ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿಗೆ ಆಹುತಿಯಾದ ಕಬ್ಬು
ಇಂಡಿ: ತಾಲ್ಲೂಕಿನ ತಡವಲಗಾ ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಸುಮಾರು ಐದು ಎಕರೆ ಕಬ್ಬು ಸುಟ್ಟ ಕರಗಲಾದ ಘಟನೆ ನಡೆದಿದೆ.ತಡವಲಗಾ ಗ್ರಾಮದ ರಾವುತಪ್ಪ ಶರಣಪ್ಪ ಇಂಡಿ (ಚಿನ್ನಪಗೋಳ) ಇವರಿಗೆ ಸೇರಿದ ರೈತನ ಕಬ್ಬು ಎಂದು ತಿಳಿದು ಬಂದಿದೆ. ಕಟಾವಿಗೆ ಬಂದಿದ್ದ ಫಸಲು ಕಣ್ಣಮುಂದೆಯೇ ಬೆಂಕಿ ಆಹುತಿಯಾಗಿದ್ದನ್ನು ಕಂಡು ರೈತ ಕಂಗಾಲಾಗಿದ್ದಾರೆ.
ಜಮೀನಿನಲ್ಲಿ ಬೆಳೆದಿದ್ದ ಕಬ್ಬಿಗೆ ಇಂದು ಮಧ್ಯಾಹ್ನ ಸಮಯದಲ್ಲಿ ಶಾರ್ಟ್ ಸರ್ಕ್ಯೂಟ್ ಕಾರಣ ಬೆಂಕಿ ಕಾಣಿಸಿಕೊಂಡಿದೆ. ಬಿಸಿಲಿನ ತಾಪ ಮತ್ತು ಗಾಳಿಯ ರಭಸಕ್ಕೆ ಬೆಂಕಿಯ ಕೆನ್ನಾಲಿಗೆ ಕ್ಷಣಾರ್ಧದಲ್ಲಿ ಇಡೀ ಹೊಲವನ್ನು ಆವರಿಸಿಕೊಂಡಿದೆ.
ಬೆಂಕಿ ಕಾಣಿಸಿಕೊಂಡ ತಕ್ಷಣ ಅಕ್ಕಪಕ್ಕದ ಜಮೀನಿನ ರೈತರು ಹಾಗೂ ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿ, ಟ್ಯಾಂಕರ್ ಹಾಗೂ ಬಿಂದಿಗೆಗಳ ಮೂಲಕ ನೀರು ಹಾಯಿಸಿ ಬೆಂಕಿ ನಂದಿಸಲು ಹರಸಾಹಸಪಟ್ಟರು.ಈ ಸುದ್ದಿ ತಿಳಿದು ಇಂಡಿ ಅಗ್ನಿಶಾಮಕ ಠಾಣಾಧಿಕಾರಿ ಭೀಮಶಂಕರ್ ಪ್ರಮುಖ ಫೈರ್ ಫೈಟರ್ ರಾಜು ರಾಥೋಡ್ ಅಗ್ನಿಶಾಮಕ ಚಾಲಕ ಮಲ್ಲಿಕಾರ್ಜುನ್ ಗೋಟ್ಯಾಳ ಫೈಯರ್ ಫೈಟರ್ ಮಹಮ್ಮದ್ ಅಲಿ ಬಂತನಾಳ ಮಾಳಪ್ಪ ಪೂಜಾರಿ ಇವರ ನೇತೃತ್ವದಲ್ಲಿ ಬೆಂಕಿ ನಂದಿಸಲು ಹರಸಾಹಸ ಪಟ್ಟರು ಕೂಡಾ ಬೆಂಕಿಯ ತೀವ್ರತೆ ಹೆಚ್ಚಿದ್ದರಿಂದ ಬಹುತೇಕ ಕಬ್ಬು ಸುಟ್ಟು ಕರಕಲಾಗಿದೆ.
