ಶ್ರೀರಾಮನವಮಿಯಂದು ಹಬ್ಬದ ವಿಶೇಷ ಪಾನಕ, ನೀರು ಮಜ್ಜಿಗೆ, ಕೋಸಂಬರಿ ಮಾಡೋದು ಹೇಗೆ.?

ಇಂದು ರಾಮನವಮಿ ಹಬ್ಬದ ಸಂಭ್ರಮ. ರಾಮನವಮಿ ಪ್ರಯುಕ್ತ ರಾಜ್ಯದ ಶ್ರೀ ರಾಮ ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆಯುತ್ತವೆ. ಯುವ ಘಟಕಗಳಿಂದ ಎಲ್ಲೆಡೆ ಶೋಭಾಯಾತ್ರೆ ಕೈಗೊಳ್ಳಲಾಗುತ್ತೆ. ಭಕ್ತರು ಸಾರ್ವಜನಿಕರಿಗೆ ಪಾನಕ, ಕೋಸಂಬರಿ, ನೀರು ಮಜ್ಜಿಗೆಯನ್ನು ವಿತರಿಸುತ್ತಾರೆ. ಈ ರೆಸಿಪಿಗಳನ್ನು ಮಾಡೋದು ಹೇಗೆ? ಇಲ್ಲಿದೆ ಮಾಹಿತಿ. ನೀವೂ ಟ್ರೈ ಮಾಡಿ

 

ಬೆಲ್ಲದ ಪಾನಕ

ಬೇಕಾಗುವ ಪದಾರ್ಥಗಳು:
ಬೆಲ್ಲ- 2 ಬಟ್ಟಲು
ಸಕ್ಕರೆ- ಒಂದು ಚಮಚ
ಏಲಕ್ಕಿ-3-4
ಕಾಳು ಮೆಣಸು-5-6
ಉಪ್ಪು- ಚಿಟಿಕೆಯಷ್ಟು
ಜೀರಿಗೆ ಪುಡಿ- ಅರ್ಧ ಚಮಚ
ನಿಂಬೆಹಣ್ಣು- ಒಂದು

ಮಾಡುವ ವಿಧಾನ: ನೀರಿನಲ್ಲಿ ಬೆಲ್ಲವನ್ನು ಸೇರಿಸಿ ಚೆನ್ನಾಗಿ ಕರಗಲು ಬಿಡಿ. ನಂತರ ಏಲಕ್ಕಿ, ಕಾಳು ಮೆಣಸು, ಸಕ್ಕರೆ ಹಾಕಿ ಚೆನ್ನಾಗಿ ಪುಡಿ ಮಾಡಿಕೊಳ್ಳಿ. ಈ ಪುಡಿಯನ್ನು ಬೆಲ್ಲದ ನೀರಿಗೆ ಹಾಕಿ ಚೆನ್ನಾಗಿ ಮಿಶ್ರಣ ಮಾಡಿ. ನಂತರ ಉಪ್ಪು, ಜೀರಿಗೆ ಪುಡಿ ಹಾಗೂ ನಿಂಬೆಹಣ್ಣಿನ ರಸವನ್ನು ಹಾಕಿ ಮಿಶ್ರಣ ಮಾಡಿದರೆ ಬೆಲ್ಲದ ಪಾನಕ ಸವಿಯಲು ಸಿದ್ಧ.

 

ನೀರು ಮಜ್ಜಿಗೆ

ಬೇಕಾಗುವ ಪದಾರ್ಥಗಳು:
ಮೊಸರು- ಕಾಲು ಲೀಟರ್
ಹಸಿಮೆಣಸಿನ ಕಾಯಿ- 2ರಿಂದ 3
ಸ್ವಲ್ಪ ಶುಂಠಿ
ಸ್ವಲ್ಪ ಕರಿಬೇವು
ಸ್ವಲ್ಪ ಕೊತ್ತಂಬರಿ ಸೊಪ್ಪು
ಇಂಗು- ಚಿಟಿಕೆಯಷ್ಟು

