ಸೆಂಟ್ರಲ್ ಕಮಾಂಡ್ ಸೆಂಟರ್ ಉದ್ಘಾಟಿಸಿದ ಗೃಹ ಮಂತ್ರಿ ಡಾ. ಜಿ. ಪರಮೇಶ್ವರ

 

ಬೆಂಗಳೂರು : ಕಾರಾಗೃಹಗಳಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ನಡೆದ ಸಂದರ್ಭದಲ್ಲಿ ತುರ್ತಾಗಿ ಕಾರ್ಯಾಚರಣೆ ಹಾಗೂ ಪರಿಶೀಲನೆ ನಡೆಸಲು ಅನುಕೂಲವಾಗುವಂತೆ ಮತ್ತು ಘಟನೆ ಕುರಿತು ಸಾಕ್ಷ್ಯ ಸಂರಕ್ಷಿಸಲು. ನೈಜ ಮೇಲ್ವಿಚಾರಣೆ ನಡೆಸಲು ಮತ್ತು ಕಾರಾಗೃಹಗಳೊಂದಿಗೆ ಸಮನ್ವಯ ಸಾಧಿಸಲು ನೂತನವಾಗಿ ಪ್ರಾರಂಭಿಸಲಾಗಿರುವ ಸೆಂಟ್ರಲ್ ಕಮಾಂಡ್ ಸೆಂಟರ್ ಇಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಉದ್ಘಾಟಿಸಿದರು ಇದೇ ಸಂದರ್ಭದಲ್ಲಿ ಮಾನ್ಯ ಗೃಹ ಸಚಿವರು ನವ ಸಂಕಲ್ಪ ಮಾಸಿಕ ಪತ್ರಿಕೆ ಹಾಗೂ ಕಾರಾಗೃಹಕ್ಕೆ ಹೊಸದಾಗಿ ದಾಖಲಾಗುವ ಬಂದಿಗಳಿಗೆ ಕಾರಾಗೃಹಗಳ ನಿಯಮಗಳಿಗೆ ಸಂಬಂಧಿಸಿದ ಮಾಹಿತಿಗಳನ್ನು ಮತ್ತು Awareness ಸಂಬಂಧಿಸಿದ ಮಾಹಿತಿಗಳನ್ನು ಹಾಗೂ Do's and don'ts ಮಾಹಿತಿಯನ್ನೊಳಗೊಂಡ ಕಾರಾಗೃಹ ನಿಯಮಗಳ ಪಕ್ಷಿನೋಟ ವಿಡಿಯೋ ಬಿಡುಗಡೆಗೊಳಿಸಿದರು.

 

ನಂತರ ಮಾತನಾಡಿದ ಸಚಿವರು, ಸೆಂಟ್ರಲ್ ಕಮಾಂಡ್ ಸೆಂಟರ್‌ನಲ್ಲಿ ಪ್ರಸ್ತುತ ಬೆಂಗಳೂರು, ಮೈಸೂರು, ಶಿವಮೊಗ್ಗ, ಬಳ್ಳಾರಿ, ಧಾರವಾಡ, ಬೆಳಗಾವಿ, ಕಲಬುರ್ಗಿ ಹಾಗೂ ವಿಜಯಪುರ 08 ಕೇಂದ್ರ ಕಾರಾಗೃಹಗಳು ಮತ್ತು ಮಂಗಳೂರು, ತುಮಕೂರು, ಬೆಂಗಳೂರು ದಕ್ಷಿಣ ಮತ್ತು ಚಾಮರಾಜನಗರ 04 ಜಿಲ್ಲಾ ಕಾರಾಗೃಹಗಳ ಒಟ್ಟು 1076 ಸಿ.ಸಿ.ಟಿ.ವಿ.ಯನ್ನು ವೀಕ್ಷಣೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಕಾರಾಗೃಹಗಳ ಸಿಸಿಟಿವಿ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದರು

 

ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ 332 ಸಿಸಿಟಿವಿ ಕ್ಯಾಮರಾಗಳಿಗೆ Artificial Intrusion Detection system , Crowd Analysis. Prisoners and Staff Movements ಮಾಡಲಾಗುತ್ತದೆ‌. ಕಮಾಂಡ್ ಸೆಂಟರ್‌ಗೆ 20 ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು ದಿನದ 24/7 ಸಮಯ ವೀಕ್ಷಣೆ ಮಾಡಲಾಗುತ್ತದೆ ಎಂದು ತಿಳಿಸಿದರು. ಸಿ.ಸಿ.ಟಿ.ವಿ. ಪರಿಶೀಲನೆ ಸಮಯದಲ್ಲಿ ಮಹದೇವ, ಆರ್. ವಾರ್ಡರ್ ಸಿಬ್ಬಂದಿಯು ಸಂದರ್ಶಕರ ಕೊಠಡಿಯಲ್ಲಿ ಸರಿಯಾಗಿ ತಪಾಸಣೆ ಮಾಡದೆ ಇರುವುದು ಕಂಡುಬಂದಿದ್ದು, ಸದರಿ ಸಿಬ್ಬಂದಿ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗಿದೆ. ಒಬ್ಬ ಪೊಲೀಸ್ ಸಿಬ್ಬಂದಿಯು ಕಾರಾಗೃಹದ ಒಳಭಾಗಕ್ಕೆ ಹೋಗಿ ಆರೋಪಿ ದರ್ಶನ್ ಭೇಟಿಯಾಗಲು ಪ್ರಯತ್ನಿಸಿದ್ದು, ಸಿಸಿಟಿವಿ ಪರಿಶೀಲನೆಯಲ್ಲಿ ಕಂಡುಬಂದಿದ್ದು, ಅವಕಾಶ ಕಲ್ಪಿಸಿದ ಪ್ರಭು ಚೌವ್ಹಾನ್, ವಾರ್ಡರ್ ರವರ ವಿರುದ್ಧ ಶಿಸ್ತುಕ್ರಮ ಕೈಗೊಂಡು ವರ್ಗಾವಣೆ ಮಾಡಲಾಗಿರುತ್ತದೆ. ಮತ್ತು ಸರಕ್ಕನವರ್ ಹೆಡ್ ವಾರ್ಡರ್ ರವರಿಗೆ ಎಚ್ಚರಿಕೆ ನೀಡಲಾಗಿರುತ್ತದೆ ಎಂದು ತಿಳಿಸಿದರು.

 

ಪ್ರಧಾನ ಕಛೇರಿ ಸೆಂಟ್ರಲ್ ಕಮಾಂಡ್ ಸೆಂಟರ್‌ನಲ್ಲಿ ಸಿಸಿಟಿವಿ ಮೇಲ್ವಿಚಾರಣೆಯಲ್ಲಿ ಕಂಡು ಬಂದ ಅಹಿತಕರ ಘಟನೆಗಳನ್ನು ಘಟನೆಗಳನ್ನು ರಿಜಿಸ್ಟರ್‌ನಲ್ಲಿ ದಾಖಲು ಮಾಡಲಾಗುತ್ತಿದ್ದು, ಪ್ರಧಾನ ಕಛೇರಿಯ ಕಾರಾಗೃಹ ಅಧೀಕ್ಷಕರನ್ನು ನೊಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದ್ದು, ಆಹಿತಕರ ಘಟನೆಗಳು ಕಂಡುಬಂದಲ್ಲಿ ಸಂಬಂಧಪಟ್ಟ ಕಾರಾಗೃಹಗಳ ಅಧೀಕ್ಷಕರಿಗೆ ತಕ್ಷಣವೇ ಆಗತ್ಯ ಕ್ರಮವಹಿಸುವಂತೆ ತಿಳಿಸಿ ಪ್ರಧಾನ ಕಛೇರಿಗೆ ವರದಿಸಲ್ಲಿಸುವಂತೆ ಸೂಚಿಸಲಾಗುತ್ತಿದೆ. ಪ್ರತಿನಿತ್ಯ ಕಾರಾಗೃಹಗಳ ಬೀಗಮುದ್ರೆಯ (Lockup) ಮತ್ತು ಬೀಗಮುದ್ರೆ ತೆರೆಯುವ (Un Lock) ಸಮಯದಲ್ಲಿ ಅಹಿತಕರ ಘಟನೆಗಳ ಸಾರಾಂಶವನ್ನು ಪಡೆಯಲಾಗುತ್ತಿದೆ.