ಸಾಲ ಮಾಡಿ, ಹಗಲಿರುಳು ಶ್ರಮವಹಿಸಿ ಕಬ್ಬು ಬೆಳೆದಿದ್ದೆ. ಇನ್ನೇನು ಕಟಾವು ಮಾಡಿ ಕಾರ್ಖಾನೆಗೆ ಕಳುಹಿಸಬೇಕು ಎನ್ನುವಷ್ಟರಲ್ಲಿ ಈ ಅವಘಡ ಸಂಭವಿಸಿದೆ. ಇದರಿಂದ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದ್ದು, ಜೀವನ ನಡೆಸುವುದೇ ಕಷ್ಟವಾಗಿದೆ ಎಂದು ನೊಂದ ರೈತ ರಾವುತಪ್ಪ ಶರಣಪ್ಪ ಇಂಡಿ ಅವರು ತಮ್ಮ ಅಳಲು ತೋಡಿಕೊಂಡಿದ್ದಾರೆ.
ಸ್ಥಳಕ್ಕೆ ಕಂದಾಯ ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬೆಳೆ ನಷ್ಟದ ಅಂದಾಜು ಮಾಡಿದ್ದಾರೆ. ಸಂಕಷ್ಟಕ್ಕೆ ಸಿಲುಕಿರುವ ರೈತನಿಗೆ ಸರ್ಕಾರ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣವೇ ಸೂಕ್ತ ಪರಿಹಾರ ನೀಡಬೇಕೆಂದು ಗ್ರಾಮಸ್ಥರು ಹಾಗೂ ರೈತ ಸಂಘದ ಮುಖಂಡರು ಒತ್ತಾಯಿಸಿದ್ದಾರೆ.ಈ ಸುದ್ದಿ ತಿಳಿದು ಗ್ರಾಮ ಆಡಳಿತ ಅಧಿಕಾರಿ ಮಹಾತೇಶ ಗುರುಬಟ್ಟಿ ಬೇಟಿ ನೀಡಿ ಪರಿಶೀಲನೆ ಮಾಡಿ ಪಂಚನಾಮೆ ಮಾಡಿಕೊಂಡರು.
ಇದು ಹೋರ್ತಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ ಆಗಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಬೆಂಗಳೂರು ಹೆಸರಘಟ್ಟದಲ್ಲಿ Bird Flu ಪತ್ತೆ – H5N1 ಆತಂಕ, ಪೌಲ್ಟ್ರಿ ಫಾರಂ ಸೀಲ್!
ಬೆಂಗಳೂರು: ರಾಜ್ಯದಲ್ಲಿ ಹಕ್ಕಿ ಜ್ವರದ ಆತಂಕ ಹೆಚ್ಚಾಗಿದೆ. ಬೆಂಗಳ... ಓದನ್ನು ಮುಂದುವರಿಸಿ
ಸಂಕಷ್ಟದಲ್ಲಿದ್ದ ಪೂಜಾ ಕುಟುಂಬಕ್ಕೆ ಕುಮಾರಸ್ವಾಮಿ ನೆರವು: ಮಾನವೀಯತೆ ಮೆರೆದ ಕೇಂದ್ರ ಸಚಿವ
ಮೈಸೂರು: ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಗ್ರಾಮದಲ್ಲಿ ಸಂಕಷ್ಟಕ್... ಓದನ್ನು ಮುಂದುವರಿಸಿ
ಹುಬ್ಬಳ್ಳಿ
