ಯುದ್ಧದ ಮಧ್ಯೆಯೂ ಎಲ್ಪಿಜಿ ಕೊರತೆ ಇಲ್ಲ: ಜನರಿಗೆ ಕೇಂದ್ರದ ಭರವಸೆ!

ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ನಡುವೆಯೇ ದೇಶದಲ್ಲಿ ಎಲ್ಪಿಜಿ ಕೊರತೆ ಉಂಟಾಗಬಹುದೇ ಎಂಬ ಆತಂಕ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ, ಕೇಂದ್ರ ಸರ್ಕಾರ ಮಹತ್ವದ ಸ್ಪಷ್ಟನೆ ನೀಡಿದೆ. ದೆಹಲಿಯಲ್ಲಿ ಮಾಹಿತಿ ನೀಡಿರುವ ಕೇಂದ್ರ ಸರ್ಕಾರ, ದೇಶದಲ್ಲಿ ಎಲ್ಪಿಜಿ ಕೊರತೆ ಇಲ್ಲ ಎಂದು ಹೇಳಿ ಜನರಿಗೆ ಭರವಸೆ ನೀಡಿದೆ. ಗೃಹ ಬಳಕೆಗೆ ಅಗತ್ಯವಿರುವ ಅನಿಲ ಸಮರ್ಪಕವಾಗಿ ಲಭ್ಯವಿದ್ದು, ಯಾವುದೇ ಆತಂಕಕ್ಕೆ ಅವಕಾಶ ಇಲ್ಲ ಎಂದು ಸ್ಪಷ್ಟಪಡಿಸಿದೆ.

 

ಕೊರತೆ ಭೀತಿಯನ್ನು ತಪ್ಪಿಸಲು ಸರ್ಕಾರ ವಿಶೇಷ ಕ್ರಮಗಳನ್ನು ಕೈಗೊಂಡಿದ್ದು, 5 ಕೆಜಿ ತೂಕದ ಸಣ್ಣ ಎಲ್ಪಿಜಿ ಸಿಲಿಂಡರ್‌ಗಳ ಪೂರೈಕೆಯನ್ನು ಹೆಚ್ಚಿಸಲಾಗಿದೆ. ಈ ಸಿಲಿಂಡರ್‌ಗಳು ದೇಶದ ಎಲ್ಲಾ ಗ್ಯಾಸ್ ಏಜೆನ್ಸಿಗಳಲ್ಲಿ ಲಭ್ಯವಿದ್ದು, ಗ್ರಾಹಕರು ಯಾವುದೇ ಗುರುತಿನ ಚೀಟಿ ತೋರಿಸಿ ಸುಲಭವಾಗಿ ಖರೀದಿಸಬಹುದು. ವಾಸಸ್ಥಳದ ದಾಖಲೆ ನೀಡುವ ಅಗತ್ಯವಿಲ್ಲ ಎಂದು ತಿಳಿಸಲಾಗಿದೆ.

 

ಇತ್ತೀಚೆಗೆ ಈ ಸಣ್ಣ ಸಿಲಿಂಡರ್‌ಗಳಿಗೆ ಬೇಡಿಕೆ ಹೆಚ್ಚಾಗಿದ್ದು, ಮಾರ್ಚ್ 23ರಿಂದ ದೇಶಾದ್ಯಂತ ಸುಮಾರು 6.6 ಲಕ್ಷ ಸಿಲಿಂಡರ್‌ಗಳು ಮಾರಾಟವಾಗಿವೆ ಎಂದು ಪೆಟ್ರೋಲಿಯಂ ಸಚಿವಾಲಯ ಮಾಹಿತಿ ನೀಡಿದೆ. ಇನ್ನೊಂದೆಡೆ, ಪೆಟ್ರೋಲ್, ಡೀಸೆಲ್ ಹಾಗೂ ಅನಿಲ ಪೂರೈಕೆ ನಿರಂತರವಾಗಿ ನಡೆಯುತ್ತಿದ್ದು, ದೇಶದ ಎಲ್ಲಾ ಸಂಸ್ಕರಣಾಗಾರಗಳು ಪೂರ್ಣ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸುತ್ತಿವೆ. ಸಾಕಷ್ಟು ಕಚ್ಚಾ ತೈಲ ಸಂಗ್ರಹವೂ ಇದೆ ಎಂದು ಸರ್ಕಾರ ತಿಳಿಸಿದೆ. ಒಟ್ಟಿನಲ್ಲಿ, ಯುದ್ಧ ಪರಿಸ್ಥಿತಿಯ ನಡುವೆಯೂ ದೇಶದ ಇಂಧನ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗುವುದಿಲ್ಲ ಎಂದು ಕೇಂದ್ರ ಸರ್ಕಾರ ಭರವಸೆ ನೀಡಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

2 months ago

   
Image 1
Image 1

ತಮಿಳುನಾಡು ಚುನಾವಣೆ ಕಾವು: ನಟ ವಿಜಯ್ ಭರ್ಜರಿ ರೋಡ್ ಶೋ

ಚೆನೆಲ್ಲೈ: ತಮಿಳುನಾಡು ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ... ಓದನ್ನು ಮುಂದುವರಿಸಿ


