ಉಡುಪಿ ಟೆಕ್ಕಿ ಸಾವು ಪ್ರಕರಣಕ್ಕೆ ಟ್ವಿಸ್ಟ್ : ‘ನಾನು ಕಾರಣ ಅಲ್ಲ’: ಸುದೀಪ್ ರೈ ಪತ್ನಿ ಸೌಮ್ಯಾ ಸ್ಪಷ್ಟನೆ

ಉಡುಪಿ: ಕಾರ್ಕಳದಲ್ಲಿ ಮದುವೆಯಾದ ಕೆಲವೇ ದಿನಗಳಲ್ಲಿ ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಪತ್ನಿ ಸೌಮ್ಯಾ ಶೆಟ್ಟಿ ತಮ್ಮ ಮೇಲಿನ ಆರೋಪಗಳನ್ನು ತಳ್ಳಿಹಾಕಿದ್ದಾರೆ. ಪುತ್ತೂರು ತಾಲೂಕಿನ ನೆಲ್ಯಾಡಿ ನಿವಾಸಿಯಾದ ಸುದೀಪ್ ರೈ ಸಾವಿಗೆ ಪತ್ನಿಯೇ ಕಾರಣ ಎಂದು ಮೃತನ ಪೋಷಕರು ಆರೋಪಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಸೌಮ್ಯಾ ಶೆಟ್ಟಿ, “ಪತಿಯ ಸಾವಿಗೆ ನಾನು ಕಾರಣಳಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

 

ನೆಲ್ಯಾಡಿಯಲ್ಲಿ ಯಾವುದೇ ಗಲಾಟೆ ನಡೆಸಿಲ್ಲ ಎಂದು ತಿಳಿಸಿದ ಅವರು, ಸುದೀಪ್ ಕುಟುಂಬದ ಕಿರುಕುಳವೇ ಈ ಘಟನೆಗೆ ಕಾರಣವಾಗಿರಬಹುದು ಎಂದು ಪ್ರತಿಯಾಗಿ ಆರೋಪಿಸಿದ್ದಾರೆ. ಪತಿಯೊಂದಿಗೆ ಸಂಪರ್ಕ ಕಡಿತವಾದ ಹಿನ್ನೆಲೆಯಲ್ಲಿ ಆತಂಕಗೊಂಡು ತಾವು ನೆಲ್ಯಾಡಿಗೆ ತೆರಳಿದ್ದಾಗಿ ಹೇಳಿದ್ದಾರೆ. ಅಲ್ಲಿ ನಡೆದ ಘಟನೆ ಕುರಿತು ವಿವರಿಸಿದ ಅವರು, ಸುದೀಪ್ ತಾಯಿ ತಮ್ಮ ಮೇಲೆ ಅವಾಚ್ಯ ಶಬ್ದಗಳಿಂದ ಮಾತನಾಡಿದ್ದರಿಂದ ತಾವು ಕಿರುಚಾಡಿದ ಘಟನೆ ನಡೆದಿದೆ ಎಂದು ತಿಳಿಸಿದ್ದಾರೆ.

 

ಮಾರ್ಚ್ 16ರಂದು ನೆಲ್ಯಾಡಿಗೆ ತೆರಳಿದ ನಂತರ ಸುದೀಪ್ ವರ್ತನೆಯಲ್ಲಿ ಬದಲಾವಣೆ ಕಂಡುಬಂದಿತ್ತು. “ನಮ್ಮ ಮನೆಯವರು ಮದುವೆಯನ್ನು ಒಪ್ಪುತ್ತಿಲ್ಲ” ಎಂದು ಆತ ಹೇಳಿದ್ದಾಗಿ ಸೌಮ್ಯಾ ತಿಳಿಸಿದ್ದಾರೆ. ಇದೇ ಕಾರಣದಿಂದ ಮನಸ್ತಾಪ ಉಂಟಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳಿದ್ದಾರೆ. ಇದೇ ವೇಳೆ ವೇಣು ಶೆಟ್ಟಿ ವಿರುದ್ಧವೂ ಸೌಮ್ಯಾ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಸುದೀಪ್ ಕುಟುಂಬದ ಮೇಲೆ ಪ್ರಭಾವ ಬೀರಿದ್ದು, ಆತ್ಮಹತ್ಯೆಗೆ ಪ್ರಚೋದನೆ ನೀಡಿರುವ ಸಾಧ್ಯತೆ ಇದೆ ಎಂದು ಆರೋಪಿಸಿದ್ದಾರೆ.  ಈ ಹಿನ್ನೆಲೆ, ಸುದೀಪ್ ಕುಟುಂಬದವರು ಹಾಗೂ ವೇಣು ಶೆಟ್ಟಿ ವಿರುದ್ಧ ಕಾರ್ಕಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಪ್ರಕರಣದ ಎಲ್ಲಾ ಆಯಾಮಗಳಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

9 hours ago

   
Image 1
Image 1
ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ: ಬೈಕ್ ಸವಾರ, ತಾಯಿ ಗಾಯ

ಚಿಕ್ಕಬಳ್ಳಾಪುರ: ಜಿಲ್ಲೆಯ ಬೂರಗಮಾಕಲಹಳ್ಳಿ ರಸ್ತೆಯಲ್ಲಿರುವ ಆಂಜನ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಧಾರವಾಡ

ಕ್ವಾಯಿಲ್ ಬಳಸಿ ನೀರು ಕಾಯಿಸುವಾಗ ದುರಂತ: 24 ವರ್ಷದ ಮಹಿಳೆ ಸಾವು

ಧಾರವಾಡ, ಏಪ್ರಿಲ್ 02: ಮನೆಯಲ್ಲಿ ನೀರು ಕಾಯಿಸುವ ವೇಳೆ ವಿದ್ಯುತ್... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಚಿಕ್ಕಬಳ್ಳಾಪುರ

ಅಪರೂಪದ ಸಂಪ್ರದಾಯ : ಕಹಿ ಬೇವು ಸಿಹಿ ಆಗುವ ಜಾತ್ರೆ: ಚಿಕ್ಕಬಳ್ಳಾಪುರದಲ್ಲಿ ಭಕ್ತರ ಸಾಗರ

ಚಿಕ್ಕಬಳ್ಳಾಪುರ: ಅಪರೂಪದ ಸಂಪ್ರದಾಯ ಹಾಗೂ ವಿಶಿಷ್ಟ ಆಚರಣೆಗಾಗಿ ಪ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಬೆಂಗಳೂರು ನಗರ

ಗ್ಯಾರಂಟಿ ಹಣ ಬಿಡುಗಡೆ ತಡೆ ಅರ್ಜಿ: ಹೈಕೋರ್ಟ್ ವಿಚಾರಣೆ ಏಪ್ರಿಲ್ 15ಕ್ಕೆ ಮುಂದೂಡಿಕೆ

ಬೆಂಗಳೂರು: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ಬೆಂಗಳೂರು ನಗರ

“ಹಳ್ಳಿಗೆ ಲಕ್ಷ ಲಕ್ಷ ಹಣ” – ಕಾಂಗ್ರೆಸ್ ಮೇಲೆ ನಾರಾಯಣಸ್ವಾಮಿ ವಾಗ್ದಾಳಿ

ಬೆಂಗಳೂರು: ರಾಹುಲ್ ಗಾಂಧಿ ಇಂತಹ ಹೇಳಿಕೆಗಳನ್ನು ನೀಡಲು ಪ್ರಧಾನಮಂ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ಬೆಂಗಳೂರು ನಗರ

ಧರ್ಮಸ್ಥಳ ಪ್ರಕರಣ: ಯೂಟ್ಯೂಬರ್ ಸಮೀರ್ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ

ಬೆಂಗಳೂರು: ಧರ್ಮಸ್ಥಳದಲ್ಲಿನ ಅಸಹಜ ಸಾವಿನ ಪ್ರಕರಣಕ್ಕೆ ಸಂಬಂಧಿಸಿ... ಓದನ್ನು ಮುಂದುವರಿಸಿ


Edited by: ಬಾನು

14 hours ago

   
Image 1
ಚಿಕ್ಕಬಳ್ಳಾಪುರ

ಗುಡಿಬಂಡಾ

ಉರ್ದು ಉತ್ಸವದಿಂದ ಗುಡಿಬಂಡೆಯಲ್ಲಿ ಸಾಹಿತ್ಯ ಸಡಗರ-ಕವಿಗಳ ಕಾವ್ಯ ರಸದೊಂದಿಗೆ ಮನಸೆಳೆಯುವ ಉತ್ಸವ

ಗುಡಿಬಂಡೆ: ಪಟ್ಟಣದ ಬಾಪೂಜಿನಗರದ ಶಾದಿ ಮಹಲ್‌ನಲ್ಲಿ ಕರ್ನಾಟಕ ಉರ್... ಓದನ್ನು ಮುಂದುವರಿಸಿ


Edited by: ಬಾನು

14 hours ago

   
Image 1
ಬೆಂಗಳೂರು ನಗರ

ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಫ್ಲೈಟ್ ರದ್ದು: ಪ್ರಯಾಣಿಕರ ಆಕ್ರೋಶ

ಬೆಂಗಳೂರು: ನಗರದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ... ಓದನ್ನು ಮುಂದುವರಿಸಿ


Edited by: ಬಾನು

18 hours ago

   
Image 1
ಕಲ್ಬುರ್ಗಿ

ಗರ್ಭಗುಡಿಗೆ ನುಗ್ಗಿದ ಕಳ್ಳ: ವಿಗ್ರಹದ ಆಭರಣ ಕದ್ದ ದುಷ್ಕರ್ಮಿ

ಕಲಬುರಗಿ: ನಗರದ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಕಳ್ಳತನ ನಡೆದಿರುವ... ಓದನ್ನು ಮುಂದುವರಿಸಿ


Edited by: ಬಾನು

18 hours ago

   
Image 1
ರಾಯಚೂರು

ಎಲ್‌ಪಿಜಿ ಅಭಾವ : ನಿತ್ಯದ ಊಟಕ್ಕೂ ಸಂಕಷ್ಟ: ರೊಟ್ಟಿ ಅಂಗಡಿಗಳು ಬಂದ್

ರಾಯಚೂರು: ಅಂತರರಾಷ್ಟ್ರೀಯ ಮಟ್ಟದಲ್ಲಿ ನಡೆಯುತ್ತಿರುವ ಇರಾನ್–ಇಸ್... ಓದನ್ನು ಮುಂದುವರಿಸಿ


Edited by: ಬಾನು

18 hours ago

   
Image 1