ಮಾಡುವ ವಿಧಾನ: ಮೊದಲಿಗೆ ಮಿಕ್ಸಿ ಜಾರ್‌ಗೆ ಮೊಸರು ಹಾಗೂ ನೀರು ಹಾಕಿ ಚೆನ್ನಾಗಿ ರುಬ್ಬಿಕೊಳ್ಳಿ. ಇದಕ್ಕೆ ಅಗತ್ಯವಿದ್ದಷ್ಟು ನೀರು ಹಾಕಿ ಮಿಶ್ರಣ ಮಾಡಿ. ನಂತರ ಹಸಿಮೆಣಸಿನಕಾಯಿ, ಶುಂಠಿ, ಕರಿಬೇವು ಹಾಗೂ ಇಂಗು ಹಾಕಿ ನುಣ್ಣಗೆ ಮಾಡಿಕೊಳ್ಳಿ. ನಂತರ ಮಿಶ್ರಣವನ್ನು ಮಜ್ಜಿಗೆಗೆ ಹಾಕಿ ಮಿಶ್ರಣ ಮಾಡಿ, ಅಗತ್ಯಕ್ಕನುಗುಣವಾಗಿ ಉಪ್ಪು ಹಾಕಿ ಮಿಶ್ರಣ ಮಾಡಿ. ನಂತರ ಸಣ್ಣಗೆ ಹೆಚ್ಚಿದ ಕೊತ್ತಂಬರಿ ಸೊಪ್ಪು ಹಾಕಿ ಮಿಶ್ರಣ ಮಾಡಿದರೆ ನೀರು ಮಜ್ಜಿಗೆ ಸವಿಯಲು ಸಿದ್ಧವಾಗಿದೆ.

 

ಕೋಸಂಬರಿ

ಬೇಕಾಗುವ ಪದಾರ್ಥಗಳು:
ಹೆಸರುಬೇಳೆ 1/2 ಕಪ್
ಕ್ಯಾರೆಟ್ ತುರಿ 2ಚಮಚ
ಸೌತೆಕಾಯಿ 1
ಹಸಿಮೆಣಸಿನಕಾಯಿ
ಕೊತ್ತಂಬರಿ ಸೊಪ್ಪು ಸ್ವಲ್ಪ
ಕರಿಬೇವು ಸ್ವಲ್ಪ
ಕಾಯಿತುರಿ 1ಚಮಚ
ಉಪ್ಪು ರುಚಿಗೆ ತಕ್ಕಷ್ಟು

ಮಾಡುವ ವಿಧಾನ: ಹೆಸರುಬೇಳೆಯನ್ನು ತೊಳೆದು 1 ಗಂಟೆಗಳ ಕಾಲ ನೆನಸಿಡಿ. ಇದಕ್ಕೆ ಸಣ್ಣಗೆ ಹೆಚ್ಚಿದ ಕೊತ್ತಂಬರಿ ಸೊಪ್ಪು, ಹಸಿಮೆಣಸಿನಕಾಯಿ, ಸೌತೆಕಾಯಿ ಮತ್ತು ಕರಿಬೇವನ್ನು ಹಾಕಿಕೊಳ್ಳಿ. ನಂತರ ಇದಕ್ಕೆ ಒಂದು ಪಾತ್ರೆಯಲ್ಲಿ ನೆನಸಿದ ಹೆಸರುಬೇಳೆ ಹೆಚ್ಚಿದ ಕೊತ್ತಂಬರಿ ಸೊಪ್ಪು, ಕರಿಬೇವು, ಹಸಿಮೆಣಸಿನಕಾಯಿ, ಸೌತೆಕಾಯಿ, ಉಪ್ಪು, ಕ್ಯಾರೆಟ್ ತುರಿ, ತೆಂಗಿನ ತುರಿ ಎಲ್ಲಾ ಸೇರಿಸಿ ಮಿಕ್ಸ್ ಮಾಡಿದರೆ ಕೋಸಂಬರಿ ತಿನ್ನಲು ರೆಡಿ.

ಕರ್ಬೂಜ ಪಾನಕ

ಬೇಕಾಗುವ ಸಾಮಾಗ್ರಿಗಳು
ಅರ್ಧ ಕರ್ಬೂಜ
ಬೆಲ್ಲ- 2 ಕಪ್
ಏಲಕ್ಕಿ-3-4
ಕಾಳು ಮೆಣಸು-5-6
ಸಕ್ಕರೆ- ಒಂದು ಚಮಚ
ಉಪ್ಪು- ಚಿಟಿಕೆಯಷ್ಟು
ಜೀರಿಗೆ ಪುಡಿ- ಅರ್ಧ ಚಮಚ

