ಸಿಲಿಂಡರ್ ಕೊರತೆಗೆ ಪರಿಹಾರ: ಬೆಂಗಳೂರಿನಲ್ಲಿ ಬಯೋಗ್ಯಾಸ್ ಉತ್ಪಾದನೆಗೆ GBA ಮುಂದಾಗಿದೆ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅಡುಗೆ ಅನಿಲ ಸಿಲಿಂಡರ್ ಕೊರತೆ ಎದುರಾಗುತ್ತಿರುವ ಸಂದರ್ಭದಲ್ಲಿ ಜಿಬಿಎ (Bengaluru Development Authority) ಹಸಿ ಘನತ್ಯಾಜ್ಯದಿಂದ ಬಯೋಗ್ಯಾಸ್ ಉತ್ಪಾದನೆ ಹೆಚ್ಚಿಸಲು ಮುಂದಾಗಿದೆ. ಬಯೋಗ್ಯಾಸ್ ಅನ್ನು ಹೋಟೆಲ್‌ಗಳು ಸೇರಿದಂತೆ ವಾಣಿಜ್ಯ ಬಳಕೆಗೆ ಒದಗಿಸುವ ಯೋಜನೆ ರೂಪಿಸಲಾಗಿದೆ. ಸದ್ಯ ಕೋರಮಂಗಲ ಬಯೋಗ್ಯಾಸ್ ಕೇಂದ್ರದಿಂದ ಕೆಲವು ಹೋಟೆಲ್‌ಗಳಿಗೆ ಗ್ಯಾಸ್ ಪೂರೈಕೆ ಮಾಡಲಾಗುತ್ತಿದೆ.

 

ಈ ಹಿನ್ನೆಲೆಯಲ್ಲಿ ಜಿಬಿಎ ಮುಖ್ಯ ಆಯುಕ್ತರು ಕೋರಮಂಗಲ ಘಟಕಕ್ಕೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿದರು. ಘಟಕದ ಕಾರ್ಯವಿಧಾನ ಮತ್ತು ಗ್ಯಾಸ್ ಪೂರೈಕೆ ಪ್ರಕ್ರಿಯೆ ಕುರಿತು ಮಾಹಿತಿ ಪಡೆದುಕೊಂಡ ಅವರು, ಮುಂದಿನ ದಿನಗಳಲ್ಲಿ ನಗರದಲ್ಲಿನ ಇನ್ನಷ್ಟು ವಲಯಗಳಲ್ಲಿ ಬಯೋಗ್ಯಾಸ್ ಘಟಕಗಳನ್ನು ಸ್ಥಾಪಿಸುವ ಕುರಿತು ಚರ್ಚೆ ನಡೆಸಿದರು.

 

ನಗರದಲ್ಲಿ ಗ್ಯಾಸ್ ಸಮಸ್ಯೆ ಉಂಟಾದ ಸಂದರ್ಭಗಳಲ್ಲಿ ಬಯೋಗ್ಯಾಸ್ ಉತ್ತಮ ಪರ್ಯಾಯವಾಗಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಸಿ ತ್ಯಾಜ್ಯದಿಂದ ಬಯೋಗ್ಯಾಸ್ ಉತ್ಪಾದನೆ ಮಾಡುವ ಮೂಲಕ ತ್ಯಾಜ್ಯ ನಿರ್ವಹಣೆ ಹಾಗೂ ಇಂಧನ ಸಮಸ್ಯೆಗೆ ಪರಿಹಾರ ದೊರಕಲಿದೆ.

 

