ಸಾರ್ವಜನಿಕ ದೂರುಗಳ ವಿಲೇವಾರಿಗೆ 21 ದಿನದಲ್ಲಿ ಪರಿಹಾರ: ರಾಜ್ಯ ಸರ್ಕಾರ ಹೊಸ ನಿಯಮ

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಇಲಾಖೆಗಳು ಹಾಗೂ ಅವುಗಳ ಅಧೀನ ಸಂಸ್ಥೆಗಳ ಸೇವೆಗಳು ಮತ್ತು ಯೋಜನೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಸ್ವೀಕರಿಸುವ ದೂರುಗಳು ಮತ್ತು ಮನವಿಗಳನ್ನು ತ್ವರಿತವಾಗಿ ಹಾಗೂ ಗುಣಾತ್ಮಕವಾಗಿ ವಿಲೇವಾರಿ ಮಾಡುವ ಉದ್ದೇಶದಿಂದ Government of Karnataka ಮಹತ್ವದ ಆದೇಶ ಹೊರಡಿಸಿದೆ.

 

ಸರ್ಕಾರದ ಆದೇಶದ ಪ್ರಕಾರ ಸಾರ್ವಜನಿಕ ಕುಂದುಕೊರತೆಗಳ ನಿರ್ವಹಣೆಗೆ Integrated Public Grievance Redressal System (iPGRS) ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಈ ವ್ಯವಸ್ಥೆಯಡಿ ಸಾರ್ವಜನಿಕರಿಂದ ಬರುವ ದೂರುಗಳು ಹಾಗೂ ಮನವಿಗಳನ್ನು ಹಂತ ಹಂತವಾಗಿ ಪರಿಶೀಲಿಸಿ ವಿಲೇವಾರಿ ಮಾಡಲು ಮೂರು ಹಂತದ ಅಧಿಕಾರಿಗಳನ್ನು ನೇಮಿಸಲಾಗಿದೆ.

 

ಈ ವ್ಯವಸ್ಥೆಯಲ್ಲಿ ಮೊದಲ ಹಂತದ LMF (Caseworker – Last Mile Functionaries) ಅವರಿಗೆ 7 ದಿನಗಳು, ಎರಡನೇ ಹಂತದ L2 (Gazetted Officer) ಅಧಿಕಾರಿಗಳಿಗೆ 7 ದಿನಗಳು ಹಾಗೂ ಮೂರನೇ ಹಂತದ L3 (Group-A Officer) ಅಧಿಕಾರಿಗಳಿಗೆ 7 ದಿನಗಳ ಕಾಲಮಿತಿ ನಿಗದಿಪಡಿಸಲಾಗಿದೆ. ಈ ಮೂಲಕ ಒಟ್ಟು 21 ದಿನಗಳೊಳಗೆ ದೂರುಗಳು ಮತ್ತು ಮನವಿಗಳನ್ನು ವಿಲೇವಾರಿ ಮಾಡಬೇಕು ಎಂದು ಸರ್ಕಾರ ಸೂಚಿಸಿದೆ.

 

ಕೇಂದ್ರ ಸರ್ಕಾರದ Centralized Public Grievance Redress and Monitoring System (CPGRAMS) ವ್ಯವಸ್ಥೆಯಡಿ ಸಾರ್ವಜನಿಕ ದೂರುಗಳಿಗೆ 21 ದಿನಗಳ ಕಾಲಮಿತಿ ನಿಗದಿಪಡಿಸಿರುವ ಹಿನ್ನೆಲೆ, ಅದೇ ಮಾರ್ಗಸೂಚಿಯನ್ನು ಅನುಸರಿಸಿ ರಾಜ್ಯ ಸರ್ಕಾರವೂ ಈ ಕ್ರಮ ಕೈಗೊಂಡಿದೆ.

