ಪಡಿತರ ಅಕ್ಕಿ ಕಳ್ಳಸಾಗಣೆ ತಡೆಯಲು 20,000 ಅಂಗಡಿಗಳಲ್ಲಿ ಸಿಸಿ ಕ್ಯಾಮರಾಗಳ ಅಳವಡಿಕೆ: ಸಚಿವ ಮುನಿಯಪ್ಪ
ಬೆಂಗಳೂರು: ಪಡಿತರ ಅಕ್ಕಿ ಕಳ್ಳ ಸಾಗಣೆ ತಡೆಯಲು ರಾಜ್ಯದ 20 ಸಾವಿರ ನ್ಯಾಯಬೆಲೆ ಅಂಗಡಿಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಲು ಯೋಜಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ K. H. Muniyappa ತಿಳಿಸಿದ್ದಾರೆ. ವಿಧಾನ ಪರಿಷತ್‌ನಲ್ಲಿ ಶಾಸಕ T. A. Sharavana ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸಿಸಿ ಕ್ಯಾಮರಾಗಳನ್ನು ಬೆಂಗಳೂರಿನ ಕೇಂದ್ರ ಕಚೇರಿಯಿಂದಲೇ ವೀಕ್ಷಣೆ ಮತ್ತು ಮೇಲ್ವಿಚಾರಣೆ ಮಾಡಲು ಕಂಟ್ರೋಲ್ ಕಮಾಂಡ್ ವ್ಯವಸ್ಥೆ ಜಾರಿಗೆ ಟೆಂಡರ್ ಕರೆಯಲಾಗಿದೆ ಎಂದು ಹೇಳಿದರು. ಸಿಸಿ ಕ್ಯಾಮರಾ ಅಳವಡಿಕೆಗಾಗಿ ಟೆಂಡರ್ ಪ್ರಕ್ರಿಯೆ ಶೀಘ್ರದಲ್ಲೇ ನಡೆಯಲಿದೆ ಎಂದರು.
ಇದರೊಂದಿಗೆ, ಪಡಿತರ ಸಾಗಣೆ ವಾಹನಗಳಿಗೆ ಜಿಪಿಎಸ್ ಅಳವಡಿಸಲು ಈಗಾಗಲೇ ಟೆಂಡರ್ ಕರೆಯಲಾಗಿದೆ. ಪಡಿತರ ಅಕ್ಕಿ ಕಾಳಸಂತೆಯಲ್ಲಿ ಮಾರಾಟವಾಗುವುದು ಪತ್ತೆಯಾದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವರು ತಿಳಿಸಿದರು. ಈ ವೇಳೆ ಶಾಸಕ T. A. Sharavana ಆಕ್ರೋಶ ವ್ಯಕ್ತಪಡಿಸಿ, ಕಾಳಸಂತೆಕೋರರ ಜೊತೆ ಆಹಾರ ಇಲಾಖೆಯ ಕೆಲ ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ಆರೋಪಿಸಿದರು. ಪಡಿತರ ಸಾಗಣೆ ವಾಹನಗಳು ನೇರವಾಗಿ ಅಕ್ಕಿ ಗಿರಣಿಗಳಿಗೆ ತೆರಳಿ, ಅಲ್ಲಿ ಅಕ್ಕಿಯನ್ನು ಪಾಲೀಶ್ ಮಾಡಿ ಮಾರುಕಟ್ಟೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ಹೇಳಿದರು. ಬಡವರಿಗಾಗಿ ನೀಡಿದ ಪಡಿತರ ಅಕ್ಕಿ ಅವರಿಗೆ ಸಿಗದೆ ಕಾಳಸಂತೆಕೋರರ ಪಾಲಾಗುತ್ತಿದೆ ಎಂದು ಕಿಡಿಕಾರಿದರು.
ಸಚಿವರ ಲಿಖಿತ ಉತ್ತರದಿಂದ ಅಸಮಾಧಾನಗೊಂಡ ಅವರು, ಪಡಿತರ ಗೋಡೌನ್‌ಗಳಿಗೆ ಸಿಸಿ ಕ್ಯಾಮರಾ ಅಳವಡಿಕೆ ಮತ್ತು ಹಳದಿ ಬಣ್ಣದ ವಾಹನಗಳಲ್ಲಿ ಪಡಿತರ ಸಾಗಣೆ ಕುರಿತ ಸರ್ಕಾರದ ಆದೇಶಗಳು ಜಾರಿಯಾಗಿಲ್ಲವೆಂದು ಪ್ರಶ್ನಿಸಿದರು. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ಪಡಿತರ ಅಕ್ಕಿ ಕಳ್ಳ ಸಾಗಣೆ ಕುರಿತು ವಿಡಿಯೋ ಸಾಕ್ಷ್ಯವಿದೆ ಎಂದು ಅಧಿವೇಶನದ ಗಮನಕ್ಕೆ ತಂದರು. ಈ ಆರೋಪಗಳಿಗೆ ಪ್ರತಿಕ್ರಿಯಿಸಿದ ಸಚಿವ K. H. Muniyappa, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
SC/ST ಉದ್ಯಮಿಗಳಿಗೆ ಖುಷಿಯ ಸುದ್ದಿ: ಕೈಗಾರಿಕೆ ಸ್ಥಾಪನೆಗೆ ಸರ್ಕಾರಿ ಭರ್ಜರಿ ನೆರವು!