ಈ ಹಿಂದೆ ಬಿಬಿಎಂಪಿ ಒಟ್ಟು 12 ಬಯೋಗ್ಯಾಸ್ ಘಟಕಗಳನ್ನು ನಿರ್ಮಿಸಿದ್ದು, ವಾರ್ಡ್ ಸಂಖ್ಯೆ 94, 167, 168, 151, 35 ಮತ್ತು 112 ರಲ್ಲಿ ಆರು ಘಟಕಗಳು ಈಗ ಕಾರ್ಯನಿರ್ವಹಿಸುತ್ತಿವೆ. ಪ್ರತಿ ಘಟಕದಲ್ಲಿ ದಿನಕ್ಕೆ 5 ಟನ್ ಹಸಿ ತ್ಯಾಜ್ಯದಿಂದ ಒಟ್ಟು 30 ಟನ್ ಬಯೋಗ್ಯಾಸ್ ಉತ್ಪಾದನೆ ನಡೆಯುತ್ತಿದೆ. ಉಳಿದ ಆರು ಘಟಕಗಳಲ್ಲಿ ವಾರ್ಡ್ ಸಂಖ್ಯೆ 190, 192, 149, 139, 198 ಮತ್ತು 11 ರಲ್ಲಿ ನವೀಕರಣ ಕಾಮಗಾರಿ ನಡೆಯುತ್ತಿದೆ.

 

ಪ್ರತಿ ಟನ್ ಹಸಿ ತ್ಯಾಜ್ಯದಿಂದ 30–50 ಕೆಜಿ ಬಯೋಗ್ಯಾಸ್ ಉತ್ಪಾದನೆ ಸಾಧ್ಯವಿದ್ದು, ಪ್ರತಿ ಘಟಕದಲ್ಲಿ 5 ಟನ್ ತ್ಯಾಜ್ಯದಿಂದ ಸುಮಾರು 200 ಕೆಜಿ ಗ್ಯಾಸ್ ಸಿಗುತ್ತದೆ. ಉತ್ಪಾದನೆಯ ಬಯೋಗ್ಯಾಸ್ ಅನ್ನು ಹೋಟೆಲ್‌ಗಳಲ್ಲಿ ಅಡುಗೆ ಇಂಧನವಾಗಿ ಬಳಸುವುದರ ಜೊತೆಗೆ ಜನರೇಟರ್ ಮೂಲಕ ವಿದ್ಯುತ್ ಉತ್ಪಾದನೆಗೆ ಹಾಗೂ ಸಮೀಪದ ಉದ್ಯಾನವನಗಳಲ್ಲಿ ದೀಪ ಬೆಳಗಿಸಲು ಬಳಸಲಾಗುತ್ತಿದೆ. ಈ ಯೋಜನೆಯಿಂದ ಪ್ರತಿ ಘಟಕದಿಂದ ಸುಮಾರು 8,400 ರೂ. ಆದಾಯವೂ ದೊರೆಯುತ್ತಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

4 hours ago

   
Image 1
Image 1
ದಕ್ಷಿಣಕನ್ನಡ

ಮಂಗಳೂರು

ಕಮರ್ಷಿಯಲ್ ಸಿಲಿಂಡರ್ ತಂದುಕೊಟ್ಟವರಿಗೆ ₹5,500 ಮೌಲ್ಯದ ಉಚಿತ ಆಹಾರ

ಮಂಗಳೂರು: ಗಲ್ಫ್ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ... ಓದನ್ನು ಮುಂದುವರಿಸಿ


Edited by: ಬಾನು

3 hours ago

   
Image 1
ರಾಮನಗರ

ರಾಜ್ಯಸಭೆ ಅಡ್ಡ ಮತದಾನದ ಭೀತಿ: ಒಡಿಶಾ ಶಾಸಕರು ಬಿಡದಿ ರೆಸಾರ್ಟ್‌ನಿಂದ ಮೈಸೂರಿಗೆ

ರಾಮನಗರ: ಒಡಿಶಾ ರಾಜ್ಯದ ಕಾಂಗ್ರೆಸ್ ಶಾಸಕರು ರಾಮನಗರದ ಬಿಡದಿಯಲ್ಲ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಚಿತ್ರದುರ್ಗ

ಜಿಲ್ಲಾಧಿಕಾರಿ ಡಿಜಿಟಲ್ ಸಹಿ ದುರುಪಯೋಗ ಪ್ರಕರಣದಲ್ಲಿ 6 ಆರೋಪಿಗಳು

ಚಿತ್ರದುರ್ಗ, ಮಾ.14: ಜಿಲ್ಲಾಧಿಕಾರಿ ಮತ್ತು ಎಡಿಸಿ ಅವರ ಡಿಜಿಟಲ್... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಬೆಂಗಳೂರು ನಗರ