 

ರಾಜ್ಯದ ವಿವಿಧ ಇಲಾಖೆಗಳು, ಅಧೀನ ಇಲಾಖೆಗಳು, ಸ್ವಾಯತ್ತ ಸಂಸ್ಥೆಗಳು, ನಿಗಮಗಳು, ಮಂಡಳಿಗಳು, ಪ್ರಾಧಿಕಾರಗಳು, ಅನುದಾನಿತ ಸಂಸ್ಥೆಗಳು, ವಿಶ್ವವಿದ್ಯಾಲಯಗಳು ಹಾಗೂ ಸಾರ್ವಜನಿಕ ಉದ್ದಿಮೆಗಳು ಸೇರಿದಂತೆ ಎಲ್ಲಾ ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಅರೆಸರ್ಕಾರಿ ಸಂಸ್ಥೆಗಳ ಸೇವೆಗಳು ಹಾಗೂ ಯೋಜನೆಗಳಿಗೆ ಸಂಬಂಧಿಸಿದ ದೂರುಗಳನ್ನು iPGRS ಮತ್ತು CPGRAMS ಮೂಲಕ ಸ್ವೀಕರಿಸಿ 21 ದಿನಗಳೊಳಗೆ ಪರಿಣಾಮಕಾರಿಯಾಗಿ ವಿಲೇವಾರಿ ಮಾಡಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

 

ಇದೇ ವೇಳೆ, iPGRS ವ್ಯವಸ್ಥೆಯಲ್ಲಿ L1, L2 ಹಾಗೂ L3 ಹಂತದ ಅಧಿಕಾರಿಗಳಿಗೆ ನಿಗದಿಪಡಿಸಿದ ಕಾಲಮಿತಿಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು Centre for e‑Governance Karnataka ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರ ಸೂಚಿಸಿದೆ.

 

ಅದರ ಜೊತೆಗೆ iPGRS ಮತ್ತು CPGRAMS ವ್ಯವಸ್ಥೆಯಲ್ಲಿ ದಾಖಲಾಗುವ ಎಲ್ಲಾ ಸಾರ್ವಜನಿಕ ದೂರುಗಳು ಮತ್ತು ಮನವಿಗಳನ್ನು ಗುಣಾತ್ಮಕವಾಗಿ ಹಾಗೂ ತೃಪ್ತಿಕರವಾಗಿ ವಿಲೇವಾರಿ ಮಾಡಲಾಗುತ್ತಿದೆ ಎಂಬುದನ್ನು ಸಂಬಂಧಿತ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಕಾರ್ಯದರ್ಶಿಗಳು ಖಚಿತಪಡಿಸಿಕೊಳ್ಳಬೇಕೆಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

4 hours ago

   
Image 1
Image 1
ಬೆಂಗಳೂರು ನಗರ

ಮುಡಾ ವಿವಾದ: ದಿನೇಶ್ ಕುಮಾರ್ ವಿರುದ್ಧ ED ವಿಚಾರಣೆಗೆ ಹೈಕೋರ್ಟ್ ಮಧ್ಯಂತರ ತಡೆ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಿವ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಬೆಂಗಳೂರು ನಗರ

ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್‌ಗೆ 6 ವರ್ಷ: ಶಾಸಕರಿಗೆ ವಿಶೇಷ ಔತಣಕೂಟ

ಬೆಂಗಳೂರು: ಡಿಕೆ ಶಿವಕುಮಾರ್‌  ಅವರು Karnataka Pradesh... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಬೆಂಗಳೂರು ನಗರ

:ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಶಯಾಸ್ಪದ ಪಾರ್ಸೆಲ್ ಶಾಕ್ – ನಗ್ನ ಫೋಟೋ, ಹೂವಿನ ಹಾರ ಪತ್ತೆ!

ಬೆಂಗಳೂರು:ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪೋಸ್ಟ್ ಆ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಉಡುಪಿ

ಟಿ20 ವಿಶ್ವಕಪ್ ಗೆದ್ದ ನಾಯಕನ ಪವಾಡ : ಉಡುಪಿ ಕಾಪು ಮಾರಿಗುಡಿಯ ಅಪ್ಪಟ ಭಕ್ತ ಸೂರ್ಯ: 9 ದಿನಗಳಲ್ಲಿ ನುಡಿ ಪವಾಡವಾಗಿ ನಿಜವಾಗಿದೆ!

