ಸಿಎಂ ಬೆಂಬಲದಿಂದ ಲ್ಯಾಂಡ್​​​ಲಾರ್ಡ್​ಗೆ ಹುರುಪು' - ತೆರಿಗೆ ವಿನಾಯಿತಿ ಸಿಕ್ಕಿದ್ದಕ್ಕೆ ದುನಿಯಾ ವಿಜಿ ಖುಷ್

ಬೆಂಗಳೂರು : ದುನಿಯಾ ವಿಜಯ್ ನಟನೆಯ ಲ್ಯಾಂಡ್​​​ಲಾರ್ಡ್ ಸಿನಿಮಾ ಬಾಕ್ಸಾಫೀಸ್​ನಲ್ಲಿ ಯಶಸ್ಸು ಕಂಡಿದೆ. ಸಾಮಾಜಿಕ ಅಸಮಾನತೆ ಹಾಗೂ ಜಾತಿ ಶೋಷಣೆ ವಿಷಯವ ಹೊಂದಿದ್ದಿ ದುನಿಯಾ ವಿಜಯ್ ನಟನೆಯ ಜನವರಿ 23ರಂದು ರಿಲೀಸ್ ಆಗಿದೆ. ವಿಮರ್ಶಕರಿಂದ ಈ ಚಿತ್ರ ಮೆಚ್ಚುಗೆ ಪಡೆದಿದೆ. ಈ ಚಿತ್ರಕ್ಕೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದಾರೆ. ಲ್ಯಾಂಡ್​​​ಲಾರ್ಡ್ ಸಿನಿಮಾಗೆ ತೆರಿಗೆ ವಿನಾಯಿತಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಇದರಿಂದ ಚಿತ್ರಕ್ಕೆ ಮತ್ತಷ್ಟು ಬೆಂಬಲ ಸಿಕ್ಕಂತೆ ಆಗಿದ್ದು, ಹೆಚ್ಚು ಜನರನ್ನು ತಲುಪಲು ಈ ಬೆಳವಣಿಗೆ ಸಹಕಾರಿ ಆಗಲಿದೆ.

 

ಸ್ಯಾಂಡಲ್‌ವುಡ್‌ ನಟ ದುನಿಯಾ ವಿಜಯ್ ಅಭಿನಯದ ಲ್ಯಾಂಡ್ ಲಾರ್ಡ್ ಚಿತ್ರಕ್ಕೆ ಶೇ.100ರಷ್ಟು ತೆರಿಗೆ ವಿನಾಯಿತಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ದುನಿಯಾ ವಿಜಯ್ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಖುದ್ದು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಆಗ ತಮ್ಮ ಮುಂಬರುವ ಲ್ಯಾಂಡ್ ಲಾರ್ಡ್ ಚಿತ್ರದ ಕಥಾಹಂದರ, ಉದ್ದೇಶ ಮತ್ತು ಸಮಾಜಕ್ಕೆ ನೀಡುತ್ತಿರುವ ಸಂದೇಶದ ಕುರಿತು ವಿವರವಾಗಿ ಚರ್ಚಿಸಿದ್ದರು.

 

ಲ್ಯಾಂಡ್ ಲಾರ್ಡ್ ಚಿತ್ರವು ಕೇವಲ ಮನರಂಜನೆಗಾಗಿ ಸೀಮಿತವಾಗಿರದೆ, ಗ್ರಾಮೀಣ ಭಾಗದ ಫ್ಯೂಡಲ್ ವ್ಯವಸ್ಥೆ, ಜಾತಿ ಪದ್ಧತಿಯ ಕರಾಳ ಮುಖ ಮತ್ತು ಶೋಷಿತರ ಪರವಾಗಿ ಧ್ವನಿ ಎತ್ತುವ ಪ್ರಯತ್ನ ಮಾಡಿದೆ ಎಂದು ಸಿಎಂ ಗಮನಕ್ಕೆ ತಂದಿದ್ದರು. ಸ್ಥಳದಲ್ಲೇ ಇದ್ದ ವಾಣಿಜ್ಯ ತೆರಿಗೆ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಸೂಚನೆ ನೀಡಿದ ಮುಖ್ಯಮಂತ್ರಿಗಳು, ಲ್ಯಾಂಡ್ ಲಾರ್ಡ್ ಚಿತ್ರದ ಕಥಾವಸ್ತುವನ್ನು ಪರಿಗಣಿಸಿ, ಕೂಡಲೇ ತೆರಿಗೆ ವಿನಾಯಿತಿ ನೀಡುವ ಪ್ರಕ್ರಿಯೆಯನ್ನು ಆರಂಭಿಸಿ ಎಂದು ನಿರ್ದೇಶನ ನೀಡಿದರು.

