ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿ ಅಧ್ಯಕ್ಷ–ಉಪಾಧ್ಯಕ್ಷರ ಅವಧಿ ಅಂತ್ಯ; ಆಡಳಿತಾಧಿಕಾರಿಗಳ ನೇಮಕ.

ಗುಡಿಬಂಡೆ: ಗುಡಿಬಂಡೆ ತಾಲೂಕಿನ ವ್ಯಾಪ್ತಿಯಲ್ಲಿರುವ ಎಲ್ಲಾ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಆಡಳಿತ ಅವಧಿ ದಿನಾಂಕ 10-02-2026 ರಂದು ಅಧಿಕೃತವಾಗಿ ಮುಕ್ತಾಯಗೊಳ್ಳಲಿದೆ. ಈ ಹಿನ್ನೆಲೆ  ಸರ್ಕಾರದ ಆದೇಶ ಹಾಗೂ ಉಲ್ಲೇಖಿತ ಸುತ್ತೋಲೆ ಪ್ರಕಾರ ಗ್ರಾಮ ಪಂಚಾಯಿತಿಗಳ ಆಡಳಿತ ಕಾರ್ಯ ನಿರ್ವಹಣೆಗೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳನ್ನು ಆಡಳಿತಾಧಿಕಾರಿಗಳಾಗಿ ನೇಮಕ ಮಾಡಲಾಗಿದೆ. ಗ್ರಾಮ ಪಂಚಾಯಿತಿಗಳ ಆಡಳಿತದಲ್ಲಿ ಯಾವುದೇ ವ್ಯತ್ಯಯವಾಗದಂತೆ, ಅಭಿವೃದ್ಧಿ ಕಾರ್ಯಗಳು ನಿರಂತರವಾಗಿ ಸಾಗುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಾಲೂಕು ಪಂಚಾಯಿತಿ ಅಧಿಕಾರಿಗಳು ತಿಳಿಸಿದ್ದಾರೆ.

 

ಸರ್ಕಾರದ ಆದೇಶದಂತೆ ಉಲ್ಲೋಡು ಗ್ರಾಮ ಪಂಚಾಯಿತಿಗೆ ಕಾರ್ಯನಿರ್ವಹಣಾಧಿಕಾರಿ ನಾಗಮಣಿ ಎನ್., ಹಂಪಸಂದ್ರ ಪಂಚಾಯಿತಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಕುಮಾರಿ, ಎಲ್ಲೋಡು ಪಂಚಾಯಿತಿಗೆ ಕೃಷಿ ಇಲಾಖೆಯ ಕೇಶವರೆಡ್ಡಿ, ಸೋಮೇನಹಳ್ಳಿ ಗ್ರಾಮ ಪಂಚಾಯಿತಿಗೆ ಕಾರ್ಯನಿರ್ವಹಣಾಧಿಕಾರಿ ನಾಗಮಣಿ ಎನ್., ತಿರುಮಣಿ ಗ್ರಾಮ ಪಂಚಾಯಿತಿಗೆ ಕಿರು ನೀರು ಸರಬರಾಜು ಇಲಾಖೆಯ ನವೀನ್, ವರ್ಲಕೊಂಡ ಗ್ರಾಮ ಪಂಚಾಯಿತಿಗೆ ಸಮಾಜ ಕಲ್ಯಾಣ ಇಲಾಖೆಯ ಲಕ್ಷ್ಮಿಪತಿ ರೆಡ್ಡಿ, ಬೀಚಗನಹಳ್ಳಿ ಪಂಚಾಯಿತಿಗೆ ವಲಯ ಅರಣ್ಯಾಧಿಕಾರಿ ರಾಜಶೇಖರ್ ಬಿ.ಎಸ್., ಹಾಗೂ ದಪ್ಪರ್ತಿ ಪಂಚಾಯಿತಿಗೆ ತೋಟಗಾರಿಕೆ ಇಲಾಖೆಯ ಗಾಯತ್ರಿ ಅವರನ್ನು ಆಡಳಿತಾಧಿಕಾರಿಗಳಾಗಿ ನೇಮಕ ಮಾಡಲಾಗಿದೆ  ಎಂದು ತಿಳಿಸಿದರು.