ಉಡುಪಿ: 2026 ರ ಟಿ20 ವಿಶ್ವಕಪ್ ಗೆದ್ದು ಇತಿಹಾಸ ಸೃಷ್ಟಿಸಿರುವ ಟ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ಬೆಂಗಳೂರು ನಗರ

ಬಗರ್ ಹುಕುಂ ಯೋಜನೆ ಉದ್ದೇಶದಲ್ಲಿ ಬದಲಾವಣೆ ಇಲ್ಲ – ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು: ಅಕ್ರಮ ಸಕ್ರಮ ಬಗರ್ ಹುಕುಂ ಯೋಜನೆಯಡಿ ಅರ್ಹ ರೈತರಿಗೆ... ಓದನ್ನು ಮುಂದುವರಿಸಿ


Edited by: ಬಾನು

20 hours ago

   
Image 1
ಚಿಕ್ಕಬಳ್ಳಾಪುರ

ಕೃಷಿ ಹೊಂಡದಲ್ಲಿ ಆಕಸ್ಮಿಕ ಬಿದ್ದು ಯುವತಿ ದುರಂತ ಸಾವು

ಚಿಕ್ಕಬಳ್ಳಾಪುರ:  ಚಿಕ್ಕಬಳ್ಳಾಪುರ ತಾಲೂಕಿನ ದಿಬ್ಬೂರು ಗ್ರ... ಓದನ್ನು ಮುಂದುವರಿಸಿ


Edited by: ಬಾನು

20 hours ago

   
Image 1
ಹಾವೇರಿ

ಮೆಕ್ಕೆಜೋಳ ರಾಶಿಗೆ ಬೆಂಕಿಯಿಟ್ಟ ಕಿಡಿಗೇಡಿಗಳು – ರೈತರಿಗೆ 4 ಲಕ್ಷ ರೂ. ನಷ್ಟ

ಹಾವೇರಿ:  ಹಾವೇರಿ ಜಿಲ್ಲೆಯ ಕಾಟೇನಹಳ್ಳಿ ಗ್ರಾಮದಲ್ಲಿ ಬೆಳೆ... ಓದನ್ನು ಮುಂದುವರಿಸಿ


Edited by: ಬಾನು

20 hours ago

   
Image 1
ಹಾವೇರಿ

ಇರಾನ್-ಇಸ್ರೇಲ್ ಯುದ್ಧ: ವಿಶ್ವ ಪ್ರಸಿದ್ಧ ಬ್ಯಾಡಗಿ ಮೆಣಸಿನಕಾಯಿ ರಫ್ತು ಯುದ್ಧದ ಪರಿಣಾಮದಿಂದ ಸ್ಥಗಿತ

ಹಾವೇರಿ:  ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧದ ಪರಿಣಾಮದ... ಓದನ್ನು ಮುಂದುವರಿಸಿ


Edited by: ಬಾನು

20 hours ago

   
Image 1
ಬೆಂಗಳೂರು ನಗರ

ಹೈದರಾಬಾದ್‌ ಉತ್ತಮ, ಬೆಂಗಳೂರು ಟ್ರಾಫಿಕ್ ಜಾಮ್ ಹಾಸ್ಯ – CM ರೇವಂತ್ ರೆಡ್ಡಿ

ಬೆಂಗಳೂರು: ಐಟಿ ಸಿಟಿ ಬೆಂಗಳೂರು ನಗರದ ಟ್ರಾಫಿಕ್ ಸಮಸ್ಯೆ ಈಗ ರಾಜ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ಕರ್ನಾಟಕ ಪರ್ವತಾರೋಹಣ ತಂಡ ಮುಂಟ್ ಎವೆರೆಸ್ಟ್ ಏರಲು ಸಿದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭಾಶಯ

ಬೆಂಗಳೂರು: ಏಪ್ರಿಲ್ ಮತ್ತು ಮೇ ತಿಂಗಳಲ್ಲಿ Mount Everest ಏರುವ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1