ತ್ಯಾಗದ ಪ್ರತೀಕ ಬಕ್ರೀದ್​ ಹಬ್ಬದ ಮಹತ್ವ ಇಲ್ಲಿದೆ...

ಬಕ್ರೀದ್… ಮುಸ್ಲಿಂ ಧರ್ಮೀಯರ ಪ್ರಮುಖ ಹಬ್ಬ. ವಿಶ್ವದಾದ್ಯಂತ ಇರುವ ಮುಸ್ಲಿಂ ಧರ್ಮೀಯರು ಈ ಹಬ್ಬವನ್ನು ಶ್ರದ್ಧೆಯಿಂದ ಆಚರಿಸುತ್ತಾರೆ. ಹೊಸ ಬಟ್ಟೆ ತೊಟ್ಟು, ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಿ, ಮನೆ ಮಂದಿಯೆಲ್ಲಾ ಹಬ್ಬದೂಟ ಸವಿದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಸೌದಿ ಅರೇಬಿಯಾದಲ್ಲಿರುವ ಪವಿತ್ರ ಮೆಕ್ಕಾಗೆ ತೆರಳುವ ಹಜ್‌ ಯಾತ್ರೆಯ ಕೊನೆಯಲ್ಲಿ ಬಕ್ರೀದನ್ನು ಆಚರಿಸಲಾಗುತ್ತದೆ. 

 

ಇತಿಹಾಸ: ಬಕ್ರೀದ್ ಆಚರಣೆಗೆ ಕಾರಣವಾದ ಕಥೆಗೆ ನಾಲ್ಕು ಸಾವಿರ ವರ್ಷ ಹಿಂದಿನ ಇತಿಹಾಸವಿದೆ. ಆ ಸಮಯದಲ್ಲಿ ಮೆಕ್ಕಾ ನಗರದಲ್ಲಿ ವಾಸವಾಗಿದ್ದ ಪ್ರವಾದಿ ಇಬ್ರಾಹಿಂ(ಸ) ರವರ ಭಕ್ತಿ ಮತ್ತು ನಿಷ್ಠೆಯನ್ನು ಪರೀಕ್ಷಿಸಲು ಅಲ್ಲಾಹ ಮುಂದಾಗುತ್ತಾರೆ. ಕನಸಿನಲ್ಲಿ ಬರುವ ಅಲ್ಲಾಹ ಜಗತ್ತಿನಲ್ಲಿ ನಿಮಗೆ ಅತ್ಯಂತ ಪ್ರಿಯರು ಯಾರು ಎಂದು ಕೇಳಿದಾಗ, ನನ್ನ ಪುತ್ರ ನನಗೆ ಅತ್ಯಂತ ಪ್ರಿಯವಾದ ವ್ಯಕ್ತಿಯೆಂದು ಇಬ್ರಾಹಿಂ(ಸ) ಹೇಳ್ತಾರೆ. ಹಾಗಾದರೆ ಓರ್ವನೇ ಮಗನಾದ ಇಸ್ಮಾಯಿಲ್ ರನ್ನು ಬಲಿ ನೀಡಬೇಕೆಂದು ಕನಸಿನಲ್ಲಿ ಆಜ್ಞೆಯಾಗುತ್ತದೆ. 

 