 

ಕಾರ್ಯನಿರ್ವಹಣಾಧಿಕಾರಿಗಳು  ನಾಗಮಣಿ ಎನ್. ರವರು ಮಾತನಾಡಿ ಗ್ರಾಮ ಪಂಚಾಯಿತಿಗಳ ಆಡಳಿತದಲ್ಲಿ ಸರ್ಕಾರದ ಉಲ್ಲೇಖಿತ ಸುತ್ತೋಲೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಆಯಾ ಗ್ರಾಮ ಪಂಚಾಯಿತಿಗಳ ಪ್ರಭಾವ, ಆಡಳಿತ ಶಿಸ್ತು ಹಾಗೂ ಪಾರದರ್ಶಕತೆಯನ್ನು ಕಾಪಾಡಿಕೊಂಡು ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಪ್ರಾಮಾಣಿಕವಾಗಿ ನೆರವೇರಿಸಬೇಕು” ಎಂದು ಸೂಚನೆ ನೀಡಿದರು.

 

ಇದಲ್ಲದೆ, ಅಧ್ಯಕ್ಷರು ಹಾಗೂ ಉಪಾಧ್ಯಕ್ಷರರು “ನಿಮ್ಮ ಆಡಳಿತ ಅವಧಿಯಲ್ಲಿ ಹಲವಾರು ಅಭಿವೃದ್ಧಿ ಹಾಗೂ ಜನಪರ ಕಾರ್ಯಗಳನ್ನು ಯಶಸ್ವಿಯಾಗಿ ನಡೆಸಿದ್ದೀರಿ. ಮುಂದಿನ ದಿನಗಳಲ್ಲಿ ಆಡಳಿತಾಧಿಕಾರಿಗಳು ಕಾರ್ಯಭಾರ ವಹಿಸಿಕೊಂಡಾಗ ಸಹಕಾರ ನೀಡಿ, ಪಂಚಾಯಿತಿಯ ಸುಗಮ ಆಡಳಿತಕ್ಕೆ ನೆರವಾಗಬೇಕು” ಎಂದು ಮನವಿ ಮಾಡಿದರು. ಇನ್ನು ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಅವಧಿ ಮುಕ್ತಾಯವಾದ ನಂತರವೂ ಕೆಲವರು ಪಂಚಾಯಿತಿಗಳಲ್ಲಿ ಅನಗತ್ಯ ಹಸ್ತಕ್ಷೇಪ ಅಥವಾ ದರ್ಪ ತೋರಿಸುವ ಸಾಧ್ಯತೆ ಇರುವುದನ್ನು ಉಲ್ಲೇಖಿಸಿದ ಅಧಿಕಾರಿಗಳು, ಇಂತಹ ಯಾವುದೇ ಘಟನೆಗಳು ನಡೆದಲ್ಲಿ ಸಾರ್ವಜನಿಕರು ತಕ್ಷಣ ತಾಲೂಕು ಪಂಚಾಯಿತಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

 

ವರದಿ ಮೊಹಮ್ಮದ್ ನಾಸೀರ್ ಗುಡಿಬಂಡೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

5 days ago

   
Image 1
Image 1
ಬೆಂಗಳೂರು ನಗರ

ಗ್ರಾ.ಪಂ. ಸಿಬ್ಬಂದಿಗೆ ಗುಡ್ ನ್ಯೂಸ್: ಪ್ರೋತ್ಸಾಹಧನಕ್ಕೆ ಸರ್ಕಾರ ಮಹತ್ವದ ಆದೇಶ!

ಬೆಂಗಳೂರು:  ಮೃತ ಖಾತೆದಾರರ ವಾರಸುದಾರರಿಗೆ ಪಹಣಿ ದಾಖಲಿಸಲು... ಓದನ್ನು ಮುಂದುವರಿಸಿ


Edited by: ಬಾನು

13 hours ago

   
Image 1
ಬೆಂಗಳೂರು ನಗರ

ಗ್ರಾಮ ಪಂಚಾಯತ್ ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯ: 15 ತಿಂಗಳ ಬಳಿಕ ಯಾವಾಗ ಬೇಕಾದರೂ ಸಾಧ್ಯ – ಹೈಕೋರ್ಟ್ ಸ್ಪಷ್ಟನೆ

ಬೆಂಗಳೂರು: ಗ್ರಾಮ ಪಂಚಾಯತ್ ಚುನಾವಣೆಯ ಬಳಿಕ ಪ್ರಮಾಣವಚನ ಸ್ವೀಕರಿ... ಓದನ್ನು ಮುಂದುವರಿಸಿ


Edited by: ಬಾನು

5 days ago

   
Image 1
ದಕ್ಷಿಣಕನ್ನಡ

ಮಂಗಳೂರು

ಕುಪ್ಪೆಪದವು: ನಿವೇಶನ ರಹಿತರ ಗುಡಸಿಲು ಪ್ರತಿಭಟನೆ ಫೆಬ್ರವರಿ 16ರಂದು

ಮಂಗಳೂರು : ಕುಪ್ಪೆಪದವು ಗ್ರಾಮಪಂಚಾಯತ್ ವ್ಯಾಪ್ತಿಯ 80 ವಸತಿ ರಹಿ... ಓದನ್ನು ಮುಂದುವರಿಸಿ


Edited by: ಬಾನು

6 days ago

   
Image 1
ಬೆಂಗಳೂರು ನಗರ

ಗ್ರಾಮ ಪಂಚಾಯಿತಿ ವಿದ್ಯಾರ್ಥಿ ವೇತನ ಯೋಜನೆ: ₹10,000 ವರೆಗೆ ವಿದ್ಯಾರ್ಥಿ ಸಹಾಯಕ್ಕೆ ಅರ್ಜಿಗಳನ್ನು ಆಹ್ವಾನ

