ರೆಫರಲ್ ಇಲ್ಲದೆ : ಆಯುಷ್ಮಾನ್ ಯೋಜನೆಡಿ ಎರಡು ಖಾಸಗಿ ಆಸ್ಪತ್ರೆಗಳಲ್ಲಿ ನೇರ ಉಚಿತ ಚಿಕಿತ್ಸೆ

ಬೆಂಗಳೂರು: ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ರಾಜ್ಯ ಸರ್ಕಾರ ಮಹತ್ವದ ಸೌಲಭ್ಯ ಘೋಷಿಸಿದೆ. ಇನ್ನು ಮುಂದೆ ಚಿಕ್ಕಬಳ್ಳಾಪುರದ ಶ್ರೀ ಸತ್ಯಸಾಯಿ ಸರಳ ಮೆಮೋರಿಯಲ್ ಆಸ್ಪತ್ರೆ ಹಾಗೂ ವಿಜಯಪುರದ ಶ್ರೀ ಬಿ.ಎಂ. ಪಾಟೀಲ ಮೆಡಿಕಲ್ ಕಾಲೇಜು ಆಸ್ಪತ್ರೆಗಳಲ್ಲಿ ಸರ್ಕಾರಿ ಆಸ್ಪತ್ರೆಯ ರೆಫರಲ್ ಇಲ್ಲದೆ ನೇರವಾಗಿ ಚಿಕಿತ್ಸೆ ಪಡೆಯಲು ಅವಕಾಶ ನೀಡಲಾಗಿದೆ. ಸಾಮಾನ್ಯವಾಗಿ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಲಭ್ಯವಿಲ್ಲದಿದ್ದಾಗ ಮಾತ್ರ ಖಾಸಗಿ ಆಸ್ಪತ್ರೆಗಳಿಗೆ ರೆಫರಲ್ ನೀಡಲಾಗುತ್ತದೆ. ಆದರೆ ಈ ಎರಡು ಆಸ್ಪತ್ರೆಗಳಿಗೆ 2B (ಸಂಕೀರ್ಣ ದ್ವಿತೀಯ ಹಂತ) ಮತ್ತು 3A (ತೃತೀಯ ಹಂತ) ಚಿಕಿತ್ಸೆಗಳಿಗಾಗಿ ಈ ನಿಯಮದಿಂದ ವಿನಾಯಿತಿ ನೀಡಲಾಗಿದೆ.

 

ಈ ಹಿಂದೆ ಪ್ರಾಯೋಗಿಕವಾಗಿ ಜಾರಿಗೆ ತಂದಿದ್ದ ಈ ಸೌಲಭ್ಯವನ್ನು ಸರ್ಕಾರ ಇದೀಗ ಮತ್ತೊಂದು ವರ್ಷದವರೆಗೆ ವಿಸ್ತರಿಸಿದೆ. ಯೋಜನೆಯಡಿ, ಈ ಆಸ್ಪತ್ರೆಗಳು ರೋಗಿಗಳಿಗೆ ಸಂಪೂರ್ಣ ಉಚಿತ ಚಿಕಿತ್ಸೆ ನೀಡಬೇಕು ಎಂಬ ಷರತ್ತನ್ನು ಸರ್ಕಾರ ವಿಧಿಸಿದೆ. ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನ ಕಾರ್ಯಕಾರಿ ನಿರ್ದೇಶಕರ ಪ್ರಸ್ತಾವನೆ ಆಧರಿಸಿ, ಸಾರ್ವಜನಿಕರ ಹಿತದೃಷ್ಟಿಯಿಂದ ಏಪ್ರಿಲ್ 6, 2026 ರಂದು ಸರ್ಕಾರ ಈ ಆದೇಶ ಹೊರಡಿಸಿದೆ. ಸರ್ಕಾರ ನಿಗದಿಪಡಿಸಿದ ದರದಂತೆ ಈ ಆಸ್ಪತ್ರೆಗಳಿಗೆ ವೆಚ್ಚವನ್ನು ಮರುಪಾವತಿಸಲಾಗುತ್ತದೆ. ಒಂದು ವರ್ಷದ ಬಳಿಕ ಯೋಜನೆಯ ಪರಿಣಾಮಕಾರಿತ್ವವನ್ನು ಪರಿಶೀಲಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

2 months ago

   
Image 1
Image 1
ಬೆಂಗಳೂರು ನಗರ

ಪರಿಶಿಷ್ಟ ಜಾತಿ ಯುವಕರಿಗೆ ಸುವರ್ಣಾವಕಾಶ – ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಸಾಲ-ಸಬ್ಸಿಡಿ ಯೋಜನೆಗಳು

ಬೆಂಗಳೂರು: ಪರಿಶಿಷ್ಟ ಜಾತಿಯ ನಿರುದ್ಯೋಗಿ ಯುವಕರು, ಯುವತಿಯರು ಮತ... ಓದನ್ನು ಮುಂದುವರಿಸಿ


Edited by: ಬಾನು

2 months ago

   
Image 1
ಬೆಂಗಳೂರು ನಗರ

SC/ST ಉದ್ಯಮಿಗಳಿಗೆ ಖುಷಿಯ ಸುದ್ದಿ: ಕೈಗಾರಿಕೆ ಸ್ಥಾಪನೆಗೆ ಸರ್ಕಾರಿ ಭರ್ಜರಿ ನೆರವು!