ಅಲ್ಲಾಹನ ಆಜ್ಞೆಯಂತೆ ಇಬ್ರಾಹಿಂ(ಸ) ಮಗನನ್ನು ಬಲಿ ನೀಡಲು ಮುಂದಾಗುತ್ತಾರೆ. ತಂದೆಯ ಮಾತನ್ನು ಇಸ್ಮಾಯಿಲ್ ಸಹ ಒಪ್ಪಿಕೊಂಡು ಬಲಿಗೆ ನಗುಮೊಗದಲ್ಲಿಯೇ ಸಿದ್ಧಗೊಳ್ಳುತ್ತಾನೆ. ಆದರೆ ಇಬ್ರಾಹಿಂ(ಸ) ಅವರಿಗೆ ಮಗನನ್ನು ಬಲಿ ಕೊಡಲು ಪುತ್ರ ವಾತ್ಸಲ್ಯ ಅಡ್ಡಿಯಾಗುತ್ತದೆ. ಈ ಸದರ್ಭದಲ್ಲಿ ಕಣ್ಣಿಗೆ ಕಪ್ಪು ಪಟ್ಟಿಕೊಂಡ ಅವರು ಮಗನ ಕುತ್ತಿಗೆಗೆ ಕತ್ತಿ ಬೀಸಲು ಸಿದ್ಧರಾಗುತ್ತಾರೆ. ಆ ವೇಳೆ, ಪ್ರತ್ಯಕ್ಷರಾದ ದೇವದೂತ ಜಿಬ್ರಾಯಿಲ್, ಇಸ್ಮಾಯಿಲ್‍ರನ್ನು ಬದಿಗೆ ಸರಿಸಿ ಅವರ ಬದಲಿಗೆ ಒಂದು ಕುರಿಯನ್ನು ಬಲಿಕೊಡುವಂತೆ ಆಜ್ಞಾಪಿಸುತ್ತಾರೆ. ಕುರಿಯ ಕುತ್ತಿಗೆಯ ಮೇಲೆ ಹರಿಸಿದ ಕತ್ತಿ ಸಫಲವಾಗುತ್ತದೆ. ದೇವನಲ್ಲಿ ತಮಗಿರುವ ಸತ್ಯನಿಷ್ಠೆಯ ಸಂಕೇತವಾಗಿ ವಿಶ್ವದಾದ್ಯಂತ ಮುಸ್ಲಿಮರಿಂದ ಬಕ್ರೀದ್ ಹಬ್ಬ ಆಚರಿಸಲಾಗುತ್ತಿದೆ. ಇದೇ ಕಥೆಯನ್ನು ಹಲವರು ತಮ್ಮದೇ ಶೈಲಿಯಲ್ಲಿ ಭಿನ್ನ ಭಿನ್ನವಾಗಿ ಹೇಳುತ್ತಾರೆ. 

 

ಈದ್ ನಮಾಜ್: ಮುಂಜಾನೆಯ ಪ್ರಾರ್ಥನೆ ಬಕ್ರೀದ್ ಹಬ್ಬದ ಬೆಳಗ್ಗೆ ಊರಿನ ಜನರೆಲ್ಲರೂ ಹೊಸ ಬಟ್ಟೆ ಧರಿಸಿ ಈದ್ಗಾ ಮೈದಾನಕ್ಕೆ ತೆರಳುತ್ತಾರೆ. ಈದ್ಗಾ ವ್ಯವಸ್ಥೆ ಇಲ್ಲದ ಊರಿನಲ್ಲಿ ಪ್ರಮುಖ ಮಸೀದಿಗಳಲ್ಲಿಯೇ ಈದ್ ಪ್ರಾರ್ಥನೆಯನ್ನು ಮಾಡುತ್ತಾರೆ. ತೆರೆದ ಮೈದಾನದಲ್ಲಿ ಊರಿನ ಅಷ್ಟೂ ಜನರು ಒಂದಾಗಿ ಈದ್ ನಮಾಜ್ ನಿರ್ವಹಿಸುವ ಕ್ರಿಯೆಗೆ ಹೆಚ್ಚಿನ ಒತ್ತು ನೀಡಲಾಗುತ್ತದೆ. ಮಸೀದಿಯಲ್ಲಿ ಮೊದಲೇ ನಿರ್ಣಯಿಸಿದ ಸಮಯಕ್ಕೆ ಎಲ್ಲರೂ ಸಾಮೂಹಿಕ ಪ್ರಾರ್ಥನೆಗೆ ಒಂದೆಡೆ ಸೇರುತ್ತಾರೆ. ನಮಾಜ್ ಬಳಿಕ ಎಲ್ಲರ ಶುಭಾಶಯ ವಿನಿಮಯ ಮಾಡಿಕೊಳ್ಳುತ್ತಾರೆ. 