Edited by: ಬಾನು

2 months ago

   
Image 1

16 ವರ್ಷದ ಬಾಲಕಿಯೊಬ್ಬಳ ಮೇಲೆ 7 ಜನರಿಂದ ಸಾಮೂಹಿಕ ಅತ್ಯಾಚಾರ

ಲಕ್ನೋ: ಉತ್ತರ ಪ್ರದೇಶದ ಭೋಜಿಪುರ ಪ್ರದೇಶದಲ್ಲಿ ಅಪ್ರಾಪ್ತ ಬಾಲಕಿ... ಓದನ್ನು ಮುಂದುವರಿಸಿ


Edited by: ಬಾನು

2 months ago

   
Image 1

ಸಿಎಂ ಸ್ಥಾನ ತ್ಯಾಗದ ಸುಳಿವು? ನಿತೀಶ್ ಕುಮಾರ್ ಮುಂದಿನ ಹೆಜ್ಜೆ ಕುತೂಹಲ

ಪಾಟ್ನಾ: ಬಿಹಾರ ರಾಜಕೀಯದಲ್ಲಿ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗುವಂ... ಓದನ್ನು ಮುಂದುವರಿಸಿ


Edited by: ಬಾನು

2 months ago

   
Image 1

ಉದ್ದಿಮೆಗಳಿಗೆ ಕೇಂದ್ರದ ಬೃಹತ್ ನೆರವು – 2.5 ಲಕ್ಷ ಕೋಟಿ ಕ್ರೆಡಿಟ್ ಗ್ಯಾರಂಟಿ ಯೋಜನೆ ಸಿದ್ಧ

ದೆಹಲಿ: ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಪರಿಣಾಮದಿಂದ ಭಾರತದ ಹಲವು ಕ್... ಓದನ್ನು ಮುಂದುವರಿಸಿ


Edited by: ಬಾನು

2 months ago

   
Image 1

ಮಣಿಪುರದಲ್ಲಿ ಬಾಂಬ್ ದಾಳಿ – ಇಬ್ಬರು ಮಕ್ಕಳು ದುರ್ಮರಣ

ಇಂಪಾಲ: ಮಣಿಪುರದಲ್ಲಿ ನಡೆದ ಭೀಕರ ಬಾಂಬ್ ದಾಳಿಯಲ್ಲಿ ಇಬ್ಬರು ಮಕ್... ಓದನ್ನು ಮುಂದುವರಿಸಿ


Edited by: ಬಾನು

2 months ago

   
Image 1

‘ಐಐಟಿ ವಾಲೆ ಬಾಬಾ’ ಮದುವೆ: ವೈರಲ್ ಸನ್ಯಾಸಿಯಿಂದ ಗೃಹಸ್ಥಾಶ್ರಮಕ್ಕೆ ಕಾಲಿಟ್ಟ ಅಭಯ್ ಸಿಂಗ್

ಚಂಡೀಗಢ: ಕಳೆದ ವರ್ಷ ಪ್ರಯಾಗ್‌ರಾಜ್ ಮಹಾಕುಂಭದಲ್ಲಿ ಭಾರೀ ವೈರಲ್... ಓದನ್ನು ಮುಂದುವರಿಸಿ


Edited by: ಬಾನು

2 months ago

   
Image 1

ಮಳೆಗೆ ತತ್ತರಿಸಿದ ಐಪಿಎಲ್ ಪಂದ್ಯ: ಕೆಕೆಆರ್–ಪಂಜಾಬ್ ಕಿಂಗ್ಸ್ ಮುಖಾಮುಖಿ ಸ್ಥಗಿತ

ಕೋಲ್ಕತ್ತಾ: ಐಪಿಎಲ್ 2026ರ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಪಂ... ಓದನ್ನು ಮುಂದುವರಿಸಿ


Edited by: ಬಾನು

2 months ago

   
Image 1

ಸಾಥನ್‌ಕುಲಂ ಕಸ್ಟಡಿ ಸಾವು ಪ್ರಕರಣ: 9 ಪೊಲೀಸರಿಗೆ ಮರಣದಂಡನೆ

ಚೆನ್ನೈ: ದೇಶವನ್ನೇ ಬೆಚ್ಚಿಬೀಳಿಸಿದ್ದ ಸಾಥನ್‌ಕುಲಂ ಕಸ್ಟಡಿ ಸಾವು... ಓದನ್ನು ಮುಂದುವರಿಸಿ


Edited by: ಬಾನು

2 months ago

   
Image 1

“ನಾನು ನನ್ನ ಇಚ್ಛೆಗೆ ಬದುಕುತ್ತೇನೆ” –“ಗಂಡನ ಬಿಟ್ಟು ಪ್ರಿಯಕರನ ಜೊತೆ ಬದುಕಲು ಒಪ್ಪಿಗೆ ಕೊಟ್ಟ ಕೋರ್ಟ್!

ದೆಹಲಿ: 19 ವರ್ಷದ ಯುವತಿ ತನ್ನ ವೈಯಕ್ತಿಕ ಸ್ವಾತಂತ್ರ್ಯವನ್ನು ಸ್... ಓದನ್ನು ಮುಂದುವರಿಸಿ


Edited by: ಬಾನು

2 months ago

   
Image 1

ಕೇರಳದಲ್ಲಿ ಬಿಜೆಪಿ–ಎಲ್‌ಡಿಎಫ್ ಒಳಒಪ್ಪಂದ ಆರೋಪ: ಡಿಕೆಶಿ ವಾಗ್ದಾಳಿ!

ಕೇರಳ ರಾಜಕೀಯ ರಂಗದಲ್ಲಿ ಚುನಾವಣಾ ಕಾವು ತಾರಕ್ಕೇರಿದೆ. ಈ ನಡುವೆ ಉಪಮುಖ್ಯಮಂತ್ರಿ ಡಿ.... ಓದನ್ನು ಮುಂದುವರಿಸಿ


Edited by: ಬಾನು

2 months ago

   
Image 1