ಬೆಂಗಳೂರು: ರಾಜ್ಯದಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಹೊಸ ವೇಗ ನೀಡಲು... ಓದನ್ನು ಮುಂದುವರಿಸಿ


Edited by: ಬಾನು

2 months ago

   
Image 1
ಬೆಂಗಳೂರು ನಗರ

ಪಡಿತರ ಅಕ್ಕಿ ಕಳ್ಳಸಾಗಣೆ ತಡೆಯಲು 20,000 ಅಂಗಡಿಗಳಲ್ಲಿ ಸಿಸಿ ಕ್ಯಾಮರಾಗಳ ಅಳವಡಿಕೆ: ಸಚಿವ ಮುನಿಯಪ್ಪ

ಬೆಂಗಳೂರು: ಪಡಿತರ ಅಕ್ಕಿ ಕಳ್ಳ ಸಾಗಣೆ ತಡೆಯಲು ರಾಜ್ಯದ 20 ಸಾವಿರ... ಓದನ್ನು ಮುಂದುವರಿಸಿ


Edited by: ಬಾನು

2 months ago

   
Image 1
ಬೆಂಗಳೂರು ನಗರ

ಮಹಿಳೆಯರಿಗೆ ಯುಗಾದಿ ಗಿಫ್ಟ್: ಗೃಹಲಕ್ಷ್ಮಿ ಯೋಜನೆಯ 27ನೇ ಕಂತು ಬಿಡುಗಡೆ

ಬೆಂಗಳೂರು: ಯುಗಾದಿ ಹಬ್ಬದ ಸಂಭ್ರಮದಲ್ಲಿ ರಾಜ್ಯದ ಮಹಿಳೆಯರಿಗೆ ಸಿ... ಓದನ್ನು ಮುಂದುವರಿಸಿ


Edited by: ಬಾನು

2 months ago

   
Image 1
ಬೆಂಗಳೂರು ನಗರ

ಪೋಷಕರೇ ಗಮನಿಸಿ: ಮಗಳಿಗೆ 18 ವರ್ಷ ತುಂಬಿದರೆ “ಭಾಗ್ಯಲಕ್ಷ್ಮಿ ಬಾಂಡ್”ನ ₹1 ಲಕ್ಷ ಪಡೆಯಿರಿ!

ಬೆಂಗಳೂರು: ಕರ್ನಾಟಕ ಸರ್ಕಾರದ ಭಾಗ್ಯಲಕ್ಷ್ಮಿ ಯೋಜನೆ ಅಡಿಯಲ್ಲಿ ನ... ಓದನ್ನು ಮುಂದುವರಿಸಿ


Edited by: ಬಾನು

3 months ago

   
Image 1

ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಸಿಗುತ್ತೆ ಬಡ್ಡಿ ಇಲ್ಲದೇ 1.40 ಲಕ್ಷದವರೆಗೆ ಸಾಲ..! ಅರ್ಜಿ ಸಲ್ಲಿಸುವ ವಿಧಾನ ತಿಳಿದುಕೊಳ್ಳಿ

ನವದೆಹಲಿ: ಕೇಂದ್ರ ಸರ್ಕಾರ ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಉತ್ತ... ಓದನ್ನು ಮುಂದುವರಿಸಿ


Edited by: ಬಾನು

3 months ago

   
Image 1
ಬೀದರ್

ಗೃಹಲಕ್ಷ್ಮಿ ಯೋಜನೆ ಗೊಂದಲ – ಸತ್ತ ಮಹಿಳೆಯ ಖಾತೆಗೆ 12 ಕೋಟಿ ರೂ. ಜಮಾ

ಬೀದರ್: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್... ಓದನ್ನು ಮುಂದುವರಿಸಿ


Edited by: ಬಾನು

3 months ago

   
Image 1
ಬೆಂಗಳೂರು ನಗರ

ಅನ್ನಭಾಗ್ಯ ಯೋಜನೆಗೆ ಹೊಸ ರೂಪ: 5 ಕೆಜಿ ಅಕ್ಕಿಯ ಬದಲು “ಇಂದಿರಾ ಆಹಾರ ಕಿಟ್‌” ವಿತರಣೆ – ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ರಾಜ್ಯದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಯಲ್ಲಿ ಮಹ... ಓದನ್ನು ಮುಂದುವರಿಸಿ


Edited by: ಬಾನು

3 months ago

   
Image 1
ಬೆಂಗಳೂರು ನಗರ

ರಾಜ್ಯ ಬಜೆಟ್‌ನಲ್ಲಿ ಗೃಹಲಕ್ಷ್ಮಿಯರಿಗೆ ಸಂತಸದ ಸುದ್ದಿ: ₹28,608 ಕೋಟಿ ಅನುದಾನ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರಾದ ಸಿದ್ದರಾಮಯ್ಯ ಅ... ಓದನ್ನು ಮುಂದುವರಿಸಿ


Edited by: ಬಾನು

3 months ago

   
Image 1
ಬೆಂಗಳೂರು ನಗರ

ಅನರ್ಹ BPL ಕಾರ್ಡ್‌ಗಳ ಮೇಲೆ ಸರ್ಕಾರದ ಕತ್ತರಿ: 5 ತಿಂಗಳಲ್ಲಿ 15 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಶಾಕ್

ಬೆಂಗಳೂರು: ಅನರ್ಹವಾಗಿ BPL ಕಾರ್ಡ್ ಹೊಂದಿರುವವರ ವಿರುದ್ಧ ರಾಜ್ಯ... ಓದನ್ನು ಮುಂದುವರಿಸಿ


Edited by: ಬಾನು

3 months ago

   
Image 1