 

ಕುರ್ಬಾನಿ: ಈದ್ ನಮಾಜ್ ಬಳಿಕ ನಾಲ್ಕು ಕಾಲುಗಳ್ಳ ಪ್ರಾಣಿಯೊಂದನ್ನು ಬಲಿ ನೀಡಲಾಗುತ್ತದೆ. ಆದ್ರೆ ಕುರ್ಬಾನಿಗೆ ಪ್ರಾಣಿಗಳನ್ನು ಬಳಸುವಾಗ ಕೆಲವು ಮಾನದಂಡಗಳನ್ನು ಎಲ್ಲರೂ ಪಾಲಿಸಬೇಕಾಗುತ್ತದೆ. ಬಲಿ ನೀಡುವ ಪ್ರಾಣಿಗೆ ಯಾವುದೇ ರೀತಿಯಲ್ಲಿ ಗಾಯಗೊಂಡಿರಬಾರದು ಅಥವಾ ಸಾವಿನ ಸ್ಥಿತಿಯಲ್ಲಿರಬಾರದು ಎಂಬಿತ್ಯಾದಿ ಮಾನದಂಡಗಳನ್ನು ಅವಶ್ಯಕವಾಗಿ ಕುರ್ಬಾನಿ ನೀಡುವವರು ಪಾಲಿಸಬೇಕಾಗುತ್ತದೆ. 

 

ಕುರ್ಬಾನಿಯ ಬಳಿಕ ದೊರಕುವ ಮಾಂಸದಲ್ಲಿ ಮೂರು ಪಾಲು ಮಾಡಲಾಗುತ್ತದೆ. ಒಂದು ಪಾಲು ಬಡವರಿಗೆ, ಇನ್ನೊಂದು ಸಂಬಂಧಿಕರಿಗೆ ಮತ್ತು ಮೂರನೆಯ ಪಾಲನ್ನು ಸ್ವಂತಕ್ಕಾಗಿ ಎಂದು ವಿಂಗಡಿಸಲಾಗುತ್ತದೆ. ಕುರ್ಬಾನಿ ಮಾಡಲು ಅನುಕೂಲತೆ ಇಲ್ಲದವರು ಅಥವಾ ಊರಿನಿಂದ ದೂರವಿರುವ ಅಥವಾ ಬೇರಾವುದೋ ಕಾರಣದಿಂದ ನೀಡಲು ಸಾಧ್ಯವಾಗದಿರುವವರು ಇದೇ ಕಾರ್ಯಕ್ಕಾಗಿ ನಿಯೋಜಿಸಿರುವ ಸಂಸ್ಥೆಗಳಿಗೆ ದಾನದ ರೂಪದಲ್ಲಿ ಹಣ ನೀಡಬಹುದು. ಹಣ ನೀಡುವುದರಿಂದ ದೇಶದ ಬಡಜನತೆ ಪೌಷ್ಠಿಕವಾದ ಆಹಾರವನ್ನು ಪಡೆಯಲು ಸಾಧ್ಯವಾಗುತ್ತದೆ.

 

 

 


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

2 months ago

   
Image 1
Image 1

ನಿಮ್ಮ ಮೂತ್ರಪಿಂಡದಲ್ಲಿ ಕಲ್ಲುಗಳು ಇವೆಯೇ..? ಮೂತ್ರಪಿಂಡದ ಕಲ್ಲು ಹೊರ ಹಾಕಲು ನಿತ್ಯ ಈ ಜ್ಯೂಸ್ ಕುಡಿಯಿರಿ…!