ಬೆಂಗಳೂರು: ರಾಜ್ಯದಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಹೊಸ ವೇಗ ನೀಡಲು... ಓದನ್ನು ಮುಂದುವರಿಸಿ
ಮಹಿಳೆಯರಿಗೆ ಯುಗಾದಿ ಗಿಫ್ಟ್: ಗೃಹಲಕ್ಷ್ಮಿ ಯೋಜನೆಯ 27ನೇ ಕಂತು ಬಿಡುಗಡೆ
ಬೆಂಗಳೂರು: ಯುಗಾದಿ ಹಬ್ಬದ ಸಂಭ್ರಮದಲ್ಲಿ ರಾಜ್ಯದ ಮಹಿಳೆಯರಿಗೆ ಸಿ... ಓದನ್ನು ಮುಂದುವರಿಸಿ
ಪೋಷಕರೇ ಗಮನಿಸಿ: ಮಗಳಿಗೆ 18 ವರ್ಷ ತುಂಬಿದರೆ “ಭಾಗ್ಯಲಕ್ಷ್ಮಿ ಬಾಂಡ್”ನ ₹1 ಲಕ್ಷ ಪಡೆಯಿರಿ!
ಬೆಂಗಳೂರು: ಕರ್ನಾಟಕ ಸರ್ಕಾರದ ಭಾಗ್ಯಲಕ್ಷ್ಮಿ ಯೋಜನೆ ಅಡಿಯಲ್ಲಿ ನ... ಓದನ್ನು ಮುಂದುವರಿಸಿ
ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಸಿಗುತ್ತೆ ಬಡ್ಡಿ ಇಲ್ಲದೇ 1.40 ಲಕ್ಷದವರೆಗೆ ಸಾಲ..! ಅರ್ಜಿ ಸಲ್ಲಿಸುವ ವಿಧಾನ ತಿಳಿದುಕೊಳ್ಳಿ
ನವದೆಹಲಿ: ಕೇಂದ್ರ ಸರ್ಕಾರ ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಉತ್ತ... ಓದನ್ನು ಮುಂದುವರಿಸಿ
ಗೃಹಲಕ್ಷ್ಮಿ ಯೋಜನೆ ಗೊಂದಲ – ಸತ್ತ ಮಹಿಳೆಯ ಖಾತೆಗೆ 12 ಕೋಟಿ ರೂ. ಜಮಾ
ಬೀದರ್: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್... ಓದನ್ನು ಮುಂದುವರಿಸಿ
ಅನ್ನಭಾಗ್ಯ ಯೋಜನೆಗೆ ಹೊಸ ರೂಪ: 5 ಕೆಜಿ ಅಕ್ಕಿಯ ಬದಲು “ಇಂದಿರಾ ಆಹಾರ ಕಿಟ್” ವಿತರಣೆ – ಸಿದ್ದರಾಮಯ್ಯ ಘೋಷಣೆ
ಬೆಂಗಳೂರು: ರಾಜ್ಯದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಯಲ್ಲಿ ಮಹ... ಓದನ್ನು ಮುಂದುವರಿಸಿ
ರಾಜ್ಯ ಬಜೆಟ್‌ನಲ್ಲಿ ಗೃಹಲಕ್ಷ್ಮಿಯರಿಗೆ ಸಂತಸದ ಸುದ್ದಿ: ₹28,608 ಕೋಟಿ ಅನುದಾನ ಘೋಷಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರಾದ ಸಿದ್ದರಾಮಯ್ಯ ಅ... ಓದನ್ನು ಮುಂದುವರಿಸಿ
ಅನರ್ಹ BPL ಕಾರ್ಡ್‌ಗಳ ಮೇಲೆ ಸರ್ಕಾರದ ಕತ್ತರಿ: 5 ತಿಂಗಳಲ್ಲಿ 15 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಶಾಕ್
ಬೆಂಗಳೂರು: ಅನರ್ಹವಾಗಿ BPL ಕಾರ್ಡ್ ಹೊಂದಿರುವವರ ವಿರುದ್ಧ ರಾಜ್ಯ... ಓದನ್ನು ಮುಂದುವರಿಸಿ
ಸಿಹಿ ಸುದ್ದಿ : ಸರ್ಕಾರಿ ಕಚೇರಿಗೆ ಅಲೆದಾಡಬೇಕಿಲ್ಲ: ಜಾತಿ & ಆದಾಯ ಪ್ರಮಾಣ ಪತ್ರ ಮೊಬೈಲ್ʼನಲ್ಲೇ ಡೌನ್ ಲೋಡ್ ಮಾಡಬಹುದು..!
ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ: ಈಗ ಜಾತಿ ಮ... ಓದನ್ನು ಮುಂದುವರಿಸಿ
ಪ್ರಧಾನಿ ಮಾತೃ ವಂದನಾ ಯೋಜನೆ:ಸರ್ಕಾರದಿಂದ ಗರ್ಭಿಣಿ ಮಹಿಳೆಯರಿಗೆ ₹11,000 – ಈಗಲೇ ಅರ್ಜಿ ಸಲ್ಲಿಸಿ
ಬೆಂಗಳೂರು: ಕೇಂದ್ರ ಸರ್ಕಾರವು ಗರ್ಭಿಣಿ ಮತ್ತು ಹಾಲುಣಿಸುವ ತಾಯಂದ... ಓದನ್ನು ಮುಂದುವರಿಸಿ