ರೈಲಿನಲ್ಲೇ ಗಾಂಜಾ ಸೇವನೆ: ಸಂಪರ್ಕ ಕ್ರಾಂತಿ ಎಕ್ಸ್‌ಪ್ರೆಸ್‌ನಲ್ಲಿ ಯುವಕರ ದೌರ್ಜನ್ಯ ವಿಡಿಯೋ ವೈರಲ್
ಹುಬ್ಬಳ್ಳಿ,: ಹಜರತ್ ನಿಜಾಮುದ್ದೀನ್–ಯಶವಂತಪುರ ನಡುವೆ ಸಂಚರಿಸುವ... ಓದನ್ನು ಮುಂದುವರಿಸಿ
ಮತದಾನದ ವೇಳೆ ಹಣ ಹಂಚಿಕೆ ಆರೋಪ: ಬಾಗಲಕೋಟೆಯಲ್ಲಿ ವೈರಲ್ ವಿಡಿಯೋ ಸಂಚಲನ
ಬಾಗಲಕೋಟೆ: ಉಪಚುನಾವಣೆಯ ಸಂದರ್ಭದಲ್ಲಿ ವಾಂಬೆ ಕಾಲೋನಿಯಲ್ಲಿ ಮತದಾ... ಓದನ್ನು ಮುಂದುವರಿಸಿ
ಹೊಸನಗರ
ಹುಲಿಕಲ್ ಘಾಟ್‌ನಲ್ಲಿ ಗುಡ್ಡ ಕುಸಿತ – ಮೂವರು ಕಾರ್ಮಿಕರ ದುರ್ಮರಣ
ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್‌ನಲ್ಲಿ ರಸ್... ಓದನ್ನು ಮುಂದುವರಿಸಿ
ಮಾಣಿಕ್ಯಾಧಾರದಲ್ಲಿ 15 ವರ್ಷದ ಬಾಲಕಿ ನಿಗೂಢ ನಾಪತ್ತೆ
ಚಿಕ್ಕಮಗಳೂರು: ದತ್ತಪೀಠದ ತಪ್ಪಲಿನ ಮಾಣಿಕ್ಯಾಧಾರ ಪ್ರದೇಶದಲ್ಲಿ 1... ಓದನ್ನು ಮುಂದುವರಿಸಿ
ಮದ್ದೂರು
6 ತಿಂಗಳಲ್ಲಿ ಮದ್ದೂರು ರೈಲು ನಿಲ್ದಾಣ ಆಧುನೀಕರಣ: ಸಚಿವ ವಿ. ಸೋಮಣ್ಣ ಭರವಸೆ
ಮಂಡ್ಯ: ಮದ್ದೂರು ನಗರದ ಶಿವಪುರ ರೈಲು ನಿಲ್ದಾಣವನ್ನು ಆಧುನೀಕರಿಸಲ... ಓದನ್ನು ಮುಂದುವರಿಸಿ
20 ವರ್ಷದ ಕಾಡಾನೆ ಕಾಟಕ್ಕೆ ಪರಿಹಾರ: ಹಾಸನದಲ್ಲಿ ತಡೆಗೋಡೆ ಸಿದ್ಧ
ಹಾಸನ: ಕಳೆದ ಎರಡು ದಶಕಗಳಿಂದ ಜಿಲ್ಲೆಯ ಮಲೆನಾಡು ಭಾಗದ ಜನರನ್ನು ಕ... ಓದನ್ನು ಮುಂದುವರಿಸಿ
ಮೂಡಿಗೆರೆ
ಹೃದಯ ಕಲುಕುವ ಘಟನೆ: ಪತಿಯ ಶವದ ಪಕ್ಕದಲ್ಲೇ 10 ದಿನ ಬದುಕಿದ ಪತ್ನಿ
ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರದಲ್ಲ... ಓದನ್ನು ಮುಂದುವರಿಸಿ
ಆದಿಚುಂಚನಗಿರಿ ಮಠಕ್ಕೆ ಕುಮಾರಸ್ವಾಮಿ ಭೇಟಿ: ಆಶೀರ್ವಾದ ಪಡೆದ ಕೇಂದ್ರ ಸಚಿವ
ಬೆಂಗಳೂರು: ಮಾನ್ಯ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ... ಓದನ್ನು ಮುಂದುವರಿಸಿ