ನಿಮ್ಮ ಮೂತ್ರಪಿಂಡದಲ್ಲಿ ಕಲ್ಲುಗಳು ಇವೆಯೇ..? ಹಾಗಿದ್ರೆ ಈ ಸುದ್ದಿ ಪೂರ್ತಿ ಓದಿ.. ವೀ... ಓದನ್ನು ಮುಂದುವರಿಸಿ


Edited by: ಬಾನು

2 months ago

   
Image 1

ವೀಳ್ಯದೆಲೆಯನ್ನು ಸುಣ್ಣದ ಜೊತೆಗಲ್ಲ, ತುಳಸಿ ಬೀಜದ ಜೊತೆಗೆ ತಿಂದ್ರೆ ಆರೋಗ್ಯಕ್ಕೆ ಒಳ್ಳೆಯದಂತೆ

ವೀಳ್ಯದೆಲೆ ಮತ್ತು ಸುಣ್ಣದ ಜೊತೆ ವೀಳ್ಯದೆಲೆಯನ್ನು ತಿನ್ನುವುದು ಆರೋಗ್ಯಕ್ಕೆ ಪ್ರಯೋಜನ... ಓದನ್ನು ಮುಂದುವರಿಸಿ


Edited by: ಬಾನು

2 months ago

   
Image 1

ಪುರುಷರೇ ಗಮನಿಸಿ… ನೀರಿನಲ್ಲಿ ನೆನೆಸಿದ ಒಣದ್ರಾಕ್ಷಿ ಸೇವಿಸೋದ್ರಿಂದ ಎಷ್ಟೆಲ್ಲಾ ಪ್ರಯೋಜಕಾರಿ ಗೊತ್ತಾ !?

ಒಣದ್ರಾಕ್ಷಿಯನ್ನು ರಾತ್ರಿ ನೀರಿನಲ್ಲಿ ನೆನೆಸಿಟ್ಟು ಬೆಳಗ್ಗೆ ಸೇವಿಸುವುದರಿಂದ ಸಾಕಷ್ಟ... ಓದನ್ನು ಮುಂದುವರಿಸಿ


Edited by: ಬಾನು

3 months ago

   
Image 1

ಮಂಡಕ್ಕಿ ಅಥವಾ ಕಡಲೆಪುರಿ ಸೇವನೆ ಆರೋಗ್ಯಕ್ಕೆ ತುಂಬಾ ಪ್ರಯೋಜಕಾರಿ!

ಮನೆಯಲ್ಲಿ ಮಂಡಕ್ಕಿ ಮಸಾಲ ತಯಾರಿಸಿ ಡಬ್ಬದಲ್ಲಿ ಶೇಖರಿಸಿಟ್ಟಿರುತ್ತಾರೆ. ಸಂಜೆಯ ಸ್ನಾಕ... ಓದನ್ನು ಮುಂದುವರಿಸಿ


Edited by: ಬಾನು

3 months ago

   
Image 1

ನೀವು ಚಪಾತಿ ಪ್ರೇಮಿಗಳಾ? ಹಾಗಾದರೆ ಒಬ್ಬ ವ್ಯಕ್ತಿ ಒಂದು ದಿನಕ್ಕೆ ಎಷ್ಟು ಚಪಾತಿ ತಿನ್ನಬೇಕು? ತಪ್ಪದೇ ತಿಳಿಯಿರಿ!

ನೀವು ತೂಕ ಇಳಿಸಿಕೊಳ್ಳಲು ಬಯಸಿದರೆ, ಇದಕ್ಕಾಗಿ ನೀವು ತಿನ್ನುವ ರೊಟ್ಟಿಯ ಪ್ರಮಾಣದ ಬಗ್... ಓದನ್ನು ಮುಂದುವರಿಸಿ


Edited by: ಬಾನು

3 months ago

   
Image 1

ಹಾಲಿನ ಜೊತೆಗೆ ಅರಿಶಿನ ಬೆರೆಸಿ ಕುಡಿದ್ರೆ ಈ ಕಾಯಿಲೆಗಳೆಲ್ಲಾ ಮಾಯ... ಆರೋಗ್ಯಕ್ಕೆ ಹತ್ತಾರು ಲಾಭ