 

ಕಾರಾಗೃಹ ಸುಧಾರಣಾ ಸಂಕ ಅಭಿಯಾನದಡಿ ಯಲ್ಲಿ ಇಲ್ಲಿಯವರೆಗೆ 200 ಕ್ಕೂ ಹೆಚ್ಚು ಮೊಬೈಲ್ ಮತ್ತು ಇತರೆ ನಿಷೇಧಿತ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಘಟನೆಗಳ ಕುರಿತು ಸಂಬಂಧಪಟ್ಟ ಪೊಲೀಸ್ ಠಾಣೆಗಳಲ್ಲಿ FIR ದಾಖಲಿಸಲಾಗಿರುತ್ತದೆ ಎಂದು ತಿಳಿಸಿದರು. 2025 ನೇ ನವೆಂಬರ್ 10 ರಂದು ನಡೆದ ಕಾರಾಗೃಹಗಳ ಭದ್ರತೆ ಮತ್ತು ಪರಿಶೀಲನಾ ಸಭೆಯಲ್ಲಿ ಖುದ್ದು ಆಸಕ್ತಿ ವಹಿಸಿ ಆದೇಶಿಸಿರುವಂತೆ ಕಾರಾಗೃಹಗಳ ಪ್ರಧಾನ ಕಛೇರಿಯಲ್ಲಿ ಸೆಂಟ್ರಲ್ ಕಮಾಂಡ್ ಸೆಂಟರ್‌ಅನ್ನು ನಿರ್ಮಿಸಲಾಗಿದ್ದು, ಕಾರಾಗೃಹಗಳಲ್ಲಿ ನಡೆಯುವ ಅಹಿತಕರ ಘಟನೆಗಳನ್ನು ತಡೆಗಟ್ಟಲು ಹಾಗೂ ಸೂಕ್ತ ಮೇಲ್ವಿಚಾರಣೆ ನಡೆಸಲು ಕ್ರಮವಹಿಸಲಾಗಿದೆ ಎಂದು‌ ತಿಳಿಸಿದರು.

 

ಕಾರ್ಯಕ್ರಮದಲ್ಲಿ ಒಳಾಡಳಿತ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಕರ್ನಾಟಕ ರಾಜ್ಯದ ಮಹಾ ನಿರ್ದೇಶಕರು ಮತ್ತು ಆರಕ್ಷಕ ನಿರೀಕ್ಷಕರಾದ ಎಂ.ಎ. ಸಲೀಂ, ಪ್ರಧಾನ ಕಾರ್ಯದರ್ಶಿಗಳು (ಪಿ.ಸಿ.ಎ.ಎಸ್) ಕೆ.ವಿ. ಶರತ್ ಚಂದ್ರ, ಮಹಾನಿರ್ದೇಶಕರು, ಕಾರಾಗೃಹ ಮತ್ತು ಸುಧಾರಣಾ ಸೇವೆ, ಅಲೋಕ್ ಕುಮಾರ್ ಸೇರಿದಂತೆ ಪೊಲೀಸ್ ಕಾರಾಗೃಹದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

1 day ago

   
Image 1
Image 1
ಧಾರವಾಡ

ಹುಬ್ಬಳ್ಳಿ

ಕಿಮ್ಸ್ ಆಸ್ಪತ್ರೆಯ ಚಾಕು ಇರಿತ ಏಳು ಜನ ಆರೋಪಿಗಳನ್ನು ಅರೆಸ್ಟ್ ಮಾಡಿದ ಪೊಲೀಸರು

ಹುಬ್ಬಳ್ಳಿ: ಗಾಂಜಾ ವಿಚಾರಕ್ಕಾಗಿ ಕಿಮ್ಸ್ ಆಸ್ಪತ್ರೆಯಲ್ಲೇ ಚಾಕು... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಧಾರವಾಡ

ಹುಬ್ಬಳ್ಳಿ

ಪತಿಯಿಂದ ಪತ್ನಿಯ ಬರ್ಬರ ಹತ್ಯೆ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ

ಹುಬ್ಬಳ್ಳಿ : ಪತಿಯಿಂದ ಪತ್ನಿಯ ಬರ್ಬರ ಹತ್ಯೆ ಚಾಕುವಿನಿಂದ ಇರಿದು... ಓದನ್ನು ಮುಂದುವರಿಸಿ


Edited by: ಬಾನು

1 day ago

   
ಬೆಂಗಳೂರು ನಗರ

ಸಿ.ಜೆ ರಾಯ್ ಆತ್ಮಹತ್ಯೆ ಕೇಸ್ ತನಿಖೆಗೆ ಹೆಚ್ಚುವರಿ ಪೊಲೀಸ್ ಆಯುಕ್ತ ವಂಶಿಕೃಷ್ಣ ನೇತೃತ್ವದಲ್ಲಿ 'SIT' ರಚನೆ

ಬೆಂಗಳೂರು : ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ ರಾಯ್ ಅವರ ಆತ್ಮಹತ್ಯ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ಗ್ರಾಮಾಂತರ

ಆನೇಕಲ್ ತಾಲ್ಲೂಕು

ಸ್ನೇಹಿತನಿಗೆ ಸ್ಕೆಚ್ ಹಾಕಿ ಹಣ ಸುಲಿಗೆ ಮಾಡಲು ಮಾಸ್ಟರ್ ಪ್ಲ್ಯಾನ್ ಮಾಡಿದ ಗೆಳೆಯರು..!

