ಶ್ರೀನಿವಾಸಪುರದಲ್ಲಿ ಮಾನವೀಯತೆಯನ್ನೇ ಮರೆಸುವ ಪ್ರಕರಣ: ಹೆತ್ತ ಮಗುವನ್ನು ಮಾರಾಟ ಮಾಡಿದ್ದ ದಂಪತಿ-ಮಧ್ಯವರ್ತಿ ಬಂಧನ
ಕೋಲಾರ: ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದಲ್ಲಿ ಹೆತ್ತ ಮಗುವನ್ನು ಹಣಕ್ಕಾಗಿ ಮಾರಾಟ ಮಾಡಿರುವ ಆರೋಪದಡಿ ದಂಪತಿ ಹಾಗೂ ಮಧ್ಯವರ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಪೊಲೀಸರು ಮತ್ತು ಸಾರ್ವಜನಿಕರಲ್ಲಿ ತೀವ್ರ ಆಕ್ರೋಶ ಮೂಡಿಸಿದೆ. ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ನೀತು ಮತ್ತು ರಾಘವೇಂದ್ರ ದಂಪತಿಗೆ ಖಾಸಗಿ ನರ್ಸಿಂಗ್ ಹೋಂನಲ್ಲಿ ಜನಿಸಿದ ಗಂಡು ಮಗುವಿಗೆ ಕೇವಲ ಐದು ದಿನದಷ್ಟರಲ್ಲಿ 2 ಲಕ್ಷ ರೂ.ಗೆ ಮಾರಾಟ ಮಾಡಲಾಗಿದೆ ಎಂದು ತಿಳಿದುಬಂದಿದೆ. ಈ ದಂಪತಿಗೆ ಈಗಾಗಲೇ ಇಬ್ಬರು ಮಕ್ಕಳು ಇದ್ದಿದ್ದು, ಮೂರನೇ ಮಗು ಬೇಡವೆಂಬ ಕಾರಣದಿಂದ ಕೃತ್ಯವನ್ನು ಮಾಡಿದ್ದಾರೆ ಎನ್ನಲಾಗಿದೆ.
ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸುತ್ತಿದ್ದ ನಾರಾಯಣಸ್ವಾಮಿ ಅವರಿಗೆ ಮಗುವನ್ನು ದಂಪತಿ ಹಸ್ತಾಂತರಿಸಿ ಹಣ ಸ್ವೀಕರಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪ್ರಕರಣ ಬೆಳಕಿಗೆ ಬಂದ ತಕ್ಷಣ ದಂಪತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಯಿತು. ನಂತರ ಮಧ್ಯವರ್ತಿ ನಾರಾಯಣಸ್ವಾಮಿಯನ್ನೂ ಬಂಧಿಸಲಾಗಿದೆ. ಪೊಲೀಸ್ ತನಿಖೆಯಲ್ಲಿ, ನಾರಾಯಣಸ್ವಾಮಿ ಆ ಮಗುವನ್ನು ಚಿಂತಾಮಣಿ ಮೂಲದ ವ್ಯಕ್ತಿಯೊಬ್ಬರಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಿರುವ ಶಂಕೆ ವ್ಯಕ್ತವಾಗಿದೆ. ಪ್ರಕರಣದ ದೃಢತೆಯನ್ನು ಪರಿಶೀಲಿಸಿ, ಮಗುವನ್ನು ಪತ್ತೆ ಹಚ್ಚಲು ವಿಶೇಷ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ. ಈ ಘಟನೆ ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಂಪೂರ್ಣ ಮಕ್ಕಳ ಮಾರಾಟ ಜಾಲ ಮತ್ತು ಸಂಬಂಧಿತ ಆರೋಪಿಗಳ ಕುರಿತು ತನಿಖೆ ಮುಂದುವರಿಯುತ್ತಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಬಿಹಾರದ ರಾಜಗೀರ್‌ನಲ್ಲಿ ತುಮಕೂರಿನ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ: ಧರ್ಮಶಾಲೆ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವಗಳು ಪತ್ತೆ