ಹಾಲಿಗೆ ಅರಿಶಿನ ಸೇರಿಸಿ ಕುಡಿಯುವ ರೂಢಿ ನಮ್ಮ ಭಾರತೀಯ ಸಂಪ್ರದಾಯದಲ್ಲಿ ಮೊದಲಿನಿಂದಲೂ... ಓದನ್ನು ಮುಂದುವರಿಸಿ


Edited by: ಬಾನು

3 months ago

   
Image 1

ನಿಮಗೆ ಗೊತ್ತೇ..? ಹುಣಸೆ ಹಣ್ಣಿನ ಹುಳಿಗಿದೆ ಸೌಂದರ್ಯವನ್ನು ದುಪ್ಪಟ್ಟು ಮಾಡುವ ಪವರ್.!

ತಜ್ಞರ ಅಭಿಪ್ರಾಯದಲ್ಲಿ ಹುಣಸೆ ಹಣ್ಣು ನಿಮ್ಮ ಮುಖದ ಹೊಳಪನ್ನು ಹೆಚ್ಚು ಮಾಡಿ ನಿಮ್ಮ ಸೌ... ಓದನ್ನು ಮುಂದುವರಿಸಿ


Edited by: ಬಾನು

3 months ago

   
Image 1

ಕರ್ಬೂಜ ಬೀಜ ಎಸೆದು ಮೂರ್ಖರಾಗಬೇಡಿ… ಬೀಜಗಳಲ್ಲೂ ಅಡಗಿದೆ ಆರೋಗ್ಯ ಪ್ರಯೋಜನ; ತಿಳಿದ್ರೆ ಶಾಕ್ ಆಗ್ತೀರಿ!

ದೇಹವನ್ನು ತಂಪಗಾಗಿಸಲು ನೀವು ಸವಿಯಬಹುದಾದ ಫ್ರೆಶ್ ಜ್ಯೂಸ್‌ಗಳ ಪೈಕಿ ಕರ್ಬೂಜ ಹಣ್ಣು ಕ... ಓದನ್ನು ಮುಂದುವರಿಸಿ


Edited by: ಬಾನು

3 months ago

   
Image 1

ಬಿಪಿ ಇಲ್ಲವೆಂದು ಹೆಚ್ಚು ಉಪ್ಪು ಸೇವನೆ ಮಾಡುವವರೇ ಎಚ್ಚರ! ಹಾಗಿದ್ರೆ ಈ ಸುದ್ದಿ ಮಿಸ್ ಮಾಡ್ದೆ ನೋಡಿ!

ಬಿಪಿ ಸಮಸ್ಯೆ ಇಲ್ಲದವರು “ನಮಗೆ ಯಾವುದೇ ರೀತಿಯ ಸಮಸ್ಯೆ ಇಲ್ಲ ನಾವು ಹೆಚ್ಚಿನ ಪ್ರಮಾಣದ... ಓದನ್ನು ಮುಂದುವರಿಸಿ


Edited by: ಬಾನು

3 months ago

   
Image 1

ಪಪ್ಪಾಯಿ ಎಲೆಯ ರಸ ಕುಡಿದರೆ ಸಾಕು ಈ ಎಲ್ಲಾ ರೋಗಗಳಿಂದ ಸಿಗುವುದು ಮುಕ್ತಿ

ಹಣ್ಣನ್ನು ಹೊರತುಪಡಿಸಿ, ಪಪ್ಪಾಯಿ ಗಿಡದ ಅತಿ ಹೆಚ್ಚು ಬಳಕೆಯಾದ ಭಾಗವೆಂದರೆ ಎಲೆ. ಪಪ್ಪ... ಓದನ್ನು ಮುಂದುವರಿಸಿ


Edited by: ಬಾನು

3 months ago

   
Image 1