ಮಾಡುವ ವಿಧಾನ: ಕರ್ಬೂಜ ಹಣ್ಣನ್ನು ತೆಗೆದುಕೊಡು ಸಿಪ್ಪೆ ತೆಗೆದು ಮಿಕ್ಸಿಯಲ್ಲಿ ರುಬ್ಬಿಕೊಳ್ಳಿ. ನಂತರ ಒಂದು ಪಾತ್ರೆಯನ್ನು ತೆಗೆದುಕೊಳ್ಳಿ, ಅದಕ್ಕೆ ನೀರು ಹಾಕಿ, ಬೆಲ್ಲವನ್ನು ಸೇರಿಸಿ ಕರಗಿಸಿ. ಬೆಲ್ಲ ಕರಗಿದ ನಂತರ ಏಲಕ್ಕಿ, ಕಾಳು ಮೆಣಸು, ಸಕ್ಕರೆ ಹಾಕಿ ಚೆನ್ನಾಗಿ ಪುಡಿ ಮಾಡಿ, ಈ ಪುಡಿಯನ್ನು ನೀರಿಗೆ ಹಾಕಿ ಮಿಶ್ರಣ ಮಾಡಿ. ಈಗ ಅದಕ್ಕೆ ಕರ್ಬೂಜ ಹಣ್ಣಿನ ಪೇಸ್ಟ್​ ಹಾಕಿ ಮಿಶ್ರಣ ಮಾಡಿದರೆ, ರುಚಿಯಾದ ಕರ್ಬೂಜ ಪಾನಕ ರೆಡಿ.

 


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಮಾಲತಿ

7 months ago

   
Image 1
Image 1

ವಾವ್.. ಭಾನುವಾರದ ಸ್ಪೆಷಲ್ ರುಚಿಯಾದ ಮಟನ್ ಕೈಮಾ ಉಂಡೆ ಸಾರು

ಉಂಡೆಗೆ ಬೇಕಾಗುವ ಪದಾರ್ಥಗಳು ಏನೇನು... 

ಮಟನ್ ಕೈಮಾ... ಓದನ್ನು ಮುಂದುವರಿಸಿ


Edited by: ಬಾನು

5 months ago

   
Image 1

ಬರೀ ಚಿಕನ್ ತಿಂದು ಬೋರ್ ಆಗಿದ್ಯಾ? ಸಂಡೇ ಸ್ಪೆಷಲ್.. ಎಂದಾದರೂ ಟೇಸ್ಟಿ ಮಾವಿನಕಾಯಿ ಚಿಕನ್ ಗ್ರೇವಿ ತಿಂದಿದ್ದೀರಾ!?..

ಚಿಕನ್ ಗೆ ಹಾಕುವ ಮಸಾಲೆ, ಖಾರ ಹಾಗೂ ಮಾವಿನಕಾಯಿಯಲ್ಲಿನ ಹುಳಿ ಡಿಫರೆಂಟ್ ಟೇಸ್ಟ್ ಕೊಡು... ಓದನ್ನು ಮುಂದುವರಿಸಿ


Edited by: ಬಾನು

5 months ago

   
Image 1

ಮಾವಿನಕಾಯಿ ಸೀಜನ್‌ ನಲ್ಲಿ ಒಮ್ಮೆಯಾದರೂ ಟ್ರೈ ಮಾಡಿ ಮಾವಿನಕಾಯಿ ಚಟ್ನಿ..!! ಸೂಪರ್‌ ಟೇಸ್ಟ್

ಈ ಸೀಸನ್ ನಲ್ಲಿ ನೀವು ಮಾವಿನಕಾಯಿ ಚಟ್ನಿ ತಿಂದಿದ್ದೀರಾ? ತಿಂದಿಲ್ಲ ಅಂದರೆ ಈ ಸೂಪರ್ ರ... ಓದನ್ನು ಮುಂದುವರಿಸಿ


Edited by: ಮಾಲತಿ

6 months ago

   
Image 1

ಈ ಸೀಜನ್‍ನಲ್ಲಿ ಸಾಮಾನ್ಯವಾಗಿ ಸಿಗೋ ಮಾವಿನಕಾಯಿ ಜಲ್‌ʼಜೀರಾ ನೀರು ಒಮ್ಮೆ ಮಾಡಿ ನೋಡಿ ..!