 

ಲ್ಯಾಂಡ್‌ಲಾರ್ಡ್‌ ಸಿನಿಮಾಕ್ಕೆ ಮುಖ್ಯಮಂತ್ತಿ ಸಿದ್ದರಾಮಯ್ಯ ತೆರಿಗೆ ವಿನಾಯಿತಿ ಘೋಷಣೆ ಮಾಡಿದ್ದಕ್ಕೆ ಸಿದ್ದರಾಮಯ್ಯಗೆ ದುನಿಯಾ ವಿಜಯ್‌ ಧನ್ಯವಾದಗಳನ್ನು ತಿಳಿಸಿದ್ದಾರೆ. ಲ್ಯಾಂಡ್ ಲಾರ್ಡ್ ಚಿತ್ರಕ್ಕೆ ಬೆಂಬಲ ನೀಡಿದ ಮುಖ್ಯಮಂತ್ರಿಗಳಿಗೆ ಹಾಗೂ ಡಿಎಸ್‌ಎಸ್ ಮುಖಂಡರಿಗೆ ಕೃತಜ್ಞತೆಗಳು. ನಮ್ಮ ಲ್ಯಾಂಡ್ ಲಾರ್ಡ್ ಸಿನಿಮಾಗೆ ತೆರಿಗೆ ವಿನಾಯಿತಿ ನೀಡುವಂತೆ ಕೋರಿ ಇಂದು ಗೌರವಾನ್ವಿತ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ದಲಿತ ಸಂಘರ್ಷ ಸಮಿತಿಯ ಹಿರಿಯ ಮುಖಂಡರಿಗೆ ನಮ್ಮ ಚಿತ್ರತಂಡದ ಪರವಾಗಿ ಹೃತ್ಪೂರ್ವಕ ಧನ್ಯವಾದಗಳು. ನಮ್ಮ ಜೊತೆಗಿದ್ದ ಅಣ್ಣ ಮಾವಳ್ಳಿ ಶಂಕರ್, ಸುಬ್ಬು ಹೊಲೆಯಾರ್, ಗೊಲ್ಲಹಳ್ಳಿ ಶಿವಪ್ರಸಾದ್, ಹುಲಿಕುಂಟೆ ಮೂರ್ತಿ, ಚಂದ್ರು ತರಹುಣಸೆ, ರವಿಕುಮಾರ್ ಈಚಲಮರ, ಹರೀಶ್ ಭೈರಪ್ಪ, ಮುರಳಿ ಕಾಟಿ ಹಾಗೂ ವಿಜಯಕುಮಾರ್ ಸೋನಾರೆಗೆ ಸದಾ ಚಿರಋಣಿಯಾಗಿರುತ್ತೇವೆ' ಎಂದು ದುನಿಯಾ ವಿಜಯ್‌ ಬರೆದಿದ್ದಾರೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

1 day ago

   
Image 1
Image 1

ಅವಳಿ ಮಕ್ಕಳ ಸಂತಸದ ನಡುವೆಯಲ್ಲಿ ರಾಮ್ ಚರಣ್‌ ‘ಪೆದ್ದಿ’ ಚಿತ್ರಕ್ಕೆ ರಿಲೀಸ್ ದಿನಾಂಕ ಪ್ರಕಟ!

ಟಾಲಿವುಡ್ ಸ್ಟಾರ್ ನಟ ರಾಮ್ ಚರಣ್ ಇತ್ತೀಚೆಗೆ ಮತ್ತೊಮ್ಮೆ ತಂದೆಯಾಗಿದ್ದಾರೆ. ಈಗಾಗಲೇ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1

ಬಾಕ್ಸ್‑ಆಫೀಸ್‌ನಲ್ಲಿ ದಾಖಲೆ ಬರೆದ ರಣವೀರ್ ಸಿಂಗ್ ಅವರ ‘ಧುರಂಧರ್.. 4 ಕೋಟಿಗಿಂತ ಅಧಿಕ ಟಿಕೆಟ್ ಮಾರಾಟ

ರಣವೀರ್ ಸಿಂಗ್ ನಟನೆಯ ‘ಧುರಂಧರ್’ ಸಿನಿಮಾ ಭಾರತೀಯ ಚಿತ್ರರಂಗದಲ್ಲಿ ಹೊಸ ಬಾಕ್ಸ್‑ಆಫೀಸ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1

‘ಜನ ನಾಯಗನ್’ ಚಿತ್ರದ ವಿಳಂಬವು ಚಿತ್ರರಂಗಕ್ಕೆ ಬಹಳ ದೊಡ್ಡ ಆರ್ಥಿಕ ಹೊಡೆತ ನೀಡಿದೆ — ಸುಮಾರು ₹100 ಕೋಟಿ ನಷ್ಟ

ದಳಪತಿ ವಿಜಯ್ ನಟನೆಯ ಬಹುನಿರೀಕ್ಷಿತ ಸಿನಿಮಾ‘ಜನ ನಾಯಗನ್’ ಆರಂಭದಲ್ಲಿ ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ಬೆಂಗಳೂರು ನಗರ