ಮಹಿಳಾ ಉದ್ಯಮಿಗಳ ಹೋಟೆಲ್‌ಗಳಿಗೆ ವಾಣಿಜ್ಯ ಎಲ್‌ಪಿಜಿ ಕೊರತೆ: ಪ್ರಧಾನಿ ಮೋದಿಗೆ ಪತ್ರ

ಬೆಂಗಳೂರು: ರಾಜ್ಯದಲ್ಲಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಕೊರತೆ ಹೆಚ್... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಬೆಂಗಳೂರು ನಗರ

ದೇಶದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಕಾಂಗ್ರೆಸ್ ಜನರನ್ನು ತಪ್ಪು ದಾರಿಗೆ ಎಳೆಯುತ್ತಿದೆ – ಪ್ರಹ್ಲಾದ್ ಜೋಶಿ

ಬೆಂಗಳೂರು: ಅಡುಗೆ ಹಾಗೂ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳಿಗೆ ದೇ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಬೆಂಗಳೂರು ನಗರ

10–12 ಹಡಗುಗಳ ಮೂಲಕ ಭಾರತಕ್ಕೆ ಗ್ಯಾಸ್ ಸರಬರಾಜು: ಸಚಿವರ ಮಾಹಿತಿ

ದೇವನಹಳ್ಳಿ: ವಾಣಿಜ್ಯ ಗ್ಯಾಸ್ ಸಿಲಿಂಡರ್ ಕೊರತೆಯ ಸಮಸ್ಯೆ ಇನ್ನೂ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಬೆಂಗಳೂರು ನಗರ

ಪಾಕಿಸ್ತಾನ–ಬಾಂಗ್ಲಾ ಪ್ರಜೆಗಳು ಮತದಾರರ ಪಟ್ಟಿಗೆ ಸೇರ್ಪಡೆ ಅಪಾಯಕಾರಿ: ಆರ್. ಅಶೋಕ್

ಬೆಂಗಳೂರು: ಪಾಕಿಸ್ತಾನ ಹಾಗೂ ಬಾಂಗ್ಲಾದೇಶ ಮೂಲದವರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾದ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಬೆಂಗಳೂರು ನಗರ

ಯುದ್ಧದ ಪರಿಣಾಮ: ಅಡುಗೆ ಎಣ್ಣೆ ದರ ಏರಿಕೆ, ಮಾರುಕಟ್ಟೆಯಲ್ಲಿ ಕೊರತೆ

ಬೆಂಗಳೂರು:ಇರಾನ್-ಇಸ್ರೇಲ್ ಸಂಘರ್ಷ ಹಿನ್ನೆಲೆ  ಗ್ಯಾಸ್ ಸಿಲ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಬೆಂಗಳೂರು ನಗರ

ಬೆಂಗಳೂರು ನಗರ

ನೆಲಮಂಗಲ ಹೆದ್ದಾರಿಯಲ್ಲಿ ಎಲ್‌ಪಿಜಿ ಟ್ಯಾಂಕರ್ ಪಲ್ಟಿ ತಪ್ಪಿತು ದೊಡ್ಡ ಅನಾಹುತ

ಬೆಂಗಳೂರು: ಎಲ್‌ಪಿಜಿ ಗ್ಯಾಸ್ ತುಂಬಿದ್ದ ಟ್ಯಾಂಕರ್ ಪಲ್ಟಿಯಾದ ಘಟ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಬೆಂಗಳೂರು ನಗರ

ಒಂದು ರೂಪಾಯಿಗೆ ಒಂದು ಲೀಟರ್ ಹಾಲು: ಫ್ಲಿಪ್‌ಕಾರ್ಟ್ ವಿರುದ್ಧ ದೂರು, ಪ್ರಧಾನಿಗೆ ಪತ್ರ – ಡಿ.ಕೆ. ಸುರೇಶ್

ಬೆಂಗಳೂರು: “ಒಂದು ರೂಪಾಯಿಗೆ ಒಂದು ಲೀಟರ್ ಹಾಲು ಮಾರಾಟ ಮಾಡುವ ಯೋ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1