ಬೇಸಿಗೆ ಅಂದ್ಮೇಲೆ ಮಾವಿನಕಾಯಿ ಸೀಜನ್ ಕೂಡ ಹೌದು. ಹೀಗಾಗಿ ಈ ಸೀಜನ್‍ನಲ್ಲಿ ಸಿಗೋ ಮಾವಿ... ಓದನ್ನು ಮುಂದುವರಿಸಿ


Edited by: ಮಾಲತಿ

6 months ago

   
Image 1

ಬೇಸಿಗೆ ಬಿಸಿಯಲ್ಲಿ ಗರಿಗರಿಯಾಗಿ, ರುಚಿಕರವಾಗಿ ಮನೆಯಲ್ಲೇ ಮಾಡಿ ಆಲೂಗಡ್ಡೆಯ ಹಪ್ಪಳ

ಊಟ ಮಾಡುವಾಗ ಅನ್ನ-ಸಾಂಬಾರ್ ಅಥವಾ ಅನ್ನ-ರಸಂ ಜೊತೆ ಸೈಡ್ಸ್ ಆಗಿ ಸಂಡಿಗೆ ಇದ್ದರೆ ಅದರ... ಓದನ್ನು ಮುಂದುವರಿಸಿ


Edited by: ಬಾನು

7 months ago

   
Image 1

ಪುಳಿಯೋಗರೆ, ಚಿತ್ರಾನ್ನ ತಿಂದು ಬೇಸರ ಆಗಿದ್ರೆ ನಾಲಿಗೆಗೆ ರುಚಿಸೋ ಮಸಾಲಾ ರೈಸ್‌ ಟ್ರೈ ಮಾಡಿ..ಈ ಮಸಾಲ ರೈಸ್‌ ಸಖತ್‌ ಟೇಸ್ಟಿ

ಒಂದೇ ರೀತಿಯ ರೈಸ್‌ಬಾತ್‌ ಅಂದ್ರೆ ಯಾರಿಗೆ ಹಿಡಿಸುತ್ತೆ ಹೇಳಿ.  ರೈಸ್‌ಬಾತ್‌ಗಳು... ಓದನ್ನು ಮುಂದುವರಿಸಿ


Edited by: ಬಾನು

7 months ago

   
Image 1

ಮಕ್ಕಳ ಬಾಯಲ್ಲಿ ನೀರೂರಿಸುತ್ತೆ ʼಪೋಟ್ಯಾಟೋʼ ಲಾಲಿಪಾಪ್ :ರೆಸಿಪಿ ಮಾಡುವುದು ಹೇಗೆ

ಬೇಕಾಗುವಪದಾರ್ಥಗಳು :

ಬೇಯಿಸಿದ ಆಲೂಗಡ್ಡೆ 2-3, ಹೆಚ್ಚಿಕೊ... ಓದನ್ನು ಮುಂದುವರಿಸಿ


Edited by: ಬಾನು

7 months ago

   
Image 1

ಸುಲಭವಾಗಿ ಮಾಡಬಹುದು 'ವೆಜಿಟೆಬಲ್' ಕಬಾಬ್ ; ರೆಸಿಪಿ ಮಾಡುವುದು ಹೇಗೆ

ಕಬಾಬ್ ಎಂದ ಕೂಡಲೇ ಹೆಚ್ಚಿನವರಿಗೆ ನಾನ್ ವೆಜ್ ನೆನಪಿಗೆ ಬರುತ್ತದೆ. ಆದರೆ, ವೆಜಿಟೆಬಲ್... ಓದನ್ನು ಮುಂದುವರಿಸಿ


Edited by: ಬಾನು

7 months ago

   
Image 1

ಈರುಳ್ಳಿ ಪಕೋಡ ಮಾಡಿ ಬೋರ್‌ ಆಗಿದ್ಯಾ ಹಾಗಿದ್ರೆ ಟ್ರೈ ಮಾಡಿ ಮಿಕ್ಸ್‌ ವೆಜಿಟೆಬಲ್ಸ್‌ ಪಕೋಡ

ಬೇಕಾಗುವ ಪದಾರ್ಥಗಳು:

ಅಕ್ಕಿಹಿಟ್ಟು – ೨ ಚಮಚ

ಕಡ್ಲ... ಓದನ್ನು ಮುಂದುವರಿಸಿ


Edited by: ಮಾಲತಿ

7 months ago

   
Image 1

ಮಟನ್‌ನಲ್ಲಿ ಡಿಫರೆಂಟಾಗಿ ಪುದಿನಾ ಮಟನ್‌ ಕರ್ರಿ ಮಾಡುವ ವಿಧಾನ ತಿಳಿಯೋಣ !!

ಪುದಿನಾ ಮಟನ್‌ ಕರ್ರಿ ಮಾಡಲು ಬೇಕಾಗುವ ಬೇಕಾಗುವ ಸಾಮಗ್ರಿಗಳು

... ಓದನ್ನು ಮುಂದುವರಿಸಿ


Edited by: ಮಾಲತಿ

7 months ago

   
Image 1