ಬಿರಿಯಾನಿ ವಿವಾದ; ಊಟ.. ತಿಂಡಿ.. ಚಟ ಎಲ್ಲವೂ ನನ್ನ ಪರ್ಸನಲ್​​​​: ಡಾಲಿ ತಿರುಗೇಟು

ಬೆಂಗಳೂರು : ನಟ ಧನಂಜಯ್‌ ಇತ್ತೀಚಿಗಷ್ಟೇ ಬಿರಿಯಾನಿ ತಿನ್ನುವ ಮೂಲ... ಓದನ್ನು ಮುಂದುವರಿಸಿ


Edited by: ಬಾನು

5 days ago

   
Image 1
ಬೆಂಗಳೂರು ಗ್ರಾಮಾಂತರ

ಆನೇಕಲ್ ತಾಲ್ಲೂಕು

ದುನಿಯಾ ವಿಜಯ್, ರಚಿತಾ ರಾಮ್ ನಟನೆಯ ಲ್ಯಾಂಡ್ ಲಾರ್ಡ್ ಚಿತ್ರಕ್ಕೆ ಮನಸೋತ ಆನೇಕಲ್ ತಾಲ್ಲೂಕಿನ ಜನತೆ

ಆನೇಕಲ್  : ತಾಲ್ಲೂಕಿನ ಸರ್ಜಾಪುರ ಹೋಬಳಿಯ ದೊಮ್ಮಸಂದ್ರದಲ್ಲ... ಓದನ್ನು ಮುಂದುವರಿಸಿ


Edited by: ಬಾನು

5 days ago

   
Image 1

ದರ್ಶನ್ ಕಿರಿಕ್ ಬಗ್ಗೆ ಕೊನೆಗೂ ಸತ್ಯ ಬಿಚ್ಚಿಟ್ಟ ನಿರ್ಮಾಪಕ ಭಾಮಾ ಹರೀಶ್..!

ನಟ ದರ್ಶನ್ ಚಿತ್ರರಂಗಕ್ಕೆ ಬಂದ ಆರಂಭದ ವರ್ಷಗಳಲ್ಲಿ ಮಾಡಿಕೊಂಡಿದ್ದ ಕಿರಿಕ್ ಬಗ್ಗೆ ನಿ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1

ಚಿಕ್ಕಣ್ಣನ ಬಳಿಕ ನಟ ಯಶಸ್ ಸೂರ್ಯಗೆ ನೋಟಿಸ್: ವಿಚಾರಣೆಗೆ ಹಾಜರಾಗಲು ಸೂಚನೆ

ರೇಣುಕಾಸ್ವಾಮಿ ಕೊಲೆ ಕೇಸ್ ​ನಲ್ಲಿ ನಟ ದರ್ಶನ್ ಅವರನ್ನು ಬಂಧಿಸಿ ವಿಚಾರಣೆ ನಡೆಸಲಾಗ್ತ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1

ತಾಳ್ಮೆಯಿಂದ ಇದ್ದಿದ್ದಕ್ಕೆ ಇವತ್ತು ಉತ್ತರ ಸಿಕ್ಕಿದೆ’ ಎಂದು ಬರೆದುಕೊಂಡ ನಿರ್ಮಾಪಕ ಉಮಾಪತಿ

ದರ್ಶನ್ ನಟನೆಯ ‘ರಾಬರ್ಟ್’ ಚಿತ್ರದ ಸಕ್ಸಸ್ ಬಳಿಕ ನಟ ದರ್ಶನ್ ಹಾಗೂ ನಿರ್ಮಾಪಕ ಉಮಾಪತಿ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1

ನಮ್ಮ ಬಾಸ್ ಜೈಲಿಂದ ಹೊರ ಬರದಿದ್ರೆ ನಾನು ಗ್ಯಾರಂಟಿ ಬದುಕಲ್ಲ – ದರ್ಶನ್ ಅಭಿಮಾನಿ ಅಳಲು!

ಡಿಬಾಸ್ ಜೈಲಿಂದ ಹೊರಗಡೆ ಬಂದಿಲ್ಲಾಂದ್ರೆ ನನ್ ಬದುಕಿರೋಲ್ಲ ಎಂದು ಹೇಳುವ ಮೂಲಕ ದರ್ಶನ್... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1

ವಿಚಾರಣೆಯಲ್ಲಿ ಪಾರದರ್ಶಕತೆ ಬೇಕು.. ರೇಣುಕಾಸ್ವಾಮಿ ಪ್ರಕರಣದ ಬಗ್ಗೆ ನಟ ಉಪೇಂದ್ರ ಫಸ್ಟ್ ರಿಯಾಕ್ಷನ್

ಬೆಂಗಳೂರು: ನಟ ದರ್ಶನ್ ಇದೀಗ ರೇಣುಕಾಸ್ವಾಮಿ ಕೊಲೆ ಪ್ರಕರಣವಾಗಿ ಅ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1