ಬೆಂಗಳೂರು: ಕರ್ನಾಟಕದ ಗ್ರಾಮ ಪಂಚಾಯಿತಿಗಳು ಗ್ರಾಮೀಣ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತ... ಓದನ್ನು ಮುಂದುವರಿಸಿ


Edited by: ಬಾನು

6 days ago

   
Image 1

ಸೋನೆವಾಡಿ ಪಂಚಾಯತ್ ಅಧಿವೇಶನದಲ್ಲಿ ಪುರುಷ ವಿಧವೆಗಳಿಗೆ ಸಹ ಸರ್ಕಾರಿ ಯೋಜನೆ ನೀಡುವ ನಿರ್ಣಯ

ಮುಂಬೈ: ಮಹಾರಾಷ್ಟ್ರ ರಾಜ್ಯದ ಕೋಪರ್ಗಾಂವ್ ತಾಲೂಕಿನ ಸೋನೆವಾಡಿ ಗ್... ಓದನ್ನು ಮುಂದುವರಿಸಿ


Edited by: ಬಾನು

6 days ago

   
Image 1
ಕಲ್ಬುರ್ಗಿ

4 ದಶಕಗಳ ನಂತರ ಜಿಲ್ಲಾ ಪಂಚಾಯತಿಗೆ ಸ್ವಂತ ಕಟ್ಟಡ – 49.65 ಕೋಟಿ ರೂ. ಅನುದಾನ ಅನುಮೋದನೆ

ಕಲಬುರಗಿ:  1986ರಿಂದ ಸ್ವಂತ ಕಟ್ಟಡವಿಲ್ಲದೆ, ಹಳೇ ಜಿಲ್ಲಾಧ... ಓದನ್ನು ಮುಂದುವರಿಸಿ


Edited by: ಬಾನು

6 days ago

   
Image 1
ಚಿಕ್ಕಬಳ್ಳಾಪುರ

ಗುಡಿಬಂಡಾ

ಗುಡಿಬಂಡೆ ತಾಲೂಕು ಕೆಡಿಪಿ ಸಭೆ: ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡಲು ಶಾಸಕ ಸುಬ್ಬಾರೆಡ್ಡಿ ಸೂಚನೆ

ಗುಡಿಬಂಡೆ: ಪಟ್ಟಣದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಶಾಸಕ ಸುಬ್ಬಾ... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1
ಬೆಂಗಳೂರು ಗ್ರಾಮಾಂತರ

ಚುನಾಯಿತರ ಅಧಿಕಾರ ಅವಧಿ ಮುಗಿದ ಹಿನ್ನೆಲೆ-ಬೆಂಗಳೂರು ಗ್ರಾಮಾಂತರ 93 ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿಗಳು ನೇಮಕ

ಜನಪ್ರತಿನಿಧಿಗಳ ಅಧಿಕಾರಾವಧಿ ಮುಗಿದ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1
ಬೆಂಗಳೂರು ನಗರ

ಗ್ರಾಮ ಪಂಚಾಯಿತಿ ಚುನಾವಣೆಗೆ ಕಹಳೆ: 2026ರ ಚುನಾವಣೆಗೆ ಸಿದ್ಧತೆ ಆರಂಭಿಸಲು ಸರ್ಕಾರ ಸೂಚನೆ

ಬೆಂಗಳೂರು: ರಾಜ್ಯದಲ್ಲಿ 2026-31ನೇ ಸಾಲಿನ ಗ್ರಾಮ ಪಂಚಾಯಿತಿಗಳ ಸ... ಓದನ್ನು ಮುಂದುವರಿಸಿ


Edited by: ಬಾನು

2 weeks ago

   
Image 1
ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ: ಜಿ.ಪಂ, ತಾ.ಪಂ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿ ಮುಂದುವರಿದರೆ ಕಾಂಗ್ರೆಸ್‌ಗೆ ಟಫ್‌ ಫೈಟ್‌ ಕಾಯಂ...!

ಚಿಕ್ಕಬಳ್ಳಾಪುರ : ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಫಸಲು ನೀಡಿದ ಬ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1