ಆನೇಕಲ್‌ : ಗೂಡ್ಸ್ ವಾಹನ ಮಾರಾಟ ಮಾಡಿ ಕ್ಯಾಬ್ ತೆಗೆದುಕೊಳ್ಳಲು ಪ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ಗ್ರಾಮಾಂತರ

ಆನೇಕಲ್ ತಾಲ್ಲೂಕು

ಬೆಂಗಳೂರಿನಲ್ಲಿ ಸಿನಿಮಾ ಸ್ಟೈಲ್ ದರೋಡೆ; ಯುವಕನಿಗೆ ಲಾಂಗ್ ತೋರಿಸಿ 31 ಲಕ್ಷ ಲೂಟಿ..!

ಆನೇಕಲ್ :  ಸಿಲಿಕಾನ್ ಸಿಟಿಯ ಹೊರವಲಯದಲ್ಲಿ ಹಾಡಹಗಲೇ ಭಯಾನಕ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ಗ್ರಾಮಾಂತರ

ಹೊಸಕೋಟೆ

"ಬೆಂಗಳೂರಿಗೆ ಬಂದು ಬದುಕು ಕಟ್ಟಿಕೊಳ್ಳೋಣ ಅಂಥಾ ಬಂದು ಹೆಣವಾದರು ಪಾಪ.!"

ಹೊಸಕೋಟೆ : ಸಾವಿರಾರು ಕಿಲೋಮೀಟರ್ ದೂರದ ಅಸ್ಸಾಂನಿಂದ, ಸುಂದರ ಭವಿ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಹಾಸನ

ವರದಕ್ಷಿಣೆ ಕಿರುಕುಳ ಹಾಗೂ ಪತಿಯ ಸಂಶಯಕ್ಕೆ ನೊಂದ ಗೃಹಿಣಿ ಸಾವು.!

ಹಾಸನ: ವರದಕ್ಷಿಣೆ ಕಿರುಕುಳ ಹಾಗೂ ಪತಿಯ ಸಂಶಯದಿಂದ ಬೇಸತ್ತ ಗೃಹಿಣ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಚಾಮರಾಜನಗರ

ಕೊಳ್ಳೇಗಾಲ

ಚಾಮರಾಜನಗರ, ಕೊಳ್ಳೇಗಾಲದಲ್ಲಿ ಕಲ್ಯಾಣ ಮಂಟಪಕ್ಕೆ ತೆರಳುತ್ತಿದ್ದ ವರ ರವೀಶ್ ಗೆ ಚಾಕು ಇರಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​ ಸಿಕ್ಕಿದೆ.

ಕೊಳ್ಳೇಗಾಲ : ರವೀಶ್​​ನ ಮದ್ವೆಯಾಗಬೇಕಿದ್ದ ವಧು ನಯನಾ, ಪ್ರಿಯಕರ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ಉದ್ಯಮಿ ಸಿ.ಜೆ ರಾಯ್ ಆತ್ಮಹತ್ಯೆ ಕೇಸ್ ತನಿಖೆಗೆ ಹೆಚ್ಚುವರಿ ಪೊಲೀಸ್ ಆಯುಕ್ತ ವಂಶಿಕೃಷ್ಣ ನೇತೃತ್ವದಲ್ಲಿ 'SIT' ರಚನೆ

ಬೆಂಗಳೂರು : ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ ರಾಯ್ ಅವರ ಆತ್ಮಹತ್ಯ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ತುಮಕೂರು

ಮತ್ತೊಂದು ಲೋಕಾಯುಕ್ತ ಟ್ರ್ಯಾಪ್ - 1 ಲಕ್ಷ ಲಂಚಕ್ಕೆ ಬೇಡಿಕೆ, 40 ಸಾವಿರಕ್ಕೆ ಫೈನಲ್ - ಬಲೆಗೆ ಬಿದ್ದ ತುಮಕೂರು ಗ್ರಾಮಾಂತರ ಪಿಎಸ್ಐ ಚೇತನ್

ತುಮಕೂರು : ಬೆಂಗಳೂರು ಮೂಲದ ವ್ಯಕ್ತಿಗೆ 1 ಲಕ್ಷಕ್ಕೆ ಬೇಡಿಕೆ ಇಟ್... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1