ಯೆಗೈರು... ಓದನ್ನು ಮುಂದುವರಿಸಿ
ಲಂಚ ಪಡೆವಾಗ ಲೋಕಾಯುಕ್ತ ದಾಳಿ: ಇನ್ಸ್ ಪೆಕ್ಟರ್ ಹೈಡ್ರಾಮಾ, ಪೊಲೀಸರ ವಿರುದ್ಧವೇ ಕೂಗಾಡಿ ರಂಪಾಟ,
ಬೆಂಗಳೂರು: ಭ್ರಷ್ಟ ಅಧಿಕಾರಿಗಳ ವಿರುದ್ಧ ಕರ್ನಾಟಕ ಲೋಕಾಯುಕ್ತ ಅಧ... ಓದನ್ನು ಮುಂದುವರಿಸಿ
ಸಿರವಾರ
ಗರ್ಭಿಣಿ ಸೊಸೆಯ ಕತ್ತು ಸೀಳಿ ಕೊಂದ ಪಾಪಿ ಮಾವ! ಮನುಕುಲವೇ ತಲೆತಗ್ಗಿಸುವಂತಹ ಅಮಾನವೀಯ ಘಟನೆ
ರಾಯಚೂರು: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ, ಹೆತ್ತ ಮಗಳಂತಿರಬೇಕಾದ... ಓದನ್ನು ಮುಂದುವರಿಸಿ
ನಟ ದರ್ಶನ್ ಅವರನ್ನು ನೋಡಲು ಹೋದ ಯಲಹಂಕ ಮೂಲದ ಪೊಲೀಸ್ ಕಾನ್ಸ್ಟೇಬಲ್ ಹಾಗೂ ಅವರಿಗೆ ಸಾಥ್ ನೀಡಿದ ಜೈಲು ವಾರ್ಡನ್
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ಹಾಗೂ ಆರೋಪಿ ದರ್... ಓದನ್ನು ಮುಂದುವರಿಸಿ
ಪೊಲೀಸ್ರ ಮುಂದೆ ಸುಸ್ತು, ನಿಶಕ್ತಿ ಅಂತಾ ನಾಟಕ ಮಾಡಿದ್ಲಾ ಪವಿತ್ರಗೌಡ..!
ಬೆಂಗಳೂರು; ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆಯ ತನಿಖೆಯಲ್ಲಿ ಎ1... ಓದನ್ನು ಮುಂದುವರಿಸಿ
ಮತ್ತೆ ಮತ್ತೆ ಪುರುಷತ್ವ ಪರೀಕ್ಷೆ ಮಾಡಿಸಲು ತುಂಬಾ ಮುಜುಗರ ಆಗತ್ತೆ: ಜಡ್ಜ್ ಮುಂದೆ ಪ್ರಜ್ವಲ್ ಅಳಲು
ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ... ಓದನ್ನು ಮುಂದುವರಿಸಿ
ದರ್ಶನ್ ತಂಗಿದ ಮೈಸೂರಿನ ಹೋಟೆಲ್ ನಲ್ಲೂ ಸ್ಥಳ ಮಹಜರು: ಆರೋಪಿಗಳನ್ನು ಕರೆದೊಯ್ಯದ ಪೊಲೀಸರು
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ನಟ ದರ್ಶನ್ ಹಾಗೂ ಇತರ ಆರೋಪಿಗ... ಓದನ್ನು ಮುಂದುವರಿಸಿ