ನಾಲಂದಾ: ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಒಂದೇ ಕುಟುಂಬದ ನ... ಓದನ್ನು ಮುಂದುವರಿಸಿ
ಕೆ ಆರ್ ಪುರುಂ: ಯುವತಿ ವಿಚಾರದಲ್ಲಿ ಚಾಕು ಚಾಕು ಇರಿದ ಕಾರಣ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು
ಬೆಂಗಳೂರು: ಕೆ ಆರ್ ಪುರುಂ ಪ್ರದೇಶದಲ್ಲಿ ಯುವತಿ ಸಂಬಂಧದ ವಿಚಾರದಲ... ಓದನ್ನು ಮುಂದುವರಿಸಿ
ಮಾಗಡಿ ರಸ್ತೆ ದಂಪತಿ ಹತ್ಯೆ ಪ್ರಕರಣ ಪಿಸ್ತೂಲ್ ಖರೀದಿಗೆ ನೆರವಾದ ಮತ್ತೊಬ್ಬ ಆರೋಪಿ ಬಂಧನ
ಬೆಂಗಳೂರು: ಮಾಗಡಿ ರಸ್ತೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪತಿಯೊಬ್... ಓದನ್ನು ಮುಂದುವರಿಸಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಂಕಿತ ಭಯೋತ್ಪಾದಕ ಸಾವು ಅನಾರೋಗ್ಯದಿಂದ ಚಿಕಿತ್ಸೆಯಲ್ಲಿದ್ದ ಸಾಧಿಕ್ ಪಾಷಾ ಮೃತ
ಬೆಂಗಳೂರು: ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ... ಓದನ್ನು ಮುಂದುವರಿಸಿ
ಸೈಬರ್ ವಂಚನೆಗೆ ದೊಡ್ಡ ಹೊಡೆತ: 42 ಸಾವಿರ ಮ್ಯೂಲ್ ಬ್ಯಾಂಕ್ ಖಾತೆಗಳ ಜಾಲ ಪತ್ತೆ 13 ಮಂದಿ ಬಂಧನ, 29 ಜಿಲ್ಲೆಗಳಲ್ಲಿ ಸಿಐಡಿ ಸೈಬರ್ ಕಮಾಂಡ್ ದಾಳಿ
ಬೆಂಗಳೂರು: ಸಿಐಡಿ ಸೈಬರ್ ಕಮಾಂಡ್ ವಿಭಾಗವು ರಾಜ್ಯಾದ್ಯಂತ ನಡೆಸಿದ... ಓದನ್ನು ಮುಂದುವರಿಸಿ
ಹೊಸಕೋಟೆ
ಹೊಸಕೋಟೆ–ಚಿಂತಾಮಣಿ ಹೆದ್ದಾರಿ ಅಪಘಾತ: ಮಾರುತಿ ಓಮ್‌ನಿ-ಬೈಕ್ ಡಿಕ್ಕಿ, 1 ಮೃತ, ಹಲವರಿಗೆ ಗಾಯ
ಬೆಂಗಳೂರು ಗ್ರಾಮಾಂತರ: ಹೊಸಕೋಟೆ – ಚಿಂತಾಮಣಿ ರಾಷ್ಟ್ರೀಯ ಹೆದ್ದಾ... ಓದನ್ನು ಮುಂದುವರಿಸಿ
ಮಾರಕಾಸ್ತ್ರ ಹಿಡಿದು ಹುಟ್ಟುಹಬ್ಬ ಕೇಕ್ ಕತ್ತರಿಸಿದ ಅರೆಸ್ಟ್
ಚಿತ್ರದುರ್ಗ: ಚಿತ್ರದುರ್ಗದ ಭೋವಿ ಕಾಲೋನಿಯಲ್ಲಿ ಮಾರಕಾಸ್ತ... ಓದನ್ನು ಮುಂದುವರಿಸಿ
ಹುಬ್ಬಳ್ಳಿ
ಸೈಬರ್ ವಂಚನೆ ಪ್ರಕರಣ: ಹುಬ್ಬಳ್ಳಿಯಲ್ಲಿ ಒಂದೇ ಖಾತೆಯಿಂದ ಕೋಟಿ ಕೋಟಿ ಹಣ ವರ್ಗಾವಣೆ
ಹುಬ್ಬಳ್ಳಿ : ಹುಬ್ಬಳ್ಳಿಯ ನಗರದಲ್ಲಿ ನಡೆದ ಭಾರೀ ಸೈಬರ್ ವಂಚನೆಯ... ಓದನ್ನು ಮುಂದುವರಿಸಿ
ರಾಜ್ಯದಲ್ಲಿ ಸೈಬರ್ ದಂಧೆ ಜಾಲ ಭೇದಿಸಿದ ಸಿಐಡಿ: ಮ್ಯೂಲ್ ಅಕೌಂಟ್ ಕೇಸ್‌ನಲ್ಲಿ 13 ವಂಚಕರು ಅರೆಸ್ಟ್
ಬೆಂಗಳೂರು: ಸಿಐಡಿ ಸೈಬರ್ ಕ್ರೈಂ ವಿಭಾಗವು ರಾಜ್ಯಾದ್ಯಂತ ಮೆಗಾ ಕಾ... ಓದನ್ನು ಮುಂದುವರಿಸಿ
ಬೆಂಗಳೂರು ಏರ್ ಪೋರ್ಟ್ʼನಲ್ಲಿ ಕೋಟ್ಯಂತರ ರೂ. ಮೌಲ್ಯದ ಚಿನ್ನ, ವಜ್ರ ಕಳ್ಳತನ!
ದೇವನಹಳ್ಳಿ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಕೆಂಪೇಗ... ಓದನ್ನು ಮುಂದುವರಿಸಿ